ಬ್ರೇಕಿಂಗ್ ನ್ಯೂಸ್
25-12-20 03:09 pm Source: vijaykarnataka ಸಿನಿಮಾ
ಹೈದರಾಬಾದ್, ಡಿ.25: ಕಳೆದ ಕೆಲವು ದಿನಗಳಿಂದ 'ಅಣ್ಣಾಥೆ' ಸಿನಿಮಾದ ಶೂಟಿಂಗ್ನಲ್ಲಿ ತೊಡಗಿಕೊಂಡಿದ್ದ ನಟ ರಜನಿಕಾಂತ್ ಅವರಿಗೆ ತೀವ್ರ ರಕ್ತದೊತ್ತಡದ (ಬಿ.ಪಿ.) ಸಮಸ್ಯೆ ಎದುರಾಗಿದೆ. ಹಾಗಾಗಿ ಅವರನ್ನು ಹೈದರಾಬಾದ್ನ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿದೆ. ಸದ್ಯ 'ತಲೈವಾ' ಆರೋಗ್ಯ ಹೇಗಿದೆ ಎಂಬ ಬಗ್ಗೆ ಆಸ್ಪತ್ರೆಯು ಹೇಳಿಕೆ ಬಿಡುಗಡೆ ಮಾಡಿದೆ.
ಬಹುನಿರೀಕ್ಷಿತ 'ಅಣ್ಣಾಥೆ' ಸಿನಿಮಾದ ಶೂಟಿಂಗ್ನಲ್ಲಿ ಭಾಗವಹಿಸಿದ್ದ ಕೆಲವರಿಗೆ ಇತ್ತೀಚೆಗಷ್ಟೇ ಕೊರೊನಾ ವೈರಸ್ ತಗುಲಿತ್ತು. ನಾಲ್ಕು ಜನರಿಗೆ ಪಾಸಿಟಿವ್ ವರದಿ ಬಂದ ಬಳಿಕ ರಜನಿಕಾಂತ್ ಅವರನ್ನೂ ಪರೀಕ್ಷೆಗೆ ಒಳಪಡಿಸಲಾಯಿತು. ಅದೃಷ್ಟವಶಾತ್ ಅವರಿಗೆ ನೆಗೆಟಿವ್ ವರದಿ ಬಂದಿದೆ. ಹಾಗಿದ್ದರೂ ಅವರು ಸದ್ಯ ಐಸೊಲೇಟ್ ಆಗಿದ್ದಾರೆ. ಈ ವೇಳೆ ಅವರಿಗೆ ರಕ್ತದೊತ್ತಡ ಸಮಸ್ಯೆ ಕಾಣಿಸಿಕೊಂಡಿದೆ.
ಶುಕ್ರವಾರ (ಡಿ.25) ಬೆಳಗ್ಗೆ ಹೈದರಾಬಾದ್ನ ಖಾಸಗಿ ಆಸ್ಪತ್ರೆಗೆ ರಜನಿಕಾಂತ್ ದಾಖಲಾಗಿದ್ದಾರೆ. 'ಅವರಿಗೆ ಕೋವಿಡ್-19ನ ಯಾವುದೇ ಲಕ್ಷಣಗಳು ಕಾಣಿಸಿಲ್ಲ. ಆದರೂ ಅವರ ಆರೋಗ್ಯದ ಮೇಲೆ ಹೆಚ್ಚಿನ ನಿಗಾ ವಹಿಸಲಾಗುತ್ತಿದೆ. ರಕ್ತದೊತ್ತಡ ಸಹಜ ಸ್ಥಿತಿಗೆ ಬರುವವರೆಗೂ ಅವರನ್ನು ಡಿಸ್ಚಾರ್ಜ್ ಮಾಡಲು ಸಾಧ್ಯವಿಲ್ಲ' ಎಂದು ಆಸ್ಪತ್ರೆಯ ಪ್ರಕಟಣೆಯಲ್ಲಿ ತಿಳಿಸಲಾಗಿದೆ. ಶುಕ್ರವಾರ ಅವರಿಗೆ ಮತ್ತೊಮ್ಮೆ ಕೊರೊನಾ ಪರೀಕ್ಷೆ ಮಾಡಲಾಗಿದೆ.
'ಅಣ್ಣಾಥೆ' ಚಿತ್ರವನ್ನು 'ಸನ್ ಪಿಕ್ಚರ್ಸ್' ಸಂಸ್ಥೆ ನಿರ್ಮಾಣ ಮಾಡುತ್ತಿದೆ. 'ಚಿತ್ರತಂಡದ ನಾಲ್ಕು ಜನರಿಗೆ ಕೊರೊನಾ ಪಾಸಿಟಿವ್ ಆಗಿದೆ. ರಜನಿಕಾಂತ್ ಮತ್ತು ಇತರೆ ತಂತ್ರಜ್ಞರಿಗೆ ನೆಗೆಟಿವ್ ವರದಿ ಬಂದಿದೆ. ಎಲ್ಲರ ಆರೋಗ್ಯದ ಸುರಕ್ಷತೆಯ ದೃಷ್ಟಿಯಿಂದ ಚಿತ್ರೀಕರಣವನ್ನು ಮುಂದೂಡಲಾಗಿದೆ' ಎಂದು ಸನ್ ಪಿಕ್ಚರ್ಸ್ ಗುರುವಾರ ಟ್ವೀಟ್ ಮೂಲಕ ತಿಳಿಸಿದೆ.
This News Article is a Copy of vijaykarnataka
15-09-26 04:46 pm
HK News Staffer
ಬಿಜೆಪಿಯವರಿಗೆ ಕೊಬ್ಬು ಹೆಚ್ಚಾಗಿದೆ ಅದಕ್ಕೆ ಬಳ್ಳಾರಿ...
12-09-26 09:40 pm
ಯತ್ನಾಳ್ ಆರೋಪಿಸಿದರೂ ವಿಜಯೇಂದ್ರ ಮನೆ ಮೇಲೆ ಇಡಿ, ಐಟ...
12-09-26 09:38 pm
ಮಸೀದಿ ಮುಂದೆ ಗಣೇಶ ಮೆರವಣಿಗೆ ಮಾಡಿದ್ರೆ ಗ್ರಹಚಾರ ಬಿ...
12-09-26 09:36 pm
ಬಿಜೆಪಿ ಅಧಿಕಾರಕ್ಕೆ ಬರಲು ನನ್ನ ಸ್ಥಾನ ಬಿಟ್ಟುಕೊಟ್ಟ...
12-09-26 05:56 pm
13-09-26 09:00 pm
HK News
80s ಫೋಟೋ ಟ್ರೆಂಡ್ಗೆ ಮಾರುಹೋಗಿದ್ದೀರಾ? ಹುಷಾರ್ ;...
12-09-26 01:10 pm
ಕಾಶ್ಮೀರಿ ಪಂಡಿತರಿಗೆ ಮತ್ತೆ ಬೆದರಿಕೆ ; ಉದ್ಯೋಗ ಬಿಟ...
10-09-26 01:23 pm
ನೇಪಾಳ ಪ್ರವಾಹ ; ಹತ್ತು ದಿನಗಳ ಬಳಿಕ ಜಲವಿದ್ಯುತ್ ಸು...
05-09-26 11:55 am
ಮುಂದಿನ ಒಂದು ವರ್ಷದಲ್ಲಿ ಒಂದು ಸಾವಿರ ವಿದ್ಯಾಭಾರತಿ...
04-09-26 08:14 pm
15-09-26 07:46 pm
HK News Staffer
U T Khader, KDP Meeting, Bharath Sheety, Hari...
15-09-26 06:52 pm
Aravind Bolar Controversy, Mangalore: “ಎಂಕ್ ಮ...
15-09-26 05:29 pm
U T Khader, KDP Meeting, Sudheer Reddy Ips: :...
15-09-26 05:27 pm
ಮಂಗಳೂರು ವಿಮಾನ ನಿಲ್ದಾಣಕ್ಕೆ ‘ಕೋಟಿ-ಚೆನ್ನಯ’ ಹೆಸರು...
15-09-26 12:50 pm
15-09-26 12:55 pm
HK News Staffer
Manyda Accident: ಗಣೇಶ ಹಬ್ಬ ಮುಗಿಸಿ ಬೆಂಗಳೂರಿಗೆ...
15-09-26 12:48 pm
ಗಣೇಶ ಹಬ್ಬದ ಬೆನ್ನಲ್ಲೇ ಕರ್ನಾಟಕದಲ್ಲಿ ಸರಣಿ ದುರಂತ:...
15-09-26 12:41 pm
ಗಣೇಶೋತ್ಸವದ ಸಂಭ್ರಮದ ನಡುವೆ ಭೀಕರ ದುರಂತ: ಅಗ್ನಿ ಅವ...
15-09-26 10:31 am
ಜೈಲಿನಲ್ಲಿದ್ದರೂ ಹಳೆ ಚಾಳಿ ಬಿಡದ ಪ್ರಜ್ವಲ್ ರೇವಣ್ಣ...
12-09-26 07:41 pm