ಬ್ರೇಕಿಂಗ್ ನ್ಯೂಸ್
01-08-20 09:12 am Headline Karnataka News Network ಸಿನಿಮಾ
ಮುಂಬೈ: ಬಾಲಿವುಡ್ ನಟ ಸುಶಾಂತ್ ಸಿಂಗ್ ರಜಪೂತ್ ಅವರ ತಂದೆ ಬಿಹಾರದಲ್ಲಿ ದಾಖಲಿಸಿರುವ ಎಫ್ಐಆರ್ನಲ್ಲಿ ನನ್ನ ಮೇಲೆ ಸುಳ್ಳು ಆರೋಪ ಹೊರಿಸಲಾಗಿದೆ ಎಂದು ನಟಿ ರಿಯಾ ಚಕ್ರವರ್ತಿ ಸುಪ್ರೀಂ ಕೋರ್ಟಿಗೆ ಅರ್ಜಿ ಸಲ್ಲಿಸಿದ್ದಾರೆ.
ಇತ್ತೀಚೆಗೆ ಸುಶಾಂತ್ ಸಿಂಗ್ ಆತ್ಮಹತ್ಯೆಗೆ ಸಂಬಂಧಿಸಿದಂತೆ ಅವರ ತಂದೆ, ನಟಿ ರಿಯಾ ಚಕ್ರವರ್ತಿ ಸೇರಿದಂತೆ ಆರು ಮಂದಿ ವಿರುದ್ಧ ಪಾಟ್ನಾದಲ್ಲಿ ಎಫ್ಐಆರ್ ದಾಖಲಿಸಿದ್ದರು. ಇದೀಗ ಈ ತನಿಖೆಯನ್ನು ಮುಂಬೈಗೆ ವರ್ಗಾಯಿಸುವಂತೆ ಕೋರಿ ಬುಧವಾರ ನಟಿ ರಿಯಾ ಚಕ್ರವರ್ತಿ ಸುಪ್ರೀಂ ಕೋರ್ಟಿಗೆ ಅರ್ಜಿ ಸಲ್ಲಿಸಿದ್ದಾರೆ.
ಅಲ್ಲದೇ ಸುಶಾಂತ್ ಸಿಂಗ್ ಸಾವಿನಿಂದ ನಾನು ತೀವ್ರ ಆಘಾತಕ್ಕೊಳಗಾಗಿದ್ದೇನೆ. ಇದರಿಂದ ನನಗೂ ಅನೇಕ ಕೊಲೆ ಮತ್ತು ಅತ್ಯಾಚಾರ ಬೆದರಿಕೆಗಳು ಬಂದಿವೆ. ಜೊತೆಗೆ ಜೂನ್ 8 ರವರೆಗೆ ಸುಶಾಂತ್ ಜೊತೆ ಲಿವ್-ಇನ್ ರಿಲೇಷನ್ಶಿಪ್ನಲ್ಲಿದ್ದೆ ಎಂಬ ಮಾಹಿತಿಯನ್ನ ಕೂಡ ಸುಪ್ರೀಂ ಕೋರ್ಟಿಗೆ ನೀಡಿದ್ದಾರೆ.
ರಿಯಾ ಸಲ್ಲಿಸಿರೋ ಅರ್ಜಿಯಲ್ಲಿ ಏನಿದೆ?
ಪ್ರಸ್ತುತ ಸುಶಾಂತ್ ಸಿಂಗ್ ಆತ್ಮಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಕೃಷ್ಣ ಕಿಶೋರ್ ಸಿಂಗ್ ಸಲ್ಲಿಸಿರುವ ಎಫ್ಐಆರ್ನಲ್ಲಿ ತಪ್ಪಾಗಿ ಹೇಳಿಕೆ ನೀಡಿದ್ದು, ನನ್ನ ಮೇಲೆ ಸುಳ್ಳು ಆರೋಪ ಮಾಡಲಾಗಿದೆ. ಅಲ್ಲದೇ ಪಟ್ನಾದಲ್ಲಿ ಅವರಿಗೆ ಬಹಳ ಪ್ರಭಾವ ಇದೆ. ಇದರಿಂದ ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಬಿಹಾರದಲ್ಲಿ ನ್ಯಾಯ ಸಮ್ಮತ ತನಿಖೆ ಮಾಡಲು ಸಾಧ್ಯವಿಲ್ಲ. ಆದ್ದರಿಂದ ಬಿಹಾರದಲ್ಲಿ ದಾಖಲಿಸಿರುವ ಎಫ್ಐಆರ್ನ ತನಿಖೆಯನ್ನು ಮುಂಬೈಗೆ ವರ್ಗಾಯಿಸಬೇಕು ಎಂದು ರಿಯಾ ತಮ್ಮ ಅರ್ಜಿಯಲ್ಲಿ ಮನವಿ ಮಾಡಿಕೊಂಡಿದ್ದಾರೆ.
ಸುಶಾಂತ್ ಕೆಲವು ಸಮಯದಿಂದ ಖಿನ್ನತೆಗೆ ಒಳಗಾಗಿದ್ದರು. ಆದರೆ ಜೂನ್ 14ರಂದು ಅವರು ಬಾಂದ್ರಾದ ನಿವಾಸದಲ್ಲಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಬಾಂದ್ರಾ ಪೊಲೀಸ್ ಠಾಣೆಯಲ್ಲಿ ಈ ಕುರಿತು ಅಸಹಜ ಸಾವಿನ ಪ್ರಕರಣ ದಾಖಲಾಗಿದೆ. ಸುಶಾಂತ್ ಈ ನಿರ್ಧಾರ ತೆಗೆದುಕೊಳ್ಳಲು ಕಾರಣವನ್ನು ಪರಿಶೀಲಿಸುತ್ತಿದ್ದಾರೆ ಎಂದು ತಿಳಿಸಿದ್ದಾರೆ.
ಅಷ್ಟೇ ಅಲ್ಲದೇ ರಿಯಾ ಸಲ್ಲಿಸಿರುವ ಅರ್ಜಿಯಲ್ಲಿ, ನಾನು ಜೂನ್ 8, 2020 ರವರೆಗೆ ಸುಶಾಂತ್ ಸಿಂಗ್ ಜೊತೆ ಲಿವ್ ಇನ್ ರಿಲೇಷನ್ಶಿಪ್ನಲ್ಲಿದ್ದೆ ಎಂಬ ಮಾಹಿತಿಯನ್ನ ಕೋರ್ಟಿಗೆ ನೀಡಿದ್ದಾರೆ. ಅದಾದ ಬಳಿಕ ನಾನು ತಾತ್ಕಾಲಿಕವಾಗಿ ಮುಂಬೈನಲ್ಲಿರುವ ನನ್ನ ಸ್ವಂತ ನಿವಾಸಕ್ಕೆ ಸ್ಥಳಾಂತರಗೊಂಡೆ. ನಟನ ಸಾವಿನಿಂದಾಗಿ ತೀವ್ರ ಆಘಾತಕ್ಕೊಳಗಾಗಿದ್ದೇನೆ. ಜೊತೆಗೆ ನಟನ ಸಾವಿನ ನಂತರ ಅನೇಕ ಅತ್ಯಾಚಾರ ಮತ್ತು ಕೊಲೆ ಬೆದರಿಕೆಗಳು ಬರುತ್ತಿವೆ ಎಂದು ಆರೋಪಿಸಿದ್ದಾರೆ.
ತಮಗೆ ಬರುತ್ತಿದ್ದ ಅತ್ಯಾಚಾರ ಮತ್ತು ಕೊಲೆ ಬೆದರಿಕೆ ಕರೆಗಳ ವಿರುದ್ಧ ಕ್ರೂಜ್ ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಿದ್ದಾರೆ. ಬಾಂದ್ರಾ ಪೊಲೀಸರು ಹಲವು ಬಾರಿ ಸಮನ್ಸ್ ನೀಡಿ ತಮ್ಮ ಹೇಳಿಕೆಯನ್ನು ದಾಖಲಿಸಿಕೊಂಡಿದ್ದಾರೆ. ಮುಂಬೈ ಪೊಲೀಸರ ತನಿಖೆ ಇನ್ನೂ ನಡೆಯುತ್ತಿದೆ. ಈ ಮಧ್ಯೆ ಸುಶಾಂತ್ ಸಿಂಗ್ ತಂದೆ ನನ್ನ ಮೇಲೆ ಬಿಹಾರದಲ್ಲಿ ಪ್ರಭಾವದಿಂದ ಸುಳ್ಳು ಆರೋಪ ಮಾಡಿದ್ದಾರೆ. ಇದರಿಂದ ಬಿಹಾರದ ಪೊಲೀಸರು ನಿಷ್ಪಕ್ಷಪಾತವಾಗಿ ತನಿಖೆ ಮಾಡಲು ಸಾಧ್ಯವಿಲ್ಲ. ಹೀಗಾಗಿ ಈ ಎಫ್ಐಆರ್ನ ತನಿಖೆಯನ್ನು ಮುಂಬೈಗೆ ವರ್ಗಾಯಿಸಬೇಕು ಎಂದು ರಿಯಾ ಸುಪ್ರೀಂ ಕೋರ್ಟಿಗೆ ಅರ್ಜಿ ಸಲ್ಲಿಸುವ ಮೂಲಕ ಮನವಿ ಮಾಡಿಕೊಂಡಿದ್ದಾರೆ.
12-09-26 09:40 pm
HK News Staffer
ಯತ್ನಾಳ್ ಆರೋಪಿಸಿದರೂ ವಿಜಯೇಂದ್ರ ಮನೆ ಮೇಲೆ ಇಡಿ, ಐಟ...
12-09-26 09:38 pm
ಮಸೀದಿ ಮುಂದೆ ಗಣೇಶ ಮೆರವಣಿಗೆ ಮಾಡಿದ್ರೆ ಗ್ರಹಚಾರ ಬಿ...
12-09-26 09:36 pm
ಬಿಜೆಪಿ ಅಧಿಕಾರಕ್ಕೆ ಬರಲು ನನ್ನ ಸ್ಥಾನ ಬಿಟ್ಟುಕೊಟ್ಟ...
12-09-26 05:56 pm
ಐಎಎಸ್ ತೇರ್ಗಡೆಯಾಗಿದ್ದ ಕೇರಳದ ಮೊದಲ ಬುಡಕಟ್ಟು ಮಹಿಳ...
12-09-26 05:53 pm
13-09-26 09:00 pm
HK News
80s ಫೋಟೋ ಟ್ರೆಂಡ್ಗೆ ಮಾರುಹೋಗಿದ್ದೀರಾ? ಹುಷಾರ್ ;...
12-09-26 01:10 pm
ಕಾಶ್ಮೀರಿ ಪಂಡಿತರಿಗೆ ಮತ್ತೆ ಬೆದರಿಕೆ ; ಉದ್ಯೋಗ ಬಿಟ...
10-09-26 01:23 pm
ನೇಪಾಳ ಪ್ರವಾಹ ; ಹತ್ತು ದಿನಗಳ ಬಳಿಕ ಜಲವಿದ್ಯುತ್ ಸು...
05-09-26 11:55 am
ಮುಂದಿನ ಒಂದು ವರ್ಷದಲ್ಲಿ ಒಂದು ಸಾವಿರ ವಿದ್ಯಾಭಾರತಿ...
04-09-26 08:14 pm
15-09-26 12:50 pm
HK News Staffer
ಕರಾವಳಿ ಅಭಿವೃದ್ಧಿಗೆ ಡಿಕೆಶಿ ಸರ್ಕಾರದ ಮಹತ್ವದ ಹೆಜ್...
15-09-26 09:46 am
ತುಳುನಾಡಿನಲ್ಲಿ ವಿಭಿನ್ನ ಗಣೇಶ ಚತುರ್ಥಿ ; ಮಣ್ಣಿನ ಮ...
14-09-26 10:01 pm
ಮಂಗಳೂರಿನಲ್ಲಿ ಎರಡು ದಿನ ಸಿಎಂ ಡಿಕೆಶಿ ವಾಸ್ತವ್ಯ ;...
14-09-26 06:02 pm
100 ವರ್ಷಗಳ ಬಳಿಕವೂ ಸ್ವಂತ ಸೂರಿಗಾಗಿ ಕರಾವಳಿಯಲ್ಲಿ...
14-09-26 05:00 pm
15-09-26 12:55 pm
HK News Staffer
Manyda Accident: ಗಣೇಶ ಹಬ್ಬ ಮುಗಿಸಿ ಬೆಂಗಳೂರಿಗೆ...
15-09-26 12:48 pm
ಗಣೇಶ ಹಬ್ಬದ ಬೆನ್ನಲ್ಲೇ ಕರ್ನಾಟಕದಲ್ಲಿ ಸರಣಿ ದುರಂತ:...
15-09-26 12:41 pm
ಗಣೇಶೋತ್ಸವದ ಸಂಭ್ರಮದ ನಡುವೆ ಭೀಕರ ದುರಂತ: ಅಗ್ನಿ ಅವ...
15-09-26 10:31 am
ಜೈಲಿನಲ್ಲಿದ್ದರೂ ಹಳೆ ಚಾಳಿ ಬಿಡದ ಪ್ರಜ್ವಲ್ ರೇವಣ್ಣ...
12-09-26 07:41 pm