ಬ್ರೇಕಿಂಗ್ ನ್ಯೂಸ್
04-04-21 11:28 am Source: FILMIBEAT ಸಿನಿಮಾ
ಬಾಲಿವುಡ್ ನಟ ಅಕ್ಷಯ್ ಕುಮಾರ್ ಅವರಿಗೆ ಕೊರೊನಾ ವೈರಸ್ ಪಾಸಿಟಿವ್ ಬಂದಿದೆ. ಖುದ್ದು ಅಕ್ಷಯ್ ಕುಮಾರ್ ಈ ವಿಚಾರವನ್ನು ಭಾನುವಾರ (ಏಪ್ರಿಲ್ 4) ತಮ್ಮ ಸಾಮಾಜಿಕ ಜಾಲತಾಣದಲ್ಲಿ ಖಚಿತಪಡಿಸಿದ್ದಾರೆ. ''ಇಂದು ಬೆಳಗ್ಗೆ ಕೊರೊನಾ ಪರೀಕ್ಷೆಗೆ ಒಳಗಾಗಿದ್ದು, ನನಗೆ ಪಾಸಿಟಿವ್ ಬಂದಿದೆ. ತಕ್ಷಣ ನಾನು ಐಸೋಲೆಟ್ ಆಗಿದ್ದೇನೆ. ಹೋಮ್ ಕ್ವಾರಂಟೈನ್ನಲ್ಲಿದ್ದು, ಕೊರೊನಾ ನಿಯಮಗಳನ್ನು ಪಾಲಿಸುತ್ತಿದ್ದೇನೆ. ನನ್ನ ಸಂಪರ್ಕಕ್ಕೆ ಬಂದಿದ್ದವರು ದಯವಿಟ್ಟು ಪರೀಕ್ಷಿಸಿ, ಬೇಗ ಗುಣಮುಖನಾಗಿ ಬರುತ್ತೇನೆ'' ಎಂದು ಅಕ್ಷಯ್ ಕುಮಾರ್ ಟ್ವೀಟ್ ಮಾಡಿದ್ದಾರೆ.
ಅಕ್ಷಯ್ ಕುಮಾರ್ ಇತ್ತೀಚಿಗಷ್ಟೆ 'ರಾಮ್ ಸೇತು' ಸಿನಿಮಾದ ಚಿತ್ರೀಕರಣ ಆರಂಭಿಸಿದ್ದರು. ಮಾರ್ಚ್ 18 ರಂದು ಅಯೋಧ್ಯೆಯಲ್ಲಿ ರಾಮ್ ಸೇತು ಸಿನಿಮಾದ ಮುಹೂರ್ತ ಕಾರ್ಯಕ್ರಮ ನಡೆದಿತ್ತು. ಮಾರ್ಚ್ 30 ರಿಂದ ಮುಂಬೈನಲ್ಲಿ ಶೂಟಿಂಗ್ ಪ್ರಾರಂಭಿಸಿದ್ದರು.
ಅದಕ್ಕೂ ಮುಂಚೆ ಧನುಶ್, ಸಾರಾ ಅಲಿ ಖಾನ್ ಜೊತೆ ನಟಿಸಿರುವ 'ಅತ್ರಂಗಿ ರೇ' ಸಿನಿಮಾ ಶೂಟಿಂಗ್ ಮುಗಿಸಿದ್ದರು. ಆನಂದ್ ಎಲ್ ರೈ ನಿರ್ದೇಶನದ ಈ ಚಿತ್ರ ಆಗಸ್ಟ್ 6 ರಂದು ಬಿಡುಗಡೆಯಾಗಲಿದೆ. ಕಳೆದ ವರ್ಷ 'ಲಕ್ಷ್ಮಿ' ಸಿನಿಮಾ ಬಿಡುಗಡೆಯಾಗಿತ್ತು. 'ಸೂರ್ಯವಂಶಿ' ಸಿನಿಮಾ ತೆರೆಗೆ ಬರಬೇಕಿದೆ.' ಬೆಲ್ ಬಾಟಂ 2' ಸಿನಿಮಾ ಬಹುತೇಕ ಮುಗಿದಿದೆ. 'ಪೃಥ್ವಿರಾಜ್' ಸಿನಿಮಾದ ಚಿತ್ರೀಕರಣ ನಡೆಯುತ್ತಿದೆ. 'ಬಚ್ಚನ್ ಪಾಂಡೆ' ಶೂಟಿಂಗ್ ಪ್ರಗತಿಯಲ್ಲಿದೆ.
This News Article Is A Copy Of FILMIBEAT
15-09-26 09:13 pm
HK News Staffer
Imran Pasha, Pratap Simha: ನಿನ್ನಂತಹ ಒಂದು ಲಕ್...
15-09-26 04:46 pm
ಬಿಜೆಪಿಯವರಿಗೆ ಕೊಬ್ಬು ಹೆಚ್ಚಾಗಿದೆ ಅದಕ್ಕೆ ಬಳ್ಳಾರಿ...
12-09-26 09:40 pm
ಯತ್ನಾಳ್ ಆರೋಪಿಸಿದರೂ ವಿಜಯೇಂದ್ರ ಮನೆ ಮೇಲೆ ಇಡಿ, ಐಟ...
12-09-26 09:38 pm
ಮಸೀದಿ ಮುಂದೆ ಗಣೇಶ ಮೆರವಣಿಗೆ ಮಾಡಿದ್ರೆ ಗ್ರಹಚಾರ ಬಿ...
12-09-26 09:36 pm
13-09-26 09:00 pm
HK News
80s ಫೋಟೋ ಟ್ರೆಂಡ್ಗೆ ಮಾರುಹೋಗಿದ್ದೀರಾ? ಹುಷಾರ್ ;...
12-09-26 01:10 pm
ಕಾಶ್ಮೀರಿ ಪಂಡಿತರಿಗೆ ಮತ್ತೆ ಬೆದರಿಕೆ ; ಉದ್ಯೋಗ ಬಿಟ...
10-09-26 01:23 pm
ನೇಪಾಳ ಪ್ರವಾಹ ; ಹತ್ತು ದಿನಗಳ ಬಳಿಕ ಜಲವಿದ್ಯುತ್ ಸು...
05-09-26 11:55 am
ಮುಂದಿನ ಒಂದು ವರ್ಷದಲ್ಲಿ ಒಂದು ಸಾವಿರ ವಿದ್ಯಾಭಾರತಿ...
04-09-26 08:14 pm
15-09-26 09:18 pm
HK News Staffer
Satish Kumpala, Manglore: ಕಾಟಾಚಾರಕ್ಕೆ ಸಂಪುಟ ಸ...
15-09-26 07:46 pm
U T Khader, KDP Meeting, Bharath Sheety, Hari...
15-09-26 06:52 pm
Aravind Bolar Controversy, Mangalore: “ಎಂಕ್ ಮ...
15-09-26 05:29 pm
U T Khader, KDP Meeting, Sudheer Reddy Ips: :...
15-09-26 05:27 pm
15-09-26 09:19 pm
HK News Staffer
Mangalore Blackmail: ಫೋಟೋ ಮಾರ್ಫ್ ಮಾಡಿ ಬ್ಲ್ಯಾಕ...
15-09-26 12:55 pm
Manyda Accident: ಗಣೇಶ ಹಬ್ಬ ಮುಗಿಸಿ ಬೆಂಗಳೂರಿಗೆ...
15-09-26 12:48 pm
ಗಣೇಶ ಹಬ್ಬದ ಬೆನ್ನಲ್ಲೇ ಕರ್ನಾಟಕದಲ್ಲಿ ಸರಣಿ ದುರಂತ:...
15-09-26 12:41 pm
ಗಣೇಶೋತ್ಸವದ ಸಂಭ್ರಮದ ನಡುವೆ ಭೀಕರ ದುರಂತ: ಅಗ್ನಿ ಅವ...
15-09-26 10:31 am