ಬ್ರೇಕಿಂಗ್ ನ್ಯೂಸ್
07-07-21 11:33 am Filmbeat : Bharath Kumar K ಸಿನಿಮಾ
ಬಾಲಿವುಡ್ ಹಿರಿಯ ನಟ ದಿಲೀಪ್ ಕುಮಾರ್ ಬುಧವಾರ (ಜುಲೈ 7) ಬೆಳಗ್ಗೆ ಮುಂಬೈ ಆಸ್ಪತ್ರೆಯಲ್ಲಿ ಕೊನೆಯುಸಿರೆಳೆದಿದ್ದಾರೆ. ವಯೋಸಹಜ ಕಾಯಿಲೆಯಿಂದ ಬಳಲುತ್ತಿದ್ದ ನಟ ದಿಲೀಪ್ ಕುಮಾರ್ ಜೂನ್ 29ರಂದು ಮುಂಬೈನ ಹಿಂದೂಜಾ ಆಸ್ಪತ್ರೆಗೆ ದಾಖಲಾಗಿದ್ದರು. ತೀವ್ರ ನಿಗಾಘಟಕದಲ್ಲಿ ಚಿಕಿತ್ಸೆ ನೀಡಲಾಯಿತಾದರೂ ಚಿಕಿತ್ಸೆ ಫಲಕಾರಿಯಾಗದೆ ನಿಧನರಾದರು.
ಹಿಂದಿ ಚಿತ್ರರಂಗದಲ್ಲಿ 'ದುರಂತ ನಾಯಕ' ಎಂದೇ ಖ್ಯಾತಿ ಗಳಿಸಿಕೊಂಡಿರುವ ದಿಲೀಪ್ ಕುಮಾರ್ಗೆ 98 ವರ್ಷ ವಯಸ್ಸಾಗಿತ್ತು. ಇದೀಗ, ದಿಗ್ಗಜ ನಟನ ಅಗಲಿಕೆಗೆ ಭಾರತೀಯ ಚಿತ್ರರಂಗದ ಪ್ರಮುಖ ಕಲಾವಿದರು ಕಂಬನಿ ಮಿಡಿದಿದ್ದಾರೆ. ಬಾಲಿವುಡ್ ಹಾಗೂ ದಕ್ಷಿಣ ಚಿತ್ರರಂಗದ ಪ್ರಮುಖರು ಸಾಮಾಜಿಕ ಜಾಲತಾಣದ ಮೂಲಕ ಸಂತಾಪ ಸೂಚಿಸಿದ್ದಾರೆ.
ಅವರೊಂದು ಸಂಸ್ಥೆ, ಸಮಯಮೀರಿದ ನಟ
'ದಿಗ್ಗಜ ನಟನೊಂದಿಗೆ ವೈಯಕ್ತಿಕವಾಗಿ, ವೇದಿಕೆಗಳಲ್ಲಿ ಕಳೆದ ಕ್ಷಣಗಳು ನೆನಪಿನಲ್ಲಿದೆ. ಅವರೊಂದು ಸಂಸ್ಥೆ, ಸಮಯಮೀರಿದ ನಟ. ಅವರ ಸಾವಿನ ಸುದ್ದಿ ಹೃದಯ ಛಿದ್ರಗೊಳಿಸಿದೆ'' ಎಂದು ನಟ ಅಜಯ್ ದೇವಗನ್ ಟ್ವೀಟ್ ಮಾಡಿ ಸಂತಾಪ ಸೂಚಿಸಿದ್ದಾರೆ.
To the world many others may be heroes. To us actors, he was The Hero. #DilipKumar Sir has taken an entire era of Indian cinema away with him.
— Akshay Kumar (@akshaykumar) July 7, 2021
My thoughts and prayers are with his family. Om Shanti 🙏🏻 pic.twitter.com/dVwV7CUfxh
ನಮಗೆ ಅವರೇ ಹೀರೋ
''ಜಗತ್ತಿಗೆ ಅನೇಕರು ಹೀರೋಗಳು ಆಗಬಹುದು. ಆದರೆ, ನಮಗೆ ಅವರೇ ಹೀರೋ. ದಿಲೀಪ್ ಕುಮಾರ್ ಅವರ ಭಾರತೀಯ ಸಿನಿಮಾದ ಸಂಪೂರ್ಣ ಯುಗವನ್ನು ತನ್ನೊಂದಿಗೆ ತೆಗೆದುಕೊಂಡು ಹೋಗಿದ್ದಾರೆ. ಅವರ ಕುಟುಂಬಕ್ಕೆ ಈ ನೋವು ಭರಿಸಲು ಶಕ್ತಿ ನೀಡಲಿ ಎಂದು ಪ್ರಾರ್ಥಿಸುತ್ತೇನೆ'' ಎಂದು ಅಕ್ಷಯ್ ಕುಮಾರ್ ಟ್ವೀಟ್ ಮಾಡಿದ್ದಾರೆ.
ಸಾಂಸ್ಕೃತಿಕ ಜಗತ್ತಿಗೆ ನಷ್ಟDilip Kumar Ji will be remembered as a cinematic legend. He was blessed with unparalleled brilliance, due to which audiences across generations were enthralled. His passing away is a loss to our cultural world. Condolences to his family, friends and innumerable admirers. RIP.
— Narendra Modi (@narendramodi) July 7, 2021
''ದಿಲೀಪ್ ಕುಮಾರ್ ನಿಧನದಿಂದ ನಮ್ಮ ಸಾಂಸ್ಕೃತಿಕ ಜಗತ್ತಿಗೆ ನಷ್ಟವಾಗಿದೆ. ಅವರ ಕುಟುಂಬ, ಸ್ನೇಹಿತರು ಮತ್ತು ಅಸಂಖ್ಯಾತ ಅಭಿಮಾನಿಗಳಿಗೆ ನೋವು ಭರಿಸುವ ಶಕ್ತಿ ಸಿಗಲಿ'' ಎಂದು ಪ್ರಧಾನಿ ಮೋದಿ ಸಂತಾಪ ಸೂಚಿಸಿದ್ದಾರೆ
ಲೆಜೆಂಡ್ಗಳು ಶಾಶ್ವತವಾಗಿ ಇರ್ತಾರೆThe world hailed him as the greatest actor of all time,a brilliant orator and an epitome of unaffected simplicity.He will remain an inspiration to many generations of actors and an enigma to me.Legends live forever!!
— Kichcha Sudeepa (@KicchaSudeep) July 7, 2021
RIP DilipKumarJi.🙏🏼🙏🏼. pic.twitter.com/DAHdfopMqu
''ಸಾರ್ವಕಾಲಿಕ ಶ್ರೇಷ್ಠ ನಟ, ಅದ್ಭುತ ವಾಗ್ಮಿ ಮತ್ತು ಸರಳತೆಯ ಸಾಮ್ರಾಟ್ ಎಂದು ಜಗತ್ತು ದಿಲೀಪ್ ಕುಮಾರ್ರನ್ನು ಶ್ಲಾಘಿಸಿತ್ತು. ಅನೇಕ ತಲೆಮಾರಿಗೆ ಅವರು ಸ್ಫೂರ್ತಿಯಾಗಿ ಉಳಿಯಲಿದ್ದಾರೆ. ಲೆಜೆಂಡ್ಗಳು ಶಾಶ್ವತವಾಗಿ ಇರ್ತಾರೆ'' ಎಂದು ಕಿಚ್ಚ ಸುದೀಪ್ ಸಂತಾಪ ವ್ಯಕ್ತಪಡಿಸಿದ್ದಾರೆ.
(Kannada Copy of Filmbeat Kannada)
02-05-25 10:00 pm
Bangalore Correspondent
U T Khader, Suhas Shetty Murder, Fazil, Manga...
02-05-25 08:44 pm
Suhas Shetty Murder case, Minister Parameshwa...
02-05-25 01:40 pm
Dinesh Gundu Rao, Suhas Shetty Murder: ಸುಹಾಸ್...
02-05-25 10:52 am
Jan Dhan Scheme: ಜನಧನ್ ಖಾತೆ ಬಗ್ಗೆ ಜನರ ನಿರಾಸಕ್...
01-05-25 01:48 pm
30-04-25 06:59 pm
HK News Desk
India Pakistan War: ಭಾರತೀಯ ಸೇನಾಪಡೆಗೆ ಪರಮಾಧಿಕಾ...
30-04-25 03:14 pm
Pakistan, No-fly zone islamabad: ಭಾರತದ ಪ್ರತೀಕ...
30-04-25 02:13 pm
ಮೋದಿ 'ಗಾಯಬ್' ಎಂದು ಕಾಂಗ್ರೆಸ್ ಪೋಸ್ಟ್ ; ಕಾಂಗ್ರೆಸ...
29-04-25 03:45 pm
'ನನಗೆ ಪಾಕಿಸ್ತಾನದಲ್ಲಿ ಯಾರೂ ಇಲ್ಲ, ದಯವಿಟ್ಟು ಉಳಿಸ...
28-04-25 06:52 pm
02-05-25 10:47 pm
Mangalore Correspondent
Mangalore Suhas Shetty Murder, Shobha Karandl...
02-05-25 09:26 pm
B Y Vijayendra, Suhas Shetty Murder, Mangalor...
02-05-25 06:44 pm
Brijesh Chowta, NIA, Suhas Shetty Murder: ಸುಹ...
02-05-25 06:31 pm
Mangalore Suhas Shetty Murder, ADGP Hitendra:...
02-05-25 03:10 pm
02-05-25 12:00 pm
Mangalore Correspondent
Mangalore Bajpe Murder, Suhas Shetty: ಹಳೆ ದ್ವ...
01-05-25 10:06 pm
Mangalore, Illegal Rice, crime: ಉತ್ತರ ಕರ್ನಾಟಕ...
30-04-25 04:09 pm
Mangalore Mudipu Murder, Mob, Police, Crime:...
29-04-25 09:59 pm
Kudupu Murder, Mangalore Crime, Police: ಕುಡುಪ...
29-04-25 02:53 pm