ಬ್ರೇಕಿಂಗ್ ನ್ಯೂಸ್
11-09-21 10:50 am Filmbeat: Bharath Kumar K ಸಿನಿಮಾ
ತೆಲುಗು ಸಿನಿಮಾ ನಟ ಹಾಗೂ ಮೆಗಾಸ್ಟಾರ್ ಚಿರಂಜೀವಿ ಅವರ ಸೋದರಳಿಯ ಸಾಯಿ ಧರಮ್ ತೇಜ ಬೈಕ್ ಅಪಘಾತಕ್ಕೆ ಒಳಗಾಗಿದ್ದಾರೆ. ಕಳೆದ ರಾತ್ರಿ (ಶುಕ್ರವಾರ) ಹೈದರಾಬಾದ್ನ ಮಾಧಪುರ್ ರಸ್ತೆಯಲ್ಲಿ ಬೈಕ್ನಲ್ಲಿ ತೆರಳುತ್ತಿದ್ದ ಸಾಯಿ ಧರಮ್ ತೇಜ ನಿಯಂತ್ರಣ ತಪ್ಪಿ ರಸ್ತೆಯಲ್ಲಿ ಸ್ಕಿಡ್ ಆಗಿ ಬಿದ್ದಿದ್ದಾರೆ. ಕೂಡಲೇ ಅವರನ್ನು ಖಾಸಗಿ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ಕೊಡಿಸಲಾಗಿದೆ.
ಅಪಘಾತದ ದೃಶ್ಯಗಳು ಸಿಸಿಟಿವಿಯಲ್ಲಿ ಸೆರೆಯಾಗಿದ್ದು, ಭಯಾನಕವಾಗಿದೆ. ಪೊಲೀಸರ ಪ್ರಾಥಮಿಕ ವರದಿಯ ಪ್ರಕಾರ, ಸಾಯಿ ಧರಮ್ ತೇಜ ಸ್ಪೋರ್ಟ್ಸ್ ಬೈಕ್ನಲ್ಲಿ ಅತಿಯಾದ ವೇಗವಾಗಿ ಚಾಲನೆ ಮಾಡುತ್ತಿದ್ದರು. ಹಾಗಾಗಿ, ರಸ್ತೆಯಲ್ಲಿ ಬೈಕ್ ಸ್ಕಿಡ್ ಆಗಿದೆ ಬಿದ್ದಿದೆ ಎಂಬ ಮಾಹಿತಿ ಲಭ್ಯವಾಗಿದೆ.
ಅಪಘಾತ ಕೂಡಲೇ ಅವರನ್ನು ಮೆಡಿಕವರ್ ಆಸ್ಪತ್ರೆಗೆ ಸೇರಿಸಲಾಯಿತು. ಬಳಿಕ ಗಾಯಗಳ ಗಂಭೀರತೆಯ ಪರಿಣಾಮ ಅಪೋಲೋ ಆಸ್ಪತ್ರೆಗೆ ಸ್ಥಳಾಂತರಿಸಲಾಗಿದೆ.
ಅಪಘಾತದ ಕುರಿತು ಮಾಧಪುರ್ ಡಿಜಿಪಿ ಎಂ ವೆಂಕಟೇಶ್ವರಲು ಮಾಹಿತಿ ನೀಡಿದ್ದು, ''ಈ ಅಪಘಾತ ಶುಕ್ರವಾರ ರಾತ್ರಿ ಸುಮಾರು 8.30ರ ಸಮಯಕ್ಕೆ ಸಂಭವಿಸಿದೆ. ಐಟಿ ಕಾರಿಡಾರ್ನಲ್ಲಿ ನಾಲೆಡ್ಜ್ ಸಿಟಿ ಹತ್ತಿರ ನಟ ತನ್ನ ಟ್ರಯಂಫ್ ಬೈಕ್ ನಲ್ಲಿ ಜುಬಿಲಿ ಹಿಲ್ಸ್ ನಿಂದ ಗಚಿಬೌಲಿ ಕಡೆಗೆ ಹೋಗುತ್ತಿದ್ದಾಗ ನಿಯಂತ್ರಣ ತಪ್ಪಿ ಬೈಕ್ ರಸ್ತೆಯಲ್ಲಿ ಸ್ಕಿಡ್ ಆಗಿದೆ'' ಎಂದಿದ್ದಾರೆ.
ಶುಕ್ರವಾರ ಗಣೇಶ ಚತುರ್ಥಿ ಹಬ್ಬವಿದ್ದ ಕಾರಣ ಸಾಮಾನ್ಯವಾಗಿ ರಸ್ತೆಯಲ್ಲಿ ಟ್ರಾಫಿಕ್ ಸಹ ಇರಲಿಲ್ಲ. ಜನಸಂದಣಿಯೂ ಇರಲಿಲ್ಲ. ಈ ಅಪಘಾತದಲ್ಲಿ ಸಾಯಿ ಧರಮ್ ತೇಜ ಅವರ ತಲೆಗೆ, ಎದೆ ಭಾಗಕ್ಕೆ ಹಾಗೂ ದೇಹದ ಇತರೆ ಅಂಗಗಳಿಗೂ ಪೆಟ್ಟು ಬಿದ್ದಿದೆ ಎಂಬ ಮಾಹಿತಿ ಇದೆ. ಇನ್ನು ನಟ ಸಾಯಿ ಧರಮ್ ತೇಜ ಅವರು ಒಬ್ಬರೇ ಬೈಕ್ನಲ್ಲಿ ಹೋಗುತ್ತಿದ್ದರಾ ಅಥವಾ ಸ್ನೇಹಿತರ ತಂಡವೂ ಇತ್ತಾ ಎನ್ನುವುದರ ಬಗ್ಗೆ ಸಿಸಿಟಿವಿ ದೃಶ್ಯಗಳಲ್ಲಿ ಪರೀಕ್ಷಿಸಲಾಗುತ್ತಿದೆ ಎಂದು ಡಿಜಿಪಿ ಎಂ ವೆಂಕಟೇಶ್ವರಲು ಮಾಹಿತಿ ನೀಡಿದ್ದಾರೆ.
ಇನ್ನು ಆಸ್ಪತ್ರೆಯಿಂದ ತಡರಾತ್ರಿಯೇ ಸಾಯಿ ಧರಮ್ ತೇಜ ಅವರ ಆರೋಗ್ಯದ ಬಗ್ಗೆ ಅಧಿಕೃತ ಅಪ್ಡೇಟ್ ಬಿಡುಗಡೆ ಮಾಡಲಾಗಿದೆ. ''ನಟ ಸಾಯಿ ಧರಮ್ ತೇಜ ಆರೋಗ್ಯವಾಗಿದ್ದಾರೆ. ಯಾವುದೇ ಅಪಾಯವಿಲ್ಲ. ಮುನ್ನೆಚ್ಚರಿಕೆ ಉದ್ದೇಶದಿಂದ ನಟನಿಗೆ ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ'' ಎಂದು ತಿಳಿಸಿದ್ದಾರೆ. ಮೆಗಾ ನಟನ ಅಪಘಾತ ಸುದ್ದಿ ತಿಳಿಯುತ್ತಿದ್ದಂತೆ ಕುಟುಂಬದವರು, ಕಲಾವಿದರು ಆಸ್ಪತ್ರೆಗೆ ಧಾವಿಸಿ ಯೋಗಕ್ಷೇಮ ವಿಚಾರಿಸಿದರು. ಮೆಗಾಸ್ಟಾರ್ ಚಿರಂಜೀವಿ, ಅವರ ಸಹೋದರ ಮತ್ತು ನಟ-ರಾಜಕಾರಣಿ ಪವನ್ ಕಲ್ಯಾಣ್, ನಿರ್ಮಾಪಕ ಅಲ್ಲು ಅರವಿಂದ್, ನಟನ ಕಿರಿಯ ಸಹೋದರ ವೈಷ್ಣವ್ ತೇಜ್ ಮತ್ತು ಇತರ ಕುಟುಂಬ ಸದಸ್ಯರು ಮೆಡಿಕೊವರ್ ಆಸ್ಪತ್ರೆಗೆ ಭೇಟಿ ನೀಡಿದ್ದರು. ಮಾಧಪುರ ಪೊಲೀಸರು ಐಪಿಸಿ ಸೆಕ್ಷನ್ ಅಡಿಯಲ್ಲಿ ಪ್ರಕರಣವನ್ನು ದಾಖಲಿಸಿಕೊಂಡು ತನಿಖೆ ಆರಂಭಿಸಿದ್ದಾರೆ.
2014ರಲ್ಲಿ ಚಿತ್ರರಂಗ ಪ್ರವೇಶಿಸಿದ ಸಾಯಿ ಧರಮ್ ತೇಜ 'ಪಿಲ್ಲಾ ನುವ್ವು ಲೇನಿ ಜೀವಿತಂ' ಚಿತ್ರದಲ್ಲಿ ಮೊದಲ ಬಾರಿಗೆ ನಟಿಸಿದರು. ಆ ನಂತರ ರೇ, ಸುಬ್ರಮಣ್ಯಂ ಫಾರ್ ಸೇಲ್, ಸುಪ್ರೀಂ, ತಿಕ್ಕ, ವಿನ್ನರ್, ಜವಾನ್, ಇಂಟಿಲಿಜೆಂಟ್, ತೇಜ್ ಐ ಲವ್ ಯೂ, ಚಿತ್ರಲಹರಿ, ಪ್ರತಿ ರೋಜು ಪಂಡಗೆ, ಸೋಲೋ ಬ್ರಾಥುಕೆ ಸೋ ಬೆಟರ್ ಅಂತಹ ಚಿತ್ರಗಳಲ್ಲಿ ನಟಿಸಿದ್ದಾರೆ. ಪ್ರಸ್ತುತ 'ರಿಪಬ್ಲಿಕ್' ಎನ್ನುವ ಚಿತ್ರದಲ್ಲಿ ಸಾಯಿ ಧರಮ್ ತೇಜ ನಟಿಸುತ್ತಿದ್ದಾರೆ.
20-08-25 12:33 pm
Bangalore Correspondent
'Shakti' Scheme, Golden Book of World Records...
20-08-25 12:11 pm
ರಾಜ್ಯದಲ್ಲಿ ಸಹಕಾರ ವ್ಯವಸ್ಥೆಗೆ ಬಿಗ್ ಸರ್ಜರಿ ; ಸಹಕ...
19-08-25 11:13 am
Dharmasthala Case on Social Media: ಧರ್ಮಸ್ಥಳ ವ...
19-08-25 10:39 am
ಧರ್ಮಸ್ಥಳ ಪ್ರಕರಣ ; ಅಧಿವೇಶನದಲ್ಲಿ ಗೃಹ ಸಚಿವರ ಸ್ಪಷ...
18-08-25 10:47 pm
20-08-25 11:01 am
HK News Desk
ಭಾರತ ಟಿ20 ತಂಡಕ್ಕೆ ಮರಳಿದ ಶುಭಮನ್ ಗಿಲ್ ; ಏಷ್ಯಾ...
19-08-25 06:59 pm
ಇಂಡಿಯಾ ಬಣದಿಂದ ಉಪ ರಾಷ್ಟ್ರಪತಿ ಅಭ್ಯರ್ಥಿ ಬಿ.ಸುದರ್...
19-08-25 06:41 pm
ಎನ್ ಡಿಎ ಒಕ್ಕೂಟಕ್ಕೆ ಇಂಡಿಯಾ ಕೂಟದ ಠಕ್ಕರ್ ; ಉಪ ರಾ...
18-08-25 09:19 pm
ಮುಖ್ಯ ಚುನಾವಣಾ ಆಯುಕ್ತರ ವಿರುದ್ಧ ಇಂಡಿಯಾ ಒಕ್ಕೂಟದಿ...
18-08-25 01:28 pm
19-08-25 11:07 pm
Mangalore Correspondent
Mangalore Thokottu Sports Winner: ಕಂಪನಿ ಬ್ರಾಂ...
19-08-25 08:54 pm
Ullal Municipal Commissioner: ಉಳ್ಳಾಲ ನಗರಸಭೆಯಲ...
19-08-25 08:28 pm
Puttur, Baby, Sreekrishna J. Rao: ಬಿಜೆಪಿ ಮುಖಂ...
19-08-25 07:04 pm
Activists Mahesh Shetty Thimarodi, Harish Poo...
18-08-25 06:14 pm
19-08-25 10:52 pm
Mangalore Correspondent
ಕಸ್ಟಮ್ಸ್ ಅಧಿಕಾರಿಗಳ ಸೋಗಿನಲ್ಲಿ ಚಿನ್ನದ ವ್ಯಾಪಾರಿಯ...
19-08-25 10:30 pm
ಡಾಕ್ಟರ್ ಮನೆ ದೋಚಿದ್ದ ಮನೆ ಕೆಲಸದವಳು ; ಚಿನ್ನ, ವಜ್...
19-08-25 09:27 pm
Gold Chain robbery, Puttur: ಮೈಸೂರಿನಲ್ಲಿ ಕದ್ದ...
19-08-25 12:54 pm
Ullal Police Raid, Sports Winners, Mangalore:...
19-08-25 12:41 pm