ಬ್ರೇಕಿಂಗ್ ನ್ಯೂಸ್
            
                        25-12-20 11:41 am Source: FILMIBEAT Bharath Kumar K ಸಿನಿಮಾ
            ಬೆಂಗಳೂರು, ಡಿ.25: ಕನ್ನಡದ ಖ್ಯಾತ ನಟ-ನಿರ್ದೇಶಕ ರಮೇಶ್ ಅರವಿಂದ್ ಅವರ ಮನೆಯಲ್ಲಿ ಮದುವೆ ಸಂಭ್ರಮ ಜೋರಾಗಿ ನಡೆಯುತ್ತಿದೆ. ರಮೇಶ್ ಅರವಿಂದ್ ಮತ್ತು ಅರ್ಚನಾ ದಂಪತಿಯ ಪುತ್ರಿ ನಿಹಾರಿಕಾ ದಾಂಪತ್ಯ ಜೀವನ ಪ್ರವೇಶಿಸುತ್ತಿದ್ದಾರೆ. ಒಂದೇ ಸಂಸ್ಥೆಯಲ್ಲಿ ಕೆಲಸ ಮಾಡುವ ಅಕ್ಷಯ್ ಜೊತೆ ಸಪ್ತಪದಿ ತುಳಿಯಲು ನಿರ್ಧರಿಸಿದ್ದಾರೆ.
ಡಿಸೆಂಬರ್ 28 ರಂದು ಇವರಿಬ್ಬರ ವಿವಾಹ ಮಹೋತ್ಸವ ನಡೆಯಲು ಗುರು ಹಿರಿಯರು ನಿಶ್ಚಯಿಸಿದ್ದು, ಎರಡು ಕುಟುಂಬಗಳ ಸಮ್ಮುಖದಲ್ಲಿ ಕೊವಿಡ್ ನಿಯಮಗಳ ಅನುಸಾರವಾಗಿ ವಿವಾಹ ಜರುಗಲಿದೆ.

ಜನವರಿ ಎರಡನೇ ವಾರದಲ್ಲಿ ನಿಹಾರಿಕ ಮತ್ತು ಅಕ್ಷಯ್ ಅವರ ಆರತಕ್ಷತೆ ಕಾರ್ಯಕ್ರಮ ಆಯೋಜಿಸಲಾಗಿದೆ ಎಂಬ ಮಾಹಿತಿ ತಿಳಿದು ಬಂದಿದೆ. ಈ ರಿಸಪ್ಷನ್ನಲ್ಲಿ ಚಿತ್ರರಂಗದ ಹಲವು ಸೆಲೆಬ್ರಿಟಿಗಳು ಭಾಗವಹಿಸುವ ನಿರೀಕ್ಷೆ ಇದೆ. ಈ ಕುರಿತು ಮಾಧ್ಯಮಗಳ ಜೊತೆ ಸಂತಸ ಹಂಚಿಕೊಂಡಿರುವ ರಮೇಶ್ ಅರವಿಂದ್ ''ನಾನು ಚಿತ್ರರಂಗಕ್ಕೆ ಬಂದ ದಿನದಿಂದಲೂ ನನಗೆ ಕರ್ನಾಟಕದ ಜನತೆ, ಚಿತ್ರರಿಸಕರು ಹಾಗೂ ಮಾಧ್ಯಮದವರು ಪ್ರೋತ್ಸಾಹ, ಬೆಂಬಲ ನೀಡಿದ್ದೀರಾ. ನಿಮ್ಮ ಎಲ್ಲರ ಪ್ರೀತಿ ಮತ್ತು ಆರ್ಶೀವಾದ ಈ ಜೋಡಿಯ ಮೇಲೆ ಇರಲಿ'' ಎಂದು ವಿನಂತಿಸಿದ್ದಾರೆ.
ರಮೇಶ್ ಅರವಿಂದ್ ಹಾಗೂ ಅರ್ಚನಾ 1991 ಜುಲೈ 7 ರಂದು ವಿವಾಹ ಆಗಿದ್ದರು. ಈ ದಂಪತಿಗೆ ಅರ್ಜುನ್ ಎಂಬ ಒಬ್ಬ ಮಗ ಹಾಗೂ ನಿಹಾರಿಕಾ ಎಂಬ ಒಬ್ಬ ಮಗಳು ಇದ್ದಾರೆ.
This News Article is a Copy of FILMIBEAT
            
            
            
    
            
             03-11-25 05:17 pm
                        
            
                  
                Bangalore Correspondent    
            
                    
ಕಣ್ಣೂರಿನ ಪಯ್ಯಂಬಲಂ ಬೀಚ್ ನಲ್ಲಿ ಸಮುದ್ರಕ್ಕಿಳಿದ ಬೆ...
02-11-25 11:09 pm
ಆರೆಸ್ಸೆಸ್ನವರಷ್ಟು ಹೇಡಿಗಳು ಯಾರೂ ಇಲ್ಲ, ಅವರ್ಯಾಕೆ...
01-11-25 09:33 pm
ನಮ್ಮ ಕ್ಷೇತ್ರದಲ್ಲಿ ಪಥಸಂಚಲನ ಮಾಡೋದನ್ನು ಆರೆಸ್ಸೆಸ್...
31-10-25 08:10 pm
'ನವೆಂಬರ್ ಕ್ರಾಂತಿ' ಮುನ್ಸೂಚನೆ ನೀಡಿದ್ದ ರಾಜಣ್ಣ ಅಖ...
31-10-25 06:02 pm
    
            
             03-11-25 01:13 pm
                        
            
                  
                HK News Desk    
            
                    
ಜೋಧಪುರ ; ಭೀಕರ ರಸ್ತೆ ಅಪಘಾತದಲ್ಲಿ 18 ಜನರು ಸಾವು,...
02-11-25 11:12 pm
ಕೇರಳದಲ್ಲಿ ಮುಸ್ಲಿಮ್ ಮತ್ತು ಕ್ರಿಶ್ಚಿಯನ್ನರಿಗೆ ಒಬಿ...
02-11-25 05:13 pm
ಜೆಡ್ಡಾದಿಂದ ಹೈದರಾಬಾದ್ ಬರುತ್ತಿದ್ದ ವಿಮಾನದಲ್ಲಿ ಬ...
01-11-25 07:27 pm
ಭಾರತದಲ್ಲಿ ಸ್ವತಂತ್ರವಾಗಿದ್ದೇನೆ, ಮತ್ತೆ ಬಾಂಗ್ಲಾದೇ...
30-10-25 03:20 pm
    
            
             03-11-25 10:47 pm
                        
            
                  
                Mangalore Correspondent    
            
                    
ಡಿ.27 ರಂದು 9ನೇ ವರ್ಷದ ಮಂಗಳೂರು ಕಂಬಳ ; ಈ ಬಾರಿ ’ನ...
03-11-25 05:20 pm
ಸಸಿಹಿತ್ಲು ಬೀಚ್ ನಲ್ಲಿ ನೀರಾಟಕ್ಕಿಳಿದು ಬೆಂಗಳೂರಿನ...
03-11-25 12:37 pm
ಧರ್ಮಸ್ಥಳ ಪ್ರಕರಣ ; ಗುರುತು ಪತ್ತೆಯಾಗದ 38 ಪ್ರಕರಣಗ...
02-11-25 10:23 pm
ಮಂಗಳೂರು ಅಂತಾರಾಷ್ಟ್ರೀಯ ಬ್ಯಾಡ್ಮಿಂಟನ್ ಕೂಟಕ್ಕೆ ತೆ...
02-11-25 06:57 pm
    
            
             04-11-25 02:11 pm
                        
            
                  
                Mangalore Correspondent    
            
                    
ಟೋಪಿ ನೌಫಾಲ್ ಕೊಲೆಯಲ್ಲ, ರೈಲು ಡಿಕ್ಕಿ ಹೊಡೆದು ಸಾವು...
03-11-25 12:33 pm
ಶಬರಿಮಲೆ ಅಯ್ಯಪ್ಪ ದೇವಸ್ಥಾನದಲ್ಲಿ ಚಿನ್ನ ಕಳವು ಪ್ರಕ...
01-11-25 07:25 pm
Rowdy Topi Naufal Murder, Mangalore: ಮಂಗಳೂರಿನ...
01-11-25 03:31 pm
ವೃದ್ಧ ಮಹಿಳೆಗೆ ಡಿಜಿಟಲ್ ಅರೆಸ್ಟ್ ಬಲೆ ; ಐದು ಗಂಟೆಯ...
01-11-25 01:31 pm