ಬ್ರೇಕಿಂಗ್ ನ್ಯೂಸ್
16-01-21 05:21 pm Source: FILMIBEAT Bharath Kumar K ಸಿನಿಮಾ
ದಕ್ಷಿಣ ಭಾರತದ ಖ್ಯಾತ ನಿರ್ದೇಶಕ ಮಣಿರತ್ನಂ ನಿರ್ದೇಶನದಲ್ಲಿ ತಯಾರಾಗುತ್ತಿರುವ ಪೊನ್ನಿಯನ್ ಸೆಲ್ವನ್ ಚಿತ್ರಕ್ಕೆ ಮತ್ತೊಬ್ಬ ಸ್ಟಾರ್ ಕಲಾವಿದ ಎಂಟ್ರಿಯಾಗಿದ್ದಾರೆ. ಬಹುಭಾಷೆ ನಟ ಪ್ರಕಾಶ್ ರಾಜ್ ಈ ಚಿತ್ರದಲ್ಲಿ ಪ್ರಮುಖ ಪಾತ್ರವೊಂದಕ್ಕೆ ಆಯ್ಕೆಯಾಗಿದ್ದಾರೆ. ಈ ಬಗ್ಗೆ ನಟ ಪ್ರಕಾಶ್ ರಾಜ್ ಸಂತಸ ಹಂಚಿಕೊಂಡಿದ್ದು, ಸುಮಾರು 23 ವರ್ಷದ ಚಿತ್ರವನ್ನು ಸ್ಮರಿಸಿಕೊಂಡಿದ್ದಾರೆ. ''23 ವರ್ಷದ ಹಿಂದೆ ಇರುವನ್ ಚಿತ್ರದಲ್ಲಿ ಮಣಿರತ್ನಂ ಅವರ ಜೊತೆ ಕೆಲಸ ಆರಂಭಿಸಿದ್ದೆ, ಈಗ ಅದನ್ನು ಮುಂದುವರಿಯುತ್ತಿದೆ. ಏನೋ ಒಂದು ರೀತಿ ಸಂತೋಷ, ಹೊಸತನ ಕಂಡುಕೊಳ್ಳಬಹುದು ಎಂಬ ಆಶಯ'' ಎಂದು ಟ್ವೀಟ್ ಮಾಡಿದ್ದಾರೆ.
ಅಂದ್ಹಾಗೆ, 'ಪೊನ್ನಿಯನ್ ಸೆಲ್ವನ್' ಚಿತ್ರದಲ್ಲಿ ಪ್ರಕಾಶ್ ರಾಜ್ ಅವರದ್ದು ಯಾವ ಪಾತ್ರ ಎನ್ನುವುದರ ಬಗ್ಗೆ ಸ್ಪಷ್ಟ ಮಾಹಿತಿ ಇಲ್ಲ. ಆದರೆ, ಐಶ್ವರ್ಯ ರೈ ಅವರ ಜೊತೆ ಸ್ಕ್ರೀನ್ ಶೇರ್ ಮಾಡಲಿದ್ದಾರೆ ಎಂದು ಹೇಳಲಾಗುತ್ತಿದೆ.
1997ರಲ್ಲಿ ತೆರೆಕಂಡಿದ್ದ 'ಇರುವನ್' ಚಿತ್ರದಲ್ಲಿ ಮೋಹನ್ ಲಾಲ್, ಪ್ರಕಾಶ್ ರಾಜ್, ಐಶ್ವರ್ಯ ರೈ, ರೇವತಿ, ಟಬು, ಗೌತಮಿ ಅಂತಹ ಪ್ರಮುಖ ಕಲಾವಿದರು ನಟಿಸಿದ್ದರು. ಅಂತಹದ್ದೇ ಕಲಾವಿದರ ದಂಡು ಪೊನ್ನಿಯನ್ ಸೆಲ್ವನ್ ಚಿತ್ರದಲ್ಲಿಯೂ ಕಂಡು ಬರುತ್ತಿದೆ. ಲಾಕ್ಡೌನ್ನಿಂದ ಕಂಬ್ಯಾಕ್ ಮಾಡಿರುವ ಮಣಿರತ್ನಂ ಪೊನ್ನಿಯನ್ ಸೆಲ್ವನ್ ಚಿತ್ರೀಕರಣ ಪುನರಾರಂಭಿಸಿದ್ದಾರೆ. ಪೊನ್ನಿಯನ್ ಸೆಲ್ವನ್ ಚಿತ್ರವನ್ನು ಎರಡು ಭಾಗಗಳಲ್ಲಿ ತಯಾರಿಸಲು ನಿರ್ದೇಶಕ ಮಣಿರತ್ನಂ ಪ್ಲಾನ್ ಮಾಡಿದ್ದಾರೆ ಎಂದು ಈ ಹಿಂದೆಯೇ ವರದಿಯಾಗಿದೆ. ಎ ಆರ್ ರೆಹಮಾನ್ ಚಿತ್ರಕ್ಕೆ ಸಂಗೀತ ಒದಗಿಸುತ್ತಿದ್ದು, ಲೈಕಾ ಪ್ರೊಡಕ್ಷನ್ ಬಂಡವಾಳ ಹಾಕಿದ್ದಾರೆ.
ಚಿತ್ರದ ಪ್ರಧಾನ ಪಾತ್ರದಲ್ಲಿ ತ್ರಿಷಾ ನಟಿಸಿದ್ದಾರೆ. ವಿಕ್ರಂ, ಕಾರ್ತಿ, ಐಶ್ವರ್ಯ ರೈ ಬಚ್ಚನ್, ಅಮಿತಾಭ್ ಬಚ್ಚನ್, ವಿಕ್ರಂ ಪ್ರಭು, ಜಯಂ ರವಿ, ಐಶ್ವರ್ಯ ಲಕ್ಷ್ಮಿ, ಕಿಶೋರ್, ಸಾರಾ ಅರ್ಜುನ್ ಸೇರಿದಂತೆ ಹಲವು ಕಲಾವಿದರು ನಟಿಸುತ್ತಿದ್ದಾರೆ.
This News Article is a Copy of FILMIBEAT
15-09-26 09:13 pm
HK News Staffer
Imran Pasha, Pratap Simha: ನಿನ್ನಂತಹ ಒಂದು ಲಕ್...
15-09-26 04:46 pm
ಬಿಜೆಪಿಯವರಿಗೆ ಕೊಬ್ಬು ಹೆಚ್ಚಾಗಿದೆ ಅದಕ್ಕೆ ಬಳ್ಳಾರಿ...
12-09-26 09:40 pm
ಯತ್ನಾಳ್ ಆರೋಪಿಸಿದರೂ ವಿಜಯೇಂದ್ರ ಮನೆ ಮೇಲೆ ಇಡಿ, ಐಟ...
12-09-26 09:38 pm
ಮಸೀದಿ ಮುಂದೆ ಗಣೇಶ ಮೆರವಣಿಗೆ ಮಾಡಿದ್ರೆ ಗ್ರಹಚಾರ ಬಿ...
12-09-26 09:36 pm
13-09-26 09:00 pm
HK News
80s ಫೋಟೋ ಟ್ರೆಂಡ್ಗೆ ಮಾರುಹೋಗಿದ್ದೀರಾ? ಹುಷಾರ್ ;...
12-09-26 01:10 pm
ಕಾಶ್ಮೀರಿ ಪಂಡಿತರಿಗೆ ಮತ್ತೆ ಬೆದರಿಕೆ ; ಉದ್ಯೋಗ ಬಿಟ...
10-09-26 01:23 pm
ನೇಪಾಳ ಪ್ರವಾಹ ; ಹತ್ತು ದಿನಗಳ ಬಳಿಕ ಜಲವಿದ್ಯುತ್ ಸು...
05-09-26 11:55 am
ಮುಂದಿನ ಒಂದು ವರ್ಷದಲ್ಲಿ ಒಂದು ಸಾವಿರ ವಿದ್ಯಾಭಾರತಿ...
04-09-26 08:14 pm
15-09-26 07:46 pm
HK News Staffer
U T Khader, KDP Meeting, Bharath Sheety, Hari...
15-09-26 06:52 pm
Aravind Bolar Controversy, Mangalore: “ಎಂಕ್ ಮ...
15-09-26 05:29 pm
U T Khader, KDP Meeting, Sudheer Reddy Ips: :...
15-09-26 05:27 pm
ಮಂಗಳೂರು ವಿಮಾನ ನಿಲ್ದಾಣಕ್ಕೆ ‘ಕೋಟಿ-ಚೆನ್ನಯ’ ಹೆಸರು...
15-09-26 12:50 pm
15-09-26 12:55 pm
HK News Staffer
Manyda Accident: ಗಣೇಶ ಹಬ್ಬ ಮುಗಿಸಿ ಬೆಂಗಳೂರಿಗೆ...
15-09-26 12:48 pm
ಗಣೇಶ ಹಬ್ಬದ ಬೆನ್ನಲ್ಲೇ ಕರ್ನಾಟಕದಲ್ಲಿ ಸರಣಿ ದುರಂತ:...
15-09-26 12:41 pm
ಗಣೇಶೋತ್ಸವದ ಸಂಭ್ರಮದ ನಡುವೆ ಭೀಕರ ದುರಂತ: ಅಗ್ನಿ ಅವ...
15-09-26 10:31 am
ಜೈಲಿನಲ್ಲಿದ್ದರೂ ಹಳೆ ಚಾಳಿ ಬಿಡದ ಪ್ರಜ್ವಲ್ ರೇವಣ್ಣ...
12-09-26 07:41 pm