ಬ್ರೇಕಿಂಗ್ ನ್ಯೂಸ್
28-12-20 12:54 pm Source: FILMIBEAT ಸಿನಿಮಾ
ಬೆಂಗಳೂರು, ಡಿ.28: ಮಾಗಡಿ ರಸ್ತೆಯ ಟೋಲ್ ಗೇಟ್ ಬಳಿಯಿರುವ ಬಾಲಗಂಗಾಧರ ಸ್ವಾಮೀಜಿ ವೃತ್ತದಲ್ಲಿ ಸ್ಥಾಪನೆ ಮಾಡಿದ್ದ ದಿವಂಗತ ನಟ ಡಾ ವಿಷ್ಣುವರ್ಧನ್ ಅವರ ಪುತ್ಥಳಿಯನ್ನು ಯಾರೋ ಕಿಡಿಗೇಡಿಗಳು ಧ್ವಂಸ ಮಾಡಿದ್ದರು. ಇದೀಗ, ಅದೇ ವೃತ್ತದಲ್ಲಿ ವಿಷ್ಣುದಾದಾನ ಪ್ರತಿಮೆ ಮತ್ತೆ ನಿರ್ಮಾಣವಾಗುತ್ತಿದೆ. ಸಾಹಸ ಸಿಂಹ ವಿಷ್ಣುವರ್ಧನ್ ಅವರ ಅಳಿಯ ಅನಿರುದ್ಧ್ ಸೋಮವಾರ ಬೆಳಗ್ಗೆ ಗುದ್ದಲಿ ಪೂಜೆ ನೆರವೇರಿಸಿದ್ದಾರೆ. ಬಾಲಗಂಗಾಧರ ಸ್ವಾಮೀಜಿ ವೃತ್ತದಲ್ಲೇ ವಿಷ್ಣು ಸ್ಮಾರಕ ನಿರ್ಮಿಸಬೇಕು ಎಂದು ಬೇಡಿಕೆಯಿಟ್ಟಿದ್ದ ಅಭಿಮಾನಿಗಳು ಆದಿಚುಂಚನಗಿರಿ ಮಠಕ್ಕೆ ಭೇಟಿ ನೀಡಿ ಸ್ವಾಮೀಜಿಗಳಿಂದ ಸಮ್ಮತಿ ಸಹ ಪಡೆದುಕೊಂಡಿದ್ದಾರೆ.

ಅದೇ ವೃತ್ತ, ಬೇರೆ ಸ್ಥಳದಲ್ಲಿ ವಿಷ್ಣು ಪ್ರತಿಮೆ
ವಿಷ್ಣುವರ್ಧನ್ ಪ್ರತಿಮೆ ಧ್ವಂಸ ಆಗಿರುವ ಸ್ಥಳದಿಂದ 50 ಮೀಟರ್ ದೂರದಲ್ಲಿ ಮತ್ತೊಂದು ಸ್ಥಳವನ್ನು ಗುರುತಿಸಿ, ಅಲ್ಲಿ ವಿಷ್ಣು ಪುತ್ಥಳಿ ನಿರ್ಮಿಸಲು ಅಭಿಮಾನಿಗಳು ನಿರ್ಧರಿಸಿದ್ದಾರೆ. ಈ ಸಂಬಂಧ ಪುತ್ಥಳಿ ನಿರ್ಮಾಣ ಕಾರ್ಯ ಸಹ ಆರಂಭವಾಗಿದೆ. ನಟ ಹಾಗೂ ವಿಷ್ಣುವರ್ಧನ್ ಅಳಿಯ ಅನಿರುದ್ಧ್ ಅವರು ಸೋಮವಾರ ಬೆಳಗ್ಗೆ ವಿಷ್ಣು ಪ್ರತಿಮೆ ನಿರ್ಮಾಣಕ್ಕೆ ಗುದ್ದಲಿ ಪೂಜೆ ಮಾಡಿದ್ದಾರೆ.

ಡಿಸೆಂಬರ್ 30ಕ್ಕೆ ಪ್ರತಿಮೆ ಅನಾವರಣ
ಡಿಸೆಂಬರ್ 28 ರಂದು ವಿಷ್ಣು ಪ್ರತಿಮೆ ನಿರ್ಮಾಣಕ್ಕೆ ಗುದ್ದಲಿ ಪೂಜೆ ನಿರ್ಮಾಣವಾಗಿದ್ದು, ಡಿಸೆಂಬರ್ 30 ರಂದು ಈ ಪುತ್ಥಳಿಯನ್ನು ಲೋಕಾರ್ಪಣೆ ಮಾಡಲು ರೂಪುರೇಷೆಗಳನ್ನು ಸಿದ್ಧಪಡಿಸಲಾಗಿದೆ. ಇನ್ನೊಂದೇ ದಿನದಲ್ಲಿ ಮಾಗಡಿ ರಸ್ತೆಯ ಟೋಲ್ ಗೇಟ್ ಬಳಿಯಿರುವ ಬಾಲಗಂಗಾಧರ ಸ್ವಾಮೀಜಿ ವೃತ್ತದಲ್ಲಿ ಮತ್ತೆ ವಿಷ್ಣು ಪ್ರತಿಮೆ ತಲೆ ಎತ್ತಲಿದೆ.
ಸಚಿವರ ಒಪ್ಪಿಗೆ ಸಿಕ್ಕಿದೆ
ಸುಮಾರು ಆರು ಅಡಿ ಎತ್ತರದಲ್ಲಿ ವಿಷ್ಣುವರ್ಧನ್ ಅವರ ಪುತ್ಥಳಿ ಸ್ಥಾಪಿಸಲಾಗುತ್ತದೆ ಎಂದು ವಿಷ್ಣು ಅಭಿಮಾನಿಗಳು ಮಾಹಿತಿ ನೀಡಿದ್ದಾರೆ. ಅದೇ ವೃತ್ತದಲ್ಲಿ ಪ್ರತಿಮೆ ನಿರ್ಮಿಸಲು ಸಚಿವ ವಿ ಸೋಮಣ್ಣ ಅವರು ಸಹ ಒಪ್ಪಿಗೆ ನೀಡಿದ್ದು, ಪುತ್ಥಳಿ ನಿರ್ಮಾಣಕ್ಕೆ ಎಲ್ಲ ರೀತಿಯ ಸಹಾಯ ಮಾಡುತ್ತೇನೆ ಎಂದು ಭರವಸೆ ನೀಡಿದ್ದಾರೆ ಎಂಬ ಮಾಹಿತಿಯೂ ಲಭ್ಯವಾಗಿದೆ.

ಆರೋಪಿಗಳನ್ನು ಬಂಧಿಸಿ
ಈ ಹಿಂದೆ ವಿಷ್ಣು ಪ್ರತಿಮೆ ಧ್ವಂಸ ಮಾಡಿದ ಕಿಡಿಗೇಡಿಗಳನ್ನು ಪತ್ತೆ ಹಚ್ಚಿ ಬಂಧಿಸಬೇಕಾಗಿ ವಿಷ್ಣು ಸೇನೆ ಅಭಿಮಾನಿಗಳು ಒತ್ತಾಯಿಸುತ್ತಿದ್ದಾರೆ. ನಟ ಸುದೀಪ್, ಜಗ್ಗೇಶ್, ದರ್ಶನ್ ಸೇರಿದಂತೆ ಹಲವು ಸ್ಟಾರ್ ನಟರು ಸಹ ಈ ಘಟನೆಯನ್ನು ಖಂಡಿಸಿದ್ದು, ಆರೋಪಿಗಳಿಗೆ ತಕ್ಕ ಶಿಕ್ಷೆ ಕೊಡಿ ಎಂದು ಆಗ್ರಹಿಸಿದ್ದಾರೆ.
This News Article is a Copy of FILMIBEAT
15-09-26 04:46 pm
HK News Staffer
ಬಿಜೆಪಿಯವರಿಗೆ ಕೊಬ್ಬು ಹೆಚ್ಚಾಗಿದೆ ಅದಕ್ಕೆ ಬಳ್ಳಾರಿ...
12-09-26 09:40 pm
ಯತ್ನಾಳ್ ಆರೋಪಿಸಿದರೂ ವಿಜಯೇಂದ್ರ ಮನೆ ಮೇಲೆ ಇಡಿ, ಐಟ...
12-09-26 09:38 pm
ಮಸೀದಿ ಮುಂದೆ ಗಣೇಶ ಮೆರವಣಿಗೆ ಮಾಡಿದ್ರೆ ಗ್ರಹಚಾರ ಬಿ...
12-09-26 09:36 pm
ಬಿಜೆಪಿ ಅಧಿಕಾರಕ್ಕೆ ಬರಲು ನನ್ನ ಸ್ಥಾನ ಬಿಟ್ಟುಕೊಟ್ಟ...
12-09-26 05:56 pm
13-09-26 09:00 pm
HK News
80s ಫೋಟೋ ಟ್ರೆಂಡ್ಗೆ ಮಾರುಹೋಗಿದ್ದೀರಾ? ಹುಷಾರ್ ;...
12-09-26 01:10 pm
ಕಾಶ್ಮೀರಿ ಪಂಡಿತರಿಗೆ ಮತ್ತೆ ಬೆದರಿಕೆ ; ಉದ್ಯೋಗ ಬಿಟ...
10-09-26 01:23 pm
ನೇಪಾಳ ಪ್ರವಾಹ ; ಹತ್ತು ದಿನಗಳ ಬಳಿಕ ಜಲವಿದ್ಯುತ್ ಸು...
05-09-26 11:55 am
ಮುಂದಿನ ಒಂದು ವರ್ಷದಲ್ಲಿ ಒಂದು ಸಾವಿರ ವಿದ್ಯಾಭಾರತಿ...
04-09-26 08:14 pm
15-09-26 07:46 pm
HK News Staffer
U T Khader, KDP Meeting, Bharath Sheety, Hari...
15-09-26 06:52 pm
Aravind Bolar Controversy, Mangalore: “ಎಂಕ್ ಮ...
15-09-26 05:29 pm
U T Khader, KDP Meeting, Sudheer Reddy Ips: :...
15-09-26 05:27 pm
ಮಂಗಳೂರು ವಿಮಾನ ನಿಲ್ದಾಣಕ್ಕೆ ‘ಕೋಟಿ-ಚೆನ್ನಯ’ ಹೆಸರು...
15-09-26 12:50 pm
15-09-26 12:55 pm
HK News Staffer
Manyda Accident: ಗಣೇಶ ಹಬ್ಬ ಮುಗಿಸಿ ಬೆಂಗಳೂರಿಗೆ...
15-09-26 12:48 pm
ಗಣೇಶ ಹಬ್ಬದ ಬೆನ್ನಲ್ಲೇ ಕರ್ನಾಟಕದಲ್ಲಿ ಸರಣಿ ದುರಂತ:...
15-09-26 12:41 pm
ಗಣೇಶೋತ್ಸವದ ಸಂಭ್ರಮದ ನಡುವೆ ಭೀಕರ ದುರಂತ: ಅಗ್ನಿ ಅವ...
15-09-26 10:31 am
ಜೈಲಿನಲ್ಲಿದ್ದರೂ ಹಳೆ ಚಾಳಿ ಬಿಡದ ಪ್ರಜ್ವಲ್ ರೇವಣ್ಣ...
12-09-26 07:41 pm