ಬ್ರೇಕಿಂಗ್ ನ್ಯೂಸ್
28-06-22 12:29 pm Mangalore Correspondent ಕರಾವಳಿ
ಮಂಗಳೂರು, ಜೂನ್ 28 : ಕೋತಿರಾಜ ಬರಿಗೈ, ಬರಿಕಾಲಿನಲ್ಲಿ ಕಟ್ಟಡ ಹತ್ತೋದು, ಕೋಟೆ ಹತ್ತೋದನ್ನು ನೋಡಿದ್ದೇವೆ. ಆದರೆ ಇಲ್ಲೊಬ್ಬರು ಪೊಲೀಸ್ ಐಪಿಎಸ್ ಅಧಿಕಾರಿಯೊಬ್ಬರು ಬರಿಗಾಲಲ್ಲಿ ಚಿತ್ರದುರ್ಗ ಜಿಲ್ಲೆಯ ಕಲ್ಲಿನಕೋಟೆಯನ್ನು ಏರಿದ್ದು ಸಾರ್ವಜನಿಕರ ಗಮನ ಸೆಳೆದಿದ್ದಾರೆ. ಅದರ ವೀಡಿಯೋ ತುಣುಕು ಸಾಮಾಜಿಕ ಜಾಲತಾಣದಲ್ಲಿ ಸಖತ್ ವೈರಲ್ ಆಗಿದೆ.
ಚಿತ್ರದುರ್ಗ ಜಿಲ್ಲೆಯ ಮೂಲದ, ಸದ್ಯಕ್ಕೆ ಮಂಗಳೂರು ನಗರದಲ್ಲಿ ಪೊಲೀಸ್ ಕಮಿಷನರ್ ಆಗಿರುವ ಶಶಿಕುಮಾರ್ ಕಲ್ಲಿನಕೋಟೆ ಏರಿದ ಅಧಿಕಾರಿ. ಕೋತಿರಾಜ ಹೇಗೆ ಕಲ್ಲಿನ ಗೋಡೆಯನ್ನು ಹತ್ತುತ್ತಾರೋ ಅದೇ ಮಾದರಿಯಲ್ಲಿ ಕಲ್ಲಿನ ಗೋಡೆಯನ್ನು ಏರಿದ ಅಧಿಕಾರಿ ಸಾರ್ವಜನಿಕರ ಗಮನ ಸೆಳೆದಿದ್ದಾರೆ. ಐಪಿಎಸ್ ಅಧಿಕಾರಿ ಶಶಿಕುಮಾರ್ ಅವರು ಚಿತ್ರದುರ್ಗ ಜಿಲ್ಲೆಯ ಹಿರಿಯೂರು ತಾಲೂಕು ಪಿಟ್ಲಾಲಿ ಗ್ರಾಮದ ನಿವಾಸಿ. ಕೋಟೆ ಏರುವ ಕನಸು ಹೊಂದಿದ್ದ ಇವರು ಕೋತಿರಾಜ್ ಸಲಹೆ ಪಡೆದೇ 25 ಅಡಿ ಎತ್ತರದ ಕೋಟೆಯನ್ನು ಏರಿದ್ದಾರೆ.







ಅಧಿಕಾರಿ ಕೋಟೆ ಏರಿದ ದೃಶ್ಯ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗುತ್ತಿದೆ. ನಮ್ಮ ಚಿತ್ರದುರ್ಗ, ನಮ್ಮ ಹೆಮ್ಮೆ ಎಂಬ ಬರಹದೊಂದಿಗೆ ಅಧಿಕಾರಿ ಶಶಿಕುಮಾರ್ ತಮ್ಮ ಫೇಸ್‌ಬುಕ್ ಖಾತೆಯಲ್ಲಿ ವೀಡಿಯೋವನ್ನು ಹಂಚಿಕೊಂಡಿದ್ದಾರೆ. ಕೃಷಿ, ಚಾರಣ, ಬೆಟ್ಟ ಏರುವುದು, ಪ್ರವಾಸ ಹೋಗುವುದು, ದನ ಸಾಕುವುದು ಹೀಗೆ ವಿಭಿನ್ನ ಹವ್ಯಾಸಗಳನ್ನು ಬೆಳೆಸಿಕೊಂಡಿರುವ ಶಶಿಕುಮಾರ್ ಈಗ ಚಿತ್ರದುರ್ಗದ ಕಲ್ಲಿನ ಕೋಟೆಯನ್ನು ಬರಿಗಾಲಲ್ಲಿ ಏರುವ ಮೂಲಕ ಮತ್ತೆ ಗಮನ ಸೆಳೆದಿದ್ದಾರೆ.
No wall is too high for Mangalore Police Commissioner Shashi Kumar, video of chitradurga rock climbing without any support goes viral. IPS Shashi Kumar hails from Chitradurga and during his visit to home town he has performed this act which has now gone viral on social media.
19-09-26 05:44 pm
HK News Staffer
B K Hariprasad: ಉಮರ್ ಖಾಲಿದ್ ರಾಷ್ಟ್ರೀಯವಾದಿ ದೇಶ...
17-09-26 04:13 pm
ಚಿತ್ರರಂಗದ ಸಾರ್ವಕಾಲಿಕ ಶ್ರೇಷ್ಠ ನಟ ಅನಂತನಾಗ್ ಗೆ '...
16-09-26 10:40 pm
Tulu Language, Shivraj Tangadagi: ತುಳುವಿಗೆ 2ನ...
16-09-26 01:51 pm
Pradeep Eshwar, Pratap Simha: ಪೊಲೀಸ್ ಠಾಣೆಗೆ...
15-09-26 09:13 pm
19-09-26 05:40 pm
HK News Staffer
Mamata Banerjee, Sanchita Pradhan, Rejinagar:...
19-09-26 03:37 pm
ಮುಂಬೈನಲ್ಲಿ ಕುಡಿಯುವ ನೀರಿಗೆ ತೀವ್ರ ಬರ ; ಸಮುದ್ರದ...
13-09-26 09:00 pm
80s ಫೋಟೋ ಟ್ರೆಂಡ್ಗೆ ಮಾರುಹೋಗಿದ್ದೀರಾ? ಹುಷಾರ್ ;...
12-09-26 01:10 pm
ಕಾಶ್ಮೀರಿ ಪಂಡಿತರಿಗೆ ಮತ್ತೆ ಬೆದರಿಕೆ ; ಉದ್ಯೋಗ ಬಿಟ...
10-09-26 01:23 pm
19-09-26 10:11 am
HK News Staffer
ಮಂಗಳೂರಿನಲ್ಲಿ ಮೊದಲ ಸಚಿವ ಸಂಪುಟ ಸಭೆ ; 32,611 ಕೋಟ...
18-09-26 07:30 pm
Puttur Medical College, Dakshina Kannada, Man...
18-09-26 06:08 pm
Tulu second official language: ತುಳುನಾಡಿನ ದಶಕಗ...
18-09-26 04:46 pm
Dk Shivakumar, Mangalore, social media: ಸೋಶಿಯ...
18-09-26 04:11 pm
17-09-26 02:22 pm
HK News Staffer
Bangalore Murder, Crime: ಪ್ರೀತಿಸಿ ಮದುವೆಯಾಗಿದ್...
17-09-26 01:56 pm
Bangalore kidnap, Crime: ಬೆಂಗಳೂರಿನಲ್ಲಿ ಶಾಕ್...
17-09-26 12:35 pm
Manglore Cyber crime, Stock Market: ಷೇರು ಮಾರ್...
17-09-26 11:45 am
ಬೆಳ್ತಂಗಡಿ; ಗೃಹಪ್ರವೇಶಕ್ಕೆ ಹೋದಾಗ ಮನೆಗೆ ಕನ್ನ, ₹1...
16-09-26 11:18 am