ಬ್ರೇಕಿಂಗ್ ನ್ಯೂಸ್
03-07-22 08:49 pm HK News Desk ಕರಾವಳಿ
ಉಳ್ಳಾಲ, ಜು.3: ತೊಟ್ಟಿಲು ತೂಗುವ ಸಂಭ್ರಮಕ್ಕಾಗಿ ಸಂಬಂಧಿಕರ ಮನೆಗೆ ಬಂದಿದ್ದ ಐವರು ಕಾಲೇಜು ವಿದ್ಯಾರ್ಥಿಗಳು ನೇತ್ರಾವತಿ ನದಿಯಲ್ಲಿ ನೀರಾಟಕ್ಕೆ ತೆರಳಿದ್ದ ಸಂದರ್ಭದಲ್ಲಿ ಓರ್ವ ಯುವಕ ನೀರುಪಾಲಾದ ಘಟನೆ ಸಜಿಪ ಪಡು ಬಳಿಯ ಕೋಟೆಕಣಿ- ತಲೆಮೊಗರು ಎಂಬಲ್ಲಿ ನಡೆದಿದೆ.
ತಲೆಮೊಗರು ನಿವಾಸಿ ಅಶ್ವಿತ್ ಗಾಣಿಗ(19) ನೀರುಪಾಲಾದ ಯುವಕ. ಸಜಿಪ ನಡು ಬಳಿಯ ತಲೆಮೊಗರು ನಿವಾಸಿ ನಾಗೇಶ್ ಗಾಣಿಗ ಎಂಬವರ ಮನೆಯಲ್ಲಿ ಮಗುವನ್ನ ತೊಟ್ಟಿಲು ತೂಗುವ ಸಮಾರಂಭ ಏರ್ಪಡಿಸಲಾಗಿತ್ತು. ಕಾರ್ಯಕ್ರಮಕ್ಕೆ ಬಂದಿದ್ದ ಅಶ್ವಿತ್ ಗಾಣಿಗ, ಅಲ್ಲಿದ್ದ ಗೆಳೆಯರಾದ ವಿಶಾಲ್ ಗಾಣಿಗ, ವಿಕಾಸ್ ಗಾಣಿಗ, ಲಿಖಿತ್ ಗಾಣಿಗ, ಹರ್ಷ ಗಾಣಿಗ ಜೊತೆ ಸಮೀಪದ ನೇತ್ರಾವತಿ ನದಿಗೆ ನೀರಾಟವಾಡಲು ತೆರಳಿದ್ದರು.



ಈ ವೇಳೆ ಅಶ್ವಿತ್ ಮತ್ತು ಹರ್ಷ ನೀರುಪಾಲಾಗಿದ್ದು ಜತೆಯಲ್ಲಿದ್ದ ಯುವಕರು ಹರ್ಷನನ್ನ ರಕ್ಷಿಸಿ ಮೇಲಕ್ಕೆತ್ತಿದ್ದಾರೆ. ಯುವಕರ ಕೂಗು ಕೇಳಿಸಿ ಸ್ಥಳಕ್ಕೆ ದೌಡಾಯಿಸಿದ ಸ್ಥಳೀಯರಾದ ರಾಜೇಶ್ ಮತ್ತು ಹರೀಶ್ ಎಂಬವರು ಗಂಭೀರ ಸ್ಥಿತಿಯಲ್ಲಿದ್ದ ಹರ್ಷನಿಗೆ ಪ್ರಥಮ ಚಿಕಿತ್ಸೆ ನೀಡಿ ಆಸ್ಪತ್ರೆ ಸೇರಿಸಿದ್ದಾರೆ. ನೀರು ಪಾಲಾದ ಅಶ್ವಿತ್ ಗಾಗಿ ಸ್ಥಳೀಯ ದೋಣಿಗಾರರು ಮತ್ತು ಅಗ್ನಿಶಾಮಕ ದಳದ ಸಿಬ್ಬಂದಿ ಶೋಧ ಕಾರ್ಯ ನಡೆಸುತ್ತಿದ್ದಾರೆ. ಬಂಟ್ವಾಳ ಗ್ರಾಮಾಂತರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
Ullal 19 year old youth drowns in Netravati river while playing in Mangalore. The deceased has been identified as Ashwith Ganiga. The youth had come to celebrate the function of naming ceremony of his relative during which he lost his life.
19-09-26 05:44 pm
HK News Staffer
B K Hariprasad: ಉಮರ್ ಖಾಲಿದ್ ರಾಷ್ಟ್ರೀಯವಾದಿ ದೇಶ...
17-09-26 04:13 pm
ಚಿತ್ರರಂಗದ ಸಾರ್ವಕಾಲಿಕ ಶ್ರೇಷ್ಠ ನಟ ಅನಂತನಾಗ್ ಗೆ '...
16-09-26 10:40 pm
Tulu Language, Shivraj Tangadagi: ತುಳುವಿಗೆ 2ನ...
16-09-26 01:51 pm
Pradeep Eshwar, Pratap Simha: ಪೊಲೀಸ್ ಠಾಣೆಗೆ...
15-09-26 09:13 pm
19-09-26 05:40 pm
HK News Staffer
Mamata Banerjee, Sanchita Pradhan, Rejinagar:...
19-09-26 03:37 pm
ಮುಂಬೈನಲ್ಲಿ ಕುಡಿಯುವ ನೀರಿಗೆ ತೀವ್ರ ಬರ ; ಸಮುದ್ರದ...
13-09-26 09:00 pm
80s ಫೋಟೋ ಟ್ರೆಂಡ್ಗೆ ಮಾರುಹೋಗಿದ್ದೀರಾ? ಹುಷಾರ್ ;...
12-09-26 01:10 pm
ಕಾಶ್ಮೀರಿ ಪಂಡಿತರಿಗೆ ಮತ್ತೆ ಬೆದರಿಕೆ ; ಉದ್ಯೋಗ ಬಿಟ...
10-09-26 01:23 pm
19-09-26 10:11 am
HK News Staffer
ಮಂಗಳೂರಿನಲ್ಲಿ ಮೊದಲ ಸಚಿವ ಸಂಪುಟ ಸಭೆ ; 32,611 ಕೋಟ...
18-09-26 07:30 pm
Puttur Medical College, Dakshina Kannada, Man...
18-09-26 06:08 pm
Tulu second official language: ತುಳುನಾಡಿನ ದಶಕಗ...
18-09-26 04:46 pm
Dk Shivakumar, Mangalore, social media: ಸೋಶಿಯ...
18-09-26 04:11 pm
17-09-26 02:22 pm
HK News Staffer
Bangalore Murder, Crime: ಪ್ರೀತಿಸಿ ಮದುವೆಯಾಗಿದ್...
17-09-26 01:56 pm
Bangalore kidnap, Crime: ಬೆಂಗಳೂರಿನಲ್ಲಿ ಶಾಕ್...
17-09-26 12:35 pm
Manglore Cyber crime, Stock Market: ಷೇರು ಮಾರ್...
17-09-26 11:45 am
ಬೆಳ್ತಂಗಡಿ; ಗೃಹಪ್ರವೇಶಕ್ಕೆ ಹೋದಾಗ ಮನೆಗೆ ಕನ್ನ, ₹1...
16-09-26 11:18 am