ಬ್ರೇಕಿಂಗ್ ನ್ಯೂಸ್
24-06-22 08:33 pm Mangalore Correspondent ಕರಾವಳಿ
ಮಂಗಳೂರು, ಜೂನ್ 24 : ಮಂಗಳೂರು ನಗರದಿಂದ ಬಜ್ಪೆ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣಕ್ಕೆ ಕೆಎಸ್ಸಾರ್ಟಿಸಿ ಬಸ್ ವ್ಯವಸ್ಥೆ ಮಾಡಬೇಕು ಎನ್ನೋದು ಬಹುದಿನಗಳ ಕನಸು. ಈ ಕನಸು ಕಡೆಗೂ ಈಡೇರುವ ಕಾಲ ಬಂದಿದೆ. ಇಬ್ಬರು ದೆಹಲಿ ಪತ್ರಕರ್ತರ ಕೋರಿಕೆಯ ಮೇರೆಗೆ ಸಾರಿಗೆ ಸಚಿವ ಶ್ರೀರಾಮುಲು ಬಸ್ ವ್ಯವಸ್ಥೆ ಏರ್ಪಡಿಸಲು ಅಧಿಕಾರಿಗಳಿಗೆ ಸೂಚನೆ ನೀಡಿದ್ದಾರೆ.
ಈ ಬಗ್ಗೆ ಸಾರಿಗೆ ಇಲಾಖೆಯ ಕಾರ್ಯದರ್ಶಿ ಪುಷ್ಪಾ ವಿ.ಎಸ್., ಕೆಎಸ್ಸಾರ್ಟಿಸಿ ಸಾರಿಗೆ ನಿಗಮಕ್ಕೆ ಆದೇಶ ಪತ್ರ ನೀಡಿದ್ದು ತುರ್ತಾಗಿ ಬಸ್ ವ್ಯವಸ್ಥೆ ಕಲ್ಪಿಸುವಂತೆ ಸೂಚನೆ ನೀಡಿದ್ದಾರೆ. ಬೆಂಗಳೂರಿನಲ್ಲಿ ಮಹಾನಗರದಿಂದ ದೇವನಹಳ್ಳಿ ಏರ್ಪೋರ್ಟ್ ಗೆ ಬಸ್ ವ್ಯವಸ್ಥೆ ಇರುವಂತೆ ಮಂಗಳೂರಿನಲ್ಲಿಯೂ ಬಸ್ ವ್ಯವಸ್ಥೆ ಮಾಡಬೇಕು ಎಂದು ವಿಜಯವಾಣಿ ಮತ್ತು ಪವರ್ ಟಿವಿ ದೆಹಲಿ ಪ್ರತಿನಿಧಿಗಳು ಕರ್ನಾಟಕದ ಸಾರಿಗೆ ಸಚಿವ ಶ್ರೀರಾಮುಲುಗೆ ಮನವಿ ನೀಡಿದ್ದರು.

ಈ ಬಗ್ಗೆ ನೀಡಿರುವ ಆದೇಶ ಪತ್ರದಲ್ಲಿ ಬಿಎಂಟಿಸಿಯಿಂದ ಹೆಚ್ಚುವರಿ ಇರುವ ಮೂರು ಬಸ್ಸುಗಳನ್ನು ಎರವಲು ಪಡೆದು ಮಂಗಳೂರಿನಲ್ಲಿ ಬಸ್ ವ್ಯವಸ್ಥೆ ಮಾಡುವಂತೆ ಸೂಚಿಸಲಾಗಿದೆ. ಈಗಾಗಲೇ ಬೆಂಗಳೂರಿನ ಬಿಎಂಟಿಸಿಯಲ್ಲಿ ಕೊರೊನಾ ಕಾರಣದಿಂದ ಹಲವು ಬಸ್ ಗಳನ್ನು ಮೊಟಕು ಮಾಡಿದ್ದು ಅವನ್ನು ಬೇರೆ ನಿಗಮಗಳಿಗೆ ಅಗತ್ಯವಿದ್ದರೆ ಬಳಸಿಕೊಳ್ಳಲು ಸೂಚಿಸಲಾಗಿತ್ತು. ಇದಕ್ಕಾಗಿ ಬೇರೆ ನಿಗಮದವರು ಒಂದು ಲಕ್ಷ ರು.ಗೆ ಹಳೆ ಬಸ್ ಗಳನ್ನು ಪಡೆಯಬಹುದು ಎಂದು ಅಲ್ಲಿನ ವ್ಯವಸ್ಥಾಪಕರು ಇತ್ತೀಚೆಗೆ ಮಾಹಿತಿ ನೀಡಿದ್ದು ಸುದ್ದಿಯಾಗಿತ್ತು. ಇದಕ್ಕೆ ಪೂರಕವಾಗಿ ಈಗ ಮಂಗಳೂರಿನಲ್ಲಿ ಬಿಎಂಟಿಸಿ ಬಸ್ ತಂದು ಓಡಿಸುವಂತೆ ಸ್ವತಃ ಸಾರಿಗೆ ಇಲಾಖೆಯ ಕಾರ್ಯದರ್ಶಿ ಸೂಚನೆ ನೀಡಿದ್ದಾರೆ.
KSRTC to introduce Buses to Mangalore International Airport from the city just as in Bangalore. On the request by two journalists in Delhi this request has been accepted by the transport department and an order has been issued for the same.
07-02-26 05:09 pm
HK News Desk
ಸಿದ್ದರಾಮಯ್ಯರೇ ಐದು ವರ್ಷ ಸಿಎಂ ; ಪುತ್ರ ಯತೀಂದ್ರ ಪ...
07-02-26 02:58 pm
Sanjana Bus Fire Accident, Nelamangala: ಮತ್ತೊ...
06-02-26 12:30 pm
ಭವಿಷ್ಯ ಹೇಳುವ ನೆಪದಲ್ಲಿ ಬೇಟೆ? ರೀಲ್ಸ್ ರಾಣಿಯ ಹಿಂದ...
05-02-26 05:52 pm
ಗದಗದಲ್ಲಿ ಭೀಕರ ರಸ್ತೆ ಅಪಘಾತ ; ಕ್ರೂಸರ್ - ಕ್ಯಾಂಟರ...
05-02-26 03:11 pm
08-02-26 10:18 pm
HK News Desk
25 ವರ್ಷಗಳ ಬಳಿಕ ಮುಂಬೈ ಪಾಲಿಕೆ ಬಿಜೆಪಿ ತೆಕ್ಕೆಗೆ ;...
07-02-26 10:53 pm
ಕಣ್ಣೆದುರೇ ನಡೆದ ಅಚ್ಚರಿ ; 1 ಲಕ್ಷ ರೂ. ಮೌಲ್ಯದ ಚಿನ...
06-02-26 10:58 pm
ಕೊರಿಯನ್ ವೆಬ್ ಸಿರೀಸ್ ವ್ಯಸನ, ತಂದೆಯ ಎರಡು ಕೋಟಿ ಸಾ...
06-02-26 08:47 pm
SBI ಬ್ಯಾಂಕ್ ಕಿತಾಪತಿ ; 2 ಕೋಟಿ ಮೌಲ್ಯದ ಚಿನ್ನ–ಬೆಳ...
06-02-26 08:17 pm
08-02-26 11:17 pm
HK News Desk
ಜಾಗತಿಕ ಪ್ರವಾಸಿ ತಾಣಗಳ ಅಭಿವೃದ್ಧಿ ; ಕೋಡಿ- ಕನ್ಯಾನ...
08-02-26 10:10 pm
ಬೈಂದೂರು ಕ್ಷೇತ್ರದ ಮಾಜಿ ಶಾಸಕ, ಜನತಾ ಪರಿವಾರದ ಹಿರಿ...
07-02-26 12:55 pm
DK Shivakumar, Puttur: ಪಕ್ಷ ಏನು ಹೇಳುತ್ತೋ ಅದೇ...
07-02-26 11:53 am
ಬಿಜೆಪಿಯವರು ತಿಪ್ಪರಲಾಗ ಹೊಡೆದ್ರೂ ಅಧಿಕಾರಕ್ಕೆ ಬರಲ್...
06-02-26 10:56 pm
08-02-26 02:07 pm
Mangalore Correspondent
MDMA ಮಾದಕ ವಸ್ತು ಮಾರಾಟ ಮಾಡುತ್ತಿದ್ದಾಗ ಪೊಲೀಸ್ ದಾ...
08-02-26 12:59 pm
Mangalore Robbery, Crime: ಕಳವಾರಿಗೆ ಮೆಹಂದಿ ಹೋಗ...
08-02-26 12:37 pm
ಫ್ರೀ ಫೈರ್ ಗೇಮ್ ಚಟ ; ಅಕ್ಕನ ಮಗನ ಕೊಂದಿದ್ದ ಮಾವ, ಪ...
07-02-26 10:48 pm
ಡಿಜಿಟಲ್ ಅರೆಸ್ಟ್ ; ಮಹಿಳೆಗೆ 15 ನಿಮಿಷದಲ್ಲಿ 50 ಲಕ...
07-02-26 10:07 pm