ಬ್ರೇಕಿಂಗ್ ನ್ಯೂಸ್
19-02-22 11:26 am Bengaluru Correspondent ಸಿನಿಮಾ
ಬೆಂಗಳೂರು, ಫೆ.19 : ಹಿರಿಯನಟ, ಕಲಾತಪಸ್ವಿ ರಾಜೇಶ್(87) ಇನ್ನು ನೆನಪು ಮಾತ್ರ. ಕಿಡ್ನಿ ವೈಫಲ್ಯ ಹಾಗೂ ವಯೋಸಹಜ ಖಾಯಿಲೆಯಿಂದ ಬಳಲುತ್ತಿದ್ದ ನಟ ಚಿಕಿತ್ಸೆ ಫಲಕಾರಿಯಾಗದೆ ಖಾಸಗಿ ಆಸ್ಪತ್ರೆಯಲ್ಲಿ ನಿಧನರಾಗಿದ್ದಾರೆ.
ಶ್ರೀನಿ ನಟನೆಯ ಓಲ್ಡ್ ಮಾಂಕ್ ಅವ್ರ ಕಟ್ಟ ಕಡೆಯ ಸಿನಿಮಾ ಆಗಿತ್ತು. ಇವ್ರ ಮೂಲ ಹೆಸರು ಮುನಿ ಚೌಡಪ್ಪ. ವಿದ್ಯಾಸಾಗರ್ ಹೆಸರಿನಿಂದ ರಂಗಭೂಮಿಯಲ್ಲಿ ಕಲಾವಿದರಾಗಿ ಗುರ್ತಿಸಿಕೊಂಡಿದ್ದರು. ಬಳಿಕ ಶಕ್ತಿ ನಾಟಕ ಮಂಡಳಿ ಕಟ್ಟಿ ರಂಗಕರ್ಮಿಯಾಗಿ ಹೆಸರು ಮಾಡಿದ್ದರು.

ನಿರುದ್ಯೋಗಿ ಬಾಳು, ಬಡವನ ಬಾಳು, ವಿಷ ಸರ್ಪ, ನಂದಾ ದೀಪ, ಕಿತ್ತೂರು ರಾಣಿ ಚೆನ್ನಮ್ಮ ನಾಟಕಗಳಲ್ಲಿ ಅಭಿನಯಿಸಿ ಜನಪ್ರಿಯತೆ ಗಳಿಸಿದ್ದರು. 60ರ ದಶಕದಲ್ಲಿ ವೀರ ಸಂಕಲ್ಪ ಚಿತ್ರದ ಮೂಲಕ ಬೆಳ್ಳಿತೆರೆಗೆ ಎಂಟ್ರಿ. 1968ರ ನಮ್ಮ ಊರು ಚಿತ್ರದಲ್ಲಿ ರಾಜೇಶ್ ಅಂತ ಹೆಸರು ಬದಲಿಸಿಕೊಂಡಿದ್ದರು.


ಕಪ್ಪು ಬಿಳುಪು, ಎರಡು ಮುಖ, ಪುಣ್ಯ ಪುರುಷ, ದೇವರ ಗುಡಿ, ಕಾವೇರಿ, ಕ್ರಾಂತಿ ವೀರ ಸೇರಿದಂತೆ 150ಕ್ಕೂ ಅಧಿಕ ಸಿನಿಮಾಗಳಲ್ಲಿ ನಟಿಸಿದ್ದಾರೆ. ರಾಜಕುಮಾರ್, ವಿಷ್ಣುವರ್ಧನ್, ಅಂಬರೀಶ್ ಜೊತೆಗೆ ಸಹನಟರಾಗಿ ಭಾರೀ ಖ್ಯಾತಿ ಗಳಿಸಿದ್ದರು. ಅವ್ರ ಕಲಾ ಸೇವೆಗೆ ಧಾರವಾಡದ ಕರ್ನಾಟಕ ವಿಶ್ವವಿದ್ಯಾಲಯದಿಂದ ಗೌರವ ಡಾಕ್ಟರೇಟ್ ಗೌರವ ನೀಡಲಾಗಿತ್ತು.

ಮಗಳು ನಿವೇದಿತಾಗೆ ನಟ ಅರ್ಜುನ್ ಸರ್ಜಾ ಜೊತೆ ಕಲ್ಯಾಣ ಆಗಿತ್ತು. ರಥಸಪ್ತಮಿ ಚಿತ್ರದಲ್ಲಿ ಮಗಳು ನಿವೇದಿತಾ ನಟಿಸಿದ್ದರು. ಅಳಿಯ, ಮಗಳು, ಮೊಮ್ಮಗಳು ಸೇರಿದಂತೆ ಇವರ ಇಡೀ ಕುಟುಂಬ ಸಿನಿಮಾ ರಂಗದಲ್ಲಿರುವುದು ವಿಶೇಷ.
Popular veteran Kannada actor Rajesh, also fondly known as Kala Thapaswi, passes away at 89 due to age-related issues. Since February 9, the actor was hospitalised and was undergoing treatment in Bengaluru due to age-related ailments. However, despite several efforts, he breathed last at midnight at 2:30 AM.
15-09-26 09:13 pm
HK News Staffer
Imran Pasha, Pratap Simha: ನಿನ್ನಂತಹ ಒಂದು ಲಕ್...
15-09-26 04:46 pm
ಬಿಜೆಪಿಯವರಿಗೆ ಕೊಬ್ಬು ಹೆಚ್ಚಾಗಿದೆ ಅದಕ್ಕೆ ಬಳ್ಳಾರಿ...
12-09-26 09:40 pm
ಯತ್ನಾಳ್ ಆರೋಪಿಸಿದರೂ ವಿಜಯೇಂದ್ರ ಮನೆ ಮೇಲೆ ಇಡಿ, ಐಟ...
12-09-26 09:38 pm
ಮಸೀದಿ ಮುಂದೆ ಗಣೇಶ ಮೆರವಣಿಗೆ ಮಾಡಿದ್ರೆ ಗ್ರಹಚಾರ ಬಿ...
12-09-26 09:36 pm
13-09-26 09:00 pm
HK News
80s ಫೋಟೋ ಟ್ರೆಂಡ್ಗೆ ಮಾರುಹೋಗಿದ್ದೀರಾ? ಹುಷಾರ್ ;...
12-09-26 01:10 pm
ಕಾಶ್ಮೀರಿ ಪಂಡಿತರಿಗೆ ಮತ್ತೆ ಬೆದರಿಕೆ ; ಉದ್ಯೋಗ ಬಿಟ...
10-09-26 01:23 pm
ನೇಪಾಳ ಪ್ರವಾಹ ; ಹತ್ತು ದಿನಗಳ ಬಳಿಕ ಜಲವಿದ್ಯುತ್ ಸು...
05-09-26 11:55 am
ಮುಂದಿನ ಒಂದು ವರ್ಷದಲ್ಲಿ ಒಂದು ಸಾವಿರ ವಿದ್ಯಾಭಾರತಿ...
04-09-26 08:14 pm
15-09-26 09:18 pm
HK News Staffer
Satish Kumpala, Manglore: ಕಾಟಾಚಾರಕ್ಕೆ ಸಂಪುಟ ಸ...
15-09-26 07:46 pm
U T Khader, KDP Meeting, Bharath Sheety, Hari...
15-09-26 06:52 pm
Aravind Bolar Controversy, Mangalore: “ಎಂಕ್ ಮ...
15-09-26 05:29 pm
U T Khader, KDP Meeting, Sudheer Reddy Ips: :...
15-09-26 05:27 pm
15-09-26 09:19 pm
HK News Staffer
Mangalore Blackmail: ಫೋಟೋ ಮಾರ್ಫ್ ಮಾಡಿ ಬ್ಲ್ಯಾಕ...
15-09-26 12:55 pm
Manyda Accident: ಗಣೇಶ ಹಬ್ಬ ಮುಗಿಸಿ ಬೆಂಗಳೂರಿಗೆ...
15-09-26 12:48 pm
ಗಣೇಶ ಹಬ್ಬದ ಬೆನ್ನಲ್ಲೇ ಕರ್ನಾಟಕದಲ್ಲಿ ಸರಣಿ ದುರಂತ:...
15-09-26 12:41 pm
ಗಣೇಶೋತ್ಸವದ ಸಂಭ್ರಮದ ನಡುವೆ ಭೀಕರ ದುರಂತ: ಅಗ್ನಿ ಅವ...
15-09-26 10:31 am