ಬ್ರೇಕಿಂಗ್ ನ್ಯೂಸ್
01-06-22 10:35 pm Udupi Correspondent ಕರಾವಳಿ
ಮೂಡುಬಿದಿರೆ, ಜೂನ್ 1 : ಅಧಿಕಾರ ಸ್ವೀಕರಿಸಿದ ನಾಲ್ಕೇ ಗಂಟೆಗಳಲ್ಲಿ ರೈತರ ಮಕ್ಕಳ ವಿದ್ಯಾಭ್ಯಾಸಕ್ಕೆ ಉತ್ತೇಜನ ನೀಡಲು ಮುಖ್ಯಮಂತ್ರಿ ರೈತ ವಿದ್ಯಾನಿಧಿ ಯೋಜನೆ ಘೋಷಿಸಲಾಗಿತ್ತು. ಇಂದು ಈ ಯೋಜನೆಯ ಫಲ ರೈತರ ಮಕ್ಕಳಿಗೆ ತಲುಪಿರುವುದು ಅತ್ಯಂತ ಸಮಾಧಾನ ತಂದಿದೆ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ತಿಳಿಸಿದರು.
ಬುಧವಾರ ಮೂಡುಬಿದಿರೆಯ ಆಳ್ವಾಸ್ ಶಿಕ್ಷಣ ಸಂಸ್ಥೆಯಲ್ಲಿ ರೈತ ವಿದ್ಯಾನಿಧಿ ಫಲಾನುಭವಿ ವಿದ್ಯಾರ್ಥಿಗಳೊಂದಿಗೆ ಸಂವಾದ ಕಾರ್ಯಕ್ರಮದಲ್ಲಿ ಮಾತನಾಡಿದರು.
ಹಿಂದೆ ಹೆಚ್ಚುತ್ತಿರುವ ಜನಸಂಖ್ಯೆ ದೇಶದ ಅಭಿವೃದ್ಧಿಗೆ ಮಾರಕ ಎಂಬ ಚಿಂತನೆಯಿತ್ತು. ಆದರೆ ಪ್ರಧಾನಮಂತ್ರಿ ನರೇಂದ್ರ ಮೋದಿಯವರು ಅಧಿಕಾರಕ್ಕೆ ಬಂದ ನಂತರ ದೇಶದ 130 ಕೋಟಿ ಜನರು, ಅದರಲ್ಲೂ ಶೇ. 46 ರಷ್ಟಿರುವ ಯುವಜನರು ನಮ್ಮ ದೇಶವನ್ನು ಮುನ್ನಡೆಸುವ ಶಕ್ತಿ ಎಂದರು. ಬೇರೆ ಯಾವ ದೇಶದಲ್ಲಿಯೂ ಈ ಪ್ರಮಾಣದಲ್ಲಿ ಯುವಜನರ ಸಂಖ್ಯೆ ಇಲ್ಲ. ನಿಮ್ಮ ವಯಸ್ಸು ವಿದ್ಯಾರ್ಜನೆ ಮಾಡುವ, ಆಟ-ಪಾಠದಲ್ಲಿ ತೊಡಗಿಸಿಕೊಳ್ಳುವ ವಯಸ್ಸು. ಜಗತ್ತನ್ನು ತಿಳಿದುಕೊಳ್ಳುವ ವಯಸ್ಸು. ಆದ್ದರಿಂದ ನೀವು ತಾರ್ಕಿಕ ಚಿಂತನೆ ಮಾಡಬೇಕು. ಪ್ರಶ್ನೆಗಳನ್ನು ಕೇಳಿ ಉತ್ತರಗಳನ್ನು ಕಂಡುಕೊಳ್ಳಬೇಕು. ತಾರ್ಕಿಕ ಚಿಂತನೆಯಿಂದ ಉನ್ನತ ವಿದ್ಯಾಭ್ಯಾಸದಲ್ಲಿ ಹೆಚ್ಚಿನ ಸಾಧನೆ ಮಾಡಲು ಸಾಧ್ಯ ಎಂದು ಬೊಮ್ಮಾಯಿ ಹೇಳಿದರು.

ರೈತರ ಮಕ್ಕಳೂ ಉನ್ನತ ಸಾಧನೆ ಮಾಡಬೇಕು. ಆರ್ಥಿಕವಾಗಿ ಸಬಲರಾಗಬೇಕು ಎಂಬ ಉದ್ದೇಶದಿಂದ ಈ ಯೋಜನೆಯನ್ನು ಘೋಷಿಸಲಾಗಿತ್ತು ಎಂದ ಬೊಮ್ಮಾಯಿ, ದೇಶದ ಒಟ್ಟು ಆದಾಯಕ್ಕೆ ಶೇ. 30 ರಷ್ಟು ಜನರು ಮಾತ್ರ ಕೊಡುಗೆ ನೀಡುತ್ತಾರೆ. ಹೆಚ್ಚಿನ ಸಂಖ್ಯೆಯಲ್ಲಿ ಜನರು, ಅದರಲ್ಲೂ ಮಹಿಳೆಯರು ಆರ್ಥಿಕ ಚಟುವಟಿಕೆಗಳಲ್ಲಿ ತೊಡಗಿಸಿಕೊಳ್ಳಬೇಕು. ಇದಕ್ಕಾಗಿ 4 ಲಕ್ಷ ಮಹಿಳೆಯರಿಗೆ ಉದ್ಯೋಗಾವಕಾಶ ಕಲ್ಪಿಸಲು ಕಾರ್ಯಕ್ರಮ ರೂಪಿಸಲಾಗುತ್ತಿದೆ ಎಂದು ತಿಳಿಸಿದರು.

ನನ್ನ ಹಣೆಬರಹ ನಾನೇ ಬರೆಯುತ್ತೇನೆ. ತಂದೆ ತಾಯಿಗಳ ಕನಸು ನನಸು ಮಾಡುತ್ತೇನೆ ಎಂದು ನಿಮ್ಮ ಕೋಣೆಯ ಗೋಡೆಯಲ್ಲಿ ಬರೆದಿಡಿ. ಅದಕ್ಕೆ ತಕ್ಕಂತೆ ಹೆಚ್ಚಿನ ಪರಿಶ್ರಮ ವಹಿಸಿ, ಸಾಧನೆ ಮಾಡಿ ಎಂದು ಮುಖ್ಯಮಂತ್ರಿ ವಿದ್ಯಾರ್ಥಿಗಳಿಗೆ ಸಲಹೆ ನೀಡಿದರು.

ಕಾರ್ಯಕ್ರಮದಲ್ಲಿ ಸಚಿವರಾದ ಗೋವಿಂದ ಎಂ. ಕಾರಜೋಳ, ಆರ್. ಅಶೋಕ, ಕೋಟ ಶ್ರೀನಿವಾಸ ಪೂಜಾರಿ, ಸುನಿಲ್ ಕುಮಾರ್, ಸಂಸದ ನಳಿನ್ ಕುಮಾರ್ ಕಟೀಲ್, ಆಳ್ವಾಸ್ ಶಿಕ್ಷಣ ಸಂಸ್ಥೆಗಳ ಮುಖ್ಯಸ್ಥ ಡಾ. ಮೋಹನ್ ಆಳ್ವ ಮತ್ತಿತರರು ಉಪಸ್ಥಿತರಿದ್ದರು.
Karnataka Chief Minister Basavaraj Bommai in Udupi on Wednesday said that Prime Minister Narendra Modi, who is leading the country, is the hope of the nation. He has heralded a new era of development in India with his able and strong leadership.
17-09-26 04:13 pm
HK News Staffer
ಚಿತ್ರರಂಗದ ಸಾರ್ವಕಾಲಿಕ ಶ್ರೇಷ್ಠ ನಟ ಅನಂತನಾಗ್ ಗೆ '...
16-09-26 10:40 pm
Tulu Language, Shivraj Tangadagi: ತುಳುವಿಗೆ 2ನ...
16-09-26 01:51 pm
Pradeep Eshwar, Pratap Simha: ಪೊಲೀಸ್ ಠಾಣೆಗೆ...
15-09-26 09:13 pm
Imran Pasha, Pratap Simha: ನಿನ್ನಂತಹ ಒಂದು ಲಕ್...
15-09-26 04:46 pm
19-09-26 03:37 pm
HK News Staffer
ಮುಂಬೈನಲ್ಲಿ ಕುಡಿಯುವ ನೀರಿಗೆ ತೀವ್ರ ಬರ ; ಸಮುದ್ರದ...
13-09-26 09:00 pm
80s ಫೋಟೋ ಟ್ರೆಂಡ್ಗೆ ಮಾರುಹೋಗಿದ್ದೀರಾ? ಹುಷಾರ್ ;...
12-09-26 01:10 pm
ಕಾಶ್ಮೀರಿ ಪಂಡಿತರಿಗೆ ಮತ್ತೆ ಬೆದರಿಕೆ ; ಉದ್ಯೋಗ ಬಿಟ...
10-09-26 01:23 pm
ನೇಪಾಳ ಪ್ರವಾಹ ; ಹತ್ತು ದಿನಗಳ ಬಳಿಕ ಜಲವಿದ್ಯುತ್ ಸು...
05-09-26 11:55 am
19-09-26 10:11 am
HK News Staffer
ಮಂಗಳೂರಿನಲ್ಲಿ ಮೊದಲ ಸಚಿವ ಸಂಪುಟ ಸಭೆ ; 32,611 ಕೋಟ...
18-09-26 07:30 pm
Puttur Medical College, Dakshina Kannada, Man...
18-09-26 06:08 pm
Tulu second official language: ತುಳುನಾಡಿನ ದಶಕಗ...
18-09-26 04:46 pm
Dk Shivakumar, Mangalore, social media: ಸೋಶಿಯ...
18-09-26 04:11 pm
17-09-26 02:22 pm
HK News Staffer
Bangalore Murder, Crime: ಪ್ರೀತಿಸಿ ಮದುವೆಯಾಗಿದ್...
17-09-26 01:56 pm
Bangalore kidnap, Crime: ಬೆಂಗಳೂರಿನಲ್ಲಿ ಶಾಕ್...
17-09-26 12:35 pm
Manglore Cyber crime, Stock Market: ಷೇರು ಮಾರ್...
17-09-26 11:45 am
ಬೆಳ್ತಂಗಡಿ; ಗೃಹಪ್ರವೇಶಕ್ಕೆ ಹೋದಾಗ ಮನೆಗೆ ಕನ್ನ, ₹1...
16-09-26 11:18 am