ಬ್ರೇಕಿಂಗ್ ನ್ಯೂಸ್
20-03-21 03:24 pm Source: FILMIBEAT ಸಿನಿಮಾ
ಬಾಲಿವುಡ್ ನ ಖ್ಯಾತ ನಟಿಯರಲ್ಲಿ ಒಬ್ಬರಾಗಿರುವ ಅಲಿಯಾ ಭಟ್ ಸದ್ಯ ಹಿಂದಿ ಜೊತೆಗೆ ತೆಲುಗು ಸಿನಿಮಾದಲ್ಲೂ ಬ್ಯುಸಿಯಾಗಿದ್ದಾರೆ. ಅಲಿಯಾ ರಾಜಮೌಳಿ ನಿರ್ದೇಶನದ ಆರ್ ಆರ್ ಆರ್ ಸಿನಿಮಾದಲ್ಲಿ ಬಣ್ಣ ಹಚ್ಚುವ ಮೂಲಕ ಮೊದಲ ಬಾರಿಗೆ ತೆಲುಗು ಚಿತ್ರದಲ್ಲಿ ಕಾಣಿಸಿಕೊಳ್ಳುತ್ತಿದ್ದಾರೆ. ಈಗಾಗಲೇ ಅಲಿಯಾ ಆರ್ ಆರ್ ಆರ್ ಸಿನಿಮಾದ ಚಿತ್ರೀಕರಣದಲ್ಲಿ ಭಾಗಿಯಾಗಿದ್ದು, ಮೊದಲ ಭಾಗದ ಚಿತ್ರೀಕರಣ ಮುಗಿಸಿದ್ದಾರೆ. ಅಂದಹಾಗೆ ಬಾಲಿವುಡ್ ಸುಂದರಿ ರಾಜಮೌಳಿ ಸಿನಿಮಾದಲ್ಲಿ ಅಲಿಯಾ ಸೀತಾ ಪಾತ್ರದಲ್ಲಿ ಕಾಣಿಸಿಕೊಳ್ಳುತ್ತಿದ್ದಾರೆ.
'RRR' ಸಿನಿಮಾದ 'ಸೀತಾ' ಅಲಿಯಾ ಭಟ್ ಮೊದಲ ನೋಟ ಬಿಡುಗಡೆ ಇತ್ತೀಚಿಗಷ್ಟೆ ಅಲಿಯಾ ಫಸ್ಟ್ ಲುಕ್ ಬಿಡುಗಡೆಯಾಗಿದ್ದು, ಸೀತಾ ಪಾತ್ರಕ್ಕೆ ಅಭಿಮಾನಿಗಳಿಂದ ಭಾರಿ ಮೆಚ್ಚುಗೆ ವ್ಯಕ್ತವಾಗಿದೆ. ಸೀತಾ ಪಾತ್ರಕ್ಕೆ ಉತ್ತಮ ಪ್ರತಿಕ್ರಿಯೆ ವ್ಯಕ್ತವಾದ ಕಾರಣ ಪಾತ್ರದ ಗಾತ್ರವನ್ನು ಹೆಚ್ಚಿಸಲು ಮುಂದಾಗಿದ್ದಾರೆ. ಈ ಮೊದಲು ಸೀತಾ ಪಾತ್ರದ ಅವಧಿ ತುಂಬಾ ಕಡಿಮೆ ಇತ್ತು. ಆದರೀಗ ಸೀತಾ ಪಾತ್ರವನ್ನು ಹೆಚ್ಚಿಸಲು ರಾಜಮೌಳಿ ಸಜ್ಜಾಗಿದ್ದಾರಂತೆ.
ಇದೀಗ ಅಲಿಯಾ ಮತ್ತೆ ಎರಡನೇ ಭಾಗದ ಚಿತ್ರೀಕರಣಕ್ಕೆ ಹೈದರಾಬಾದ್ ಗೆ ಬರುತ್ತಿದ್ದಾರೆ. ಈ ಬಾರಿಯ ಚಿತ್ರೀಕರಣದಲ್ಲಿ ಅಲಿಯಾ ಪಾತ್ರವನ್ನು ಹೆಚ್ಚಾಗಿ ಚಿತ್ರೀಕರಣ ಮಾಡಲಾಗುತ್ತಿದೆಯಂತೆ. ಅಲಿಯಾ ಸದ್ಯದಲ್ಲೇ ಬಹುನಿರೀಕ್ಷೆಯ ಗಂಗೂಬಾಯಿ ಕಥಿಯಾವಾಡಿ ಸಿನಿಮಾದ ಚಿತ್ರೀಕರಣ ಮುಗಿಸಲಿದ್ದಾರೆ. ಚಿತ್ರೀಕರಣ ಮುಗಿಯುತ್ತಿದ್ದಂತೆ ಆರ್ ಆರ್ ಆರ್ ಸಿನಿಮಾದ ಚಿತ್ರೀಕರಣದಲ್ಲಿ ಭಾಗಿಯಾಗಲಿದ್ದಾರೆ. ಚಿತ್ರದಲ್ಲಿ ಅಲಿಯಾ, ರಾಮ್ ಚರಣ್ ಗೆ ನಾಯಕಿಯಾಗಿ ಕಾಣಿಸಿಕೊಳ್ಳುತ್ತಿದ್ದಾರೆ.
ರಾಮ್ ಚರಣ್, ಅಲ್ಲೂರಿ ಸೀತಾರಾಮ ರಾಜು ಪಾತ್ರದಲ್ಲಿ ನಟಿಸುತ್ತಿದ್ದಾರೆ. ಜೂ ಎನ್ ಟಿ ಆರ್, ಕೊಮರಾಮ್ ಭೀಮ್ ಪಾತ್ರದಲ್ಲಿ ಕಾಣಿಸಿಕೊಳ್ಳುತ್ತಿದ್ದಾರೆ. ಈಗಾಗಲೇ ರಾಮ್ ಚರಣ್ ಮತ್ತು ಜೂ.ಎನ್ ಟಿ ಆರ್ ಪಾತ್ರದ ಟೀಸರ್ ಬಿಡುಗಡೆಯಾಗಿದ್ದು, ಅಭಿಮಾನಿಗಳಿಂದ ಉತ್ತಮ ಪ್ರತಿಕ್ರಿಯೆ ವ್ಯಕ್ತವಾಗಿದೆ. ಕೊನೆಯ ಹಂತದಲ್ಲಿರುವ ಆರ್ ಆರ್ ಆರ್ ಸಿನಿಮಾ ಸದ್ಯದಲ್ಲೇ ಚಿತ್ರೀಕರಣ ಮುಗಿಸಿ ಪೋಸ್ಟ್ ಪ್ರೊಡಕ್ಷನ್ ಕೆಲಸದಲ್ಲಿ ನಿರತವಾಗಲಿದೆ. ಬಹುನಿರೀಕ್ಷೆಯ ಸಿನಿಮಾ ಅಕ್ಟೋಬರ್ 13ಕ್ಕೆ ತೆರೆಗೆಬರುತ್ತಿದೆ.
This News Article Is A Copy Of FILMIBEAT
17-06-26 10:12 pm
HK News Staffer
ಆರ್ಎಸ್ಎಸ್ ಲೆಕ್ಕ ಕೇಳಲು ಇವನ್ಯಾರು? ಪ್ರಿಯಾಂಕ್ ಖ...
17-06-26 06:59 pm
ಜಿಮ್ ಮುಗಿಸಿ ಮನೆಗೆ ಬಂದ ಯುವಕನಿಗೆ ಹೃದಯಾಘಾತ ; ಹೆ...
17-06-26 06:35 pm
ಪವಿತ್ರ ಧರ್ಮಸ್ಥಳ ವಿರುದ್ಧ ನಾನ್ಯಾಕೆ ಷಡ್ಯಂತ್ರ ಮಾಡ...
17-06-26 05:12 pm
ಆರೆಸ್ಸೆಸ್ ನೋಂದಣಿ ; ನನ್ನ ಪತ್ರ ವೈಯಕ್ತಿಕ ಅಲ್ಲ, ರ...
17-06-26 04:48 pm
15-06-26 11:18 am
HK News Staffer
ಬಿರಿಯಾನಿ ಹೆಸರಲ್ಲಿ ಮಹಿಳೆಯ ಮಾನ ಕಳೆದ ಟೆಕ್ಕಿ! ತಮಾ...
14-06-26 09:46 pm
ಸಹಕಾರಿ ಬ್ಯಾಂಕುಗಳಲ್ಲಿ ಸರ್ವಾಧಿಕಾರಕ್ಕೆ ಬ್ರೇಕ್ !...
14-06-26 07:17 pm
ಅಸ್ಸಾಂನಲ್ಲಿ 18 ವರ್ಷ ಮೇಲ್ಪಟ್ಟವರಿಗೆ ಆಧಾರ್ ಕಾರ್ಡ...
14-06-26 04:49 pm
ಕೇರಳದಲ್ಲಿ ಜೂನ್ 15ರಿಂದ 'ಪ್ರಿಯದರ್ಶಿನಿ' ಉಚಿತ ಬಸ್...
14-06-26 01:08 pm
16-06-26 11:35 am
HK News Staffer
ಧರ್ಮಸ್ಥಳ ಬುರುಡೆ ಪ್ರಕರಣ ; ಗಿರೀಶ್ ಮಟ್ಟಣ್ಣನವರ್,...
15-06-26 04:52 pm
ಅಂಬಾನಿ ಕುಟುಂಬದ ಗುರೂಜಿ ಜೊತೆ ಕೊಲ್ಲೂರು ಮೂಕಾಂಬಿಕೆ...
14-06-26 09:47 pm
ದ.ಕ. ಜಿಲ್ಲೆಯ 14 ಪ್ರಮುಖ ರಸ್ತೆ ಅಭಿವೃದ್ದಿ ಕಾಮಗಾರ...
14-06-26 02:37 pm
ಧರ್ಮಸ್ಥಳ ಬುರುಡೆ ಪ್ರಕರಣಕ್ಕೆ ಮತ್ತೊಂದು ಟ್ವಿಸ್ಟ್:...
13-06-26 05:28 pm
17-06-26 01:41 pm
HK News Staffer
ವಾಯುಪಡೆ ಅಧಿಕಾರಿ ಪತ್ನಿಗೆ ಅಮಲು ಪದಾರ್ಥ ನೀಡಿ ಅತ್ಯ...
16-06-26 08:32 pm
SIT Car Accident: ಎಸ್ಐಟಿ ಎಸ್ಪಿ ಸೈಮನ್ ಪ್ರಯಾಣಿಸ...
16-06-26 05:10 pm
Chandrashekhar, Belthangady: ಬೆಳ್ತಂಗಡಿ ಸರ್ಕಾರ...
16-06-26 02:34 pm
ಉಳ್ಳಾಲ ; ಸ್ನಾನಕ್ಕೆಂದು ಕೋಣೆಗೆ ತೆರಳಿದ್ದ ಪಿಯುಸಿ...
16-06-26 10:33 am