ಬ್ರೇಕಿಂಗ್ ನ್ಯೂಸ್
05-03-21 12:00 pm Source: FILMIBEAT ಸಿನಿಮಾ
ಸೆಲೆಬ್ರಿಟಿಗಳಿಗೆ ಡ್ರಗ್ಸ್ ಸರಬರಾಜು ಮಾಡುತ್ತಿದ್ದ ಆರೋಪದ ಮೇಲೆ ಬಿಗ್ ಬಾಸ್ ಖ್ಯಾತಿಯ ಮಸ್ತಾನ್ ಮನೆ ಮೇಲೆ ಪೋಲೀಸರು ದಾಳಿ ನಡೆಸಿದ್ದಾರೆ. ಸ್ಯಾಂಡಲ್ ವುಡ್ ಗೆ ಡ್ರಗ್ ಲಿಂಕ್ ವಿಚಾರವಾಗಿ ಈ ದಾಳಿ ನಡೆದಿದೆ. ಸಂಜಯ್ ನಗರದಲ್ಲಿರುವ ಮಸ್ತಾನ್ ಮನೆ ಮೇಲೆ ಗೋವಿಂದಪುರ ಪೊಲೀಸರು ಬೆಳ್ಳಂಬೆಳಗ್ಗೆ ದಾಳಿ ಮಾಡಿದ್ದಾರೆ.
ಬಾಣಸವಾಡಿ ಎಸಿಪಿ ನೇತೃತ್ವದಲ್ಲಿ ದಾಳಿ ನಡೆಸಿ ಶೋಧ ನಡೆಸಿದ್ದಾರೆ. ನಿರ್ದೇಶಕ, ನಟ ಎಂದು ಗುರುತಿಸಿಕೊಂಡಿರುವ ಮಸ್ತಾನ್, ಬಿಗ್ ಬಾಸ್ ನಲ್ಲಿ ವೈಲ್ಡ್ ಕಾರ್ಡ್ ಎಂಟ್ರಿ ಪಡೆದುಕೊಂಡಿದ್ದರು. ಈ ಮೂಲಕ ರಾಜ್ಯಕ್ಕೆ ಪರಿಚಿತರಾಗಿದ್ದ ಮಸ್ತಾನ್ ಡ್ರಗ್ ಜಾಲದಲ್ಲಿ ಶಾಮೀಲಾಗಿದ್ದಾರೆ ಎಂಬ ಆರೋಪ ಕೇಳಿ ಬಂದಿದೆ.
ಇತ್ತೀಚೆಗೆ ಬಂಧನಕ್ಕೆ ಒಳಗಾಗಿರುವ ನೈಜೀರಿಯಾ ಮೂಲದ ಡ್ರಗ್ ಪೆಡ್ಲರ್ ನ ಜತೆ ಮಸ್ತಾನ್ ಸಂಪರ್ಕದಲ್ಲಿದ್ದ. ನೈಜೀರಿಯಾ ಮೂಲದ ಡ್ರಗ್ ಪೆಡ್ಲರ್ ನನ್ನು ಸಿಸಿಬಿ ಪೊಲೀಸರು ಬಂಧಿಸಿದ್ದರು.
ವಿಚಾರಣೆ ವೇಳೆ ನೈಜೀರಿಯಾ ಮೂಲದ ಡ್ರಗ್ ಪೆಡ್ಲರ್, ಮಸ್ತಾನ್ ಚಂದ್ರ ಹಾಗೂ ಕೇಶವ್ ಎಂಬುವರು ಸಂಪರ್ಕದಲ್ಲಿದ್ದು, ಡ್ರಗ್ ಪೂರೈಕೆ ಮಾಡುತ್ತಿರುವುದಾಗಿ ಹೇಳಿಕೆ ನೀಡಿದ್ದಾನೆ. ಈ ಕುರಿತ ತಾಂತ್ರಿಕ ಸಾಕ್ಷಾಧಾರಗಳನ್ನು ಸಂಗ್ರಹಿಸಿದ್ದ ಗೋವಿಂದಪುರ ಪೊಲೀಸರು, ಮಸ್ತಾನ್ ಮತ್ತು ಕೇಶವ್ ಎಂಬುವರ ಮನೆ ಮೇಲೆ ದಾಳಿ ನಡೆಸಿದ್ದಾರೆ.
ಸದ್ಯ ಲಭ್ಯವಿರುವ ಸಾಕ್ಷಾಧಾರಗಳ ಮೇಲೆ ಮಸ್ತಾನ್ ನನ್ನು ವಶಕ್ಕೆ ಪಡೆದು ವಿಚಾರಣೆ ನಡೆಸಲಿದ್ದಾರೆ. ಬೆಂಗಳೂರಿನ ಸ್ಯಾಂಡಲ್ ವುಡ್ ಡ್ರಗ್ ಡೀಲ್ ಪ್ರಕರಣ ಬೆಳಕಿಗೆ ಬರಲು ಮೂಲ ಕಾರಣ ಬಾಣಸವಾಡಿ ಪೊಲೀಸರು.
ಇನ್ನು ಸ್ಯಾಂಡಲ್ ವುಡ್ ಡ್ರಗ್ ಡೀಲ್ ಪ್ರಕರಣಕ್ಕೆ ಸಂಬಂಧಿಸಿದಂತೆ ಸಿಸಿಬಿ ಪೊಲೀಸರು ಕೆಲ ದಿನಗಳ ಹಿಂದೆಯಷ್ಟೇ 25 ಆರೋಪಿಗಳ ವಿರುದ್ಧ ದೋಷಾರೋಪನ ಪಟ್ಟಿ ಸಲ್ಲಿಸಿದ್ದರು. ಇದೀಗ ಬಿಗ್ ಬಾಸ್ ಖ್ಯಾತಿಯ ಮಸ್ತಾನ್ ವಶಕ್ಕೆ ಪಡೆದು ವಿಚಾರಣೆ ಆರಂಭಿಸಿದ್ದಾರೆ.
This News Article Is A Copy Of FILMIBEAT
18-06-26 01:25 pm
HK News Staffer
Jayadeva Hospital, Mysuru: ಮೈಸೂರಿನ ಜಯದೇವ ಆಸ್ಪ...
18-06-26 01:17 pm
ಧರ್ಮಸ್ಥಳ ಕೇಸ್ ; ಎಡಪಂಥೀಯರ ಒತ್ತಡಕ್ಕೆ ಎಸ್ಐಟಿ, ಷಡ...
17-06-26 10:12 pm
ಆರ್ಎಸ್ಎಸ್ ಲೆಕ್ಕ ಕೇಳಲು ಇವನ್ಯಾರು? ಪ್ರಿಯಾಂಕ್ ಖ...
17-06-26 06:59 pm
ಜಿಮ್ ಮುಗಿಸಿ ಮನೆಗೆ ಬಂದ ಯುವಕನಿಗೆ ಹೃದಯಾಘಾತ ; ಹೆ...
17-06-26 06:35 pm
18-06-26 01:23 pm
HK News Staffer
ಹೊರ್ಮುಜ್ ಬಿಕ್ಕಟ್ಟು; ಒಮಾನ್ ಕರಾವಳಿಯಲ್ಲಿ ಮತ್ತೊಂದ...
15-06-26 11:18 am
ಬಿರಿಯಾನಿ ಹೆಸರಲ್ಲಿ ಮಹಿಳೆಯ ಮಾನ ಕಳೆದ ಟೆಕ್ಕಿ! ತಮಾ...
14-06-26 09:46 pm
ಸಹಕಾರಿ ಬ್ಯಾಂಕುಗಳಲ್ಲಿ ಸರ್ವಾಧಿಕಾರಕ್ಕೆ ಬ್ರೇಕ್ !...
14-06-26 07:17 pm
ಅಸ್ಸಾಂನಲ್ಲಿ 18 ವರ್ಷ ಮೇಲ್ಪಟ್ಟವರಿಗೆ ಆಧಾರ್ ಕಾರ್ಡ...
14-06-26 04:49 pm
18-06-26 12:33 pm
HK News Staffer
ಬಸ್ಸೋ, ಬಸ್ ನಿಲ್ದಾಣವೋ ? ಗುರುಪುರ ಬಂಡಸಾಲೆಯಲ್ಲಿ ವ...
16-06-26 11:35 am
ಧರ್ಮಸ್ಥಳ ಬುರುಡೆ ಪ್ರಕರಣ ; ಗಿರೀಶ್ ಮಟ್ಟಣ್ಣನವರ್,...
15-06-26 04:52 pm
ಅಂಬಾನಿ ಕುಟುಂಬದ ಗುರೂಜಿ ಜೊತೆ ಕೊಲ್ಲೂರು ಮೂಕಾಂಬಿಕೆ...
14-06-26 09:47 pm
ದ.ಕ. ಜಿಲ್ಲೆಯ 14 ಪ್ರಮುಖ ರಸ್ತೆ ಅಭಿವೃದ್ದಿ ಕಾಮಗಾರ...
14-06-26 02:37 pm
18-06-26 01:20 pm
HK News Staffer
ಸ್ಕೂಟರಲ್ಲಿ ನಾಲ್ವರು ಹೆಣ್ಮಕ್ಕಳ ಜಾಲಿ ರೈಡ್; ನಿಯಂತ...
17-06-26 01:41 pm
ವಾಯುಪಡೆ ಅಧಿಕಾರಿ ಪತ್ನಿಗೆ ಅಮಲು ಪದಾರ್ಥ ನೀಡಿ ಅತ್ಯ...
16-06-26 08:32 pm
SIT Car Accident: ಎಸ್ಐಟಿ ಎಸ್ಪಿ ಸೈಮನ್ ಪ್ರಯಾಣಿಸ...
16-06-26 05:10 pm
Chandrashekhar, Belthangady: ಬೆಳ್ತಂಗಡಿ ಸರ್ಕಾರ...
16-06-26 02:34 pm