ಬ್ರೇಕಿಂಗ್ ನ್ಯೂಸ್
06-05-21 03:15 pm Headline Karnataka News Network ಸಿನಿಮಾ
ಚೆನ್ನೈ, ಮೇ 6: ಸೆಲೆಬ್ರಿಟಿಗಳ ವಲಯದಲ್ಲಿ ಕೊರೊನಾ ವೈರಸ್ ಅಟ್ಟಹಾಸ ಮೆರೆಯುತ್ತಿದೆ. ಪ್ರತಿದಿನ ಒಬ್ಬರಲ್ಲ ಒಬ್ಬರು ಕೊವಿಡ್ಗೆ ಬಲಿ ಆಗುತ್ತಿದ್ದಾರೆ. ತಮಿಳು ಚಿತ್ರರಂಗದ ಜನಪ್ರಿಯ ಹಾಸ್ಯನಟ ಪಾಂಡು ಅವರು ಇಂದು (ಮೇ 6) ನಿಧನರಾಗಿದ್ದಾರೆ. ಅವರಿಗೆ 74 ವರ್ಷ ವಯಸ್ಸಾಗಿತ್ತು. ಚೆನ್ನೈನಲ್ಲಿ ಕೊರೊನಾಗೆ ಚಿಕಿತ್ಸೆ ಪಡೆಯುತ್ತಿದ್ದ ಅವರು ಗುರುವಾರ ಬೆಳಗ್ಗೆ ಮೃತರಾದರು. ಪತ್ನಿ ಮತ್ತು ಮೂವರು ಮಕ್ಕಳನ್ನು ಪಾಂಡು ಅಗಲಿದ್ದಾರೆ.
1981ರಲ್ಲಿ ಚಿತ್ರರಂಗಕ್ಕೆ ಕಾಲಿಟ್ಟ ಪಾಂಡು ಅವರು ಕಾಮಿಡಿ ಪಾತ್ರಗಳ ಮೂಲಕ ಭಾರಿ ಜನಪ್ರಿಯತೆ ಪಡೆದುಕೊಂಡಿದ್ದರು. 550ಕ್ಕೂ ಅಧಿಕ ಸಿನಿಮಾಗಳಲ್ಲಿ ನಟಿಸಿದ ಖ್ಯಾತಿ ಅವರಿಗೆ ಸಲ್ಲುತ್ತದೆ. ಪಾಂಡು ನಿಧನದಿಂದ ತಮಿಳು ಚಿತ್ರರಂಗಕ್ಕೆ ಆಘಾತ ಆಗಿದೆ. ಅವರಿಗೆ ಸೋಶಿಯಲ್ ಮೀಡಿಯಾ ಮೂಲಕ ಅನೇಕರು ಶ್ರದ್ಧಾಂಜಲಿ ಅರ್ಪಿಸುತ್ತಿದ್ದಾರೆ.
ಕೆಲವೇ ದಿನಗಳ ಹಿಂದೆ ನಿರ್ದೇಶಕ ಕೆ.ವಿ. ಆನಂದ್ ಅವರು ಕೊರೊನಾದಿಂದ ನಿಧನರಾದರು. ಅದಕ್ಕೂ ಮುನ್ನ ನಟ ವಿವೇಕ್ ಅವರು ಹೃದಯಾಘಾತಕ್ಕೆ ಒಳಗಾಗಿದ್ದರು. ಹೀಗೆ ಕಾಲಿವುಡ್ಗೆ ಬ್ಯಾಕ್ ಟು ಬ್ಯಾಕ್ ಕಹಿ ಸುದ್ದಿ ಕೇಳಿಬರುತ್ತಲೇ ಇದೆ. ಕೊರೊನಾ ಎರಡನೇ ಅಲೆಗೆ ದೇಶದ ಜನರು ತತ್ತರಿಸಿದ್ದಾರೆ. ಕನ್ನಡದಲ್ಲೂ ಅನೇಕ ಸೆಲೆಬ್ರಿಟಿಗಳು ಸಾವಿನ ಮನೆಯ ಹಾದಿ ಹಿಡಿದಿರುವುದು ಬೇಸರದ ಸಂಗತಿ.
ನಟ ಕೋಮಲ್ ಕುಮಾರ್ ಅವರು ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆದು, ಸಾವು-ಬದುಕಿನ ನಡುವೆ ಹೋರಾಡಿ ಬಂದಿದ್ದಾರೆ. ಖ್ಯಾತ ನಿರ್ಮಾಪಕ ಕೋಟಿ ರಾಮು, ಯುವ ನಟ- ನಿರ್ಮಾಪಕ ಡಿ.ಎಸ್. ಮಂಜುನಾಥ್, ಕಾರ್ಯಕಾರಿ ನಿರ್ಮಾಪಕ ರಾಜಶೇಖರ್, ಪೋಸ್ಟರ್ ಡಿಸೈನರ್ ಮಸ್ತಾನ್, ಪುಟ್ಟಣ್ಣ ಕಣಗಾಲ್ ಪುತ್ರ ರಾಮು, ಕವಿರತ್ನ ಕಾಳಿದಾಸ ಸಿನಿಮಾ ನಿರ್ದೇಶಕ ರೇಣುಕಾ ಶರ್ಮಾ ಸೇರಿದಂತೆ ಅನೇಕ ಸೆಲೆಬ್ರಿಟಿಗಳು ಮಹಾಮಾರಿ ಕೊವಿಡ್ನಿಂದಾಗಿ ಪ್ರಾಣ ಕಳೆದುಕೊಂಡಿದ್ದಾರೆ. ಒಟ್ಟಿನಲ್ಲಿ ದಿನದಿಂದ ದಿನಕ್ಕೆ ಕೊರೊನಾ ಕಾಟ ಹೆಚ್ಚುತ್ತಲೇ ಇದೆ.
Tamil actor Pandu, a popular comedic star, died of COVID in a Chennai hospital today. He was 74. Pandu tested positive for the virus some days ago along with his wife Kumudha who is still being treated for COVID. The couple has three sons.
03-05-25 09:38 pm
HK News Desk
Shivanand Patil, U T Khader: ಯತ್ನಾಳ್ ಸವಾಲು ಸ್...
02-05-25 10:00 pm
U T Khader, Suhas Shetty Murder, Fazil, Manga...
02-05-25 08:44 pm
Suhas Shetty Murder case, Minister Parameshwa...
02-05-25 01:40 pm
Dinesh Gundu Rao, Suhas Shetty Murder: ಸುಹಾಸ್...
02-05-25 10:52 am
30-04-25 06:59 pm
HK News Desk
India Pakistan War: ಭಾರತೀಯ ಸೇನಾಪಡೆಗೆ ಪರಮಾಧಿಕಾ...
30-04-25 03:14 pm
Pakistan, No-fly zone islamabad: ಭಾರತದ ಪ್ರತೀಕ...
30-04-25 02:13 pm
ಮೋದಿ 'ಗಾಯಬ್' ಎಂದು ಕಾಂಗ್ರೆಸ್ ಪೋಸ್ಟ್ ; ಕಾಂಗ್ರೆಸ...
29-04-25 03:45 pm
'ನನಗೆ ಪಾಕಿಸ್ತಾನದಲ್ಲಿ ಯಾರೂ ಇಲ್ಲ, ದಯವಿಟ್ಟು ಉಳಿಸ...
28-04-25 06:52 pm
03-05-25 10:57 pm
Mangalore Correspondent
ಬಜರಂಗಿ ಸುಹಾಸ್ ಶೆಟ್ಟಿ ಹತ್ಯೆಗೆ ಕಳಸದವರು ಬಂದಿದ್ದೇ...
03-05-25 10:43 pm
U T Khader, Satish Kumapla, Mangalore, Suhas,...
03-05-25 10:13 pm
Mangalore, Stabbing, Suhas Shetty Murder, Arr...
03-05-25 08:39 pm
Mangalore, Animal Welfare: ಪ್ರಾಣಿ ಸಂರಕ್ಷಣೆ ಜಾ...
03-05-25 06:57 pm
03-05-25 02:16 pm
Mangalore Correspondent
Suhas Shetty Murder, Thokottu Attack, Mangalo...
02-05-25 12:00 pm
Mangalore Bajpe Murder, Suhas Shetty: ಹಳೆ ದ್ವ...
01-05-25 10:06 pm
Mangalore, Illegal Rice, crime: ಉತ್ತರ ಕರ್ನಾಟಕ...
30-04-25 04:09 pm
Mangalore Mudipu Murder, Mob, Police, Crime:...
29-04-25 09:59 pm