ಬ್ರೇಕಿಂಗ್ ನ್ಯೂಸ್
16-02-21 10:16 am Source: FILMIBEAT Manjunatha C ಸಿನಿಮಾ
ನಟ ದರ್ಶನ್ಗೆ ಇಂದು ಹುಟ್ಟುಹಬ್ಬದ ಸಂಭ್ರಮ, ದರ್ಶನ್ ಅವರ ಕೋಟ್ಯಂತರ ಅಭಿಮಾನಿಗಳಿಗೆ ಹಬ್ಬವೋ ಹಬ್ಬ. ಫೆಬ್ರವರಿ 16, 1977 ರಲ್ಲಿ ಜನಿಸಿದ ನಟ ದರ್ಶನ್ ಇಂದು 44 ನೇ ಹುಟ್ಟುಹಬ್ಬ ಆಚರಣೆ ಮಾಡಿಕೊಳ್ಳುತ್ತಿದ್ದಾರೆ. ಕೆಲವು ದಿನಗಳ ಹಿಂದೆಯೇ ಅಭಿಮಾನಿಗಳು ದರ್ಶನ್ ಹುಟ್ಟುಹಬ್ಬಕ್ಕೆ ಕಾಮನ್ ಡಿಪಿ ಬಿಡುಗಡೆ ಮಾಡಿದ್ದು, ಅಭಿಮಾನಿಗಳು ಕಾಮನ್ ಡಿಪಿಯನ್ನು ಸಾಮಾಜಿಕ ಜಾಲತಾಣದಲ್ಲಿ ವೈರಲ್ ಮಾಡಿದ್ದಾರೆ.

ಪ್ರತಿವರ್ಷ ದರ್ಶನ್ ಹುಟ್ಟುಹಬ್ಬಕ್ಕೆ ದರ್ಶನ್ ಮನೆಯ ಮುಂದೆ ಅಭಿಮಾನಿಗಳ ಜಾತ್ರೆಯೇ ನಡೆಯುತ್ತಿತ್ತು. ಮಧ್ಯರಾತ್ರಿಯಿಂದಲೇ ಅಭಿಮಾನಿಗಳು ದರ್ಶನ್ ಮನೆಯ ಮುಂದೆ ಬಂದು ಜಮಾಯಿಸುತ್ತಿದ್ದರು, ದರ್ಶನ್ ಅವರು ಅಭಿಮಾನಿಗಳು ತಂದ ಕೇಕ್ ಕತ್ತರಿಸಿ ಅವರೊಟ್ಟಿಗೆ ಫೊಟೊ ತೆಗೆಸಿಕೊಂಡು ಸಂಭ್ರಮಿಸುತ್ತಿದ್ದರು. ಆದರೆ ಈ ಬಾರಿ ಹಾಗೆ ಆಗುತ್ತಿಲ್ಲ.

ತಃ ದರ್ಶನ್ ಹೇಳಿರುವಂತೆ ಕೊರೊನಾ ಕಾರಣದಿಂದಾಗಿ ಈ ಬಾರಿ ಹುಟ್ಟುಹಬ್ಬದ ಆಚರಣೆ ಇರುವುದಿಲ್ಲ, ಯಾರೂ ಮನೆಯ ಬಳಿ ಬರಬೇಡಿ. ಎಲ್ಲಿದ್ದೀರೋ ಅಲ್ಲಿಂದಲೇ ಶುಭ ಹಾರೈಸಿ, ನಿಮ್ಮ ಕುಟುಂಬದವರೊಟ್ಟಿಗೆ ಸಂಭ್ರಮಿಸಿ ಎಂದು ದರ್ಶನ್ ಈ ಹಿಂದೆ ಫೇಸ್ಬುಕ್ ಲೈವ್ನಲ್ಲಿ ಮನವಿ ಮಾಡಿದ್ದರು. ದರ್ಶನ್ ಅವರ ಹುಟ್ಟುಹಬ್ಬಕ್ಕೆ ಕನ್ನಡದ ಹಲವಾರು ಸ್ಟಾರ್ ನಟ-ನಟಿಯರು ಸಾಮಾಜಿಕ ಜಾಲತಾಣದಲ್ಲಿ ಶುಭಾಶಯಗಳನ್ನು ಕೋರಿದ್ದಾರೆ. ದರ್ಶನ್ ಹುಟ್ಟುಹಬ್ಬದ ದಿನ ಅವರ ಮುಂಬರುವ ಸಿನಿಮಾ ರಾಬರ್ಟ್ನ ಟ್ರೇಲರ್ ಬಿಡುಗಡೆ ಆಗುತ್ತಿದೆ. ಇಂದು ಬೆಳಿಗ್ಗೆ 10 ಗಂಟೆಗೆ ರಾಬರ್ಟ್ ಟ್ರೇಲರ್ ಕನ್ನಡ ಮತ್ತು ತೆಲುಗು ಭಾಷೆಯಲ್ಲಿ ಬಿಡುಗಡೆ ಆಗಲಿದೆ.
This News Article is a Copy of FILMIBEAT
15-09-26 09:13 pm
HK News Staffer
Imran Pasha, Pratap Simha: ನಿನ್ನಂತಹ ಒಂದು ಲಕ್...
15-09-26 04:46 pm
ಬಿಜೆಪಿಯವರಿಗೆ ಕೊಬ್ಬು ಹೆಚ್ಚಾಗಿದೆ ಅದಕ್ಕೆ ಬಳ್ಳಾರಿ...
12-09-26 09:40 pm
ಯತ್ನಾಳ್ ಆರೋಪಿಸಿದರೂ ವಿಜಯೇಂದ್ರ ಮನೆ ಮೇಲೆ ಇಡಿ, ಐಟ...
12-09-26 09:38 pm
ಮಸೀದಿ ಮುಂದೆ ಗಣೇಶ ಮೆರವಣಿಗೆ ಮಾಡಿದ್ರೆ ಗ್ರಹಚಾರ ಬಿ...
12-09-26 09:36 pm
13-09-26 09:00 pm
HK News
80s ಫೋಟೋ ಟ್ರೆಂಡ್ಗೆ ಮಾರುಹೋಗಿದ್ದೀರಾ? ಹುಷಾರ್ ;...
12-09-26 01:10 pm
ಕಾಶ್ಮೀರಿ ಪಂಡಿತರಿಗೆ ಮತ್ತೆ ಬೆದರಿಕೆ ; ಉದ್ಯೋಗ ಬಿಟ...
10-09-26 01:23 pm
ನೇಪಾಳ ಪ್ರವಾಹ ; ಹತ್ತು ದಿನಗಳ ಬಳಿಕ ಜಲವಿದ್ಯುತ್ ಸು...
05-09-26 11:55 am
ಮುಂದಿನ ಒಂದು ವರ್ಷದಲ್ಲಿ ಒಂದು ಸಾವಿರ ವಿದ್ಯಾಭಾರತಿ...
04-09-26 08:14 pm
15-09-26 09:18 pm
HK News Staffer
Satish Kumpala, Manglore: ಕಾಟಾಚಾರಕ್ಕೆ ಸಂಪುಟ ಸ...
15-09-26 07:46 pm
U T Khader, KDP Meeting, Bharath Sheety, Hari...
15-09-26 06:52 pm
Aravind Bolar Controversy, Mangalore: “ಎಂಕ್ ಮ...
15-09-26 05:29 pm
U T Khader, KDP Meeting, Sudheer Reddy Ips: :...
15-09-26 05:27 pm
15-09-26 09:19 pm
HK News Staffer
Mangalore Blackmail: ಫೋಟೋ ಮಾರ್ಫ್ ಮಾಡಿ ಬ್ಲ್ಯಾಕ...
15-09-26 12:55 pm
Manyda Accident: ಗಣೇಶ ಹಬ್ಬ ಮುಗಿಸಿ ಬೆಂಗಳೂರಿಗೆ...
15-09-26 12:48 pm
ಗಣೇಶ ಹಬ್ಬದ ಬೆನ್ನಲ್ಲೇ ಕರ್ನಾಟಕದಲ್ಲಿ ಸರಣಿ ದುರಂತ:...
15-09-26 12:41 pm
ಗಣೇಶೋತ್ಸವದ ಸಂಭ್ರಮದ ನಡುವೆ ಭೀಕರ ದುರಂತ: ಅಗ್ನಿ ಅವ...
15-09-26 10:31 am