ಬ್ರೇಕಿಂಗ್ ನ್ಯೂಸ್
16-02-21 10:21 am Source: FILMIBEAT Manjunatha C ಸಿನಿಮಾ
ಬಾಲಿವುಡ್ನ ಮತ್ತೊಬ್ಬ ಪ್ರತಿಭಾವಂತ ನಟ ಮೃತರಾಗಿದ್ದಾನೆ. ಕೆಲವು ಬಾಲಿವುಡ್ ಸಿನಿಮಾಗಳಲ್ಲಿ ನಟಿಸಿರುವ ಸಂದೀಪ್ ನಹರ್ ರ ಮೃತದೇಹ ಮುಂಬೈ ನ ತಮ್ಮ ಮನೆಯಲ್ಲಿ ಪತ್ತೆಯಾಗಿದ್ದು. ಸಂದೀಪ್ ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎನ್ನಲಾಗುತ್ತಿದೆ. ಸುಶಾಂತ್ ಸಿಂಗ್ ಜೊತೆಗೆ ಎಂಎಸ್ ಧೋನಿ, ಅಕ್ಷಯ್ ಕುಮಾರ್ ಜೊತೆಗೆ ಕೇಸರಿ ಸೇರಿದಂತೆ ಇನ್ನೂ ಕೆಲವು ಸಿನಿಮಾಗಳಲ್ಲಿ ನಟಿಸಿರುವ ಸಂದೀಪ್ ನಹರ್ ಸಾಯುವ ಮುನ್ನ ಫೇಸ್ಬುಕ್ನಲ್ಲಿ ವಿಡಿಯೋ ಅಪ್ಲೋಡ್ ಮಾಡಿದ್ದರು. ವಿಡಿಯೋನಲ್ಲಿ,
'ನಾನು ಜೀವನದಲ್ಲಿ ಸಾಕಷ್ಟು ಸಮಸ್ಯೆ ಎದುರಿಸುತ್ತಿದ್ದೇನೆ. ನಾನು ಸಾಕಷ್ಟು ಸುಖ-ದುಃಖಗಳನ್ನು ನೋಡಿದ್ದೇನೆ. ಆದರೆ ಈಗ ನಾನು ಎದುರಿಸುತ್ತಿರುವ ಸಮಸ್ಯೆಯಿಂದ ಹೊರಬರುವುದು ಕಷ್ಟ, ಹಾಗಾಗಿ ಆತ್ಮಹತ್ಯೆಗೆ ಶರಣಾಗುತ್ತಿದ್ದೇನೆ' ಎಂದು ಹೇಳಿದ್ದಾರೆ.
'ನನ್ನ ಪತ್ನಿ ಕಾಂಚನ್ ಶರ್ಮಾ ಹಾಗೂ ಅವರ ತಾಯಿ ವಿನು ಶರ್ಮಾ ನನ್ನನ್ನು ಅರ್ಥ ಮಾಡಿಕೊಳ್ಳಲಿಲ್ಲ, ಅರ್ಥ ಮಾಡಿಕೊಳ್ಳುವ ಪ್ರಯತ್ನವನ್ನೂ ಮಾಡಲಿಲ್ಲ. ನನ್ನ ಪತ್ನಿ ಅಸಾಧಾರಣ ವ್ಯಕ್ತಿತ್ವದವಳು. ನನ್ನ ಹಾಗೂ ಆಕೆಯ ವ್ಯಕ್ತಿತ್ವ ಏಕರೀತಿಯದ್ದಲ್ಲ. ನಮ್ಮಿಬ್ಬರಿಗೂ ಹೊಂದಾಣಿಕೆ ಆಗುತ್ತಿಲ್ಲ, ಪ್ರತಿದಿನ ಜಗಳ, ಇದು ನನಗೆ ಸಹಿಸಲು ಆಗುತ್ತಿಲ್ಲ. ಇದು ಆಕೆಗೆ ಸಾಮಾನ್ಯ, ಆದರೆ ನನಗೆ ಸಾಮಾನ್ಯವಲ್ಲ. ಇದರಲ್ಲಿ ಆಕೆಯದೇನೂ ತಪ್ಪಿಲ್ಲ, ಏಕೆಂದರೆ ಆಕೆಯ ವರ್ತನೆಯೇ ಅಂಥಹದ್ದು' ಎಂದು ಸಾಯುವ ಮುನ್ನ ವಿಡಿಯೋದಲ್ಲಿ ಹೇಳಿದ್ದಾರೆ ಸಂದೀಪ್ ತಮ್ಮ ಕೋಣೆಯಲ್ಲಿ ಪ್ರಜ್ಞಾಹೀನರಾಗಿ ಬಿದ್ದಿದ್ದ ಸಂದೀಪ್ ಅನ್ನು ಅವರ ಪತ್ನಿ ಹಾಗೂ ಗೆಳೆಯರು ಆಸ್ಪತ್ರೆಗೆ ಸಾಗಿಸಿದ್ದಾರೆ. ಆದರೆ ವೈದ್ಯರು, ಸಂದೀಪ್ ಅನ್ನು ಮೃತ ಎಂದು ಘೋಷಿಸಿದ್ದಾರೆ. ಮುಂಬೈ ಪೊಲೀಸರು ತನಿಖೆ ಆರಂಭಿಸಿದ್ದು, ಸಾವಿಗೆ ಕಾರಣ ಹುಡುಕುತ್ತಿದ್ದಾರೆ. ಕಳೆದ ವರ್ಷ ನಟ ಸುಶಾಂತ್ ಸಿಂಗ್ ಸಹ ಆತ್ಮಹತ್ಯೆಗೆ ಶರಣಾಗಿದ್ದರು. ಮುಂಬೈನ ಅವರ ನಿವಾಸದಲ್ಲಿ ನೇಣಿಗೆ ಶರಣಾಗಿದ್ದರು ಸುಶಾಂತ್ ಸಿಂಗ್. ಪ್ರಕರಣದ ಬಗ್ಗೆ ಸಿಬಿಐ ತನಿಖೆ ಇನ್ನೂ ಜಾರಿಯಲ್ಲಿದೆ.
This News Article is a Copy of FILMIBEAT
15-09-26 09:13 pm
HK News Staffer
Imran Pasha, Pratap Simha: ನಿನ್ನಂತಹ ಒಂದು ಲಕ್...
15-09-26 04:46 pm
ಬಿಜೆಪಿಯವರಿಗೆ ಕೊಬ್ಬು ಹೆಚ್ಚಾಗಿದೆ ಅದಕ್ಕೆ ಬಳ್ಳಾರಿ...
12-09-26 09:40 pm
ಯತ್ನಾಳ್ ಆರೋಪಿಸಿದರೂ ವಿಜಯೇಂದ್ರ ಮನೆ ಮೇಲೆ ಇಡಿ, ಐಟ...
12-09-26 09:38 pm
ಮಸೀದಿ ಮುಂದೆ ಗಣೇಶ ಮೆರವಣಿಗೆ ಮಾಡಿದ್ರೆ ಗ್ರಹಚಾರ ಬಿ...
12-09-26 09:36 pm
13-09-26 09:00 pm
HK News
80s ಫೋಟೋ ಟ್ರೆಂಡ್ಗೆ ಮಾರುಹೋಗಿದ್ದೀರಾ? ಹುಷಾರ್ ;...
12-09-26 01:10 pm
ಕಾಶ್ಮೀರಿ ಪಂಡಿತರಿಗೆ ಮತ್ತೆ ಬೆದರಿಕೆ ; ಉದ್ಯೋಗ ಬಿಟ...
10-09-26 01:23 pm
ನೇಪಾಳ ಪ್ರವಾಹ ; ಹತ್ತು ದಿನಗಳ ಬಳಿಕ ಜಲವಿದ್ಯುತ್ ಸು...
05-09-26 11:55 am
ಮುಂದಿನ ಒಂದು ವರ್ಷದಲ್ಲಿ ಒಂದು ಸಾವಿರ ವಿದ್ಯಾಭಾರತಿ...
04-09-26 08:14 pm
15-09-26 09:18 pm
HK News Staffer
Satish Kumpala, Manglore: ಕಾಟಾಚಾರಕ್ಕೆ ಸಂಪುಟ ಸ...
15-09-26 07:46 pm
U T Khader, KDP Meeting, Bharath Sheety, Hari...
15-09-26 06:52 pm
Aravind Bolar Controversy, Mangalore: “ಎಂಕ್ ಮ...
15-09-26 05:29 pm
U T Khader, KDP Meeting, Sudheer Reddy Ips: :...
15-09-26 05:27 pm
15-09-26 09:19 pm
HK News Staffer
Mangalore Blackmail: ಫೋಟೋ ಮಾರ್ಫ್ ಮಾಡಿ ಬ್ಲ್ಯಾಕ...
15-09-26 12:55 pm
Manyda Accident: ಗಣೇಶ ಹಬ್ಬ ಮುಗಿಸಿ ಬೆಂಗಳೂರಿಗೆ...
15-09-26 12:48 pm
ಗಣೇಶ ಹಬ್ಬದ ಬೆನ್ನಲ್ಲೇ ಕರ್ನಾಟಕದಲ್ಲಿ ಸರಣಿ ದುರಂತ:...
15-09-26 12:41 pm
ಗಣೇಶೋತ್ಸವದ ಸಂಭ್ರಮದ ನಡುವೆ ಭೀಕರ ದುರಂತ: ಅಗ್ನಿ ಅವ...
15-09-26 10:31 am