ಬ್ರೇಕಿಂಗ್ ನ್ಯೂಸ್
01-08-20 10:33 am Mangalore Reporter ಲೀಡರ್ಸ್ ರಿಪೋರ್ಟ್
ಮಂಗಳೂರು : ಮಂಗಳೂರು ಮಹಾನಗರ ಪಾಲಿಕೆಯ ಬೋಳೂರು ವಾರ್ಡಿನ ಮಠದಕಣಿ 4ನೇ ಅಡ್ಡರಸ್ತೆಯಿಂದ ಗ್ಲೋಬಲ್ ಆಸ್ಪತ್ರೆ ವರೆಗಿನ ರಸ್ತೆ ಕಾಂಕ್ರೀಟೀಕರಣ ಕಾಮಗಾರಿಗೆ ಶಾಸಕ ವೇದವ್ಯಾಸ್ ಕಾಮತ್ ಗುದ್ದಲಿಪೂಜೆ ನೆರವೇರಿಸಿದರು.
ಈ ವೇಳೆ ಮಾತನಾಡಿದ ಶಾಸಕ ಕಾಮತ್, ಬೋಳೂರು ಮಠದಕಣಿ ಅಡ್ಡರಸ್ತೆಯಿಂದ ಗ್ಲೋಬಲ್ ಆಸ್ಪತ್ರೆ ವರೆಗಿನ ರಸ್ತೆ ಅಭಿವೃದ್ಧಿಪಡಿಸುವ ಬಗ್ಗೆ ಸ್ಥಳೀಯ ಮನಪಾ ಸದಸ್ಯರು ಹಾಗೂ ಸಾರ್ವಜನಿಕರ ಬೇಡಿಕೆಯ ಮೇರೆಗೆ ಮುಖ್ಯಮಂತ್ರಿಗಳ ವಿಶೇಷ ನಿಧಿಯಿಂದ ಲೋಕೋಪಯೋಗಿ ಇಲಾಖೆಯ ಮೂಲಕ 75 ಲಕ್ಷ ರೂಪಾಯಿ ಬಿಡುಗಡೆಗೊಳಿಸಲಾಗಿದೆ. ಲಾಕ್ ಡೌನ್ ಹಿನ್ನೆಲೆಯಲ್ಲಿ ವಲಸೆ ಕಾರ್ಮಿಕರು ತಮ್ಮ ಊರಿಗೆ ವಾಪಸ್ ತೆರಳಿರುವ ಹಿನ್ನೆಲೆಯಲ್ಲಿ ಕಾಮಗಾರಿಗೆ ಅಲ್ಪಮಟ್ಟದ ತೊಡಕಾದರೂ ಶೀಘ್ರವೇ ಕಾಮಗಾರಿ ಪೂರ್ಣಗೊಳಿಸಲು ಗುತ್ತಿಗೆದಾರರು ಹಾಗೂ ಅಧಿಕಾರಿಗಳಿಗೆ ಸೂಚನೆ ನೀಡಿದ್ದೇನೆ ಎಂದಿದ್ದಾರೆ.
ಸ್ಥಳೀಯ ಮನಪಾ ಸದಸ್ಯರಾದ ಜಗದೀಶ್ ಶೆಟ್ಟಿ ಬೋಳೂರು ಮಾತನಾಡಿ ಬೋಳೂರು ವಾರ್ಡಿನ ಸಮಗ್ರ ಅಭಿವೃದ್ಧಿಗೆ ಶಾಸಕ ವೇದವ್ಯಾಸ್ ಕಾಮತ್ ಅವರ ಕೊಡುಗೆ ಅವಸ್ಮರಣೀಯ ಹಾಗೂ ಅದಕ್ಕಾಗಿ ಅವರಿಗೆ ವಾರ್ಡಿನ ಜನರ ಪರವಾಗಿ ಧನ್ಯವಾದಗಳನ್ನು ಅರ್ಪಿಸುತ್ತೇನೆ. ಮಠದಕಣಿ 4ನೇ ಅಡ್ಡರಸ್ತೆಯ ಅಭಿವೃದ್ಧಿಗೆ 75 ಲಕ್ಷ ಅನುದಾನ ಒದಗಿಸಿ ಈ ಪರಿಸರದ ಜನರ ಬೇಡಿಕೆಯನ್ನು ಸಾಕಾರಗೊಳಿಸಿದ್ದಾರೆ ಎಂದರು.
ಈ ಸಂದರ್ಭದಲ್ಲಿ ಬೋಳೂರು ವಾರ್ಡ್ ಕಾರ್ಪೋರೇಟರ್ ಹಾಗೂ ಮಂಗಳೂರು ಮಹಾನಗರ ಪಾಲಿಕೆ ಸ್ಥಾಯಿ ಸಮಿತಿ ಅಧ್ಯಕ್ಷ ಜಗದೀಶ್ ಶೆಟ್ಟಿ, ಸ್ಥಾಯಿ ಸಮಿತಿ ಅಧ್ಯಕ್ಷೆ ಪೂರ್ಣಿಮ. ಮ ನ ಪಾ ಸಮಸ್ಯೆಯರಾದ ಜಯಲಕ್ಶ್ಮಿ ಶೆಟ್ಟಿ ,ಬಿಜೆಪಿ ಮುಖಂಡರಾದ ಭಾಸ್ಕರಚಂದ್ರ ಶೆಟ್ಟಿ, ವಸಂತ್ ಜೆ ಪೂಜಾರಿ,ಬೋಳೂರು ವಾರ್ಡ್ ಪ್ರಮುಖರಾದ ಕಿರಣ್ ಶೆಟ್ಟಿ , ಕಾರ್ತಿಕ್ ಬಂಗೇರ,ಸಂದೀಪ್, ರೋಶನ್ ,ಸುಹಾಗ್, ವಿಜಯೇಂದ್ರ ಹಾಗೂ ಇತರರು ಉಪಸ್ಥಿತರಿದ್ದರು
17-09-26 04:13 pm
HK News Staffer
ಚಿತ್ರರಂಗದ ಸಾರ್ವಕಾಲಿಕ ಶ್ರೇಷ್ಠ ನಟ ಅನಂತನಾಗ್ ಗೆ '...
16-09-26 10:40 pm
Tulu Language, Shivraj Tangadagi: ತುಳುವಿಗೆ 2ನ...
16-09-26 01:51 pm
Pradeep Eshwar, Pratap Simha: ಪೊಲೀಸ್ ಠಾಣೆಗೆ...
15-09-26 09:13 pm
Imran Pasha, Pratap Simha: ನಿನ್ನಂತಹ ಒಂದು ಲಕ್...
15-09-26 04:46 pm
13-09-26 09:00 pm
HK News
80s ಫೋಟೋ ಟ್ರೆಂಡ್ಗೆ ಮಾರುಹೋಗಿದ್ದೀರಾ? ಹುಷಾರ್ ;...
12-09-26 01:10 pm
ಕಾಶ್ಮೀರಿ ಪಂಡಿತರಿಗೆ ಮತ್ತೆ ಬೆದರಿಕೆ ; ಉದ್ಯೋಗ ಬಿಟ...
10-09-26 01:23 pm
ನೇಪಾಳ ಪ್ರವಾಹ ; ಹತ್ತು ದಿನಗಳ ಬಳಿಕ ಜಲವಿದ್ಯುತ್ ಸು...
05-09-26 11:55 am
ಮುಂದಿನ ಒಂದು ವರ್ಷದಲ್ಲಿ ಒಂದು ಸಾವಿರ ವಿದ್ಯಾಭಾರತಿ...
04-09-26 08:14 pm
19-09-26 10:11 am
HK News Staffer
ಮಂಗಳೂರಿನಲ್ಲಿ ಮೊದಲ ಸಚಿವ ಸಂಪುಟ ಸಭೆ ; 32,611 ಕೋಟ...
18-09-26 07:30 pm
Puttur Medical College, Dakshina Kannada, Man...
18-09-26 06:08 pm
Tulu second official language: ತುಳುನಾಡಿನ ದಶಕಗ...
18-09-26 04:46 pm
Dk Shivakumar, Mangalore, social media: ಸೋಶಿಯ...
18-09-26 04:11 pm
17-09-26 02:22 pm
HK News Staffer
Bangalore Murder, Crime: ಪ್ರೀತಿಸಿ ಮದುವೆಯಾಗಿದ್...
17-09-26 01:56 pm
Bangalore kidnap, Crime: ಬೆಂಗಳೂರಿನಲ್ಲಿ ಶಾಕ್...
17-09-26 12:35 pm
Manglore Cyber crime, Stock Market: ಷೇರು ಮಾರ್...
17-09-26 11:45 am
ಬೆಳ್ತಂಗಡಿ; ಗೃಹಪ್ರವೇಶಕ್ಕೆ ಹೋದಾಗ ಮನೆಗೆ ಕನ್ನ, ₹1...
16-09-26 11:18 am