ಬ್ರೇಕಿಂಗ್ ನ್ಯೂಸ್
26-07-21 10:44 am Headline Karnataka News Network ಸಿನಿಮಾ
ಬೆಂಗಳೂರು, ಜು.26: 500ಕ್ಕೂ ಹೆಚ್ಚು ಸಿನಿಮಾಗಳಲ್ಲಿ ನಟಿಸಿರುವ ಜಯಂತಿ (76) ಇಂದು ಬೆಳಗ್ಗೆ ಕೊನೆಯುಸಿರೆಳಿದ್ದಾರೆ. ವಯೋಸಹಜ ಕಾಯಿಲೆಯಿಂದ ಬಳಲುತ್ತಿದ್ದ ನಟಿ ಜಯಂತಿ ಅನೇಕ ಬಾರಿ ಆಸ್ಪತ್ರೆಗೆ ದಾಖಲಾಗಿದ್ದರು.
ಕಳೆದ ಉಸಿರಾಟದ ತೊಂದರೆಯಿಂದ ಬಳಲುತ್ತಿದ್ದ ನಟಿ ಜಯಂತಿ ಎರಡು ವರ್ಷದಿಂದ ಚಿಕಿತ್ಸೆ ಪಡೆಯುತ್ತಿದ್ದರು. ಆದರೆ ರಾತ್ರಿ ಈ ಸಮಸ್ಯೆ ಉಲ್ಭಣಗೊಂಡು ಅವರು ಬೆಂಗಳೂರಿನ ಬನಶಂಕರಿಯಲ್ಲಿರುವ ತಮ್ಮ ಮನೆಯಲ್ಲೇ ಕೊನೆಯುಸಿರೆಳೆದಿದ್ದಾರೆ.
1945ರಲ್ಲಿ ಬಳ್ಳಾರಿಯಲ್ಲಿ ಜನಿಸಿದ ಜಯಂತಿ ಜಯಂತಿಯವರ ಮೂಲ ಹೆಸರು ಕಮಲಾ ಕುಮಾರಿ. ತಂದೆ ಬಾಲಸುಬ್ರಹ್ಮಣ್ಯಂ ಬೆಂಗಳೂರಿನ ಸೇಂಟ್ ಜೋಸೆಫ್ ಕಾಲೇಜಿನಲ್ಲಿ ಇಂಗ್ಲಿಷ್ ಪ್ರಾಧ್ಯಪಕರಾಗಿ ಕಾರ್ಯನಿರ್ವಹಿಸುತ್ತಿದ್ದರೆ, ತಾಯಿ ಸಂತಾನಲಕ್ಷ್ಮೀ ಗೃಹಿಣಿ. ಮನೆಯಲ್ಲಿ ಹಿರಿಯ ಪುತ್ರಿಯಾಗಿ ಜನಿಸಿದ ಜಯಂತಿಗೆ ಇಬ್ಬರು ಕಿರಿಯ ಸಹೋದರರಿದ್ದಾರೆ. ಇವರ ತಂದೆ- ತಾಯಿಗಳು ವಿಚ್ಚೇದನ ಪಡೆದ ಕಾರಣ ಜಯಂತಿ ತಮ್ಮ ತಾಯಿಯ ಜೊತೆ ಮದ್ರಾಸ್ನಲ್ಲಿ ಬೆಳೆದರು.
1968ರಲ್ಲಿ ತೆರೆಕಂಡ ಕನ್ನಡ ನಿರ್ದೇಶಕ ವೈ.ಆರ್. ಪುಟ್ಟಸ್ವಾಮಿಯವರ 'ಜೇನುಗೂಡು' ಚಿತ್ರದ ಮೂಲಕ ಸಿನಿ ಕ್ಷೇತ್ರಕ್ಕೆ ಪ್ರವೇಶಿಸಿದ್ದ ನಟಿ ಜಯಂತಿ ಕನ್ನಡದ ಒಟ್ಟು 190 ಸಿನಿಮಾ ಸೇರಿ 500ಕ್ಕೂ ಅಧಿಕ ಸಿನಿಮಾಗಳಲ್ಲಿ ನಟಿಸಿ ಅಭಿನಯ ಶಾರದೆ ಎನಿಸಿಕೊಂಡಿದ್ದಾರೆ. ಇವರು ಡಾ.ರಾಜ್ ಕುಮಾರ್ ಅವರ ಜೊತೆ 45 ಚಿತ್ರಗಳಲ್ಲಿ ನಟಿಸಿದ್ದಾರೆ. ಅಲ್ಲದೇ ಕನ್ನಡ, ತೆಲುಗು, ತಮಿಳು, ಮಲಯಾಳಂ, ಹಿಂದಿ, ಮರಾಠಿ ಹೀಗೆ ಆರು ಭಾಷೆ ಸಿನಿಮಾಗಳಲ್ಲಿ ನಟಿಸಿದ್ದ ಖ್ಯಾತಿ ಹೊಂದಿದ್ದರು.
ಎಡಕಲ್ಲು ಗುಡ್ಡದ ಮೇಲೆ, ಮನಸ್ಸಿನಂತೆ ಮಾಂಗಲ್ಯ, ಧರ್ಮ ದಾರಿ ತಪ್ಪಿತ್ತು, ಮಸಣದ ಹೂವು, ಆನಂದ್, ಟುವಿ ಟುವಿ ಟುವಿ ಚಿತ್ರಗಳಿಗೆ ಜಯಂತಿ ರಾಜ್ಯ ಪ್ರಶಸ್ತಿ ಪಡೆದಿದ್ದ ನಟಿ ಜಯಂತಿ, 'ಮಿಸ್ ಲೀಲಾವತಿ' ಚಿತ್ರದ ಅಭಿನಯಕ್ಕಾಗಿ ರಾಷ್ಟ್ರ ಪ್ರಶಸ್ತಿಯನ್ನೂ ಮುಡಿಗೇರಿಸಿಕೊಂಡಿದ್ದರು.
ಜಯಂತಿ ನಿಧನದಿಂದ ಕನ್ನಡ ಚಿತ್ರರಂಗದ ಮತ್ತೊಂದು ಕೊಂಡಿ ಕಳಚಿದೆ. ಅಭಿನಯ ಶಾರದೆ ಕಳೆದುಕೊಂಡ ಸ್ಯಾಂಡಲ್ವುಡ್ನಲ್ಲಿ ಶೋಕದ ವಾತಾವರಣ ನಿರ್ಮಾಣವಾಗಿದೆ.
ವಿರಹದ ನೋವನ್ನು ಪ್ರತಿಮೆ ಮಾಡಿ ಅಭಿನಯಿಸಿದ ಶಾರದೆಗೆ, ನಾವು ನೋಡದ ಚಿತ್ರದುರ್ಗದ ಕಲ್ಲಿನ ಕೋಟೆಯನ್ನು ವೈರಿಗಳಿಂದ ರಕ್ಷಿಸಿದ ಆ ಓಬವ್ವನಿಗೆ ಮುಖವಿತ್ತ ಕಲಾವಿದೆಗೆ, ದೋಣಿ ಸಾಗಲಿ ಎಂದು ಹಾಡುತ್ತಾ ದೋಣಿಯ ಮೂಲೆಯಲ್ಲಿ ಹರಿಯುವ ನೀರಿಗೆ ಕೈ ಚಲ್ಲಿ ಕೂತ ಸುಂದರ ನಟಿಗೆ ಸದ್ಗತಿ.
ನಿಧನಕ್ಕೆ ಯಡಿಯೂರಪ್ಪ, ಸಿದ್ದರಾಮಯ್ಯ, ಕುಮಾರಸ್ವಾಮಿ ಸಂತಾಪ;
ಪ್ರಖ್ಯಾತ ಹಿರಿಯ ಕಲಾವಿದೆ, ಅಭಿನಯ ಶಾರದೆ ಜಯಂತಿ ಅವರ ನಿಧನದ ಸುದ್ದಿ ಅತೀವ ದುಃಖ ತಂದಿದೆ. ಚಿತ್ರರಂಗಕ್ಕೆ ಅವರ ಕೊಡುಗೆ ಅಪಾರವಾಗಿದ್ದು, ಕನ್ನಡ ಕಲಾಲೋಕಕ್ಕೆ ತುಂಬಲಾರದ ನಷ್ಟವುಂಟಾಗಿದೆ. ದೇವರು ಅವರ ಆತ್ಮಕ್ಕೆ ಸದ್ಗತಿ ಕರುಣಿಸಲಿ, ಅವರ ಕುಟುಂಬ, ಅಪಾರ ಅಭಿಮಾನಿ ಬಳಗಕ್ಕೆ ನೋವನ್ನು ಭರಿಸುವ ಶಕ್ತಿಯನ್ನು ನೀಡಲಿ ಎಂದು ಪ್ರಾರ್ಥಿಸುತ್ತೇನೆ. pic.twitter.com/JuGWeyX4Ce
— B.S. Yediyurappa (@BSYBJP) July 26, 2021
ಟ್ವಿಟ್ಟರ್ ಮೂಲಕ ಸಂತಾಪ ಸೂಚಿಸಿರುವ ಸಿಎಂ, ''ಪ್ರಖ್ಯಾತ ಹಿರಿಯ ಕಲಾವಿದೆ, ಅಭಿನಯ ಶಾರದೆ ಜಯಂತಿ ಅವರ ನಿಧನದ ಸುದ್ದಿ ಅತೀವ ದುಃಖ ತಂದಿದೆ. ಚಿತ್ರರಂಗಕ್ಕೆ ಅವರ ಕೊಡುಗೆ ಅಪಾರವಾಗಿದ್ದು, ಕನ್ನಡ ಕಲಾಲೋಕಕ್ಕೆ ತುಂಬಲಾರದ ನಷ್ಟವುಂಟಾಗಿದೆ. ದೇವರು ಅವರ ಆತ್ಮಕ್ಕೆ ಸದ್ಗತಿ ಕರುಣಿಸಲಿ, ಅವರ ಕುಟುಂಬ, ಅಪಾರ ಅಭಿಮಾನಿ ಬಳಗಕ್ಕೆ ನೋವನ್ನು ಭರಿಸುವ ಶಕ್ತಿಯನ್ನು ನೀಡಲಿ ಎಂದು ಪ್ರಾರ್ಥಿಸುತ್ತೇನೆ'' ಎಂದಿದ್ದಾರೆ. ಯಡಿಯೂರಪ್ಪ ಮಾತ್ರವಲ್ಲ, ಸಿದ್ದರಾಮಯ್ಯ, ಎಚ್ಡಿ ಕುಮಾರಸ್ವಾಮಿ ಸೇರಿದಂತೆ ಹಲವು ರಾಜಕೀಯ ಗಣ್ಯರು ಸಂತಾಪ ವ್ಯಕ್ತಪಡಿಸಿದ್ದಾರೆ.
''ಅಭಿಜಾತ ಪ್ರತಿಭೆಯ ಮೂಲಕ ದಶಕಗಳ ಕಾಲ ಚಿತ್ರಪ್ರೇಮಿಗಳ ಮನಗೆದ್ದಿದ್ದ ಮತ್ತು ನನ್ನ ಇಷ್ಟದ ನಟಿ ಅಭಿನಯ ಶಾರದೆ ಜಯಂತಿಯವರ ನಿಧನದಿಂದ ಅತೀವ ದುಃಖ ವಾಗಿದೆ. ಜಯಂತಿ ಅವರು ತಮ್ಮ ಚಿತ್ರಗಳ ಮೂಲಕ ಸದಾಕಾಲ ನಮ್ಮೆಲ್ಲರ ಮನದಲ್ಲಿ ಅಜರಾಮಾರರಾಗಿ ಇರುತ್ತಾರೆ. ಅವರ ಕುಟುಂಬಕ್ಕೆ ನನ್ನ ಸಾಂತ್ವನಗಳು.'' ಎಂದು ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಜಯಂತಿ ನಿಧನಕ್ಕೆ ಕಂಬನಿ ಮಿಡಿಸಿದ್ದಾರೆ.
Veteran Kannada actress Jayanthi, popularly known as 'Abhinaya Sharadhe' passed away at 76. She was keeping unwell for the past few days. Jayanthi is known for her contributions to southern film industry films from the 1960s, 1970s and early 1980s. She has appeared in over 500 films, including films in the Kannada, Telugu, Tamil, Malayalam, Hindi and Marathi languages.
16-03-25 10:32 pm
HK News Desk
Reservation for Muslims, Siddaramaiah, BJP: ಸ...
16-03-25 12:11 pm
BJP Leader Basavaraj Dadesugur: ಬಿಜೆಪಿ ಮಾಜಿ ಶ...
15-03-25 09:18 pm
Mangalore, Tamil actor Prabhu Deva, Kukke Sub...
15-03-25 03:55 pm
Elephant attack, Belur, Hassan: ಕಾಡಾನೆ ದಾಳಿ ;...
15-03-25 12:33 pm
13-03-25 03:49 pm
HK News Desk
Shiradi Ghat, Mangalore Bengalore, Mp Brijesh...
13-03-25 01:30 pm
ಪಾಕಿಸ್ತಾನದಲ್ಲಿ 500ಕ್ಕು ಹೆಚ್ಚು ಪ್ರಯಾಣಿಕರಿದ್ದ ರ...
12-03-25 11:41 am
ಅಮೆರಿಕದಲ್ಲಿ 20 ವರ್ಷದ ಭಾರತೀಯ ಮೂಲದ ಮೆಡಿಕಲ್ ವಿದ್...
10-03-25 10:17 pm
ಎಸ್ಸೆಸ್ಸೆಲ್ಸಿ ವಿದ್ಯಾರ್ಥಿನಿ ಜೊತೆಗೆ ಆಟೋ ಚಾಲಕನ ಸ...
10-03-25 11:45 am
16-03-25 10:55 pm
Mangalore Correspondent
Tejasvi Surya, Marriage, Udupi: ಉಡುಪಿ ಕೃಷ್ಣ ಮ...
16-03-25 10:10 pm
Mangalore Jail, Suicide, POSCO: ಮೂಡುಬಿದ್ರೆಯಲ್...
16-03-25 02:05 pm
ಸಂವಿಧಾನ ಉಲ್ಲಂಘಿಸಿ ವಕ್ಫ್ ಕಾಯ್ದೆ ಸರಿಯಲ್ಲ, ಪ್ರಾಣ...
15-03-25 10:00 pm
Mangalore court, Moral Police, Acquit: ಹಿಂದು...
15-03-25 08:32 pm
16-03-25 10:39 pm
Bangalore Correspondent
Mangalore Police, CCB, Drugs, CM: ರಾಜ್ಯದಲ್ಲೇ...
16-03-25 07:27 pm
Mangalore CCB police, Drugs, crime: ರಾಜ್ಯದಲ್ಲ...
16-03-25 10:43 am
Crypto Fraud Arrested In Kerala: ಗ್ಯಾರಂಟೆಕ್ಸ್...
14-03-25 05:02 pm
Ccb Police, Firearms, Mangalore crime: ವಾಮಂಜೂ...
13-03-25 06:44 pm