ಬ್ರೇಕಿಂಗ್ ನ್ಯೂಸ್
10-02-21 03:53 pm Source: FILMIBEAT Bharath Kumar K ಸಿನಿಮಾ
ಸ್ಯಾಂಡಲ್ವುಡ್ ನಟ, ನಿರ್ದೇಶಕ ರಿಷಬ್ ಶೆಟ್ಟಿ ಮತ್ತು ಪತ್ನಿ ಪ್ರಗತಿ ದಂಪತಿ ವಿವಾಹ ವಾರ್ಷಿಕೋತ್ಸವ ಸಂಭ್ರಮದಲ್ಲಿದ್ದಾರೆ. ದಾಂಪತ್ಯದಲ್ಲಿ ನಾಲ್ಕು ವರ್ಷ (ವಿವಾಹ ದಿನಾಂಕ: 10 ಫೆಬ್ರವರಿ 2017) ಪೂರೈಸಿರುವ ರಿಷಬ್ ಶೆಟ್ಟಿ ಇನ್ಸ್ಟಾಗ್ರಾಂ ಮೂಲಕ ತನ್ನ ಪತ್ನಿಗೆ ಶುಭಕೋರಿದ್ದಾರೆ. ಪತ್ನಿ ಪ್ರಗತಿ ಹಾಗೂ ಮಗನ ಜೊತೆ ಸೇರಿ ಕೇಕ್ ಕತ್ತರಿಸಿರುವ ರಿಷಬ್ ಶೆಟ್ಟಿ ನಂತರ ಆ ಫೋಟೋಗಳನ್ನು ಇನ್ಸ್ಟಾದಲ್ಲಿ ಶೇರ್ ಮಾಡಿದ್ದಾರೆ. ಪತ್ನಿಯ ಬಗ್ಗೆ ಕೆಲವು ಸಾಲುಗಳನ್ನು ಬರೆದುಕೊಂಡಿದ್ದಾರೆ.

''ನಿನ್ನ ಕೈ ಹಿಡಿದು ಹೊಸದೊಂದು ಮೈಲಿಗಲ್ಲನ್ನು ತಲುಪಿದ್ದೇನೆ. ಹಿಂತಿರುಗಿ ನೋಡಿದರೆ, ಕಾಣುವುದೆಲ್ಲಾ, ಕಷ್ಟ ಮರೆಸುವ ನಿನ್ನ ಸ್ನಿಗ್ಧತೆ, ನನ್ನನ್ನೂ ಮಗುವಾಗಿಸಿಬಿಡುವ ಮುಗ್ಧತೆ, ಮಡದಿಯಾಗಿ, ತಾಯಿಯಾಗಿ ಬದುಕಿನೆಡೆಗಿರುವ ನಿನ್ನ ಬದ್ಧತೆ. ಇದಕ್ಕಿಂತ ಮತ್ತೇನು ಬೇಕು? I am lucky to have you in my life. '' ಎಂದು ನಿರ್ದೇಶಕ ರಿಷಬ್ ಶೆಟ್ಟಿ ಖುಷಿ ಹಂಚಿಕೊಂಡಿದ್ದಾರೆ.

'ಇಚ್ಛೆಯನರಿತು ನಡೆವ ಸತಿಯಿರಲು ಸ್ವರ್ಗಕ್ಕೆ ಕಿಚ್ಚು ಹಚ್ಚು ಎಂದಿದ್ದಾನೆ ಸರ್ವಜ್ಞ. ಸದ್ಯಕ್ಕೆ ನಾವು ಕಿಚ್ಚು ಗಿಚ್ಚು ಹಚ್ಚದೇ ಈ ಸಂಭ್ರಮದಲ್ಲೊಂದು ಒಲವಿನ ದೀಪ ಹಚ್ಚೋಣಾ ಬಾ. ಹ್ಯಾಪಿ ಆನಿವರ್ಸರಿ'' ಎಂದು ತಮ್ಮ ಪತ್ನಿಗೆ ವಿಶ್ ಮಾಡಿದ್ದಾರೆ.
ರಿಷಬ್ ಶೆಟ್ಟಿ ಸಿನಿಮಾ ವಿಚಾರಕ್ಕೆ ಬಂದ್ರೆ ಹೀರೋ ಸಿನಿಮಾ ತೆರೆಗೆ ಬರಲು ಸಜ್ಜಾಗಿದೆ. ಹರಿಕಥೆ ಅಲ್ಲ ಗಿರಿಕಥೆ, ಮಹಾನಿಯರೇ ಮಹಿಳೆಯರೇ, ಕೌ ಬಾಯ್ ಕೃಷ್ಣ, ಗರುಡ ಗಮನ ವೃಷಭ ವಾಹನ ಸೇರಿದಂತೆ ಹಲವು ಪ್ರಾಜೆಕ್ಟ್ ಕೈಯಲ್ಲಿಟ್ಟುಕೊಂಡಿದ್ದಾರೆ. ತೆಲುಗಿನ 'ಮಿಷನ್ ಇಂಪಾಸಿಬಲ್' ಚಿತ್ರದಲ್ಲೂ ನಟಿಸುತ್ತಿದ್ದಾರೆ.
This News Article is a Copy of FILMIBEAT
15-09-26 09:13 pm
HK News Staffer
Imran Pasha, Pratap Simha: ನಿನ್ನಂತಹ ಒಂದು ಲಕ್...
15-09-26 04:46 pm
ಬಿಜೆಪಿಯವರಿಗೆ ಕೊಬ್ಬು ಹೆಚ್ಚಾಗಿದೆ ಅದಕ್ಕೆ ಬಳ್ಳಾರಿ...
12-09-26 09:40 pm
ಯತ್ನಾಳ್ ಆರೋಪಿಸಿದರೂ ವಿಜಯೇಂದ್ರ ಮನೆ ಮೇಲೆ ಇಡಿ, ಐಟ...
12-09-26 09:38 pm
ಮಸೀದಿ ಮುಂದೆ ಗಣೇಶ ಮೆರವಣಿಗೆ ಮಾಡಿದ್ರೆ ಗ್ರಹಚಾರ ಬಿ...
12-09-26 09:36 pm
13-09-26 09:00 pm
HK News
80s ಫೋಟೋ ಟ್ರೆಂಡ್ಗೆ ಮಾರುಹೋಗಿದ್ದೀರಾ? ಹುಷಾರ್ ;...
12-09-26 01:10 pm
ಕಾಶ್ಮೀರಿ ಪಂಡಿತರಿಗೆ ಮತ್ತೆ ಬೆದರಿಕೆ ; ಉದ್ಯೋಗ ಬಿಟ...
10-09-26 01:23 pm
ನೇಪಾಳ ಪ್ರವಾಹ ; ಹತ್ತು ದಿನಗಳ ಬಳಿಕ ಜಲವಿದ್ಯುತ್ ಸು...
05-09-26 11:55 am
ಮುಂದಿನ ಒಂದು ವರ್ಷದಲ್ಲಿ ಒಂದು ಸಾವಿರ ವಿದ್ಯಾಭಾರತಿ...
04-09-26 08:14 pm
15-09-26 09:18 pm
HK News Staffer
Satish Kumpala, Manglore: ಕಾಟಾಚಾರಕ್ಕೆ ಸಂಪುಟ ಸ...
15-09-26 07:46 pm
U T Khader, KDP Meeting, Bharath Sheety, Hari...
15-09-26 06:52 pm
Aravind Bolar Controversy, Mangalore: “ಎಂಕ್ ಮ...
15-09-26 05:29 pm
U T Khader, KDP Meeting, Sudheer Reddy Ips: :...
15-09-26 05:27 pm
15-09-26 09:19 pm
HK News Staffer
Mangalore Blackmail: ಫೋಟೋ ಮಾರ್ಫ್ ಮಾಡಿ ಬ್ಲ್ಯಾಕ...
15-09-26 12:55 pm
Manyda Accident: ಗಣೇಶ ಹಬ್ಬ ಮುಗಿಸಿ ಬೆಂಗಳೂರಿಗೆ...
15-09-26 12:48 pm
ಗಣೇಶ ಹಬ್ಬದ ಬೆನ್ನಲ್ಲೇ ಕರ್ನಾಟಕದಲ್ಲಿ ಸರಣಿ ದುರಂತ:...
15-09-26 12:41 pm
ಗಣೇಶೋತ್ಸವದ ಸಂಭ್ರಮದ ನಡುವೆ ಭೀಕರ ದುರಂತ: ಅಗ್ನಿ ಅವ...
15-09-26 10:31 am