ಬ್ರೇಕಿಂಗ್ ನ್ಯೂಸ್
14-02-21 11:40 am Source: FILMIBEAT Bharath Kumar K ಸಿನಿಮಾ
ತಮಿಳು ನಟಿ, ಮಾಡೆಲ್ ಮೀರಾ ಮಿಥುನ್ ಆತ್ಮಹತ್ಯೆ ಮಾಡಿಕೊಳ್ಳುವುದಾಗಿ ಸಾಮಾಜಿಕ ಜಾಲತಾಣದಲ್ಲಿ ಪೋಸ್ಟ್ ಹಾಕುವ ಮೂಲಕ ಆತಂಕ ಸೃಷ್ಟಿಸಿದ್ದಾರೆ. ನನಗೆ ಖಿನ್ನತೆ ಕಾಡ್ತಿದೆ, ಸಾಮಾಜಿಕ ಜಾಲತಾಣದಲ್ಲಿ ನನಗೆ ಕಿರುಕುಳ ನೀಡಲಾಗಿದೆ, ಮಾನಸಿಕವಾಗಿ ನಾನು ಬಹಳ ನೊಂದಿದ್ದೇನೆ ಎಂದು ವಿಡಿಯೋ ಸಹ ಮಾಡಿ ಕಣ್ಣೀರಿಟ್ಟಿದ್ದಾರೆ.
ಸೋಶಿಯಲ್ ಮೀಡಿಯಾದಲ್ಲಿ ಬರುತ್ತಿರುವ ಕಾಮೆಂಟ್ಗಳು ನನ್ನನ್ನು ಸಾಯುವಂತೆ ಮಾಡುತ್ತಿದೆ. ಕೆಲವರನ್ನು ನನ್ನ ಬಗ್ಗೆ ಬಹಳ ಕೆಟ್ಟದಾಗಿ ಮಾತನಾಡುತ್ತಿದ್ದಾರೆ. ಸತ್ತು ಹೋಗು ಎಂದು ಹೀಯಾಳಿಸುತ್ತಿದ್ದಾರೆ. ನನಗೆ ಬದುಕಬೇಕು ಎಂದು ಅನಿಸುತ್ತಿಲ್ಲ ಎಂದು ಮೀರಾ ಮಿಥುನ್ ಟ್ವಿಟ್ಟರ್ನಲ್ಲಿ ಅಳಲು ತೋಡಿಕೊಂಡಿದ್ದಾರೆ.
ಸಾಮಾಜಿಕ ಜಾಲತಾಣದಲ್ಲಿ ನನಗೆ ನೀಡುತ್ತಿರುವ ಕಿರುಕುಳ ನಿಲ್ಲುವುದಿಲ್ಲ. ಈ ಬಗ್ಗೆ ನಾನು ಎಲ್ಲವೂ ದಾಖಲಿಸುತ್ತಿದ್ದೇನೆ, ಮಾನಸಿಕವಾಗಿ ನನ್ನ ಆರೋಗ್ಯ ಹದಗೆಡುತ್ತಿದೆ, ನನ್ನ ಸಾವಿಗೆ ಕಾರಣರಾದ ಪ್ರತಿಯೊಬ್ಬರನ್ನು ಗಲ್ಲಿಗೇರಿಸಬೇಕು ಎಂದು ಪ್ರಧಾನಿ ಮೋದಿ ಅವರನ್ನು ಟ್ಯಾಗ್ ಮಾಡಿ ಪೋಸ್ಟ್ ಹಾಕಿದ್ದಾರೆ.
''ಕಳೆದ ಮೂರು ವರ್ಷದಿಂದ ನಿರಂತರವಾಗಿ ನಾನು ಖಿನ್ನತೆಗೆ ಒಳಗಾಗಿದ್ದೇನೆ. ಸಮಾಜದಲ್ಲಿ ನನಗೆ ಯಾವುದೇ ರೀತಿ ಗೌರವ ಕೊಡ್ತಿಲ್ಲ. ಪ್ರತಿಕ್ಷಣವೂ ನನಗೆ ಅನ್ಯಾಯವಾಗ್ತಿದೆ. ನನ್ನ ಈ ನೋವನ್ನು ಕೊನೆಯಾಗಿಸಲು ನಾನು ನಿರ್ಧರಿಸಿದ್ದೇನೆ'' ಎಂದು ಆತಂಕ ಸೃಷ್ಟಿಸಿದ್ದಾರೆ.
ಸುಮಾರು 20 ನಿಮಿಷಗಳ ಕಾಲ ವಿಡಿಯೋದಲ್ಲಿ ಕಣ್ಣೀರಿಟ್ಟಿರುವ ನಟಿ ಮೀರಾ ಮಿಥುನ್ ''ಸಿನಿಮಾ ಇಂಡಸ್ಟ್ರಿಯಲ್ಲಿ ಹಾಗೂ ಫ್ಯಾಶನ್ ಇಂಡಸ್ಟ್ರಿಯಲ್ಲಿ ನನ್ನನ್ನು ತುಳಿಯಲಾಗಿದೆ. ನಾನು ಮಾಡಿದ ಕೆಲಸಗಳನ್ನು ಕಾಪಿ ಮಾಡಿದ್ದಾರೆ, ನನ್ನ ಸಾಧನೆಯನ್ನು ಗುರುತಿಸಿ, ಅದನ್ನು ತಾವೇ ಮಾಡಿರವಂತೆ ಕಾಪಿ ಮಾಡಿದ್ದಾರೆ. ನಾನು ತಮಿಳುನಾಡಿನಲ್ಲಿ ಹುಟ್ಟಿದ್ದರೂ, ಓರ್ವ ತಮಿಳು ಹುಡುಗಿಯಾಗಿದ್ದರೂ ನನಗೆ ತೊಂದರೆ ಕೊಟ್ಟಿದ್ದಾರೆ'' ಎಂದು ಆರೋಪಿಸಿದ್ದಾರೆ.
2017ರಲ್ಲಿ '8 ತೋಟಕ್ಕಲ್' ಚಿತ್ರದಲ್ಲಿ ನಟಿಸುವ ಮೂಲಕ ಇಂಡಸ್ಟ್ರಿ ಪ್ರವೇಶಿಸಿದ್ದರು. 'ಜೋಡಿ ನಂಬರ್ 1' ಹಾಗೂ ಬಿಗ್ ಬಾಸ್ 3ನೇ ಆವೃತ್ತಿಯಲ್ಲಿ ಸ್ಪರ್ಧಿಯಾಗಿದ್ದರು.
This News Article is a Copy of FILMIBEAT
31-07-26 01:22 pm
HK News Staffer
ಶಟರ್ ಮುರಿದಿಲ್ಲ, ಕಳ್ಳನ ಸುಳಿವಿಲ್ಲ... CCTV ನೋಡಿದ...
30-07-26 09:27 pm
"ಸಿದ್ದರಾಮಯ್ಯ ರಾಜಕೀಯದಿಂದ ನಿವೃತ್ತಿಯಾಗಲಿ, ಕಾಂಗ್ರ...
30-07-26 10:28 am
ಎಸ್ಐಆರ್ ವ್ಯಾಪ್ತಿಗೆ ಬಾರದ 84.31 ಲಕ್ಷ ಮಂದಿ ; ಆ.8...
29-07-26 09:54 pm
ಧರ್ಮಸ್ಥಳ ವಿರುದ್ಧ ಷಡ್ಯಂತ್ರ ಆರೋಪ ; ಸಂಸದ ಶಶಿಕಾಂತ...
29-07-26 01:52 pm
31-07-26 01:26 pm
HK News Staffer
ಕಾಕ್ರೋಚ್ ಗೆ ಉಚಿತ ಕಾನೂನು ನೆರವು ; 1 ಕೋಟಿ ರೂ. ದೇ...
28-07-26 11:56 am
NEET ಬಿರುಗಾಳಿಯ ಬಳಿಕ ಕೇಂದ್ರ ಸಚಿವ ಸಂಪುಟದಲ್ಲಿ ಮಹ...
26-07-26 01:32 pm
ವಿದ್ಯಾರ್ಥಿಗಳ ಪ್ರತಿಭಟನೆ ಕಿಚ್ಚು ; ರಾಷ್ಟ್ರೀಯ ಪರೀ...
25-07-26 07:34 pm
ಅಂತೂ ವಿದ್ಯಾರ್ಥಿಗಳ ಪ್ರತಿಭಟನೆಗೆ ಮಣಿದ ಕೇಂದ್ರ ಸರ್...
25-07-26 03:07 pm
31-07-26 10:58 pm
HK News Staffer
Mangalore Help Deeksha: ದಿಢೀರ್ ಮೆದುಳು ಜ್ವರಕ್ಕ...
31-07-26 07:03 pm
ರಾಜಸ್ಥಾನದಿಂದ ಮಂಗಳೂರಿಗೆ ಬಂದು ಬೀದಿಯಲ್ಲಿ ಅಲೆದಾಡು...
30-07-26 07:51 pm
ಎಡಪದವು ಬಳಿ ಹೊಸ ಚತುಷ್ಪಥ ಹೆದ್ದಾರಿ ಕುಸಿತ ; 35 ಅಡ...
30-07-26 04:06 pm
ಎಡಪದವು ಬಳಿ ಹೊಸ ಚತುಷ್ಪಥ ಹೆದ್ದಾರಿ ಕುಸಿತ ; 35 ಅಡ...
30-07-26 04:06 pm
31-07-26 10:53 pm
HK News Staffer
ಪಣಂಬೂರು ತೋಟ ಬೆಂಗ್ರೆ ಬೀಚ್ ನಲ್ಲಿ ಸಾಮೂಹಿಕ ಅತ್ಯಾಚ...
31-07-26 09:47 pm
Kundapura Murder, Latest Update: ಹಣಕಾಸು ದ್ವೇಷ...
31-07-26 08:30 pm
ಜೀವಾವಧಿ ಶಿಕ್ಷೆಗೀಡಾಗಿದ್ದ ವಿನಯ್ ಕುಲಕರ್ಣಿಗೆ ಹೈಕೋ...
31-07-26 06:01 pm
ಕಾವೂರಿನಲ್ಲಿ ಮದರಂಗಿ ಶಾಸ್ತ್ರದಲ್ಲಿ ತಲವಾರು ಏಟು ;...
31-07-26 02:21 pm