ಹಿರಿಯಡ್ಕ ಕೊಲೆ ; ಬಂಧಿತ ಐವರಿಗೆ ಪೊಲೀಸ್ ಕಸ್ಟಡಿ

28-09-20 12:34 pm       Udupi Correspondent   ಕರಾವಳಿ

ಹಿರಿಯಡ್ಕದಲ್ಲಿ ರೌಡಿ ಶೀಟರ್ ಕಿಶನ್ ಹೆಗ್ಡೆ ಕೊಲೆ ಪ್ರಕರಣಕ್ಕೆ ಸಂಬಂಧಿಸಿ ಬಂಧಿತ ಐವರು ಆರೋಪಿಗಳನ್ನು ಉಡುಪಿ ನ್ಯಾಯಾಲಯ ಐದು ದಿನಗಳ ಕಾಲ ಪೊಲೀಸ್ ಕಸ್ಟಡಿಗೆ ಒಪ್ಪಿಸಿದೆ. 

ಉಡುಪಿ, ಸೆಪ್ಟಂಬರ್ 28: ಹಿರಿಯಡ್ಕದಲ್ಲಿ ರೌಡಿ ಶೀಟರ್ ಕಿಶನ್ ಹೆಗ್ಡೆ ಕೊಲೆ ಪ್ರಕರಣಕ್ಕೆ ಸಂಬಂಧಿಸಿ ಬಂಧಿತ ಐವರು ಆರೋಪಿಗಳನ್ನು ಉಡುಪಿ ನ್ಯಾಯಾಲಯ ಐದು ದಿನಗಳ ಕಾಲ ಪೊಲೀಸ್ ಕಸ್ಟಡಿಗೆ ಒಪ್ಪಿಸಿದೆ. 

ಆರೋಪಿಗಳಾದ ಮನೋಜ್ ಕೋಡಿಕೆರೆ, ಚಿತ್ತರಂಜನ್ ಪೂಜಾರಿ, ಚೇತು ಪಡೀಲ್, ರಮೇಶ್ ಪೂಜಾರಿ, ದೀಕ್ಷಿತ್ ಶೆಟ್ಟಿ ಎಂಬವರನ್ನು ಪ್ರಕರಣದ ತನಿಖಾಧಿಕಾರಿಯಾಗಿರುವ ಬ್ರಹ್ಮಾವರ ವೃತ್ತ ನಿರೀಕ್ಷಕ ಅನಂತಪದ್ಮನಾಭ, ವಿಡಿಯೋ ಕಾನ್ಫರೆನ್ಸ್ ಮೂಲಕ ನ್ಯಾಯಾಧೀಶರ ಮುಂದೆ ಹಾಜರುಪಡಿಸಿದ್ದರು. ನ್ಯಾಯಾಧೀಶರು ಆರೋಪಿಗಳನ್ನು ಅಕ್ಟೋಬರ್ 1ರವರೆಗೆ ಪೊಲೀಸ್ ಕಸ್ಟಡಿಗೆ ಒಪ್ಪಿಸಿ ಆದೇಶ ನೀಡಿದ್ದಾರೆ. 

ಅದರಂತೆ ಕಸ್ಟಡಿಗೆ ಪಡೆದುಕೊಂಡಿರುವ ಆರೋಪಿಗಳನ್ನು ಪೊಲೀಸರು ತೀವ್ರ ವಿಚಾರಣೆ ಒಳಪಡಿಸಲಿದ್ದಾರೆ. ಪ್ರಕರಣದಲ್ಲಿ ಭಾಗಿಯಾಗಿರುವ ಇತರರ ಬಗ್ಗೆ ಮಾಹಿತಿ ಕಲೆ ಹಾಕುತ್ತಿದ್ದಾರೆ. ಕೊಲೆ ನಡೆಸಿದ ಸ್ಥಳಕ್ಕೆ ಆರೋಪಿಗಳನ್ನು ಕರೆದೊಯ್ದು ಮಹಜರು ನಡೆಸಲಾಗಿದೆ.

Join our WhatsApp group for latest news updates (2)