ಬ್ರೇಕಿಂಗ್ ನ್ಯೂಸ್
31-07-20 11:42 am Cinema Correspondant ಸಿನಿಮಾ
ಸುಕುಮಾರ್ ನಿರ್ದೇಶನದಲ್ಲಿ ಅಲ್ಲು ಅರ್ಜುನ್ ನಟಿಸುತ್ತಿರುವ 'ಪುಷ್ಪ' ಚಿತ್ರ ಈಗಾಗಲೇ ಸಾಕಷ್ಟು ಸದ್ದು ಮಾಡಿದೆ. ಚಿತ್ರದಲ್ಲಿ ನಟಿರುವ ಕಲಾವಿದರ ಕುರಿತಾಗಿಯೇ ಎರಡು ಮೂರು ತಿಂಗಳಿನಿಂದ ಚರ್ಚೆ ನಡೆಯುತ್ತಿದೆ. ಈ ನಡುವೆ ಅಲ್ಲು ಅರ್ಜುನ್ ಮತ್ತೊಂದು ಸಿನಿಮಾದ ಘೋಷಣೆ ಮಾಡಿದ್ದಾರೆ. ನಿರ್ದೇಶಕ ಕೊರಟಾಲ ಶಿವ ಜತೆ ಸಿನಿಮಾ ಮಾಡುತ್ತಿರುವುದಾಗಿ ಅಲ್ಲು ಅರ್ಜುನ್ ಪ್ರಕಟಿಸಿದ್ದಾರೆ. ಈ ಚಿತ್ರಕ್ಕೆ ಇನ್ನೂ ಅಧಿಕೃತ ಹೆಸರು ಇರಿಸಿಲ್ಲ. ತಾತ್ಕಾಲಿಕವಾಗಿ 'ಎಎ21' ಎಂದು ಶೀರ್ಷಿಕೆ ಇರಿಸಲಾಗಿದೆ. ಈ ಚಿತ್ರದ ವಿಶೇಷ ಪೋಸ್ಟರ್ ಅನ್ನು ಶುಕ್ರವಾರ ಬಿಡುಗಡೆ ಮಾಡಲಾಗಿದೆ.
ಜುಲೈ 31ರಂದು ಅಲ್ಲು ಅರ್ಜುನ್ ಅಜ್ಜ ಅಲ್ಲು ರಾಮಲಿಂಗಯ್ಯ ಅವರ 16ನೇ ಪುಣ್ಯತಿಥಿ. ತಾತನನ್ನು ನೆನೆದು ಸಾಮಾಜಿಕ ಜಾಲತಾಣದಲ್ಲಿ ಪೋಸ್ಟ್ ಮಾಡಿದ್ದ ಅರ್ಜುನ್, ನಂತರ ತಮ್ಮ ಹೊಸ ಚಿತ್ರದ ಘೋಷಣೆ ಮಾಡಿದ್ದಾರೆ.
ಯುವಸುಧಾ ಆರ್ಟ್ಸ್ ಮತ್ತು ಜಿಎ2 ಪಿಕ್ಚರ್ಸ್ ಜಂಟಿಯಾಗಿ ನಿರ್ಮಿಸುತ್ತಿರುವ ಈ ಚಿತ್ರ 2022ರ ಆರಂಭದಲ್ಲಿ ಪ್ರಪಂಚದಾದ್ಯಂತ ಬಿಡುಗಡೆಯಾಗಲಿದೆ ಎಂದು ಮಾಹಿತಿ ನೀಡಲಾಗಿದೆ. ಅತಿ ದೊಡ್ಡ ಮನರಂಜನೆಯ ಚಿತ್ರ ಬಹುಭಾಷೆಗಳಲ್ಲಿ ತಯಾರಾಗಲಿದೆ ಎಂದು ಪ್ರಕಟಿಸಲಾಗಿದೆ.
ಹೀಗಾಗಿ ಇದು ಕನ್ನಡದಲ್ಲಿಯೂ ಡಬ್ ಆಗಿ ಬಿಡುಗಡೆಯಾಗಲಿದೆ ಎಂಬ ನಿರೀಕ್ಷೆ ಮೂಡಿಸಿದೆ. ಅಲ್ಲು ಅರ್ಜುನ್ ನಟನೆಯ 'ಪುಷ್ಪ' ಚಿತ್ರದ ಪೋಸ್ಟರ್ ಅನ್ನು ಕನ್ನಡದಲ್ಲಿಯೂ ಬಿಡುಗಡೆ ಮಾಡಲಾಗಿತ್ತು. ಕನ್ನಡದಲ್ಲಿ ಕೂಡ 'ಪುಷ್ಪ' ಬಿಡುಗಡೆ ಮಾಡಲಾಗುವುದು ಎಂದು ತಿಳಿಸಲಾಗಿತ್ತು. ಹಾಗೆಯೇ 'ಎಎ21' ಸಹ ಕನ್ನಡದಲ್ಲಿ ತೆರೆಕಾಣುವ ನಿರೀಕ್ಷೆಯಿದೆ.
ಎಎ21' ಚಿತ್ರದ ಪೋಸ್ಟರ್ ಗಮನ ಸೆಳೆದಿದ್ದು, ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದೆ. ನದಿಯೊಂದರ ತೀರದಲ್ಲಿ ನಿಂತಿರುವ ಯುವಕರಿಬ್ಬರು ಹಳ್ಳಿಯೊಂದರ ಕಡೆಗೆ ನೋಡುತ್ತಾ ನಿಂತಿರುವುದನ್ನು ಪೋಸ್ಟರ್ನಲ್ಲಿ ಚಿತ್ರಿಸಲಾಗಿದೆ. ಪಕ್ಕದಲ್ಲಿ ದೋಣಿಯೊಂದು ಇದೆ. ಈ ಪೋಸ್ಟರ್ ಚಿತ್ರದ ಕಥೆ ಏನಿರಬಹುದು ಎಂಬ ಸುಳಿವು ನೀಡದೆ ಇದ್ದರೂ ಕುತೂಹಲ ಮೂಡಿಸುವಂತಿದೆ.
12-09-26 09:40 pm
HK News Staffer
ಯತ್ನಾಳ್ ಆರೋಪಿಸಿದರೂ ವಿಜಯೇಂದ್ರ ಮನೆ ಮೇಲೆ ಇಡಿ, ಐಟ...
12-09-26 09:38 pm
ಮಸೀದಿ ಮುಂದೆ ಗಣೇಶ ಮೆರವಣಿಗೆ ಮಾಡಿದ್ರೆ ಗ್ರಹಚಾರ ಬಿ...
12-09-26 09:36 pm
ಬಿಜೆಪಿ ಅಧಿಕಾರಕ್ಕೆ ಬರಲು ನನ್ನ ಸ್ಥಾನ ಬಿಟ್ಟುಕೊಟ್ಟ...
12-09-26 05:56 pm
ಐಎಎಸ್ ತೇರ್ಗಡೆಯಾಗಿದ್ದ ಕೇರಳದ ಮೊದಲ ಬುಡಕಟ್ಟು ಮಹಿಳ...
12-09-26 05:53 pm
13-09-26 09:00 pm
HK News
80s ಫೋಟೋ ಟ್ರೆಂಡ್ಗೆ ಮಾರುಹೋಗಿದ್ದೀರಾ? ಹುಷಾರ್ ;...
12-09-26 01:10 pm
ಕಾಶ್ಮೀರಿ ಪಂಡಿತರಿಗೆ ಮತ್ತೆ ಬೆದರಿಕೆ ; ಉದ್ಯೋಗ ಬಿಟ...
10-09-26 01:23 pm
ನೇಪಾಳ ಪ್ರವಾಹ ; ಹತ್ತು ದಿನಗಳ ಬಳಿಕ ಜಲವಿದ್ಯುತ್ ಸು...
05-09-26 11:55 am
ಮುಂದಿನ ಒಂದು ವರ್ಷದಲ್ಲಿ ಒಂದು ಸಾವಿರ ವಿದ್ಯಾಭಾರತಿ...
04-09-26 08:14 pm
15-09-26 12:50 pm
HK News Staffer
ಕರಾವಳಿ ಅಭಿವೃದ್ಧಿಗೆ ಡಿಕೆಶಿ ಸರ್ಕಾರದ ಮಹತ್ವದ ಹೆಜ್...
15-09-26 09:46 am
ತುಳುನಾಡಿನಲ್ಲಿ ವಿಭಿನ್ನ ಗಣೇಶ ಚತುರ್ಥಿ ; ಮಣ್ಣಿನ ಮ...
14-09-26 10:01 pm
ಮಂಗಳೂರಿನಲ್ಲಿ ಎರಡು ದಿನ ಸಿಎಂ ಡಿಕೆಶಿ ವಾಸ್ತವ್ಯ ;...
14-09-26 06:02 pm
100 ವರ್ಷಗಳ ಬಳಿಕವೂ ಸ್ವಂತ ಸೂರಿಗಾಗಿ ಕರಾವಳಿಯಲ್ಲಿ...
14-09-26 05:00 pm
15-09-26 12:55 pm
HK News Staffer
Manyda Accident: ಗಣೇಶ ಹಬ್ಬ ಮುಗಿಸಿ ಬೆಂಗಳೂರಿಗೆ...
15-09-26 12:48 pm
ಗಣೇಶ ಹಬ್ಬದ ಬೆನ್ನಲ್ಲೇ ಕರ್ನಾಟಕದಲ್ಲಿ ಸರಣಿ ದುರಂತ:...
15-09-26 12:41 pm
ಗಣೇಶೋತ್ಸವದ ಸಂಭ್ರಮದ ನಡುವೆ ಭೀಕರ ದುರಂತ: ಅಗ್ನಿ ಅವ...
15-09-26 10:31 am
ಜೈಲಿನಲ್ಲಿದ್ದರೂ ಹಳೆ ಚಾಳಿ ಬಿಡದ ಪ್ರಜ್ವಲ್ ರೇವಣ್ಣ...
12-09-26 07:41 pm