ಬ್ರೇಕಿಂಗ್ ನ್ಯೂಸ್
08-09-21 03:35 pm Filmbeat Kannada ಸಿನಿಮಾ
ಸ್ಯಾಂಡಲ್ವುಡ್ನ ಖ್ಯಾತ ಕಾಮಿಡಿ ಸ್ಟಾರ್ ದಿವಂಗತ ಬುಲೆಟ್ ಪ್ರಕಾಶ್ ಅವರ ಪುತ್ರ ರಕ್ಷಕ್ ಮೇಲೆ ಮಂಗಳಮುಖಿಯರು ದಾಳಿ ನಡೆಸಿದ ಘಟನೆ ಬೆಂಗಳೂರಿನ ಹೆಬ್ಬಾಳ ಬಳಿ ನಡೆದಿದೆ. ನಿನ್ನೆ ರಾತ್ರಿ (ಸೆಪ್ಟಂಬರ್ 7) ಈ ಘಟನೆ ನಡೆದಿದ್ದು, ಕೆಲವು ಮಂಗಳಮುಖಿಯರು ದಾಳಿ ನಡೆಸಿರುವ ಆರೋಪ ಕೇಳಬಂದಿದೆ. ರಾತ್ರಿ 9 ಗಂಟೆಗೆ ಜಿಮ್ ಮುಗಿಸಿ ರಕ್ಷಕ್ ಮನೆಗೆ ವಾಪಸಾಗುತ್ತಿದ್ದಾಗ, ಅವರ ಬ್ಯಾಗ್ ಅನ್ನು ಮಂಗಳಮುಖಿಯರು ಎಳೆದಿದ್ದಾರೆ. ಆಗ ಬೈಕ್ನಿಂದ ಕೆಳಗೆ ಬಿದ್ದ ರಕ್ಷಕ್ಗೆ ಸಣ್ಣಪುಟ್ಟ ಗಾಯಗಳಾಗಿವೆ ಎನ್ನುವ ಮಾಹಿತಿ ತಿಳಿದುಬಂದಿದೆ.
ತಕ್ಷಣ ಬೈಕ್ ಸ್ಥಳದಲ್ಲಿಯೇ ಬಿಟ್ಟು ರಕ್ಷಕ್ ಓಡಿಹೋಗಿದ್ದಾರೆ. ಬಳಿಕ ಪೊಲೀಸರ ಸಹಾಯದಿಂದ ಬೈಕ್ ವಾಪಸ್ ಪಡೆದಿದ್ದಾರೆ ಎಂದು ತಿಳಿದುಬಂದಿದೆ. ಈ ಕುರಿತು ಹೆಬ್ಬಾಳ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಪ್ರಕರಣ ದಾಖಲಾಗಿದೆ. ಈ ವೇಳೆ ಹೆಬ್ಬಾಳ ಫ್ಲೈ ಓವರ್ ಬಳಿ ಈ ಘಟನೆ ನಡೆದಿದೆ ಎನ್ನಲಾಗಿದೆ. ಬೈಕ್ನಿಂದ ಕೆಳಗೆ ಬಿದ್ದ ರಕ್ಷಕ್ ಕಾಲಿಗೆ ತರಚಿದ ಗಾಯಗಳಿದ್ದು, ಗಾಡಿಯೂ ಡ್ಯಾಮೇಜ್ ಆಗಿದೆ ಎಂದು ದೂರಿನಲ್ಲಿ ತಿಳಿಸಲಾಗಿದೆ.
ಮಂಗಳ ಮುಖಿಯರ ದಾಳಿಯಿಂದ ತಪ್ಪಿಸಿಕೊಳ್ಳಲು ಫ್ಲೈ ಓವರ್ ಮೇಲೆ ಗಾಡಿ ಬಿಟ್ಟು ರಕ್ಷಕ್ ಓಡಿಹೋಗಿದ್ದಾರೆ. ಬೆಂಗಳೂರಿನಲ್ಲಿ ಮಂಗಳಮುಖಿಯರ ಸಂಖ್ಯೆ ಹೆಚ್ಚಾಗುತ್ತಿದ್ದು, ರಾತ್ರಿ ಪ್ರಯಾಣಿಕರು ಭಯಪಡುವಂತಾಗಿದೆ. ಇನ್ನು ಬುಲೆಟ್ ಪ್ರಕಾಶ್ ಪುತ್ರ ರಕ್ಷಕ್ ಚಿತ್ರರಂಗಕ್ಕೆ ಎಂಟ್ರಿ ಕೊಡುವ ತಯಾರಿಯಲ್ಲಿದ್ದಾರೆ. ತಂದೆಯ ನಿಧನದ ಬಳಿಕ ರಕ್ಷಕ್ ಚಿತ್ರರಂಗಕ್ಕೆ ಪದಾರ್ಪಣೆ ಮಾಡುತ್ತಿದ್ದಾರೆ.
ಈಗಾಗಲೇ ರಕ್ಷಕ್ ನಟನೆಯ ಸಿನಿಮಾದ ಚಿತ್ರೀಕರಣ ಪ್ರಾರಂಭವಾಗಿದ್ದು, ಬಹುತೇಕ ಚಿತ್ರೀಕರಣ ಸಹ ಮುಗಿಸಿದ್ದಾರೆ. ಗುರುಶಿಷ್ಯರು ಎನ್ನುವ ಟೈಟಲ್ನಲ್ಲಿ ನಟ ಶರಣ್ ಮತ್ತು ತಂಡದವರು ಹೊಸ ಸಿನಿಮಾ ಮಾಡುತ್ತಿರುವ ವಿಚಾರ ಎಲ್ಲರಿಗೂ ಗೊತ್ತಿದೆ. ಜಡೇಶ್ ಗುರುಶಿಷ್ಯರು ಚಿತ್ರಕ್ಕೆ ಆಕ್ಷನ್ ಕಟ್ ಹೇಳುತ್ತಿದ್ದಾರೆ. ಈ ಸಿನಿಮಾದಲ್ಲಿ ಶರಣ್ ಶಿಷ್ಯನ ಪಾತ್ರದಲ್ಲಿ ಬುಲೆಟ್ ಪ್ರಕಾಶ್ ಪುತ್ರ ರಕ್ಷಕ್ ಕಾಣಿಸಿಕೊಳ್ಳುತ್ತಿದ್ದಾರೆ. ಇನ್ನು ವಿಶೇಷ ಎಂದರೆ ನೆನಪಿರಲಿ ಪ್ರೇಮ್ ಪುತ್ರ ಏಕಾಂತ್ ಕೂಡ ಗುರುಶಿಷ್ಯರು ಸಿನಿಮಾಗಾಗಿ ಬಣ್ಣ ಹಚ್ಚಿದ್ದಾರೆ. ಇದಲ್ಲದೆ ಬಹಳಷ್ಟು ಕಲಾವಿದರು ಮಕ್ಕಳು ಗುರುಶಿಷ್ಯರು ಸಿನಿಮಾದಲ್ಲಿ ನಟಿಸಿದ್ದಾರೆ ಅನ್ನೊ ಮಾಹಿತಿ ಇದೆ.
20-08-25 12:33 pm
Bangalore Correspondent
'Shakti' Scheme, Golden Book of World Records...
20-08-25 12:11 pm
ರಾಜ್ಯದಲ್ಲಿ ಸಹಕಾರ ವ್ಯವಸ್ಥೆಗೆ ಬಿಗ್ ಸರ್ಜರಿ ; ಸಹಕ...
19-08-25 11:13 am
Dharmasthala Case on Social Media: ಧರ್ಮಸ್ಥಳ ವ...
19-08-25 10:39 am
ಧರ್ಮಸ್ಥಳ ಪ್ರಕರಣ ; ಅಧಿವೇಶನದಲ್ಲಿ ಗೃಹ ಸಚಿವರ ಸ್ಪಷ...
18-08-25 10:47 pm
20-08-25 11:01 am
HK News Desk
ಭಾರತ ಟಿ20 ತಂಡಕ್ಕೆ ಮರಳಿದ ಶುಭಮನ್ ಗಿಲ್ ; ಏಷ್ಯಾ...
19-08-25 06:59 pm
ಇಂಡಿಯಾ ಬಣದಿಂದ ಉಪ ರಾಷ್ಟ್ರಪತಿ ಅಭ್ಯರ್ಥಿ ಬಿ.ಸುದರ್...
19-08-25 06:41 pm
ಎನ್ ಡಿಎ ಒಕ್ಕೂಟಕ್ಕೆ ಇಂಡಿಯಾ ಕೂಟದ ಠಕ್ಕರ್ ; ಉಪ ರಾ...
18-08-25 09:19 pm
ಮುಖ್ಯ ಚುನಾವಣಾ ಆಯುಕ್ತರ ವಿರುದ್ಧ ಇಂಡಿಯಾ ಒಕ್ಕೂಟದಿ...
18-08-25 01:28 pm
19-08-25 11:07 pm
Mangalore Correspondent
Mangalore Thokottu Sports Winner: ಕಂಪನಿ ಬ್ರಾಂ...
19-08-25 08:54 pm
Ullal Municipal Commissioner: ಉಳ್ಳಾಲ ನಗರಸಭೆಯಲ...
19-08-25 08:28 pm
Puttur, Baby, Sreekrishna J. Rao: ಬಿಜೆಪಿ ಮುಖಂ...
19-08-25 07:04 pm
Activists Mahesh Shetty Thimarodi, Harish Poo...
18-08-25 06:14 pm
19-08-25 10:52 pm
Mangalore Correspondent
ಕಸ್ಟಮ್ಸ್ ಅಧಿಕಾರಿಗಳ ಸೋಗಿನಲ್ಲಿ ಚಿನ್ನದ ವ್ಯಾಪಾರಿಯ...
19-08-25 10:30 pm
ಡಾಕ್ಟರ್ ಮನೆ ದೋಚಿದ್ದ ಮನೆ ಕೆಲಸದವಳು ; ಚಿನ್ನ, ವಜ್...
19-08-25 09:27 pm
Gold Chain robbery, Puttur: ಮೈಸೂರಿನಲ್ಲಿ ಕದ್ದ...
19-08-25 12:54 pm
Ullal Police Raid, Sports Winners, Mangalore:...
19-08-25 12:41 pm