ಬ್ರೇಕಿಂಗ್ ನ್ಯೂಸ್
30-09-20 02:11 pm Mangalore Correspondent ಲೀಡರ್ಸ್ ರಿಪೋರ್ಟ್
ಮಂಗಳೂರು, ಸೆ. 30: ರಾಜ್ಯದ ಬಿಜೆಪಿ ಸರಕಾರ ತನ್ನ ಮೇಲಿನ ಭ್ರಷ್ಟಾಚಾರ ಆರೋಪ ಪ್ರಕರಣಕ್ಕೆ ಸಂಬಂಧಿಸಿ ಪವರ್ ಟಿವಿ ವಿರುದ್ಧ ಕೈಗೊಂಡಿರುವ ದಬ್ಬಾಳಿಕೆ ಪ್ರಕರಣಕ್ಕೆ ಸಂಬಂಧಿಸಿ ರಾಜ್ಯಪಾಲರು ಮಧ್ಯ ಪ್ರವೇಶಿಸಬೇಕು. ಮುಖ್ಯಮಂತ್ರಿ ರಾಜೀನಾಮೆ ಪಡೆಯಬೇಕು ಹಾಗೂ ನೇರ ಚುನಾವಣೆಗೆ ಮುಂದಾಗಬೇಕು ಎಂದು ವಿಧಾನ ಪರಿಷತ್ ಮಾಜಿ ಸದಸ್ಯ ಐವನ್ ಡಿಸೋಜಾ ಆಗ್ರಹಿಸಿದ್ದಾರೆ. ದ.ಕ. ಜಿಲ್ಲಾ ಕಾಂಗ್ರೆಸ್ ಕಚೇರಿಯಲ್ಲಿ ಸುದ್ದಿಗೋಷ್ಠಿಯಲ್ಲಿಂದು ಮಾತನಾಡಿದ ಅವರು, ರಾಜ್ಯದ ಇತಿಹಾಸದಲ್ಲಿ ಇದೇ ಮೊದಲ ಬಾರಿಗೆ ಸರಕಾರವೊಂದು ತನ್ನ ಮೇಲಿನ ಭ್ರಷ್ಟಾಚಾರ ಆರೋಪಕ್ಕೆ ಪ್ರತಿಯಾಗಿ ದ್ವೇಷ ರಾಜಕಾರಣ ನಡೆಸಿದೆ ಎಂದು ಆರೋಪಿಸಿದರು.

ಬಿಡಿಎ ಪ್ರಕರಣವೊಂದರಲ್ಲಿ 24 ಕೋಟಿ ರೂ.ಗಳ ಹಗರಣ ನಡೆದಿರುವ ಬಗ್ಗೆ ಸಾಕ್ಷ ಸಹಿತ ದಾಖಲೆಗಳಿವೆ. ಈ ಪ್ರಕರಣದಲ್ಲಿ 7.44 ಕೋಟಿ ರೂ. ಶೇಷಾದ್ರಿಪುರಂ ಬ್ಯಾಂಕೊಂದರ ಮೂಲಕ ಮುಖ್ಯಮಂತ್ರಿಯ ಸಂಬಂಧಿಕರು ಪಡೆದಿದ್ದಾರೆ. ಇದಲ್ಲದೆ, ಉಳಿದ ಹಣ ಕೊಲ್ಕತ್ತಾದ ಬ್ಯಾಂಕೊಂದರ ಮೂಲಕ ಮುಖ್ಯಮಂತ್ರಿ ಯಡಿಯೂರಪ್ಪ ಹಾಗೂ ಅವರ ಸಂಬಂಧಿಕರ ಕಂಪನಿಗೆ ವರ್ಗಾವಣೆಯಾಗಿದೆ. ಆರ್ಟಿಜಿಎಸ್ ಮೂಲಕ ಹಣ ವರ್ಗಾವಣೆಯಾಗಿರುವ ಬಗ್ಗೆ ದಾಖಲೆ ಇರುವಾಗ ತನಿಖೆ ಆಗಬೇಡವೇ ? ಈ ಬಗ್ಗೆ ಸುದ್ದಿ ಮಾಡಿದ ಚಾನೆಲ್ ಮೇಲೆ ಬಲಪ್ರಯೋಗಿಸುವ ಮೂಲಕ ಜನರ ಬಾಯಿಯನ್ನು ಮುಚ್ಚಿಸಲಾಗದು. 2008ರಲ್ಲಿಯೂ ಮುಖ್ಯಮಂತ್ರಿ ಯಡಿಯೂರಪ್ಪನವರು ತಮ್ಮ ಆಡಳಿತವಿದ್ದಾಗ ಪ್ರೇರಣಾ ಟ್ರಸ್ಟ್ ಪ್ರಕರಣದ ಮೂಲಕ ಅಧಿಕಾರ ಕಳೆದುಕೊಂಡಿದ್ದರು. ಇದೀಗ ಮತ್ತೆ ಭ್ರಷ್ಟಾಚಾರ ನಡೆದಿದೆ. ಈ ಪ್ರಕರಣವನ್ನು ಇಲ್ಲಿಗೇ ಬಿಡುವುದಿಲ್ಲ. ರಾಜ್ಯದ ಮೂಲೆ ಮೂಲೆಗೂ ಜನರಿಗೆ ತಲುಪಿಸಲಾಗುವುದು ಎಂದು ಐವನ್ ಡಿಸೋಜಾ ಹೇಳಿದರು. ಸುದ್ದಿ ಗೋಷ್ಠಿಯಲ್ಲಿ ಇಬ್ರಾಹೀಂ ಕೋಡಿಜಾಲ್ ಮತಿತ್ತರು ಉಪಸ್ಥಿತಿ ಇದ್ದರು.
17-09-26 04:13 pm
HK News Staffer
ಚಿತ್ರರಂಗದ ಸಾರ್ವಕಾಲಿಕ ಶ್ರೇಷ್ಠ ನಟ ಅನಂತನಾಗ್ ಗೆ '...
16-09-26 10:40 pm
Tulu Language, Shivraj Tangadagi: ತುಳುವಿಗೆ 2ನ...
16-09-26 01:51 pm
Pradeep Eshwar, Pratap Simha: ಪೊಲೀಸ್ ಠಾಣೆಗೆ...
15-09-26 09:13 pm
Imran Pasha, Pratap Simha: ನಿನ್ನಂತಹ ಒಂದು ಲಕ್...
15-09-26 04:46 pm
13-09-26 09:00 pm
HK News
80s ಫೋಟೋ ಟ್ರೆಂಡ್ಗೆ ಮಾರುಹೋಗಿದ್ದೀರಾ? ಹುಷಾರ್ ;...
12-09-26 01:10 pm
ಕಾಶ್ಮೀರಿ ಪಂಡಿತರಿಗೆ ಮತ್ತೆ ಬೆದರಿಕೆ ; ಉದ್ಯೋಗ ಬಿಟ...
10-09-26 01:23 pm
ನೇಪಾಳ ಪ್ರವಾಹ ; ಹತ್ತು ದಿನಗಳ ಬಳಿಕ ಜಲವಿದ್ಯುತ್ ಸು...
05-09-26 11:55 am
ಮುಂದಿನ ಒಂದು ವರ್ಷದಲ್ಲಿ ಒಂದು ಸಾವಿರ ವಿದ್ಯಾಭಾರತಿ...
04-09-26 08:14 pm
19-09-26 10:11 am
HK News Staffer
ಮಂಗಳೂರಿನಲ್ಲಿ ಮೊದಲ ಸಚಿವ ಸಂಪುಟ ಸಭೆ ; 32,611 ಕೋಟ...
18-09-26 07:30 pm
Puttur Medical College, Dakshina Kannada, Man...
18-09-26 06:08 pm
Tulu second official language: ತುಳುನಾಡಿನ ದಶಕಗ...
18-09-26 04:46 pm
Dk Shivakumar, Mangalore, social media: ಸೋಶಿಯ...
18-09-26 04:11 pm
17-09-26 02:22 pm
HK News Staffer
Bangalore Murder, Crime: ಪ್ರೀತಿಸಿ ಮದುವೆಯಾಗಿದ್...
17-09-26 01:56 pm
Bangalore kidnap, Crime: ಬೆಂಗಳೂರಿನಲ್ಲಿ ಶಾಕ್...
17-09-26 12:35 pm
Manglore Cyber crime, Stock Market: ಷೇರು ಮಾರ್...
17-09-26 11:45 am
ಬೆಳ್ತಂಗಡಿ; ಗೃಹಪ್ರವೇಶಕ್ಕೆ ಹೋದಾಗ ಮನೆಗೆ ಕನ್ನ, ₹1...
16-09-26 11:18 am