ಬ್ರೇಕಿಂಗ್ ನ್ಯೂಸ್
16-04-21 04:26 pm Headline Karnataka News Network ಸಿನಿಮಾ
ಚೆನ್ನೈ,ಎ.17: ಕಾಲಿವುಡ್ನ ಖ್ಯಾತ ನಟ ವಿವೇಕ್ ಅವರಿಗೆ ಶುಕ್ರವಾರ (ಏ.16) ಹೃದಯಾಘಾತ ಸಂಭವಿಸಿದ್ದು, ಚೆನ್ನೈನ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿದೆ. ವಿವೇಕ್ ಅವರ ಆರೋಗ್ಯದ ಸ್ಥಿತಿ ಗಂಭೀರವಾಗಿದ್ದು, ವೈದ್ಯರ ತಂಡ ಚಿಕಿತ್ಸೆ ಮುಂದುವರಿಸಿದೆ. ಶುಕ್ರವಾರ ಅವರಿಗೆ ತೀವ್ರ ಎದೆನೋವು ಕಾಣಿಸಿಕೊಂಡಿದ್ದು, ಕೂಡಲೇ ಅವರನ್ನು ಆಸ್ಪತ್ರೆಗೆ ಕರೆದುಕೊಂಡು ಬರಲಾಗಿದೆ ಮತ್ತು ಆಂಜಿಯೋಗ್ರಾಮ್ ಮಾಡಲಾಗಿದೆ ಎಂದು ಆಸ್ಪತ್ರೆ ಮೂಲಗಳು ತಿಳಿಸಿವೆ.

59 ವರ್ಷ ವಯಸ್ಸಿನ ವಿವೇಕ್ ಅವರು ಗುರುವಾರವಷ್ಟೇ ಕೊರೊನಾ ವೈರಸ್ ಲಸಿಕೆ ಪಡೆದುಕೊಂಡಿದ್ದರು. ಕಾಕತಾಳೀಯ ಎಂಬಂತೆ ಮರುದಿನವೇ ಅವರಿಗೆ ಹೃದಯಾಘಾತ ಸಂಭವಿಸಿದೆ. ಕೊರೊನಾ ವ್ಯಾಕ್ಸಿನ್ ಪಡೆದುಕೊಂಡಿದ್ದಕ್ಕೂ, ಹೃದಯಾಘಾತ ಆಗಿರುವುದಕ್ಕೂ ಸಂಬಂಧ ಇದೆಯೋ ಇಲ್ಲವೋ ಎಂಬ ಬಗ್ಗೆ ಯಾರೂ ಅಧಿಕೃತವಾಗಿ ಪ್ರತಿಕ್ರಿಯೆ ನೀಡಿಲ್ಲ.
ಗುರುವಾರ ವಾಕ್ಸಿನ್ ಪಡೆದುಕೊಂಡ ನಂತರ ಮಾಧ್ಯಮಗಳ ಜೊತೆ ವಿವೇಕ್ ಮಾತನಾಡಿದ್ದರು. ‘ಮಾಸ್ಕ್ ಧರಿಸುವುದು, ಕೈ ತೊಳೆದುಕೊಳ್ಳುವುದು, ಸಾಮಾಜಿಕ ಅಂತರ ಕಾಯ್ದುಕೊಳ್ಳುವುದರಿಂದ ಸುರಕ್ಷಿತವಾಗಿರಬಹುದು. ವೈದ್ಯಕೀಯವಾಗಿ ರಕ್ಷಿಸಿಕೊಳ್ಳಲು ವ್ಯಾಕ್ಸಿನ್ ಪಡೆಯಬೇಕು. ನೀವು ಆಯುರ್ವೇದ ಮುಂತಾದ ಚಿಕಿತ್ಸೆ ಪಡೆಯುತ್ತಿದ್ದರೂ ಒಳ್ಳೆಯದು. ಅವೆಲ್ಲವೂ ಹೆಚ್ಚುವರಿ ಕ್ರಮಗಳು. ನಮ್ಮ ಜೀವ ಉಳಿಸುವುದು ವ್ಯಾಕ್ಸಿನ್ ಮಾತ್ರ’ ಎಂದು ವಿವೇಕ್ ಹೇಳಿದ್ದರು.

ಸಾಮಾಜಿಕ ಜಾಲತಾಣದಲ್ಲಿ ಆ್ಯಕ್ಟೀವ್ ಆಗಿರುವ ವಿವೇಕ್ ಅವರು ಟ್ವಿಟರ್ ಮೂಲಕ ವೈದ್ಯರಿಗೆ ಧನ್ಯವಾದ ತಿಳಿಸಿದ್ದರು. ಮರುದಿನವೇ ಅವರಿಗೆ ಹೃದಯಾಘಾತ ಸಂಭವಿಸಿರುವುದು ಶಾಕಿಂಗ್ ಸಂಗತಿ. ಬಾಲಿವುಡ್ನ ‘ವಿಕ್ಕಿ ಡೋನರ್’ ಚಿತ್ರದ ತಮಿಳು ರಿಮೇಕ್ ಆದಂತಹ ‘ಧಾರಾಳ ಪ್ರಭು’ ಚಿತ್ರದಲ್ಲಿ ವಿವೇಕ್ ಕೊನೇ ಬಾರಿಗೆ ನಟಿಸಿದ್ದರು.
ಕಳೆದ ವರ್ಷ ಲಾಕ್ ಡೌನ್ ಆಗುವುದಕ್ಕೂ ಕೆಲವೇ ದಿನಗಳ ಮುನ್ನ ಧಾರಾಳ ಪ್ರಭು ಸಿನಿಮಾ ಬಿಡುಗಡೆ ಆಗಿತ್ತು. ಆದರೆ ಲಾಕ್ಡೌನ್ನಿಂದಾಗಿ ಚಿತ್ರಕ್ಕೆ ಹೊಡೆದ ಬಿತ್ತು. ಕಮಲ್ ಹಾಸನ್ ಅಭಿನಯದ ಬಹುನಿರೀಕ್ಷಿತ ‘ಇಂಡಿಯನ್ 2’ ಸಿನಿಮಾದಲ್ಲೂ ವಿವೇಕ್ ನಟಿಸುತ್ತಿದ್ದರು. ಸದ್ಯ ಅವರ ಪರಿಸ್ಥಿತಿ ಚಿಂತಾಜನಕವಾಗಿದೆ. ಐಸಿಯುನಲ್ಲಿ ಚಿಕಿತ್ಸೆ ಮುಂದುವರಿಸಲಾಗುತ್ತಿದೆ.
In a shocking turn of events, popular Tamil actor and comedian Vivek have been admitted to the intensive care unit of a private hospital in Chennai after he suffered a heart attack on Friday morning. According to the news reports, his condition is said to be critical.
15-09-26 09:13 pm
HK News Staffer
Imran Pasha, Pratap Simha: ನಿನ್ನಂತಹ ಒಂದು ಲಕ್...
15-09-26 04:46 pm
ಬಿಜೆಪಿಯವರಿಗೆ ಕೊಬ್ಬು ಹೆಚ್ಚಾಗಿದೆ ಅದಕ್ಕೆ ಬಳ್ಳಾರಿ...
12-09-26 09:40 pm
ಯತ್ನಾಳ್ ಆರೋಪಿಸಿದರೂ ವಿಜಯೇಂದ್ರ ಮನೆ ಮೇಲೆ ಇಡಿ, ಐಟ...
12-09-26 09:38 pm
ಮಸೀದಿ ಮುಂದೆ ಗಣೇಶ ಮೆರವಣಿಗೆ ಮಾಡಿದ್ರೆ ಗ್ರಹಚಾರ ಬಿ...
12-09-26 09:36 pm
13-09-26 09:00 pm
HK News
80s ಫೋಟೋ ಟ್ರೆಂಡ್ಗೆ ಮಾರುಹೋಗಿದ್ದೀರಾ? ಹುಷಾರ್ ;...
12-09-26 01:10 pm
ಕಾಶ್ಮೀರಿ ಪಂಡಿತರಿಗೆ ಮತ್ತೆ ಬೆದರಿಕೆ ; ಉದ್ಯೋಗ ಬಿಟ...
10-09-26 01:23 pm
ನೇಪಾಳ ಪ್ರವಾಹ ; ಹತ್ತು ದಿನಗಳ ಬಳಿಕ ಜಲವಿದ್ಯುತ್ ಸು...
05-09-26 11:55 am
ಮುಂದಿನ ಒಂದು ವರ್ಷದಲ್ಲಿ ಒಂದು ಸಾವಿರ ವಿದ್ಯಾಭಾರತಿ...
04-09-26 08:14 pm
15-09-26 09:18 pm
HK News Staffer
Satish Kumpala, Manglore: ಕಾಟಾಚಾರಕ್ಕೆ ಸಂಪುಟ ಸ...
15-09-26 07:46 pm
U T Khader, KDP Meeting, Bharath Sheety, Hari...
15-09-26 06:52 pm
Aravind Bolar Controversy, Mangalore: “ಎಂಕ್ ಮ...
15-09-26 05:29 pm
U T Khader, KDP Meeting, Sudheer Reddy Ips: :...
15-09-26 05:27 pm
15-09-26 09:19 pm
HK News Staffer
Mangalore Blackmail: ಫೋಟೋ ಮಾರ್ಫ್ ಮಾಡಿ ಬ್ಲ್ಯಾಕ...
15-09-26 12:55 pm
Manyda Accident: ಗಣೇಶ ಹಬ್ಬ ಮುಗಿಸಿ ಬೆಂಗಳೂರಿಗೆ...
15-09-26 12:48 pm
ಗಣೇಶ ಹಬ್ಬದ ಬೆನ್ನಲ್ಲೇ ಕರ್ನಾಟಕದಲ್ಲಿ ಸರಣಿ ದುರಂತ:...
15-09-26 12:41 pm
ಗಣೇಶೋತ್ಸವದ ಸಂಭ್ರಮದ ನಡುವೆ ಭೀಕರ ದುರಂತ: ಅಗ್ನಿ ಅವ...
15-09-26 10:31 am