ಬ್ರೇಕಿಂಗ್ ನ್ಯೂಸ್
04-05-21 11:14 am Source: FILMIBEAT Manjunatha C ಸಿನಿಮಾ
ಕನ್ನಡದ ಖ್ಯಾತ ಸಂಗೀತ ನಿರ್ದೇಶಕ ಅರ್ಜುನ್ ಜನ್ಯ ಸಹೋದರ ಕೊರೊನಾ ಸೋಂಕಿಗೆ ತುತ್ತಾಗಿ ನಿಧನ ಹೊಂದಿದ್ದಾರೆ. ಈ ವಿಷಯವನ್ನು ಅರ್ಜುನ್ ಜನ್ಯ ಸಾಮಾಜಿಕ ಜಾಲತಾಣದಲ್ಲಿ ಹಂಚಿಕೊಂಡಿದ್ದಾರೆ.
'ಕೋವಿಡ್ನಿಂದಾಗಿ ನನ್ನ ಸಹೋದರನನ್ನು ನಾನು ಕಳೆದುಕೊಂಡೆ. ಕಿರಣ್, ಈ ದುಃಖವನ್ನು ಹೇಗೆ ಹೇಳಿಕೊಳ್ಳಲಿ ಎಂದು ನನಗೆ ಗೊತ್ತಾಗುತ್ತಿಲ್ಲ. ನೀನಿರದೆ ಇರುವುದು ಕಷ್ಟ. ನನ್ನ ಕೊನೆಯ ಉಸಿರಿನವರೆಗೆ ನೀನು ನನ್ನ ಉಸಿರಿನಲ್ಲಿ ಇರುತ್ತೀಯ' ಎಂದು ಅರ್ಜುನ್ ಜನ್ಯ ಪೋಸ್ಟ್ ಮಾಡಿದ್ದಾರೆ.
ತಮ್ಮ ಏಳಿಗೆಯಲ್ಲಿ ಸಹೋದರ ಕಿರಣ್ ಪಾತ್ರ ದೊಡ್ಡದು ಎಂದು ಹಿಂದೊಮ್ಮೆ ಹೇಳಿಕೊಂಡಿದ್ದರು ಅರ್ಜುನ್ ಜನ್ಯ. ಹಾಗಾಗಿ ಸಹೋದರನ ಅಗಲಿಕೆ ಅರ್ಜುನ್ ಜನ್ಯ ಅವರಿಗೆ ತೀವ್ರ ದುಃಖ ತಂದಿದೆ.
ಅರ್ಜುನ್ ಜನ್ಯಗೆ ಸಹ ಕೊರೊನಾ ಬಂದಿತ್ತು. ಏಪ್ರಿಲ್ ಎರಡನೇ ವಾರದಲ್ಲಿ ಕೋವಿಡ್ ಪಾಸಿಟಿವ್ ಆಗಿದ್ದ ಅರ್ಜುನ್ ಜನ್ಯ ವೈದ್ಯರ ಸಲಹೆ ಮೇರೆಗೆ ಮನೆಯಲ್ಲಿಯೇ ಐಸೋಲೇಷನ್ಗೆ ಒಳಗಾಗಿದ್ದರು. ಹತ್ತು ದಿನಗಳ ನಂತರ ಜನ್ಯ ಅವರಿಗೆ ನೆಗೆಟಿವ್ ಬಂತು. ಕಳೆದ ವರ್ಷ ಫೆಬ್ರವರಿಯಲ್ಲಿ ಅರ್ಜುನ್ ಜನ್ಯ ತೀವ್ರ ಎದೆನೋವಿನಿಂದಾಗಿ ಆಸ್ಪತ್ರೆಗೆ ದಾಖಲಾಗಿದ್ದರು. ಅರ್ಜುನ್ ಜನ್ಯಗೆ ಆಂಜಿಯೋಗ್ರಾಂ, ಆಂಜಿಯೋಪ್ಲಾಸ್ಟಿ ಮಾಡಲಾಗಿತ್ತು.
ಚಂದನವನದ ಹಲವು ಮಂದಿ ಸೆಲೆಬ್ರಿಟಿಗಳು ಕೆಲವೇ ದಿನಗಳಲ್ಲಿ ಕೊರೊನಾದಿಂದ ಜೀವ ಕಳೆದುಕೊಂಡಿದ್ದಾರೆ. ಚಂದನವನದ ಯುವ ನಿರ್ಮಾಪಕ ರಾಜಶೇಖರ್, ಖ್ಯಾತ ನಿರ್ಮಾಪಕ ರಾಮು, ನಿರ್ಮಾಪಕ ಚಂದ್ರಶೇಖರ್, ಮೇಕಪ್ಮ್ಯಾನ್ ಸೀನ, ಪುಟ್ಟಣ ಕಣಗಾಲ್ ಪುತ್ರ, ಡಿಸೈನರ್ ಮಸ್ತಾನ್ ಇವರೆಲ್ಲರುಗಳು ಕೆಲವೇ ದಿನಗಳ ಅಂತರದಲ್ಲಿ ಕೊರೊನಾಕ್ಕೆ ಬಲಿ ಆಗಿದ್ದಾರೆ. ನಿನ್ನೆಯಷ್ಟೆ ಯುವ ನಿರ್ದೇಶಕ ಸಂತೋಶ್ ಕೋವಿಡ್ನಿಂದ ಸಾವನ್ನಪ್ಪಿದ್ದರು.
This News Article Is A Copy Of FILMIBEAT
15-09-26 09:13 pm
HK News Staffer
Imran Pasha, Pratap Simha: ನಿನ್ನಂತಹ ಒಂದು ಲಕ್...
15-09-26 04:46 pm
ಬಿಜೆಪಿಯವರಿಗೆ ಕೊಬ್ಬು ಹೆಚ್ಚಾಗಿದೆ ಅದಕ್ಕೆ ಬಳ್ಳಾರಿ...
12-09-26 09:40 pm
ಯತ್ನಾಳ್ ಆರೋಪಿಸಿದರೂ ವಿಜಯೇಂದ್ರ ಮನೆ ಮೇಲೆ ಇಡಿ, ಐಟ...
12-09-26 09:38 pm
ಮಸೀದಿ ಮುಂದೆ ಗಣೇಶ ಮೆರವಣಿಗೆ ಮಾಡಿದ್ರೆ ಗ್ರಹಚಾರ ಬಿ...
12-09-26 09:36 pm
13-09-26 09:00 pm
HK News
80s ಫೋಟೋ ಟ್ರೆಂಡ್ಗೆ ಮಾರುಹೋಗಿದ್ದೀರಾ? ಹುಷಾರ್ ;...
12-09-26 01:10 pm
ಕಾಶ್ಮೀರಿ ಪಂಡಿತರಿಗೆ ಮತ್ತೆ ಬೆದರಿಕೆ ; ಉದ್ಯೋಗ ಬಿಟ...
10-09-26 01:23 pm
ನೇಪಾಳ ಪ್ರವಾಹ ; ಹತ್ತು ದಿನಗಳ ಬಳಿಕ ಜಲವಿದ್ಯುತ್ ಸು...
05-09-26 11:55 am
ಮುಂದಿನ ಒಂದು ವರ್ಷದಲ್ಲಿ ಒಂದು ಸಾವಿರ ವಿದ್ಯಾಭಾರತಿ...
04-09-26 08:14 pm
15-09-26 09:18 pm
HK News Staffer
Satish Kumpala, Manglore: ಕಾಟಾಚಾರಕ್ಕೆ ಸಂಪುಟ ಸ...
15-09-26 07:46 pm
U T Khader, KDP Meeting, Bharath Sheety, Hari...
15-09-26 06:52 pm
Aravind Bolar Controversy, Mangalore: “ಎಂಕ್ ಮ...
15-09-26 05:29 pm
U T Khader, KDP Meeting, Sudheer Reddy Ips: :...
15-09-26 05:27 pm
15-09-26 09:19 pm
HK News Staffer
Mangalore Blackmail: ಫೋಟೋ ಮಾರ್ಫ್ ಮಾಡಿ ಬ್ಲ್ಯಾಕ...
15-09-26 12:55 pm
Manyda Accident: ಗಣೇಶ ಹಬ್ಬ ಮುಗಿಸಿ ಬೆಂಗಳೂರಿಗೆ...
15-09-26 12:48 pm
ಗಣೇಶ ಹಬ್ಬದ ಬೆನ್ನಲ್ಲೇ ಕರ್ನಾಟಕದಲ್ಲಿ ಸರಣಿ ದುರಂತ:...
15-09-26 12:41 pm
ಗಣೇಶೋತ್ಸವದ ಸಂಭ್ರಮದ ನಡುವೆ ಭೀಕರ ದುರಂತ: ಅಗ್ನಿ ಅವ...
15-09-26 10:31 am