ಬ್ರೇಕಿಂಗ್ ನ್ಯೂಸ್
15-03-21 11:26 am source: FILMIBEAT ಸಿನಿಮಾ
ನಟಿ ಗೀತಾ ಬಸ್ರಾ ಮತ್ತು ಭಾರತದ ಮಾಜಿ ಸ್ಪಿನ್ನರ್ ಹರ್ಭಜನ್ ಸಿಂಗ್ ಕುಟುಂಬದಲ್ಲಿ ಸಂತಸ ಮನೆ ಮಾಡಿದೆ. ಈ ಸ್ಟಾರ್ ದಂಪತಿ ಎರಡನೇ ಮಗುವಿನ ನಿರೀಕ್ಷೆಯಲ್ಲಿದ್ದಾರೆ. ಈ ಸಂಭ್ರಮದ ವಿಚಾರವನ್ನು ಹರ್ಭನ್ ಮತ್ತು ಗೀತಾ ಸಾಮಾಜಿಕ ಜಾಲತಾಣದಲ್ಲಿ ಹಂಚಿಕೊಂಡಿದ್ದಾರೆ.
ಮೊದಲ ಮಗಳು ಹಿನಾಯಾ ಜೊತೆ ಗೀತಾ ಮತ್ತು ಹರ್ಭನ್ ಇಬ್ಬರು ಕ್ಯಾಮರಾಗೆ ಪೋಸ್ ನೀಡಿರುವ ಫೋಟೋವನ್ನು ಶೇರ್ ಮಾಡಿ, ಮತ್ತೊಂದು ಮಗುವಿನ ಸ್ವಾಗತಕ್ಕೆ ಸಜ್ಜಾಗಿರುವುದಾಗಿ ಹೇಳಿದ್ದಾರೆ. ಮಗಳು ಹಿನಾಯಾ ಕೈಯಲ್ಲಿ ಕಪ್ಪು ಬಣ್ಣದ ಟೀ ಶರ್ಟ್ ಹಿಡಿದಿದ್ದು, ಅದರ ಮೇಲೆ ಶೀಘ್ರದಲ್ಲೇ ಸಹೋದರಿ ಆಗಲಿದ್ದೇನೆ ಎಂದು ಬರೆಯಲಾಗಿದೆ. ಎರಡನೇ ಮಗುವಿಗೆ ಜನ್ಮ ನೀಡಿದ ನಟಿ ಕರೀನಾ ಕಪೂರ್ ಹರ್ಭಜನ್ ಸಿಂಗ್ ಕುಟುಂಬದ ಈ ಫೋಟೋ ಸಾಮಾಜಿಕ ಜಾಲತಾಣದಲ್ಲಿ ಸಿಕ್ಕಾಪಟ್ಟೆ ವೈರಲ್ ಆಗಿದೆ. ನಟಿ ಗೀತಾ ಬಸ್ರಾ ಒಂದಿಷ್ಟು ಫೋಟೋಗಳನ್ನು ಹಂಚಿಕೊಂಡಿದ್ದು, ಜುಲೈನಲ್ಲಿ ಎರಡನೇ ಮಗು ಆಗಮನವಾಗಲಿದೆ ಎಂದು ಬರೆದುಕೊಂಡಿದ್ದಾರೆ.
ಹರ್ಭಜನ್ ಮತ್ತು ಗೀತಾ 2015 ಅಕ್ಟೋಬರ್ 29ರಂದು ವೈವಾಹಿಕ ಜೀವನಕ್ಕೆ ಕಾಲಿಟ್ಟಿದ್ದಾರೆ. 5 ವರ್ಷಗಳಿಂದ ಒಬ್ಬರನ್ನೊಬ್ಬರು ಪ್ರೀತಿಸುತ್ತಿದ್ದ ಈ ಜೋಡಿ ಬಳಿಕ ಪತಿ-ಪತ್ನಿಯರಾಗಿದ್ದಾರೆ. ಪಂಜಾಬ್ನ ಜಲಂಧರ್ನಲ್ಲಿ ನಡೆದ ಇಬ್ಬರ ಮದುವೆ ಸಮಾರಂಭದಲ್ಲಿ ಅನೇಕ ಗಣ್ಯರು ಭಾಗಿಯಾಗಿದ್ದರು.
ಹರ್ಭಜನ್ ಸಿಂಗ್ ಸದ್ಯ ಕ್ರಿಕೆಟ್ನಿಂದ ಸಿನಿಮಾರಂಗದ ಕಡೆ ಮುಖ ಮಾಡಿದ್ದಾರೆ. ತಮಿಳು ಸಿನಿಮಾದಲ್ಲಿ ನಟಿಸುವ ಮೂಲಕ ಮೊದಲ ಬಾರಿಗೆ ಬಣ್ಣದ ಲೋಕದಲ್ಲಿ ಅದೃಷ್ಟ ಪರೀಕ್ಷೆಗೆ ಮುಂದಾಗಿದ್ದಾರೆ. ಸದ್ಯ ಫ್ರೆಂಡ್ ಶಿಪ್ ಸಿನಿಮಾ ರಿಲೀಸ್ ಎದುರು ನೋಡುತ್ತಿದ್ದಾರೆ.
This News Article Is A Copy Of FILMIBEAT
15-09-26 09:13 pm
HK News Staffer
Imran Pasha, Pratap Simha: ನಿನ್ನಂತಹ ಒಂದು ಲಕ್...
15-09-26 04:46 pm
ಬಿಜೆಪಿಯವರಿಗೆ ಕೊಬ್ಬು ಹೆಚ್ಚಾಗಿದೆ ಅದಕ್ಕೆ ಬಳ್ಳಾರಿ...
12-09-26 09:40 pm
ಯತ್ನಾಳ್ ಆರೋಪಿಸಿದರೂ ವಿಜಯೇಂದ್ರ ಮನೆ ಮೇಲೆ ಇಡಿ, ಐಟ...
12-09-26 09:38 pm
ಮಸೀದಿ ಮುಂದೆ ಗಣೇಶ ಮೆರವಣಿಗೆ ಮಾಡಿದ್ರೆ ಗ್ರಹಚಾರ ಬಿ...
12-09-26 09:36 pm
13-09-26 09:00 pm
HK News
80s ಫೋಟೋ ಟ್ರೆಂಡ್ಗೆ ಮಾರುಹೋಗಿದ್ದೀರಾ? ಹುಷಾರ್ ;...
12-09-26 01:10 pm
ಕಾಶ್ಮೀರಿ ಪಂಡಿತರಿಗೆ ಮತ್ತೆ ಬೆದರಿಕೆ ; ಉದ್ಯೋಗ ಬಿಟ...
10-09-26 01:23 pm
ನೇಪಾಳ ಪ್ರವಾಹ ; ಹತ್ತು ದಿನಗಳ ಬಳಿಕ ಜಲವಿದ್ಯುತ್ ಸು...
05-09-26 11:55 am
ಮುಂದಿನ ಒಂದು ವರ್ಷದಲ್ಲಿ ಒಂದು ಸಾವಿರ ವಿದ್ಯಾಭಾರತಿ...
04-09-26 08:14 pm
15-09-26 09:18 pm
HK News Staffer
Satish Kumpala, Manglore: ಕಾಟಾಚಾರಕ್ಕೆ ಸಂಪುಟ ಸ...
15-09-26 07:46 pm
U T Khader, KDP Meeting, Bharath Sheety, Hari...
15-09-26 06:52 pm
Aravind Bolar Controversy, Mangalore: “ಎಂಕ್ ಮ...
15-09-26 05:29 pm
U T Khader, KDP Meeting, Sudheer Reddy Ips: :...
15-09-26 05:27 pm
15-09-26 09:19 pm
HK News Staffer
Mangalore Blackmail: ಫೋಟೋ ಮಾರ್ಫ್ ಮಾಡಿ ಬ್ಲ್ಯಾಕ...
15-09-26 12:55 pm
Manyda Accident: ಗಣೇಶ ಹಬ್ಬ ಮುಗಿಸಿ ಬೆಂಗಳೂರಿಗೆ...
15-09-26 12:48 pm
ಗಣೇಶ ಹಬ್ಬದ ಬೆನ್ನಲ್ಲೇ ಕರ್ನಾಟಕದಲ್ಲಿ ಸರಣಿ ದುರಂತ:...
15-09-26 12:41 pm
ಗಣೇಶೋತ್ಸವದ ಸಂಭ್ರಮದ ನಡುವೆ ಭೀಕರ ದುರಂತ: ಅಗ್ನಿ ಅವ...
15-09-26 10:31 am