ಬ್ರೇಕಿಂಗ್ ನ್ಯೂಸ್
09-09-21 10:48 am Filmbeat: Manjunatha C ಸಿನಿಮಾ
ಬಾಲಿವುಡ್ ಸಿನಿಮಾದಲ್ಲೂ ನಟಿಸಿರುವ ಪಾಕಿಸ್ತಾನದ ನಟಿ ಸಬಾ ಖಮರ್ ಹಾಗೂ ಗಾಯಕ ಬಿಲಾಲ್ ಸೈಯದ್ ವಿರುದ್ಧ ಪಾಕಿಸ್ತಾನದ ಸ್ಥಳೀಯ ನ್ಯಾಯಾಲಯವೊಂದು ಬಂಧನದ ವಾರೆಂಟ್ ಹೊರಡಿಸಿದೆ.
ಬಾಲಿವುಡ್ನ 'ಹಿಂದಿ ಮೀಡಿಯಮ್' ಸಿನಿಮಾದಲ್ಲಿ ನಟಿಸಿರುವ ಸಬಾ ಖಮರ್ ಪಾಕಿಸ್ತಾನದ ಐತಿಹಾಸಿಕ ಮಸೀದಿಯೊಂದರ ಮುಂದೆ ಡ್ಯಾನ್ಸ್ ಮಾಡಿ ಅದರ ವಿಡಿಯೋ ಚಿತ್ರೀಕರಣ ಮಾಡಿದ್ದರು. ಹಾಗಾಗಿ ಅವರ ವಿರುದ್ದ ದೂರು ದಾಖಲಾಗಿತ್ತು.
ಲಾಹೋರ್ನ ಐತಿಹಾಸಿಕ ಮಸೀದಿಯ ಡ್ಯಾನ್ಸ್ ಮಾಡುವ ಮೂಲಕ ಮಸೀದಿಯನ್ನು ಅಪವಿತ್ರಗೊಳಿಸಿದ್ದಾರೆ ಎಂದು ಆರೋಪಿಸಿ ಸಬಾ ಖಮರ್ ಹಾಗೂ ಬಿಬಾಲ್ ವಿರುದ್ಧ ದೂರು ದಾಖಲಿಸಲಾಗಿತ್ತು. ಪಾಕಿಸ್ತಾನ ಪಿನಲ್ ಕೋಡ್ 256 ರ ಅಡಿ ಇಬ್ಬರು ಸೆಲೆಬ್ರಿಟಿಗಳ ವಿರುದ್ಧ ಪ್ರಕರಣ ದಾಖಲಿಸಲಾಗಿತ್ತು.

ನ್ಯಾಯಾಲಯದಲ್ಲಿ ಹಲವು ದಿನದಿಂದ ಈ ಕುರಿತು ವಿಚಾರಣೆ ಚಾಲ್ತಿಯಲ್ಲಿತ್ತು ಆದರೆ ಹಲವು ಸಮನ್ಸ್ ನೀಡಿದ್ದರೂ ಸದಾ ಖಮರ್ ಹಾಗೂ ಬಿಲಾಲ್ ನ್ಯಾಯಾಲಯಕ್ಕೆ ಹಾಜರಾಗಿರಲಿಲ್ಲವಾದ್ದರಿಂದ ಇಬ್ಬರ ವಿರುದ್ಧ ಬಂಧನದ ವಾರೆಂಟ್ ಹೊರಡಿಸಲಾಗಿದೆ. ಡ್ಯಾನ್ಸ್ ವಿಡಿಯೋಕ್ಕೆ ಅನುಮತಿ ನೀಡಿದ ಇಬ್ಬರು ಅಧಿಕಾರಿಗಳನ್ನು ಸಹ ಅಮಾನತು ಮಾಡಲಾಗಿದೆ.
ಸಬಾ ಖಮರ್ರ ಡ್ಯಾನ್ಸ್ ವಿಡಿಯೋ ಸಾಕಷ್ಟು ಆಕ್ರೋಶಕ್ಕೆ ಕಾರಣವಾಗಿದ್ದು, ಸಬಾ ಖಮರ್ಗೆ ಸಾಮಾಜಿಕ ಜಾಲತಾಣದಲ್ಲಿ ತೀವ್ರ ನಿಂದನೆ, ಕೊಲೆ ಬೆದರಿಕೆಗಳು ಬಂದಿವೆ. ಆಕ್ರೋಶ ವ್ಯಕ್ತವಾಗುತ್ತಿದ್ದಂತೆ ಇಬ್ಬರೂ ಸೆಲೆಬ್ರಿಟಿಗಳು ಸಾಮಾಜಿಕ ಜಾಲತಾಣ ಮೂಲಕ ಕ್ಷಮೆ ಕೇಳಿದ್ದಾರೆ. ''ಮ್ಯೂಸಿಕ್ ವಿಡಿಯೋನಲ್ಲಿ ಮದುವೆಯ ದೃಶ್ಯ ಇತ್ತು. ಅದನ್ನು ಮಸೀದಿಯ ಮುಂದೆ ಚಿತ್ರೀಕರಣ ಮಾಡಿದ್ದೇವೆ. ಅದಕ್ಕೆ ಯಾವುದೇ ಹಿನ್ನೆಲೆ ಸಂಗೀತವನ್ನು ಸಹ ನಾವು ನೀಡಿಲ್ಲ. ನಮ್ಮ ವಿಡಿಯೋದಿಂದ ಯಾರದ್ದಾದರೂ ಮನಸ್ಸಿಗೆ ನೋವಾಗಿದ್ದರೆ ಕ್ಷಮೆ ಇರಲಿ'' ಎಂದಿದ್ದಾರೆ.
ಬಾಲಿವುಡ್ನ 'ಹಿಂದಿ ಮೀಡಿಯಮ್' ಸಿನಿಮಾದಲ್ಲಿ ಸಬಾ ಖಮರ್ ನಟಿಸಿದ್ದರು. ಈ ಸಿನಿಮಾದಲ್ಲಿ ಇರ್ಫಾನ್ ಖಾನ್ ನಾಯಕನಾಗಿ ನಟಿಸಿದ್ದರು. ಪಾಕಿಸ್ತಾನದ ಸಾಮಾಜಿಕ ಜಾಲತಾಣ ಸೆಲೆಬ್ರಿಟಿ ಖಂದಿಲ್ ಬಲೂಚ್ ಜೀವನ ಆಧರಿತ ಸಿನಿಮಾದಲ್ಲಿಯೂ ಸಬಾ ನಟಿಸಿದ್ದರು. ಸಾಮಾಜಿಕ ಜಾಲತಾಣ ಸ್ಟಾರ್ ಆಗಿದ್ದ ಖಂದಿಲ್ ಬಲೂಚ್ ಕುಟುಂಬ ಗೌರವನ್ನು ಮಣ್ಣುಪಾಲು ಮಾಡುತ್ತಿದ್ದಾಳೆ ಎಂದು ಆರೋಪಿಸಿ ಆಕೆಯ ಅಣ್ಣನೇ ಆಕೆಯನ್ನು ಕೊಲೆ ಮಾಡಿದ್ದ. ಈ ಸಿನಿಮಾಕ್ಕೆ ಬಹಳ ಒಳ್ಳೆಯ ಪ್ರತಿಕ್ರಿಯೆ ಸಿಕ್ಕಿತ್ತು. ಸಬಾ ಖಮರ್ರ ಡ್ಯಾನ್ಸ್ ವಿಡಿಯೋ ಬಿಡುಗಡೆ ಆದ ಬಳಿಕ ಜಮಾತ್-ಇ-ಇಸ್ಲಾಂ ಸೇರಿದಂತೆ ಹಲವು ಮುಸ್ಲಿಂ ಸಂಘಟನೆಗಳು ನಟಿಯ ವಿರುದ್ಧ ಪ್ರತಿಭಟನೆ ಮಾಡಿದ್ದು, ಆಕೆಗೆ ಕಠಿಣ ಶಿಕ್ಷೆ ನೀಡುವಂತೆ ಒತ್ತಾಯ ಮಾಡಿವೆ. ಸಬಾ ಖಮರ್, ಬ್ಲಾಗರ್ ಅಜೀಮ್ ಖಾನ್ ಜೊತೆ ಮದುವೆ ನಿಶ್ಚಯವಾಗಿತ್ತು, ಆದರೆ ಅಂತಿಮ ಸಮಯದಲ್ಲಿ ಮದುವೆಯನ್ನು ಮುರಿದುಕೊಂಡ ಸಬಾ, ಅಜೀಮ್ ಖಾನ್ ವಿರುದ್ಧ ಲೈಂಗಿಕ ದೌರ್ಜನ್ಯದ ಆರೋಪ ಹೊರಿಸಿದ್ದರು.
15-09-26 09:13 pm
HK News Staffer
Imran Pasha, Pratap Simha: ನಿನ್ನಂತಹ ಒಂದು ಲಕ್...
15-09-26 04:46 pm
ಬಿಜೆಪಿಯವರಿಗೆ ಕೊಬ್ಬು ಹೆಚ್ಚಾಗಿದೆ ಅದಕ್ಕೆ ಬಳ್ಳಾರಿ...
12-09-26 09:40 pm
ಯತ್ನಾಳ್ ಆರೋಪಿಸಿದರೂ ವಿಜಯೇಂದ್ರ ಮನೆ ಮೇಲೆ ಇಡಿ, ಐಟ...
12-09-26 09:38 pm
ಮಸೀದಿ ಮುಂದೆ ಗಣೇಶ ಮೆರವಣಿಗೆ ಮಾಡಿದ್ರೆ ಗ್ರಹಚಾರ ಬಿ...
12-09-26 09:36 pm
13-09-26 09:00 pm
HK News
80s ಫೋಟೋ ಟ್ರೆಂಡ್ಗೆ ಮಾರುಹೋಗಿದ್ದೀರಾ? ಹುಷಾರ್ ;...
12-09-26 01:10 pm
ಕಾಶ್ಮೀರಿ ಪಂಡಿತರಿಗೆ ಮತ್ತೆ ಬೆದರಿಕೆ ; ಉದ್ಯೋಗ ಬಿಟ...
10-09-26 01:23 pm
ನೇಪಾಳ ಪ್ರವಾಹ ; ಹತ್ತು ದಿನಗಳ ಬಳಿಕ ಜಲವಿದ್ಯುತ್ ಸು...
05-09-26 11:55 am
ಮುಂದಿನ ಒಂದು ವರ್ಷದಲ್ಲಿ ಒಂದು ಸಾವಿರ ವಿದ್ಯಾಭಾರತಿ...
04-09-26 08:14 pm
15-09-26 09:18 pm
HK News Staffer
Satish Kumpala, Manglore: ಕಾಟಾಚಾರಕ್ಕೆ ಸಂಪುಟ ಸ...
15-09-26 07:46 pm
U T Khader, KDP Meeting, Bharath Sheety, Hari...
15-09-26 06:52 pm
Aravind Bolar Controversy, Mangalore: “ಎಂಕ್ ಮ...
15-09-26 05:29 pm
U T Khader, KDP Meeting, Sudheer Reddy Ips: :...
15-09-26 05:27 pm
15-09-26 09:19 pm
HK News Staffer
Mangalore Blackmail: ಫೋಟೋ ಮಾರ್ಫ್ ಮಾಡಿ ಬ್ಲ್ಯಾಕ...
15-09-26 12:55 pm
Manyda Accident: ಗಣೇಶ ಹಬ್ಬ ಮುಗಿಸಿ ಬೆಂಗಳೂರಿಗೆ...
15-09-26 12:48 pm
ಗಣೇಶ ಹಬ್ಬದ ಬೆನ್ನಲ್ಲೇ ಕರ್ನಾಟಕದಲ್ಲಿ ಸರಣಿ ದುರಂತ:...
15-09-26 12:41 pm
ಗಣೇಶೋತ್ಸವದ ಸಂಭ್ರಮದ ನಡುವೆ ಭೀಕರ ದುರಂತ: ಅಗ್ನಿ ಅವ...
15-09-26 10:31 am