ಬ್ರೇಕಿಂಗ್ ನ್ಯೂಸ್
07-07-21 10:56 am Filmbeat : Shruthi K ಸಿನಿಮಾ
ಬಾಲಿವುಡ್ ನ ಹಿರಿಯ ನಟ ದಿಲೀಪ್ ಕುಮಾರ್ ಬುಧವಾರ (ಜುಲೈ 7) ಬೆಳಗ್ಗೆ ಮುಂಬೈ ಆಸ್ಪತ್ರೆಯಲ್ಲಿ ಕೊನೆಯುಸಿರೆಳೆದಿದ್ದಾರೆ. ವಯೋಸಹಜ ಕಾಯಿಲೆ ಇಂದ ಬಳಲುತ್ತಿದ್ದ ನಟ ದಿಲೀಪ್ ಕುಮಾರ್ ಜೂನ್ 29ರಂದು ಮುಂಬೈನ ಹಿಂದೂಜಾ ಆಸ್ಪತ್ರೆಗೆ ದಾಖಲಿಸಿ, ತೀವ್ರ ನಿಗಾಘಟಕದಲ್ಲಿ ಚಿಕಿತ್ಸೆ ನೀಡಲಾಗುತ್ತಿತ್ತು. ಆದರೆ ಚಿಕಿತ್ಸೆ ಫಲಕಾರಿಯಾಗದೆ ನಿನ್ನೆ ನಟ ಕೊನೆಯುಸಿರೆಳೆದರು.
ಇತ್ತೀಚಿಗೆ ದಿಲೀಪ್ ಕುಮಾರ್ ಆರೋಗ್ಯ ಸ್ಥಿರವಾಗಿದೆ ಎಂದು ಕುಟುಂಬದವರು ಮಾಹಿತಿ ನೀಡಿದ್ದರು. ''ದಿಲೀಪ್ ಕುಮಾರ್ ಆರೋಗ್ಯವಾಗಿದ್ದಾರೆ. ವೈದ್ಯರ ಸಲಹೆಯಂತೆ ಸ್ವಲ್ಪ ದಿನ ಆಸ್ಪತ್ರೆಯಲ್ಲೇ ಇರಲಿದ್ದಾರೆ. ಆರೈಕೆ ಮಾಡಲು ವೈದ್ಯರಿಗೂ ಸಹಾಯವಾಗಲಿದೆ. ಒಂದೆರಡು ದಿನದ ಬಳಿಕ ಡಿಸ್ಚಾರ್ಜ್ ಆಗಲಿದ್ದಾರೆ'' ಎಂದಿದ್ದರು.

ಆದರೀಗ ದಿಲೀಪ್ ಕುಮಾರ್ ಇನ್ನಿಲ್ಲ ಎನ್ನುವ ಸುದ್ದಿ ಶಾಕ್ ನೀಡಿದೆ. ಹಿರಿಯ ನಟನ ನಿಧನಕ್ಕೆ ಬಾಲಿವುಡ್ ಅನೇಕ ಮಂದಿ ಕಂಬನಿ ಮಿಡಿದಿದ್ದಾರೆ. ಜೂನ್ ತಿಂಗಳಲ್ಲಿ ದಿಲೀಪ್ ಕುಮಾರ್ 2ನೇ ಬಾರಿ ಆಸ್ಪತ್ರೆಗೆ ದಾಖಲಾಗಿದ್ದರು. ಕೊರೊನಾ ಭೀತಿಯ ಹಿನ್ನಲೆ ಪತ್ನಿ ಸಾಹೀರಾ ಬಾನು ಜೊತೆ ಕ್ವಾರಂಟೈನ್ ನಲ್ಲಿದ್ದ ದಿಲೀಪ್ ಕುಮಾರ್ ಅವರನ್ನು ವಯೋಸಹಜ ಕಾಯಿಲೆಗಳು ಆಗಾಗ ಕಾಡುತ್ತಿದ್ದು, ಹಾಗಾಗಿ ಪದೇ ಪದೇ ಆಸ್ಪತ್ರೆಗೆ ದಾಖಲಾಗುವಂತೆ ಮಾಡುತ್ತಿತ್ತು.
'ಮುಘಲ್-ಎ-ಅಜಮ್', 'ರಾಮ್ ಔರ್ ಶ್ಯಾಮ್', 'ಕೋಹಿನೂರ್' ಸೇರಿದಂತೆ ನೂರಾರು ಸಿನಿಮಾಗಳಲ್ಲಿ ನಟಿಸಿರುವ ದಿಲೀಪ್ ಕುಮಾರ್ 1998 ರಿಂದ ಯಾವುದೇ ಸಿನಿಮಾದಲ್ಲಿ ನಟಿಸಿಲ್ಲ. ದಿಲೀಪ್ ಕುಮಾರ್ ನಿಜವಾದ ಹೆಸರು ಮೊಹಮ್ಮದ್ ಯೂಸಫ್ ಖಾನ್.
(Kannada Copy of Filmbeat Kannada)
17-06-26 10:12 pm
HK News Staffer
ಆರ್ಎಸ್ಎಸ್ ಲೆಕ್ಕ ಕೇಳಲು ಇವನ್ಯಾರು? ಪ್ರಿಯಾಂಕ್ ಖ...
17-06-26 06:59 pm
ಜಿಮ್ ಮುಗಿಸಿ ಮನೆಗೆ ಬಂದ ಯುವಕನಿಗೆ ಹೃದಯಾಘಾತ ; ಹೆ...
17-06-26 06:35 pm
ಪವಿತ್ರ ಧರ್ಮಸ್ಥಳ ವಿರುದ್ಧ ನಾನ್ಯಾಕೆ ಷಡ್ಯಂತ್ರ ಮಾಡ...
17-06-26 05:12 pm
ಆರೆಸ್ಸೆಸ್ ನೋಂದಣಿ ; ನನ್ನ ಪತ್ರ ವೈಯಕ್ತಿಕ ಅಲ್ಲ, ರ...
17-06-26 04:48 pm
15-06-26 11:18 am
HK News Staffer
ಬಿರಿಯಾನಿ ಹೆಸರಲ್ಲಿ ಮಹಿಳೆಯ ಮಾನ ಕಳೆದ ಟೆಕ್ಕಿ! ತಮಾ...
14-06-26 09:46 pm
ಸಹಕಾರಿ ಬ್ಯಾಂಕುಗಳಲ್ಲಿ ಸರ್ವಾಧಿಕಾರಕ್ಕೆ ಬ್ರೇಕ್ !...
14-06-26 07:17 pm
ಅಸ್ಸಾಂನಲ್ಲಿ 18 ವರ್ಷ ಮೇಲ್ಪಟ್ಟವರಿಗೆ ಆಧಾರ್ ಕಾರ್ಡ...
14-06-26 04:49 pm
ಕೇರಳದಲ್ಲಿ ಜೂನ್ 15ರಿಂದ 'ಪ್ರಿಯದರ್ಶಿನಿ' ಉಚಿತ ಬಸ್...
14-06-26 01:08 pm
16-06-26 11:35 am
HK News Staffer
ಧರ್ಮಸ್ಥಳ ಬುರುಡೆ ಪ್ರಕರಣ ; ಗಿರೀಶ್ ಮಟ್ಟಣ್ಣನವರ್,...
15-06-26 04:52 pm
ಅಂಬಾನಿ ಕುಟುಂಬದ ಗುರೂಜಿ ಜೊತೆ ಕೊಲ್ಲೂರು ಮೂಕಾಂಬಿಕೆ...
14-06-26 09:47 pm
ದ.ಕ. ಜಿಲ್ಲೆಯ 14 ಪ್ರಮುಖ ರಸ್ತೆ ಅಭಿವೃದ್ದಿ ಕಾಮಗಾರ...
14-06-26 02:37 pm
ಧರ್ಮಸ್ಥಳ ಬುರುಡೆ ಪ್ರಕರಣಕ್ಕೆ ಮತ್ತೊಂದು ಟ್ವಿಸ್ಟ್:...
13-06-26 05:28 pm
17-06-26 01:41 pm
HK News Staffer
ವಾಯುಪಡೆ ಅಧಿಕಾರಿ ಪತ್ನಿಗೆ ಅಮಲು ಪದಾರ್ಥ ನೀಡಿ ಅತ್ಯ...
16-06-26 08:32 pm
SIT Car Accident: ಎಸ್ಐಟಿ ಎಸ್ಪಿ ಸೈಮನ್ ಪ್ರಯಾಣಿಸ...
16-06-26 05:10 pm
Chandrashekhar, Belthangady: ಬೆಳ್ತಂಗಡಿ ಸರ್ಕಾರ...
16-06-26 02:34 pm
ಉಳ್ಳಾಲ ; ಸ್ನಾನಕ್ಕೆಂದು ಕೋಣೆಗೆ ತೆರಳಿದ್ದ ಪಿಯುಸಿ...
16-06-26 10:33 am