ಬ್ರೇಕಿಂಗ್ ನ್ಯೂಸ್
27-04-22 08:20 pm Source: Vijayakarnataka ಡಾಕ್ಟರ್ಸ್ ನೋಟ್
ಮನೆಯ ಹಿತ್ತಲಿನಲ್ಲಿರುವ ಅದೆಷ್ಟೋ ಸಸ್ಯಗಳು ಸಾಮಾನ್ಯ ಕಾಯಿಲೆಗಳಿಗೆ ಪರಿಣಾಮಕಾರಿ ಪರಿಹಾರವನ್ನು ನೀಡುತ್ತದೆ. ಹೂವಿನ ಗಿಡಗಳ ನಡುವೆಯೇ ಬೆಳೆದು ಆರೋಗ್ಯ ವೃದ್ಧಿಸುವ ಕೆಲಸ ಮಾಡುವ ಪುಟ್ಟ ಪುಟ್ಟ ಗಿಡಗಳ ಆರೋಗ್ಯ ಗುಣ ಮಾತ್ರ ಬಹು ದೊಡ್ಡದು. ಅದರಲ್ಲಿ ದೊಡ್ಡ ಪತ್ರೆ ಗಿಡ ಕೂಡ ಒಂದು. ಸಾಮಾನ್ಯವಾಗಿ ಎಲ್ಲರ ಮನೆಯ ಹಿತ್ತಲಿನಲ್ಲಿ ಈ ದೊಡ್ಡ ಪತ್ರೆ ಗಿಡ ಕಂಡು ಬರುತ್ತದೆ. ಇದನ್ನು ಪುಟ್ಟ ಪಾಟ್ನಲ್ಲಿಯೂ ಇಟ್ಟು ಬೆಳೆಸಬಹುದಾಗಿದೆ. ಇದನ್ನು ಸಾಂಬಾರ ಸೊಪ್ಪು ಅಥವಾ ಅಜವನ ಗಿಡ ಎಂದೂ ಕರೆಯುತ್ತಾರೆ.
ಇದು ಸಾಮಾನ್ಯ ಶೀತ, ಜ್ವರಕ್ಕೆ ಉತ್ತಮ ಮನೆಮದ್ದಾಗಿದೆ. ಆರೋಗ್ಯ ಹದಗೆಟ್ಟ ತಕ್ಷಣ ಆಸ್ಪತ್ರೆಗೆ ಓಡುವ ಬದಲು ಒಮ್ಮೆ ಮನೆಯ ಹಿತ್ತಲಿನಲ್ಲಿ ಕಣ್ಣಾಡಿಸಿ, ಅಥವಾ ಆಯುರ್ವೇದ ವೈದ್ಯರನ್ನು ಒಮ್ಮೆ ಸಂಪರ್ಕಿಸಿ ಯಾವುದೇ ಅಡ್ಡ ಪರಿಣಾಮಗಳಿಲ್ಲದೆ ಮನೆಯಲ್ಲೇ ಸಿಗುವ ಪದಾರ್ಥಗಳಿಂದ ಹೇಗೆ ಅನಾರೋಗ್ಯವನ್ನು ಸರಿಪಡಿಸಿಕೊಳ್ಳುವುದು ಎಂದು ಹೇಳುತ್ತಾರೆ. ಈಗ ಈ ದೊಡ್ಡ ಪತ್ರೆ ಸೊಪ್ಪು ಯಾವೆಲ್ಲಾ ಆರೋಗ್ಯ ಸಮಸ್ಯೆಗಳಿಗೆ ಪರಿಹಾರ ನೀಡುತ್ತದೆ ಎನ್ನುವ ಬಗ್ಗೆ ಮಾಹಿತಿಯನ್ನು ತಿಳಿದುಕೊಳ್ಳಿ ಇಲ್ಲಿದೆ ನೋಡಿ.
ಕಫ, ಶೀತಕ್ಕೆ ಬೆಸ್ಟ್
ರೋಗ ನಿರೋಧಕ ಶಕ್ತಿ ಹೆಚ್ಚಿಸುತ್ತದೆ
ಮಲಬದ್ಧತೆ ಸಮಸ್ಯೆಗೆ ಪರಿಹಾರ
ರಕ್ತ ಶುದ್ದಿ ಮಾಡುತ್ತದೆ
ಆರೋಗ್ಯ ಸಮಸ್ಯೆಗೆ ರಕ್ತ ಮಲೀನವಾಗುವುದು ಕೂಡ ಒಂದು ಕಾರಣವಾಗುತ್ತದೆ. ರಕ್ತಶುದ್ಧಿಯಾದಾಗ ದೇಹದಲ್ಲಿ ರೋಗ ನಿರೋಧಕ ಶಕ್ತಿ ಕೂಡ ಹೆಚ್ಚುತ್ತದೆ. ಆ ಕೆಲಸವನ್ನು ದೊಡ್ಡ ಪತ್ರೆ ಸೊಪ್ಪು ಮಾಡುತ್ತದೆ. ದೊಡ್ಡ ಪತ್ರೆ ಎಲೆಯ ರಸಕ್ಕೆ ಬೆಲ್ಲ ಸೇರಿಸಿ ಕುಡಿದಾಗ ಬೆಲ್ಲ ಕೂಡ ದೇಹಕ್ಕೆ ಒಳ್ಳೆಯ ಪದಾರ್ಥವಾಗಿದೆ. ಇದು ದೇಹದಿಂದ ವಿಷಯುಕ್ತ ಪದಾರ್ಥವನ್ನು ಹೊರಹಾಕಲು ನೆರವಾಗುತ್ತದೆ.ಆದ್ದರಿಂದ ನಿಮ್ಮ ಮನೆಯ ಹಿತ್ತಲಿನಲ್ಲಿ ದೊಡ್ಡ ಪತ್ರೆ ಸೊಪ್ಪಿದ್ದರೆ ಜೋಪಾನ ಮಾಡಿ ಉಳಿಸಿಕೊಳ್ಳಿ. ಆರೋಗ್ಯ ಉತ್ತಮಗೊಳಿಸುವಲ್ಲಿ ಪ್ರಮುಖ ಪಾತ್ರ ವಹಿಸುತ್ತದೆ.
ಅಜೀರ್ಣತೆ ನಿವಾರಿಸುತ್ತದೆ
ಗಟ್ಟಿ ಆಹಾರಗಳ ಸೇವನೆ ಮಾಡಿದಾಗ ಬೇಗನೆ ಜೀರ್ಣವಾಗುವುದಿಲ್ಲ. ಅಂತಹ ಸಂದರ್ಭದಲ್ಲಿ ಅಜೀರ್ಣತೆ ಉಂಟಾಗುತ್ತದೆ. ಇದರಿಂದ ಹೊಟ್ಟೆ ನೋವು, ವಾಂತಿಯಂತಹ ಆರೋಗ್ಯ ಸಮಸ್ಯೆಗಳು ಕಾಣಿಸಿಕೊಳ್ಳುತ್ತದೆ. ಇದಕ್ಕೆ ದೊಡ್ಡ ಪತ್ರೆ ಸೊಪ್ಪು ದಿನ ಕಳೆಯುವುದರೊಳಗೆ ಪರಿಹಾರ ನೀಡುತ್ತದೆ. ಅದರ ಎಲೆಯನ್ನು ಉಪ್ಪಿನೊಂದಿಗೆ ಸೇರಿಸಿ ಜಗಿದು ರಸವನ್ನು ನುಂಗಿದರೆ ಜೀರ್ಣಶಕ್ತಿ ಉತ್ತಮವಾಗುತ್ತದೆ. ತಿಂದ ಆಹಾರಗಳು ಸರಿಯಾಗಿ ಜೀರ್ಣ ಮಾಡಲು ಸಹಾಯ ಮಾಡುತ್ತದೆ.ಗ್ಯಾಸ್ಟ್ರಿಕ್ ಸಮಸ್ಯೆಗೆ ದೊಡ್ಡ ಪತ್ರೆ ಉತ್ತಮ ಮನೆಮದ್ದಾಗಿದೆ. ಉಪ್ಪಿನೊಂದಿಗೆ ಎಲೆಯನ್ನು ತಿಂದಾಗ ಗ್ಯಾಸ್ಟ್ರಿಕ್ ಸಮಸ್ಯೆ ಶಮನವಾಗುತ್ತದೆ.
Know The Health Benefits Of Mexican Mint.
20-08-25 12:33 pm
Bangalore Correspondent
'Shakti' Scheme, Golden Book of World Records...
20-08-25 12:11 pm
ರಾಜ್ಯದಲ್ಲಿ ಸಹಕಾರ ವ್ಯವಸ್ಥೆಗೆ ಬಿಗ್ ಸರ್ಜರಿ ; ಸಹಕ...
19-08-25 11:13 am
Dharmasthala Case on Social Media: ಧರ್ಮಸ್ಥಳ ವ...
19-08-25 10:39 am
ಧರ್ಮಸ್ಥಳ ಪ್ರಕರಣ ; ಅಧಿವೇಶನದಲ್ಲಿ ಗೃಹ ಸಚಿವರ ಸ್ಪಷ...
18-08-25 10:47 pm
20-08-25 11:01 am
HK News Desk
ಭಾರತ ಟಿ20 ತಂಡಕ್ಕೆ ಮರಳಿದ ಶುಭಮನ್ ಗಿಲ್ ; ಏಷ್ಯಾ...
19-08-25 06:59 pm
ಇಂಡಿಯಾ ಬಣದಿಂದ ಉಪ ರಾಷ್ಟ್ರಪತಿ ಅಭ್ಯರ್ಥಿ ಬಿ.ಸುದರ್...
19-08-25 06:41 pm
ಎನ್ ಡಿಎ ಒಕ್ಕೂಟಕ್ಕೆ ಇಂಡಿಯಾ ಕೂಟದ ಠಕ್ಕರ್ ; ಉಪ ರಾ...
18-08-25 09:19 pm
ಮುಖ್ಯ ಚುನಾವಣಾ ಆಯುಕ್ತರ ವಿರುದ್ಧ ಇಂಡಿಯಾ ಒಕ್ಕೂಟದಿ...
18-08-25 01:28 pm
20-08-25 04:28 pm
Mangalore Correspondent
ಕಡಬ ಪಟ್ಟಣ ಪಂಚಾಯತ್ ಚುನಾವಣೆ ; 13ರಲ್ಲಿ 8 ಗೆದ್ದ ಕ...
20-08-25 03:01 pm
SIT, Exhumation, Dharmasthala: ಶವ ಶೋಧ ಬಳಿಕ ಎಸ...
20-08-25 02:38 pm
Wild Elephant, Belthangady, Eshwar Khandre: ಬ...
20-08-25 01:36 pm
ಧರ್ಮಸ್ಥಳ ಪ್ರಕರಣ ನೆಪದಲ್ಲಿ ಬಿಎಲ್ ಸಂತೋಷ್ ಅವಹೇಳನ...
19-08-25 11:07 pm
19-08-25 10:52 pm
Mangalore Correspondent
ಕಸ್ಟಮ್ಸ್ ಅಧಿಕಾರಿಗಳ ಸೋಗಿನಲ್ಲಿ ಚಿನ್ನದ ವ್ಯಾಪಾರಿಯ...
19-08-25 10:30 pm
ಡಾಕ್ಟರ್ ಮನೆ ದೋಚಿದ್ದ ಮನೆ ಕೆಲಸದವಳು ; ಚಿನ್ನ, ವಜ್...
19-08-25 09:27 pm
Gold Chain robbery, Puttur: ಮೈಸೂರಿನಲ್ಲಿ ಕದ್ದ...
19-08-25 12:54 pm
Ullal Police Raid, Sports Winners, Mangalore:...
19-08-25 12:41 pm