ಬ್ರೇಕಿಂಗ್ ನ್ಯೂಸ್
03-05-26 09:15 pm HK News Staffer ಸಿನಿಮಾ
ಬೆಂಗಳೂರು, ಮೇ 3: ಚಿತ್ರದುರ್ಗದ ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ಜೈಲು ಪಾಲಾಗಿರುವ ನಟ ದರ್ಶನ್ ಸುಪ್ರೀಂ ಕೋರ್ಟ್ಗೆ ಜಾಮೀನು ಅರ್ಜಿ ಸಲ್ಲಿಸಿದ್ದು ಜೈಲಿನ ಒಳಗಿನ ಸ್ಥಿತಿಗತಿ ಮತ್ತು ತಮ್ಮ ವೃತ್ತಿಜೀವನಕ್ಕೆ ಎದುರಾಗಿರುವ ಸಂಕಷ್ಟಗಳ ಬಗ್ಗೆ ಅಳಲು ತೋಡಿಕೊಂಡಿದ್ದಾರೆ.
ಜೈಲಿನಲ್ಲಿ ತನ್ನನ್ನು ಅಮಾನವೀಯವಾಗಿ ನಡೆಸಿಕೊಳ್ಳಲಾಗುತ್ತಿದೆ ಎಂದು ದರ್ಶನ್ ದೂರಿದ್ದಾರೆ. ಮೇ 4ರಂದು ಅರ್ಜಿ ವಿಚಾರಣೆ ನಡೆಯಲಿದ್ದು ಎಲ್ಲಾ ಅಂಶಗಳನ್ನು ಪರಿಗಣಿಸಿ ಸುಪ್ರೀಂ ಯಾವ ಆದೇಶ ನೀಡಲಿದೆ ಎನ್ನುವ ಕುತೂಹಲ ಇದೆ. ಜೈಲಿನ ನಿಯಮಗಳನ್ನು ಮೀರಿ ನನ್ನನ್ನು ಕ್ವಾರಂಟೈನ್ ಸೆಲ್ನಲ್ಲಿ ಇರಿಸಲಾಗಿದೆ. ಇದರಿಂದ ಮಾನಸಿಕ ಮತ್ತು ದೈಹಿಕವಾಗಿ ತೀವ್ರ ಹಿಂಸೆಯಾಗುತ್ತಿದೆ. ಸಹ ಕೈದಿಗಳಿಂದ ನಿರಂತರ ಬೆದರಿಕೆ, ನಿಂದನೆ ಮತ್ತು ಮೂದಲಿಕೆಯನ್ನು ಅನುಭವಿಸುತ್ತಿದ್ದೇನೆ. ಮಾಧ್ಯಮಗಳಲ್ಲಿ ನನ್ನ ವಿರುದ್ಧ ನಡೆಯುತ್ತಿರುವ ನೆಗೆಟಿವ್ ಪ್ರಚಾರದಿಂದ ಜೈಲಿನ ಒಳಗಿನ ಸಮಸ್ಯೆ ಮತ್ತಷ್ಟು ಬಿಗಡಾಯಿಸಿದೆ ಎಂದು ನೋವು ತೋಡಿಕೊಂಡಿದ್ದಾರೆ.
ಇತರ ಕೈದಿಗಳಿಗೆ ಹೋಲಿಸಿದರೆ ತಾರತಮ್ಯ ಎಸಗುತ್ತಿದ್ದಾರೆ. ತೀವ್ರ ಬೆನ್ನು ನೋವಿನಿಂದ ಬಳಲುತ್ತಿದ್ದರೂ ಕೇವಲ 2-3 ಬಾರಿ ಮಾತ್ರ ಫಿಸಿಯೋಥೆರಪಿ ಮಾಡಲಾಗಿದೆ ಎಂದು ಅವರು ಉಲ್ಲೇಖಿಸಿದ್ದಾರೆ. ತನ್ನ ವೃತ್ತಿಜೀವನದ ಮೇಲೆ ಈ ಜೈಲುವಾಸ ಬೀರುತ್ತಿರುವ ಪರಿಣಾಮದ ಬಗ್ಗೆ ವಿವರಿಸಿರುವ ದರ್ಶನ್, “ಪ್ರತಿ ವರ್ಷ ನಾನು 2 ರಿಂದ 3 ಸಿನಿಮಾಗಳನ್ನು ಮಾಡುತ್ತಿದ್ದೆ. ಜಾಮೀನು ರದ್ದಾಗುವ ವೇಳೆಯೂ ಕೆವಿಎನ್ ಪ್ರೊಡಕ್ಷನ್ಸ್ ಮತ್ತು ಮೀಡಿಯಾ ಹೌಸ್ ಸ್ಟೂಡಿಯೋಸ್ನಂತಹ ದೊಡ್ಡ ಸಂಸ್ಥೆಗಳ ಚಿತ್ರಗಳಿಗೆ ಸಹಿ ಮಾಡಿದ್ದೆ. ನಿರ್ಮಾಪಕರು ಈಗಾಗಲೇ ಸುಮಾರು 6 ಕೋಟಿ ರೂ. ಬಂಡವಾಳ ಹೂಡಿದ್ದಾರೆ. ಸುದೀರ್ಘ ಜೈಲು ವಾಸದಿಂದ ನನ್ನ ಜೀವನಕ್ಕೆ ತೊಂದರೆಯಾಗಿದ್ದು, ಇದು ನನ್ನ ವೃತ್ತಿಜೀವನಕ್ಕೆ ಮರಣಗಂಟೆಯಾಗಲಿದೆ” ಎಂದು ಆತಂಕ ವ್ಯಕ್ತಪಡಿಸಿದ್ದಾರೆ.
ಪ್ರಕರಣದ ತನಿಖೆ ಮತ್ತು ಸಾಕ್ಷ್ಯ ವಿಚಾರಣೆಯ ವಿಳಂಬದ ಬಗ್ಗೆಯೂ ದರ್ಶನ್ ಪರ ವಕೀಲರು ಅರ್ಜಿಯಲ್ಲಿ ಉಲ್ಲೇಖಿಸಿದ್ದಾರೆ. ದೋಷಾರೋಪ ಪಟ್ಟಿಯಲ್ಲಿ 262 ಸಾಕ್ಷಿಗಳ ವಿಚಾರಣೆ ನಡೆಸಬೇಕೆಂದು ಉಲ್ಲೇಖಿಸಲಾಗಿದೆ. ಆದರೆ ಕಳೆದ 8 ತಿಂಗಳಿನಿಂದ ಕೇವಲ 10 ಸಾಕ್ಷಿಗಳ ವಿಚಾರಣೆ ಮಾತ್ರ ನಡೆದಿದೆ. ಸದ್ಯಕ್ಕೆ ಈ ಪ್ರಕ್ರಿಯೆ ಮುಗಿಯುವ ಲಕ್ಷಣಗಳಿಲ್ಲ. ಇಷ್ಟು ದೀರ್ಘ ಕಾಲ ವಿಚಾರಣಾಧೀನ ಕೈದಿಯಾಗಿ ಇರಿಸುವುದು ಮೂಲಭೂತ ಹಕ್ಕಿನ ಹರಣವಾಗುತ್ತದೆ ಎಂದು ವಾದಿಸಿ ಜಾಮೀನು ನೀಡುವಂತೆ ಮನವಿ ಮಾಡಿದ್ದಾರೆ.
01-08-26 04:26 pm
HK News Staffer
ಪ್ರಶ್ನೆಪತ್ರಿಕೆ ಸೋರಿಕೆ ಜಾಲಕ್ಕೆ ಶಾಶ್ವತ ಬ್ರೇಕ್ ;...
31-07-26 01:22 pm
ಶಟರ್ ಮುರಿದಿಲ್ಲ, ಕಳ್ಳನ ಸುಳಿವಿಲ್ಲ... CCTV ನೋಡಿದ...
30-07-26 09:27 pm
"ಸಿದ್ದರಾಮಯ್ಯ ರಾಜಕೀಯದಿಂದ ನಿವೃತ್ತಿಯಾಗಲಿ, ಕಾಂಗ್ರ...
30-07-26 10:28 am
ಎಸ್ಐಆರ್ ವ್ಯಾಪ್ತಿಗೆ ಬಾರದ 84.31 ಲಕ್ಷ ಮಂದಿ ; ಆ.8...
29-07-26 09:54 pm
01-08-26 05:17 pm
HK News Staffer
ಕೆಲವರ ಪ್ರಭಾವಕ್ಕೊಳಗಾಗಿ ಪ್ರಧಾನಿ ಬಗ್ಗೆ ಕೆಟ್ಟ ಮಾತ...
01-08-26 02:48 pm
ದೇಶದ ಅತ್ಯಂತ ಶ್ರೀಮಂತ ಮುಖ್ಯಮಂತ್ರಿ ಡಿ.ಕೆ. ಶಿವಕುಮ...
31-07-26 01:26 pm
ಕಾಕ್ರೋಚ್ ಗೆ ಉಚಿತ ಕಾನೂನು ನೆರವು ; 1 ಕೋಟಿ ರೂ. ದೇ...
28-07-26 11:56 am
NEET ಬಿರುಗಾಳಿಯ ಬಳಿಕ ಕೇಂದ್ರ ಸಚಿವ ಸಂಪುಟದಲ್ಲಿ ಮಹ...
26-07-26 01:32 pm
01-08-26 10:25 pm
HK News Staffer
ಪೊಲೀಸರನ್ನು ನಾಯಿಗೆ ಹೋಲಿಸಿದ ಶಾಸಕ ಭರತ್ ಶೆಟ್ಟಿ ವಿ...
31-07-26 10:58 pm
Mangalore Help Deeksha: ದಿಢೀರ್ ಮೆದುಳು ಜ್ವರಕ್ಕ...
31-07-26 07:03 pm
ರಾಜಸ್ಥಾನದಿಂದ ಮಂಗಳೂರಿಗೆ ಬಂದು ಬೀದಿಯಲ್ಲಿ ಅಲೆದಾಡು...
30-07-26 07:51 pm
ಎಡಪದವು ಬಳಿ ಹೊಸ ಚತುಷ್ಪಥ ಹೆದ್ದಾರಿ ಕುಸಿತ ; 35 ಅಡ...
30-07-26 04:06 pm
01-08-26 08:44 pm
HK News Staffer
ಉಡುಪಿ ಲಯನ್ಸ್ ಸರ್ಕಲ್ ಬಳಿ ಭೀಕರ ಅಪಘಾತ ; ರಸ್ತೆ ಬ...
01-08-26 04:27 pm
ಪತ್ನಿಯ ಕಿರುಕುಳ ; ಅಕ್ಕನಿಗೆ ವಿಡಿಯೋ ಕಾಲ್ ಮಾಡಿ ಮ...
01-08-26 02:50 pm
ಅಪ್ರಾಪ್ತ ಬಾಲಕಿಯ ಪುಸಲಾಯಿಸಿ ಅತ್ಯಾಚಾರ, ಬ್ಲ್ಯಾಕ್ಮ...
31-07-26 10:53 pm
ಪಣಂಬೂರು ತೋಟ ಬೆಂಗ್ರೆ ಬೀಚ್ ನಲ್ಲಿ ಸಾಮೂಹಿಕ ಅತ್ಯಾಚ...
31-07-26 09:47 pm