ಬ್ರೇಕಿಂಗ್ ನ್ಯೂಸ್
29-03-21 10:51 am Source: Vijaya Karnataka ಸಿನಿಮಾ
ಬಿಗ್ ಬಾಸ್ ಕನ್ನಡ ಸೀಸನ್ 7ರ ಸ್ಪರ್ಧಿಯಾಗಿದ್ದ ಚೈತ್ರಾ ಕೋಟೂರ್ ಅವರು ನಾಗಾರ್ಜುನ್ ಎಂಬುವವರ ಜೊತೆ ವೈವಾಹಿಕ ಜೀವನಕ್ಕೆ ಕಾಲಿಟ್ಟ ದಿನವೇ ಪೊಲೀಸ್ ಠಾಣೆ ಮೆಟ್ಟಿಲೇರಿದ್ದಾರೆ. ಇದಕ್ಕೆ ಕಾರಣ ಏನು?
ಬಿಗ್ ಬಾಸ್ ಖ್ಯಾತಿಯ ಚೈತ್ರಾ ಕೋಟೂರ್ ಅವರು ಇಂದು ಬೆಳಗ್ಗೆ (ಮಾರ್ಚ್ 28)ರಂದು ಮದುವೆಯಾಗಿದ್ದರು, ಸಂಜೆ ಪೊಲೀಸ್ ಠಾಣೆ ಮೆಟ್ಟಿಲೇರಿದ್ದಾರೆ. ಈ ಜೋಡಿ ಕೋಲಾರ ಮಹಿಳಾ ಪೊಲೀಸ್ ಠಾಣೆ ಮೆಟ್ಟಿಲೇರಿದೆ.
ನಡೆದ ಘಟನೆ ಏನು?
ನಾಗಾರ್ಜುನ್ರಿಗೆ ಚೈತ್ರಾ ಜೊತೆ ಮದುವೆಯಾಗುವುದು ಇಷ್ಟವಿರಲಿಲ್ಲ. ಸಂಘಟನೆಗಳ ಜೊತೆಗೂಡಿ ಬಲವಂತವಾಗಿ ನಾಗಾರ್ಜುನ್ರನ್ನು ಕೂಡಿ ಹಾಕಿ ದೇಗುಲದಲ್ಲಿ ಮದುವೆ ನಡೆದಿದೆ. ಸಂಘಟನೆಗಳ ಬೆದರಿಕೆಗೆ ಬಗ್ಗಿದ ನಾಗಾರ್ಜುನ್ ಬಲವಂತವಾಗಿ ಚೈತ್ರಾರಿಗೆ ತಾಳಿ ಕಟ್ಟಿದ್ದರು. ನಾಗಾರ್ಜುನ್ ಸೇರಿ ಮನೆಯವರಿಗೆ ಚೈತ್ರಾ ಜೊತೆ ಮದುವೆ ಇಷ್ಟವಿರಲಿಲ್ಲ ಎನ್ನಲಾಗಿದೆ.
ಚೈತ್ರಾ ಹಾಗೂ ನಾಗಾರ್ಜುನ್ ಹೇಳಿದ್ದೇನು?
ನಾಗಾರ್ಜುನ್ ಕುಟುಂಬದವರು ಕೋಲಾರದ ಕುರುಬರಪೇಟೆಯ ಚೈತ್ರಾ ಮನೆಗೆ ಬಂದು ತಗಾದೆ ತೆಗೆದಿದ್ದಾರೆ. ನಾಗಾರ್ಜುನ್ ಕುಟುಂಬಸ್ಥರು ಕೋಲಾರದ ಮಹಿಳಾ ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಿದ್ದಾರೆ. ಚೈತ್ರಾ ಕೋಟೂರ್, ನಾಗಾರ್ಜುನ್ ಪೊಲೀಸ್ ಠಾಣೆಗೆ ಆಗಮಿಸಿದ್ದಾರೆ. ಚೈತ್ರಾ ಜೊತೆ ಮದುವೆ ಇಷ್ಟವಿಲ್ಲ ಅಂತ ನಾಗಾರ್ಜುನ್ ಪಟ್ಟು ಹಿಡಿದಿದ್ದಾರೆ, ನನಗೆ ನಾಗಾರ್ಜುನ್ ಇಷ್ಟ, ಅವನ ಜೊತೆ ಹೋಗುವೆ ಅಂತ ಚೈತ್ರಾ ಬಿಗಿಪಟ್ಟು ಹಿಡಿದಿದ್ದಾರೆ ಎನ್ನಲಾಗಿದೆ. ಆದರೆ ಈ ಬಗ್ಗೆ ಚೈತ್ರಾ ಕೋಟೂರ್ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿಲ್ಲ.
Read: ಸರಳವಾಗಿ ದೇವಾಲಯದಲ್ಲಿ ವಿವಾಹವಾದ ಬಿಗ್ಬಾಸ್ ಸ್ಪರ್ಧಿ
This News Article Is A Copy Of Vijaya Karnataka
15-09-26 09:13 pm
HK News Staffer
Imran Pasha, Pratap Simha: ನಿನ್ನಂತಹ ಒಂದು ಲಕ್...
15-09-26 04:46 pm
ಬಿಜೆಪಿಯವರಿಗೆ ಕೊಬ್ಬು ಹೆಚ್ಚಾಗಿದೆ ಅದಕ್ಕೆ ಬಳ್ಳಾರಿ...
12-09-26 09:40 pm
ಯತ್ನಾಳ್ ಆರೋಪಿಸಿದರೂ ವಿಜಯೇಂದ್ರ ಮನೆ ಮೇಲೆ ಇಡಿ, ಐಟ...
12-09-26 09:38 pm
ಮಸೀದಿ ಮುಂದೆ ಗಣೇಶ ಮೆರವಣಿಗೆ ಮಾಡಿದ್ರೆ ಗ್ರಹಚಾರ ಬಿ...
12-09-26 09:36 pm
13-09-26 09:00 pm
HK News
80s ಫೋಟೋ ಟ್ರೆಂಡ್ಗೆ ಮಾರುಹೋಗಿದ್ದೀರಾ? ಹುಷಾರ್ ;...
12-09-26 01:10 pm
ಕಾಶ್ಮೀರಿ ಪಂಡಿತರಿಗೆ ಮತ್ತೆ ಬೆದರಿಕೆ ; ಉದ್ಯೋಗ ಬಿಟ...
10-09-26 01:23 pm
ನೇಪಾಳ ಪ್ರವಾಹ ; ಹತ್ತು ದಿನಗಳ ಬಳಿಕ ಜಲವಿದ್ಯುತ್ ಸು...
05-09-26 11:55 am
ಮುಂದಿನ ಒಂದು ವರ್ಷದಲ್ಲಿ ಒಂದು ಸಾವಿರ ವಿದ್ಯಾಭಾರತಿ...
04-09-26 08:14 pm
15-09-26 09:18 pm
HK News Staffer
Satish Kumpala, Manglore: ಕಾಟಾಚಾರಕ್ಕೆ ಸಂಪುಟ ಸ...
15-09-26 07:46 pm
U T Khader, KDP Meeting, Bharath Sheety, Hari...
15-09-26 06:52 pm
Aravind Bolar Controversy, Mangalore: “ಎಂಕ್ ಮ...
15-09-26 05:29 pm
U T Khader, KDP Meeting, Sudheer Reddy Ips: :...
15-09-26 05:27 pm
15-09-26 09:19 pm
HK News Staffer
Mangalore Blackmail: ಫೋಟೋ ಮಾರ್ಫ್ ಮಾಡಿ ಬ್ಲ್ಯಾಕ...
15-09-26 12:55 pm
Manyda Accident: ಗಣೇಶ ಹಬ್ಬ ಮುಗಿಸಿ ಬೆಂಗಳೂರಿಗೆ...
15-09-26 12:48 pm
ಗಣೇಶ ಹಬ್ಬದ ಬೆನ್ನಲ್ಲೇ ಕರ್ನಾಟಕದಲ್ಲಿ ಸರಣಿ ದುರಂತ:...
15-09-26 12:41 pm
ಗಣೇಶೋತ್ಸವದ ಸಂಭ್ರಮದ ನಡುವೆ ಭೀಕರ ದುರಂತ: ಅಗ್ನಿ ಅವ...
15-09-26 10:31 am