ಬ್ರೇಕಿಂಗ್ ನ್ಯೂಸ್
19-12-20 01:08 pm Source: FILMIBEAT Bharath Kumar K ಸಿನಿಮಾ
ಸಂಜಯ್ ಲೀಲಾ ಬನ್ಸಾಲಿ ನಿರ್ದೇಶನದಲ್ಲಿ ಮೂಡಿ ಬಂದಿದ್ದ ಸೂಪರ್ ಹಿಟ್ ಚಿತ್ರ ಬಾಜಿರಾವ್ ಮಸ್ತಾನಿ ತೆರೆಕಂಡ ಡಿಸೆಂಬರ್ 18ಕ್ಕೆ ಐದು ವರ್ಷ ಕಳೆದಿದೆ. ಬಾಲಿವುಡ್ ಇಂಡಸ್ಟ್ರಿಯಲ್ಲಿ ಹೊಸ ದಾಖಲೆ ಸೃಷ್ಟಿಸಿದ್ದ ಸಿನಿಮಾಗೆ ಐದು ವರ್ಷ ಪೂರೈಸಿದ ಸಂದರ್ಭದಲ್ಲಿ ದೀಪಿಕಾ ಪಡುಕೋಣೆ ಸಂತಸ ಹಂಚಿಕೊಂಡಿದ್ದಾರೆ. ಬಾಜಿರಾವ್ ಮಸ್ತಾನಿ ಚಿತ್ರದ ನಿರ್ದೇಶಕ ಸಂಜಯ್ ಲೀಲಾ ಬನ್ಸಾಲಿ ಜೊತೆಗಿನ ಫೋಟೋ ಹಂಚಿಕೊಂಡಿರುವ ದೀಪಿಕಾ, ಮಸ್ತಾನಿಯ ವ್ಯಕ್ತಿತ್ವವನ್ನು ಹೊಗಳಿದ್ದಾರೆ. ಅಷ್ಟೇ ಅಲ್ಲ, ತಮ್ಮ ಇನ್ಸ್ಟಾಗ್ರಾಂನಲ್ಲಿ ಪ್ರೋಫೈಲ್ ಮಸ್ತಾನಿ ಫೋಟೋ ಮತ್ತು ಹೆಸರನ್ನು ಸಹ ಬದಲಾಯಿಸಿಕೊಂಡಿದ್ದಾರೆ.
ಸಂಜಯ್ ಲೀಲಾ ಬನ್ಸಾಲಿ ನಿರ್ದೇಶನದ ಬಾಜಿರಾವ್ ಮಸ್ತಾನಿ 2015ರ ಡಿಸೆಂಬರ್ 19 ರಂದು ಬಿಡುಗಡೆಯಾಗಿತ್ತು. ದೀಪಿಕಾ ಪಡುಕೋಣೆ, ರಣ್ವೀರ್ ಸಿಂಗ್, ಪ್ರಿಯಾಂಕಾ ಚೋಪ್ರಾ ಮುಖ್ಯ ಭೂಮಿಕೆಯಲ್ಲಿ ನಟಿಸಿದ್ದರು.
ಈ ಸಿನಿಮಾ ಬಿಡುಗಡೆ ವೇಳೆ ಸಂದರ್ಶನವೊಂದರಲ್ಲಿ ಮಾತನಾಡಿದ್ದ ದೀಪಿಕಾ ಪಡುಕೋಣೆ ''ಇದು ನನ್ನ ಜೀವನದಲ್ಲಿ ಅತ್ಯಂತ ಕಷ್ಟದ ಸಿನಿಮಾ'' ಎಂದು ಹೇಳಿಕೊಂಡಿದ್ದರು. ''ಬಾಜಿರಾವ್ ಮಸ್ತಾನಿ ನನ್ನ ವೃತ್ತಿ ಜೀವನದಲ್ಲಿ ಕಷ್ಟದ ಸಿನಿಮಾ. ನಾನು ಪ್ರಯತ್ನದ ಬಗ್ಗೆ ಮಾತನಾಡುವುದಿಲ್ಲ ಏಕಂದ್ರೆ ಅಂತಿಮವಾಗಿ ಅಭಿನಯ ಮುಖ್ಯವಾಗುತ್ತದೆ. ಬಾಜಿರಾವ್ ಮಸ್ತಾನಿ ಚಿತ್ರಕ್ಕೆ ಹೋಲಿಸಿಕೊಂಡರೆ ರಾಮ್ ಲೀಲಾ ಸುಲಭವಾಗಿತ್ತು'' ಎಂದು 2015ರ ಸಂದರ್ಶನವೊಂದರಲ್ಲಿ ಹೇಳಿದ್ದರು.
ಅಂದ್ಹಾಗೆ, ಬಾಜಿರಾವ್ ಮಸ್ತಾನಿ ಚಿತ್ರವನ್ನು ಆರಂಭದಲ್ಲಿ ಸಲ್ಮಾನ್ ಖಾನ್ ಮತ್ತು ಐಶ್ವರ್ಯ ರೈ ಅವರ ಜೊತೆ ಮಾಡಬೇಕೆಂದು ಸಂಜಯ್ ಲೀಲಾ ಬನ್ಸಾಲಿ ನಿರ್ಧರಿಸಿದ್ದರು. ಆದ್ರೆ, ಆಗಿನ ಸಮಯಕ್ಕೆ ಆದ ಕೆಲವು ಬದಲಾವಣೆಗಳಿಂದ ಅದು ಸಾಧ್ಯವಾಗಿಲ್ಲ.
ನಂತರ ರಾಣಿ ಮುಖರ್ಜಿ ಮತ್ತು ಕರೀನಾ ಅವರನ್ನು ಸಹ ಸಂಪರ್ಕಿಸಲಾಗಿತ್ತು. ಇದೆಲ್ಲದಕ್ಕೂ ಮುಂಚೆ ಅಜಯ್ ದೇವಗನ್, ಶಾರೂಖ್ಖಾನ್, ಹೃತಿಕ್ ರೋಷನ್, ಕತ್ರಿನಾ ಕೈಫ್ ಅವರ ಹೆಸರುಗಳು ಸಹ ಈ ಚಿತ್ರದಲ್ಲಿ ಕೇಳಿ ಬಂದಿತ್ತು. ಆದ್ರೆ, ಅಂತಿಮವಾಗಿ ರಣ್ವೀರ್ ಸಿಂಗ್, ದೀಪಿಕಾ ಪಡುಕೋಣೆ, ಪ್ರಿಯಾಂಕಾ ಚೋಪ್ರಾಗೆ ಈ ಅದೃಷ್ಟದ ಬಾಗಿಲು ತೆರೆಯಿತು.
This News Article is a Copy of FILMIBEAT
12-08-25 10:39 pm
Bangalore Correspondent
Rajendra Swamiji of Kodimath, Dharmasthala: ಧ...
12-08-25 07:43 pm
ಕೆಎನ್ ರಾಜಣ್ಣ ರಾಜಿನಾಮೆ ಅಲ್ಲ, ಸಚಿವ ಸ್ಥಾನದಿಂದ ಕಿ...
11-08-25 11:01 pm
ರಾಜ್ಯಪಾಲರ ವಿರುದ್ಧ ಅವಹೇಳನ ಹೇಳಿಕೆ ; ಐವಾನ್ ಡಿಸೋಜ...
11-08-25 10:26 pm
KN Rajanna resigns: ಸಹಕಾರ ಸಚಿವ ಕೆ.ಎನ್ ರಾಜಣ್ಣ...
11-08-25 03:29 pm
13-08-25 11:56 am
HK News Desk
ಪುಣ್ಯಕ್ಷೇತ್ರ ಯಾತ್ರೆ ಹೊರಟವರ ಮೇಲೆರಗಿದ ಜವರಾಯ ; ರ...
13-08-25 10:41 am
'ದೇಶ ಸುರಕ್ಷಿತ ಕೈಯಲ್ಲಿದೆ' ; ನರೇಂದ್ರ ಮೋದಿ ಸರ್ಕ...
12-08-25 02:49 pm
ಕಾಶ್ಮೀರಿ ಪಂಡಿತರ ಗುರಿಯಾಗಿಸಿ ಮಾರಣಹೋಮ ; 35 ವರ್ಷಗ...
12-08-25 11:42 am
ಕರ್ನಾಟಕ ಸರ್ಕಾರದಿಂದ ಹಿರಿಯ ನಾಗರಿಕರಿಗೆ ಸಾರ್ವತ್ರಿ...
12-08-25 11:35 am
13-08-25 01:49 pm
Mangalore Correspondent
ಶವ ಹೂತ ಪ್ರಕರಣ ; ಕೊನೆಗೂ ಎಂಟ್ರಿಯಾದ ರಾಷ್ಟ್ರೀಯ ಮಾ...
13-08-25 10:37 am
ನಿಯಂತ್ರಣ ತಪ್ಪಿದ ಸ್ಕೂಟರ್ ಆವರಣ ಗೋಡೆಗೆ ಡಿಕ್ಕಿ ;...
13-08-25 10:17 am
ಧರ್ಮಸ್ಥಳ ಕೇಸ್ ; ಜಿಪಿಆರ್ ಬಳಸಿದರೂ ಸಿಗಲಿಲ್ಲ ಎಲುಬ...
12-08-25 11:06 pm
ಕೆಂಪು ಕಲ್ಲು ಗಣಿಗಾರಿಕೆಗೆ ಶೀಘ್ರದಲ್ಲೇ ಹೊಸ ನಿಯಮ ;...
12-08-25 08:34 pm
12-08-25 12:36 pm
Bangalore Correspondent
Mangalore Digital Arrest, Fraud: ಚೀನಾಕ್ಕೆ ಡ್ರ...
11-08-25 12:37 pm
ಸ್ನೇಹಿತನಿಗೆ ಬೆತ್ತಲೆ ವೀಡಿಯೋ ಶೇರ್ ಮಾಡಿದ್ಲು ಯುವತ...
08-08-25 10:07 pm
ಮಸಾಜ್ ಹೆಸರಲ್ಲಿ ಪುರುಷರಿಗೆ ದೇಹ ಸುಖಕ್ಕೆ ಒತ್ತಾಯ,...
08-08-25 09:44 pm
ಹೆಚ್ಚು ಲೈಕ್ಸ್, ಫಾಲೋವರ್ಸ್ ಸಿಗ್ತಾರೆ ಅಂತ ಕುಖ್ಯಾತ...
08-08-25 12:30 pm