ಬ್ರೇಕಿಂಗ್ ನ್ಯೂಸ್
10-07-21 04:04 pm Filmbeat : Bharath Kumar K ಸಿನಿಮಾ
ಭಾರತ ಕ್ರಿಕೆಟ್ ತಂಡದ ಹಿರಿಯ ಆಟಗಾರ ಹರ್ಭಜನ್ ಸಿಂಗ್ ಮತ್ತು ನಟಿ ಗೀತಾ ಬಸ್ರಾ ದಂಪತಿ ಎರಡನೇ ಮಗುವನ್ನು ಸ್ವಾಗತಿಸಿದ್ದಾರೆ. ಶನಿವಾರ ಮಧ್ಯಾಹ್ನ ಗೀತಾ ಬಸ್ರಾ ಗಂಡು ಮಗುವಿಗೆ ಜನ್ಮ ನೀಡಿದ್ದಾರೆ ಎಂದು ಹರ್ಭಜನ್ ಸಿಂಗ್ ಸೋಶಿಯಲ್ ಮೀಡಿಯಾದಲ್ಲಿ ಹಂಚಿಕೊಂಡಿದ್ದು, 'ಮಗು ಮತ್ತು ತಾಯಿ ಆರೋಗ್ಯವಾಗಿದ್ದಾರೆ' ಎಂದು ತಿಳಿಸಿದ್ದಾರೆ.
ಎರಡನೇ ಬಾರಿ ತಂದೆಯಾದ ಸಂತಸವನ್ನು ಹಂಚಿಕೊಂಡಿರುವ ಹರ್ಭಜನ್, ''ಅದ್ಭುತ ಉಡುಗೊರೆ, ಇದು ಬಹಳ ವಿಶೇಷವಾದ ಕ್ಷಣ. ನಮ್ಮ ಜೀವನ ಸಂಪೂರ್ಣವಾಗಿದೆ, ನಾವು ಸಂತೋಷ ಸಾಗರದಲ್ಲಿ ಮುಳುಗಿದ್ದೇವೆ. ನಮ್ಮ ಕ್ಷೇಮ ಹಾಗು ಸಂತಸಕ್ಕಾಗಿ ಶುಭಕೋರಿದ ಎಲ್ಲಾ ಹಿತೈಷಿಗಳಿಗೆ ಧನ್ಯವಾದಗಳು'' ಎಂದು ಪೋಸ್ಟ್ ಮಾಡಿದ್ದಾರೆ.
ಹರ್ಭಜನ್ ಸಿಂಗ್ ಹಾಗೂ ನಟಿ ಗೀತಾ ಬಸ್ರಾ ಅವರ ವಿವಾಹ ಅಕ್ಟೋಬರ್ 29, 2015 ರಲ್ಲಿ ಪಂಜಾಬ್ನ ಜಲಂಧರ್ನಲ್ಲಿ ನಡೆದಿತ್ತು. ಅದಾಗಲೇ ಹರ್ಭಜನ್ ಸಿಂಗ್-ಗೀತಾ ದಂಪತಿಗೆ ಹೆಣ್ಣು ಮಗುವಿದೆ. 2016ರಲ್ಲಿ ಮೊದಲ ಮಗು ಜನಿಸಿತ್ತು.


ಅಂದ್ಹಾಗೆ, ಗೀತಾ ಬಸ್ರಾ ಅವರ ಕುಟುಂಬ ಯುಕೆಯಲ್ಲಿ ನೆಲೆಸಿದೆ. 2006 ರಲ್ಲಿ ಇಮ್ರಾನ್ ಹಶ್ಮಿ ಅಭಿನಯದ "ದಿಲ್ ದಿಯಾ ಹೈ" ಚಿತ್ರದ ಮೂಲಕ ಗೀತಾ ಬಾಲಿವುಡ್ಗೆ ಪಾದಾರ್ಪಣೆ ಮಾಡಿದ್ದರು. ಈಗ ಕುಟುಂಬದ ಜೊತೆ ಕಾಲ ಕಳೆಯುತ್ತಿದ್ದಾರೆ.
ಜಾನ್ ಪೌಲ್ ರಾಜ್ ನಿರ್ದೇಶನದಲ್ಲಿ ತಯಾರಾಗುತ್ತಿರುವ ಫ್ರೆಂಡ್ಷಿಪ್ ಸಿನಿಮಾದಲ್ಲಿ ಹರ್ಭಜನ್ ಸಿಂಗ್ ನಟಿಸುತ್ತಿದ್ದಾರೆ. ಹರ್ಭಜನ್ ಜೊತೆ ಅರ್ಜುನ್ ಸರ್ಜಾ ಪ್ರಮುಖ ಪಾತ್ರದಲ್ಲಿ ಕಾಣಿಸಿಕೊಳ್ಳುತ್ತಿದ್ದಾರೆ. ಅದಕ್ಕೂ ಮುಂಚೆ ಹಿಂದಿಯ ಆಲ್ಬಮ್ ಸಾಂಗ್ ಕೆಲವು ಸಿನಿಮಾದಲ್ಲಿ ಅತಿಥಿ ಪಾತ್ರ ನಿರ್ವಹಿಸಿದ್ದರು.
(Kannada Copy of Filmbeat Kannada)
15-09-26 09:13 pm
HK News Staffer
Imran Pasha, Pratap Simha: ನಿನ್ನಂತಹ ಒಂದು ಲಕ್...
15-09-26 04:46 pm
ಬಿಜೆಪಿಯವರಿಗೆ ಕೊಬ್ಬು ಹೆಚ್ಚಾಗಿದೆ ಅದಕ್ಕೆ ಬಳ್ಳಾರಿ...
12-09-26 09:40 pm
ಯತ್ನಾಳ್ ಆರೋಪಿಸಿದರೂ ವಿಜಯೇಂದ್ರ ಮನೆ ಮೇಲೆ ಇಡಿ, ಐಟ...
12-09-26 09:38 pm
ಮಸೀದಿ ಮುಂದೆ ಗಣೇಶ ಮೆರವಣಿಗೆ ಮಾಡಿದ್ರೆ ಗ್ರಹಚಾರ ಬಿ...
12-09-26 09:36 pm
13-09-26 09:00 pm
HK News
80s ಫೋಟೋ ಟ್ರೆಂಡ್ಗೆ ಮಾರುಹೋಗಿದ್ದೀರಾ? ಹುಷಾರ್ ;...
12-09-26 01:10 pm
ಕಾಶ್ಮೀರಿ ಪಂಡಿತರಿಗೆ ಮತ್ತೆ ಬೆದರಿಕೆ ; ಉದ್ಯೋಗ ಬಿಟ...
10-09-26 01:23 pm
ನೇಪಾಳ ಪ್ರವಾಹ ; ಹತ್ತು ದಿನಗಳ ಬಳಿಕ ಜಲವಿದ್ಯುತ್ ಸು...
05-09-26 11:55 am
ಮುಂದಿನ ಒಂದು ವರ್ಷದಲ್ಲಿ ಒಂದು ಸಾವಿರ ವಿದ್ಯಾಭಾರತಿ...
04-09-26 08:14 pm
15-09-26 09:18 pm
HK News Staffer
Satish Kumpala, Manglore: ಕಾಟಾಚಾರಕ್ಕೆ ಸಂಪುಟ ಸ...
15-09-26 07:46 pm
U T Khader, KDP Meeting, Bharath Sheety, Hari...
15-09-26 06:52 pm
Aravind Bolar Controversy, Mangalore: “ಎಂಕ್ ಮ...
15-09-26 05:29 pm
U T Khader, KDP Meeting, Sudheer Reddy Ips: :...
15-09-26 05:27 pm
15-09-26 09:19 pm
HK News Staffer
Mangalore Blackmail: ಫೋಟೋ ಮಾರ್ಫ್ ಮಾಡಿ ಬ್ಲ್ಯಾಕ...
15-09-26 12:55 pm
Manyda Accident: ಗಣೇಶ ಹಬ್ಬ ಮುಗಿಸಿ ಬೆಂಗಳೂರಿಗೆ...
15-09-26 12:48 pm
ಗಣೇಶ ಹಬ್ಬದ ಬೆನ್ನಲ್ಲೇ ಕರ್ನಾಟಕದಲ್ಲಿ ಸರಣಿ ದುರಂತ:...
15-09-26 12:41 pm
ಗಣೇಶೋತ್ಸವದ ಸಂಭ್ರಮದ ನಡುವೆ ಭೀಕರ ದುರಂತ: ಅಗ್ನಿ ಅವ...
15-09-26 10:31 am