ಬ್ರೇಕಿಂಗ್ ನ್ಯೂಸ್
04-05-21 11:09 pm Dhruthi ಸಿನಿಮಾ
ಬಾಲಿವುಡ್ ನಟಿ ದೀಪಿಕಾ ಪಡುಕೋಣೆ ಅವರ ಕುಟುಂಬಕ್ಕೆ ಕೊರೊನಾ ಆಘಾತ ನೀಡಿದೆ. ಮನೆಯ ಅಷ್ಟೂ ಸದಸ್ಯರಿಗೆ ಸೋಂಕು ತಗುಲಿರುವುದು ದೃಢವಾಗಿದೆ.
ದೀಪಿಕಾ ಪಡುಕೋಣೆ ಅವರ ತಂದೆ ಪ್ರಕಾಶ್ ಪಡುಕೋಣೆ, ತಾಯಿ ಉಜಾಲಾ, ತಂಗಿ ಅನಿಶಾಗೆ ಸೋಂಕು ತಗುಲಿರುವುದು ಖಚಿತಗೊಂಡಿತ್ತು. ಸದ್ಯ ಪ್ರಕಾಶ್ ಅವರನ್ನು ಚಿಕಿತ್ಸೆಗಾಗಿ ಆಸ್ಪತ್ರೆಗೆ ದಾಖಲಿಸಲಾಗಿದೆ. ಈ ಮಧ್ಯೆ ಮನೆಯ ಸದಸ್ಯರ ಸಂಪರ್ಕಕ್ಕೆ ಬಂದ ನಟಿ ದೀಪಿಕಾಗೂ ಕೊರೊನಾ ತಗುಲಿರುವುದು ಖಚಿತಗೊಂಡಿದೆ ಎಂದು ಮೂಲಗಳು ತಿಳಿಸಿವೆ.
ಮುಂಬೈನಲ್ಲಿದ್ದ ದೀಪಿಕಾ ಮತ್ತು ಪತಿ, ನಟ ರಣ್ವೀರ್ ಸಿಂಗ್, ಅಲ್ಲಿ ಕೊರೊನಾ ಹೆಚ್ಚಾದ ಕಾರಣ, ಜೊತೆಗೆ ಶೂಟಿಂಗ್ ಕೂಡ ಇಲ್ಲದೇ ಇರುವುದರಿಂದ ಕಳೆದ ತಿಂಗಳು ಬೆಂಗಳೂರಿಗೆ ಬಂದಿದ್ದರು. ಒಂದಷ್ಟು ಕಾಲ ಕುಟುಂಬದ ಜೊತೆಗೆ ಸಮಯ ಕಳೆಯುವುದು ಅವರ ಉದ್ದೇಶವಾಗಿತ್ತು. ಆದರೆ, ಈಗ ರಣ್ವೀರ್ ಹೊರತುಪಡಿಸಿ, ಕುಟುಂಬಸ್ಥರಿಗೆ ಕೊರೊನಾ ಸೋಂಕು ತಗುಲಿರುವುದು ಆತಂಕ ಮೂಡಿಸಿದೆ!
ದೀಪಿಕಾ ಅವರ ತಂದೆ ಸೋಂಕಿನಿಂದ ಬಳಲುತ್ತಿದ್ದು, ಈ ವಾರಾಂತ್ಯಕ್ಕೆ ಡಿಸ್ಚಾರ್ಜ್ ಆಗುವ ಸಾಧ್ಯತೆ ಇದೆ. ಕಳೆದ 10 ದಿನಗಳ ಹಿಂದೆ ಪ್ರಕಾಶ್, ಅವರ ಪತ್ನಿ ಉಜಾಲಾ ಮತ್ತು ಮಗಳು ಅನಿಶಾಗೆ ರೋಗದ ಲಕ್ಷಣಗಳು ಕಾಣಿಸಿಕೊಂಡಿದ್ದವು. ಹಾಗಾಗಿ, ಪರೀಕ್ಷೆ ಮಾಡಿಸಲಾಗಿತ್ತು. ಎಲ್ಲರಿಗೂ ಪಾಸಿಟಿವ್ ಬಂದಿತ್ತು. ಎಲ್ಲರ ಆರೋಗ್ಯವೂ ಸ್ಥಿರವಾಗಿದೆ. ಪತ್ನಿ ಮತ್ತು ಮಗಳು ಮನೆಯಲ್ಲಿ ಇದ್ದಾರೆ. ಪ್ರಕಾಶ್ ಕೂಡ 2-3 ದಿನಗಳಲ್ಲಿ ಡಿಸ್ಚಾರ್ಜ್ ಆಗಲಿದ್ದಾರೆ' ಎಂದು ಪ್ರಕಾಶ್ ಅವರ ಸ್ನೇಹಿತ ವಿಮಲ್ ಕುಮಾರ್ ಮಾಧ್ಯಮಗಳಿಗೆ ತಿಳಿಸಿದ್ದಾರೆ.
Deepika Padukone has tested positive for Covid-19 and is currently in Bangalore with her family. Earlier today, it was reported that Deepika’s father, Prakash Padukone, mother Ujjala, and sister Anisha, had tested positive for the novel coronavirus. More details about Deepika’s health are awaited.
20-08-25 12:33 pm
Bangalore Correspondent
'Shakti' Scheme, Golden Book of World Records...
20-08-25 12:11 pm
ರಾಜ್ಯದಲ್ಲಿ ಸಹಕಾರ ವ್ಯವಸ್ಥೆಗೆ ಬಿಗ್ ಸರ್ಜರಿ ; ಸಹಕ...
19-08-25 11:13 am
Dharmasthala Case on Social Media: ಧರ್ಮಸ್ಥಳ ವ...
19-08-25 10:39 am
ಧರ್ಮಸ್ಥಳ ಪ್ರಕರಣ ; ಅಧಿವೇಶನದಲ್ಲಿ ಗೃಹ ಸಚಿವರ ಸ್ಪಷ...
18-08-25 10:47 pm
20-08-25 11:01 am
HK News Desk
ಭಾರತ ಟಿ20 ತಂಡಕ್ಕೆ ಮರಳಿದ ಶುಭಮನ್ ಗಿಲ್ ; ಏಷ್ಯಾ...
19-08-25 06:59 pm
ಇಂಡಿಯಾ ಬಣದಿಂದ ಉಪ ರಾಷ್ಟ್ರಪತಿ ಅಭ್ಯರ್ಥಿ ಬಿ.ಸುದರ್...
19-08-25 06:41 pm
ಎನ್ ಡಿಎ ಒಕ್ಕೂಟಕ್ಕೆ ಇಂಡಿಯಾ ಕೂಟದ ಠಕ್ಕರ್ ; ಉಪ ರಾ...
18-08-25 09:19 pm
ಮುಖ್ಯ ಚುನಾವಣಾ ಆಯುಕ್ತರ ವಿರುದ್ಧ ಇಂಡಿಯಾ ಒಕ್ಕೂಟದಿ...
18-08-25 01:28 pm
20-08-25 04:28 pm
Mangalore Correspondent
ಕಡಬ ಪಟ್ಟಣ ಪಂಚಾಯತ್ ಚುನಾವಣೆ ; 13ರಲ್ಲಿ 8 ಗೆದ್ದ ಕ...
20-08-25 03:01 pm
SIT, Exhumation, Dharmasthala: ಶವ ಶೋಧ ಬಳಿಕ ಎಸ...
20-08-25 02:38 pm
Wild Elephant, Belthangady, Eshwar Khandre: ಬ...
20-08-25 01:36 pm
ಧರ್ಮಸ್ಥಳ ಪ್ರಕರಣ ನೆಪದಲ್ಲಿ ಬಿಎಲ್ ಸಂತೋಷ್ ಅವಹೇಳನ...
19-08-25 11:07 pm
19-08-25 10:52 pm
Mangalore Correspondent
ಕಸ್ಟಮ್ಸ್ ಅಧಿಕಾರಿಗಳ ಸೋಗಿನಲ್ಲಿ ಚಿನ್ನದ ವ್ಯಾಪಾರಿಯ...
19-08-25 10:30 pm
ಡಾಕ್ಟರ್ ಮನೆ ದೋಚಿದ್ದ ಮನೆ ಕೆಲಸದವಳು ; ಚಿನ್ನ, ವಜ್...
19-08-25 09:27 pm
Gold Chain robbery, Puttur: ಮೈಸೂರಿನಲ್ಲಿ ಕದ್ದ...
19-08-25 12:54 pm
Ullal Police Raid, Sports Winners, Mangalore:...
19-08-25 12:41 pm