ಬ್ರೇಕಿಂಗ್ ನ್ಯೂಸ್
09-09-21 02:10 pm Filmbeat: Bharath Kumar K ಸಿನಿಮಾ
ಬಾಲಿವುಡ್ ಖ್ಯಾತ ನಟ ರಜತ್ ಬೇಡಿ ಕಾರು ಅಪಘಾತ ಪ್ರಕರಣಕ್ಕೆ ಸಂಬಂಧಿಸಿದಂತೆ, ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದ ವ್ಯಕ್ತಿ ಸಾವನ್ನಪ್ಪಿದ್ದಾನೆ ಎಂದು ಬುಧವಾರ ಪೊಲೀಸರು ಮಾಹಿತಿ ನೀಡಿದ್ದಾರೆ.
ಮುಂಬೈನ ಅಂಧೇರಿ ಉಪನಗರದಲ್ಲಿ ಸೋಮವಾರ ರಜತ್ ಬೇಡಿ ಕಾರು ವ್ಯಕ್ತಿಯೊಬ್ಬನಿಗೆ ಡಿಕ್ಕಿ ಹೊಡೆದಿತ್ತು. ಅದೃಷ್ಟವಶಾತ್ ಗಾಯಗೊಂಡ ವ್ಯಕ್ತಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದರು. ಆದರೆ, ಚಿಕಿತ್ಸೆಗೆ ಸ್ಪಂದಿಸದೆ ಬುಧವಾರ ಮೃತಪಟ್ಟಿದ್ದಾನೆ ಎಂದು ತಿಳಿದು ಬಂದಿದೆ.
ಈ ಘಟನೆ ಹಿನ್ನೆಲೆ ನಟನ ವಿರುದ್ಧ ಎಫ್ ಐ ಆರ್ ದಾಖಲಾಗಿತ್ತು. ಐಪಿಸಿ ಸೆಕ್ಷನ್ 279 (ವೇಗದ ಚಾಲನೆ) ಮತ್ತು 338 (ಜೀವಕ್ಕೆ ಅಪಾಯ ಉಂಟುಮಾಡುವ ಅಥವಾ ಇತರರ ವೈಯಕ್ತಿಕ ಸುರಕ್ಷತೆಗೆ ಘಾಸಿ ಉಂಟುಮಾಡುವ) ಅಡಿಯಲ್ಲಿ ಪ್ರಕರಣ ದಾಖಲಿಸಿದ್ದರು. ಇದೀಗ, ಅಪಘಾತದಲ್ಲಿ ಗಾಯಗೊಂಡಿದ್ದ ವ್ಯಕ್ತಿ ಮೃತಪಟ್ಟ ಹಿನ್ನೆಲೆ ಎಫ್ಐಆರ್ನಲ್ಲಿ ಸೆಕ್ಷನ್ 304A (ನಿರ್ಲಕ್ಷ್ಯದಿಂದ ಸಾವು) ಸೇರಿಸಲಾಗಿದೆ ಎಂದು ಅಧಿಕಾರಿಯೊಬ್ಬರು ಮಾಹಿತಿ ನೀಡಿದ್ದಾರೆ.
''ಅಪಘಾತಕ್ಕೀಡಾದ ಕೂಲಿ ಕಾರ್ಮಿಕ ರಾಜೇಶ್ ಬೌದ್ ಕೂಪರ್ ಆಸ್ಪತ್ರೆಯಲ್ಲಿ ಕಳೆದ ಎರಡು ದಿನಗಳಿಂದ ಚಿಕಿತ್ಸೆ ಪಡೆಯುತ್ತಿದ್ದರು. ಇಂದು ನಿಧನರಾಗಿದ್ದಾರೆ" ಎಂದು ಅಧಿಕಾರಿ ಮಾಧ್ಯಮಕ್ಕೆ ಸ್ಪಷ್ಟಪಡಿಸಿದ್ದಾರೆ. ಈ ಕೇಸ್ನಲ್ಲಿ ನಟ ರಜತ್ ಬೇಡಿ ಇನ್ನು ಬಂಧನವಾಗಿಲ್ಲ ಎನ್ನುವುದು ಟೀಕೆಗೆ ಗುರಿಯಾಗಿದೆ. ಈಗ ಸೆಕ್ಷನ್ 304A ಸೇರಿಸಿರುವುದರಿಂದ ನಟನಿಗೆ ಸಹಜವಾಗಿ ಕಂಟಕ ಎದುರಾಗಿದೆ.
ಘಟನೆಯ ವಿವರ
ಸೋಮವಾರ (ಸೆಪ್ಟೆಂಬರ್ 6) ಸಂಜೆ ನಟ ಮನೆಗೆ ಹೋಗುತ್ತಿದ್ದಾಗ ಸಮಯದಲ್ಲಿ ಅಂಧೇರಿಯ ದೇವಾಲಯದ ಬಳಿ ಈ ಘಟನೆ ಸಂಭವಿಸಿದೆ ಎಂದು ಪೊಲೀಸರು ತಿಳಿಸಿದ್ದಾರೆ. ಕುಡಿದ ಅಮಲಿನಲ್ಲಿದ್ದ ಪಾದಚಾರಿ ಇದ್ದಕ್ಕಿದ್ದಂತೆ ರಸ್ತೆಯ ಮಧ್ಯಕ್ಕೆ ಬಂದ ಹಿನ್ನೆಲೆ ಅಪಘಾತ ಆಗಿದೆ. ಪಾದಚಾರಿಯನ್ನು ಕಂಡ ಕೂಡಲೇ ನಟ ಬ್ರೇಕ್ ಹಾಕುವ ಪ್ರಯತ್ನ ಮಾಡಿದರಾದರೂ ವ್ಯಕ್ತಿಗೆ ಡಿಕ್ಕಿ ಹೊಡೆಯುವುದನ್ನು ತಪ್ಪಿಸಲಾಗಲಿಲ್ಲ ಎಂದು ವರದಿಯಾಗಿದೆ.
ಕೂಡಲೇ ಆತನನ್ನು ಆಸ್ಪತ್ರೆಗೆ ರವಾನಿಸಲಾಯಿತಾದರೂ, ಸ್ಥಿತಿ ಗಂಭೀರವಾಗಿತ್ತು. ತಲೆಗೆ ಬಲವಾದ ಏಟು ಬಿದ್ದಿದ್ದು, ಐಸಿಯುನಲ್ಲಿ ಚಿಕಿತ್ಸೆ ನೀಡಲಾಗುತ್ತಿತ್ತು. ಕೃತಕ ಉಸಿರಾಟದ ಸಹಾಯದಲ್ಲಿ ವ್ಯಕ್ತಿ ಇದ್ದರು. ಗಾಯಕಗೊಂಡ ವ್ಯಕ್ತಿಯ ಕುಟುಂಬದವರು ಮಾಹಿತಿ ನೀಡಿದ ಪ್ರಕಾರ ಕಾರಿನಲ್ಲಿ ಡಿಕ್ಕಿ ಹೊಡೆದ ಬಳಿಕ ನಟ ರಜತ್ ಗಾಯಳು ವ್ಯಕ್ತಿಯನ್ನು ಮುಂಬೈನ ಕೂಪರ್ ಆಸ್ಪತ್ರೆಗೆ ದಾಖಲಿಸಿದ್ದಾರೆ ಎಂದು ಹೇಳಿದ್ದಾರೆ. ಅಲ್ಲದೆ ವ್ಯಕ್ತಿಯ ಆಸ್ಪತ್ರೆಯ ಖರ್ಚನ್ನು ಭರಿಸುವುದಾಗಿ ಹೇಳಿದ್ದರು. ಆದರೆ ಸಂಪರ್ಕಕ್ಕೆ ಸಿಗುತ್ತಿಲ್ಲ ಎಂದು ಅಳಲು ತೋಡಿಕೊಂಡಿದ್ದರು. ಮೃತ ವ್ಯಕ್ತಿಗೆ ಇಬ್ಬರು ಮಕ್ಕಳಿದ್ದಾರೆ. 13 ವರ್ಷದ ಮಗಳು ಅಂಶಿಕಾ ಮತ್ತು 7 ವರ್ಷದ ಮಗ ತೇಜಸ್ವಿ. ಈ ಕುಟುಂಬ ಡಿ ಎನ್ ನಗರದ ಕೊಳಗೇರಿಯಲ್ಲಿ ವಾಸಿಸುತ್ತಿದ್ದಾರೆ ಎನ್ನುವ ಮಾಹಿತಿ ತಿಳಿದುಬಂದಿದೆ.
ಹೃತಿಕ್ ರೋಷನ್ ಅಭಿನಯದ 'ಕೋಯಿ ಮಿಲ್ ಗಯಾ' ಮತ್ತು ಸಲ್ಮಾನ್ ಖಾನ್ ನಟಿಸಿದ 'ಪಾಟ್ನರ್' ಸೇರಿದಂತೆ ಹಲವು ಚಿತ್ರಗಳಲ್ಲಿ ರಜತ್ ಬೇಡಿ ನಟಿಸಿದ್ದಾರೆ.
02-05-25 08:44 pm
Bangalore Correspondent
Suhas Shetty Murder case, Minister Parameshwa...
02-05-25 01:40 pm
Dinesh Gundu Rao, Suhas Shetty Murder: ಸುಹಾಸ್...
02-05-25 10:52 am
Jan Dhan Scheme: ಜನಧನ್ ಖಾತೆ ಬಗ್ಗೆ ಜನರ ನಿರಾಸಕ್...
01-05-25 01:48 pm
Dk Suresh, Pavitra, wife Video: ಡಿ.ಕೆ ಬ್ರದರ್...
01-05-25 01:08 pm
30-04-25 06:59 pm
HK News Desk
India Pakistan War: ಭಾರತೀಯ ಸೇನಾಪಡೆಗೆ ಪರಮಾಧಿಕಾ...
30-04-25 03:14 pm
Pakistan, No-fly zone islamabad: ಭಾರತದ ಪ್ರತೀಕ...
30-04-25 02:13 pm
ಮೋದಿ 'ಗಾಯಬ್' ಎಂದು ಕಾಂಗ್ರೆಸ್ ಪೋಸ್ಟ್ ; ಕಾಂಗ್ರೆಸ...
29-04-25 03:45 pm
'ನನಗೆ ಪಾಕಿಸ್ತಾನದಲ್ಲಿ ಯಾರೂ ಇಲ್ಲ, ದಯವಿಟ್ಟು ಉಳಿಸ...
28-04-25 06:52 pm
02-05-25 06:44 pm
Mangaluru HK Staff
Brijesh Chowta, NIA, Suhas Shetty Murder: ಸುಹ...
02-05-25 06:31 pm
Mangalore Suhas Shetty Murder, ADGP Hitendra:...
02-05-25 03:10 pm
Udupi crime, Attempt, Suhas Shetty Murder: ಉಡ...
02-05-25 12:44 pm
Suhas Shetty Murder, Liquor Ban: ಸುಹಾಸ್ ಶೆಟ್ಟ...
02-05-25 12:23 pm
02-05-25 12:00 pm
Mangalore Correspondent
Mangalore Bajpe Murder, Suhas Shetty: ಹಳೆ ದ್ವ...
01-05-25 10:06 pm
Mangalore, Illegal Rice, crime: ಉತ್ತರ ಕರ್ನಾಟಕ...
30-04-25 04:09 pm
Mangalore Mudipu Murder, Mob, Police, Crime:...
29-04-25 09:59 pm
Kudupu Murder, Mangalore Crime, Police: ಕುಡುಪ...
29-04-25 02:53 pm