ಬ್ರೇಕಿಂಗ್ ನ್ಯೂಸ್
07-07-22 07:40 pm Mangalore Correspondent ಕರಾವಳಿ
ಉಳ್ಳಾಲ, ಜು.7 : ರಾಜ್ಯದಲ್ಲಿ ಬಿಜೆಪಿ ಹತ್ತು ವರ್ಷ ಅಷ್ಟೇ ಆಡಳಿತ ನಡೆಸಿದೆ. ಕಳೆದ ಅರುವತ್ತು ವರುಷದಿಂದಲೂ ಕಾಂಗ್ರೆಸ್ ಅಧಿಕಾರದಲ್ಲಿತ್ತು. ಆಗ ಕಡಲೂ ಇತ್ತು, ಕೊರೆತನೂ ಇತ್ತು. ಕಾಂಗ್ರೆಸ್ಸೂ ಇತ್ತು. ಹಾಗಿದ್ರೂ ಕಡಲ್ಕೊರೆತಕ್ಕೆ ಪರಿಹಾರ ಯಾಕೆ ಕೈಗೊಂಡಿಲ್ಲ ಎಂದು ಕಂದಾಯ ಸಚಿವ ಆರ್.ಅಶೋಕ್ ಅವರು ವಿಧಾನಸಭೆ ವಿಪಕ್ಷ ಉಪನಾಯಕ ಯು.ಟಿ ಖಾದರ್ ಅವರಿಗೆ ಟಾಂಗ್ ನೀಡಿದ್ದಾರೆ.
ಅವರಿಂದು ಸೋಮೇಶ್ವರ, ಉಚ್ಚಿಲ ಬಟ್ಟಪ್ಪಾಡಿ, ಉಳ್ಳಾಲದ ಕಡಲ್ಕೊರೆತ ಪೀಡಿತ ಪ್ರದೇಶಗಳಿಗೆ ಭೇಟಿ ನೀಡಿ ಅವಲೋಕನ ನಡೆಸಿದರು. ಉಳ್ಳಾಲದ ಶಾಸಕ ಯು.ಟಿ.ಖಾದರ್ ಅವರು ಚುನಾವಣೆ ದೃಷ್ಟಿ ಮುಂದಿಟ್ಟು ಸುಮ್ಮನೆ ಆಪಾದನೆ ಮಾಡೋದನ್ನ ಬಿಡಲಿ. ಕಾಂಗ್ರೆಸ್ ಅಧಿಕಾರದಲ್ಲಿದ್ದಾಗ ಈ ಪ್ರದೇಶಗಳಿಗೆ ಏನ್ ಮಾಡಿದ್ದಾರೆ ಎಂದು ಜನರಿಗೆ ತಿಳಿದಿದೆ. ಸರಕಾರದ ವಿರುದ್ಧ ಟೀಕೆ, ಟಿಪ್ಪಣಿ ಸಹಜ. ನಾವು ರಾಜಕೀಯ ಮಾಡಲ್ಲ. ಕಡಲ್ಕೊರೆತ ಪ್ರದೇಶಗಳಿಗೆ ಭೇಟಿ ನೀಡಿದ್ದೇವೆ. ಸಂತ್ರಸ್ತರಿಗೆ ಶೀಘ್ರ ಪರಿಹಾರನೂ ಒದಗಿಸುತ್ತೇವೆ. ತಜ್ಞರ ತಂಡದಿಂದ ಸಮೀಕ್ಷೆ ನಡೆಸಿ ಮುಖ್ಯಮಂತ್ರಿಗಳಲ್ಲಿ ಮಾತನಾಡಿ ಕಡಲ್ಕೊರೆತಕ್ಕೆ ಶಾಶ್ವತ ಪರಿಹಾರ ಕಂಡುಕೊಳ್ಳುವುದಾಗಿ ಹೇಳಿದರು.




ಈ ಬಾರಿ ಏಳು ಜಿಲ್ಲೆಗಳಲ್ಲಿ ಬಹಳಷ್ಟು ಮಳೆ ಆಗಿದ್ದು, ಕ್ರಮ ಕೈಗೊಳ್ಳಲು ಎಲ್ಲಾ ಜಿಲ್ಲೆಯ ಜಿಲ್ಲಾಧಿಕಾರಿಗಳಿಗೂ ಸೂಚನೆ ಕೊಟ್ಟಿದ್ದೇನೆ. ಮನೆ ಕಳಕೊಂಡವರಿಗೆ NDRF ನಿಯಮ ಪ್ರಕಾರ ಈ ಹಿಂದೆ 95,000 ಪರಿಹಾರ ಇದ್ದು ಮುಖ್ಯಂತ್ರಿಗಳಲ್ಲಿ ಮಾತನಾಡಿ ಅದನ್ನ 5 ಲಕ್ಷಕ್ಕೆ ಏರಿಸಿದ್ದೇವೆ. ಸಂತ್ರಸ್ತರಿಗೆ ಶೀಘ್ರ ಪರಿಹಾರ ಒದಗಿಸುವಂತೆ ಆದೇಶಿಸಿರುವುದಾಗಿ ಹೇಳಿದರು.





ಜಿಲ್ಲಾ ಉಸ್ತುವಾರಿ ಸಚಿವ ಸುನಿಲ್ ಕುಮಾರ್ ಮಾತನಾಡಿ ಸಮುದ್ರ ತೀರದ ನಿವಾಸಿಗಳ ರಕ್ಷಣೆಗೆ ನಾವು ಆದ್ಯತೆ ನೀಡುತ್ತೇವೆಯೇ ಹೊರತು ರೆಸಾರ್ಟ್ ಗಳ ರಕ್ಷಣೆಗೆ ಆದ್ಯತೆ ನೀಡಲ್ಲ ಎಂದರು.
ಬಂದರು ಸಚಿವ ಎಸ್.ಅಂಗಾರ, ಬಿಜೆಪಿ ಮುಖಂಡರಾದ ಸಂತೋಷ್ ಕುಮಾರ್ ಬೋಳಿಯಾರ್, ಚಂದ್ರಹಾಸ್ ಪಂಡಿತ್ ಹೌಸ್ ಮೊದಲಾದವರು ಜೊತೆಯಲ್ಲಿದ್ದರು.
Minister Ashok in Ullal Mangalore, taunts MLA UT Khader, says what has congress done to control sea erosion during his visit in Mangaluru. He also said that people who have lost their homes and have been affected due to soil erosion will have packages from the government.
13-11-25 08:33 pm
HK News Desk
ಸಿದ್ದರಾಮಯ್ಯ ಸಿಎಂ ಆಗಿ ಮುಂದುವರಿದರೆ ತಪ್ಪೇನು? ನಾವ...
12-11-25 11:10 pm
ಧರ್ಮಸ್ಥಳ ಶವ ಹೂತ ಪ್ರಕರಣದಲ್ಲಿ ಎಸ್ಐಟಿ ತನಿಖೆಯ ತಡ...
12-11-25 11:06 pm
ಯಾರೂ ಗೂಟ ಹೊಡೆದು ಇರಕ್ಕಾಗಲ್ಲ, ಬಿಹಾರ ಚುನಾವಣೆ ಟೈಮ...
12-11-25 09:03 pm
ವಿಮಾನ ನಿಲ್ದಾಣದಲ್ಲಿ ನಮಾಜ್ ; ಅವರು ಎಲ್ಲಾದ್ರೂ ಶ್ರ...
10-11-25 07:17 pm
14-11-25 09:10 pm
HK News Desk
ಬಿಹಾರದಲ್ಲಿ ಎನ್ ಡಿಎ ಕ್ಲೀನ್ ಸ್ವೀಪ್ ಜಯಭೇರಿ ; 190...
14-11-25 11:50 am
ದೆಹಲಿ ಸ್ಫೋಟ ಪ್ರಕರಣ ; ಕಾನ್ಪುರ ವೈದ್ಯಕೀಯ ವಿದ್ಯಾರ...
13-11-25 10:56 pm
ಇಬ್ಬರು ಉಗ್ರರ ಡೈರಿ ಪತ್ತೆ ; ಮಹತ್ತರ ಮಾಹಿತಿ ಬಹಿರಂ...
13-11-25 08:41 pm
Tiruchi Aircraft: ತಿರುಚಿ- ಪುದುಕೋಟೈ ಹೆದ್ದಾರಿಯಲ...
13-11-25 05:13 pm
14-11-25 10:10 pm
Mangalore Correspondent
ಸರ್ಕಾರಿ ಶಾಲೆಯಲ್ಲಿ ಆಂಗ್ಲ ಮಾಧ್ಯಮ ಶಿಕ್ಷಣ ; ಮಕ್ಕ...
14-11-25 09:03 pm
ಡಿಸಿಸಿ ಬ್ಯಾಂಕ್ ಸಾಲಕ್ಕೆ ಜಾಮೀನು ನಿಂತು ಚೆಕ್ ನೀಡಿ...
14-11-25 03:34 pm
ಸದಸ್ಯತ್ವ ಕಳಕೊಂಡವರಿಂದಲೇ ದರ್ಗಾ ಕಮಿಟಿ ವಿರುದ್ಧ ಅಪ...
13-11-25 07:41 pm
Belthangady, Kadaba Suicide, Mangalore; ಕಡಬದ...
13-11-25 05:01 pm
14-11-25 05:32 pm
HK News Desk
Ullal News, Animal Attack, Crime, Kumpala: ಕಣ...
14-11-25 11:16 am
ಮಂಗಳೂರಿನಲ್ಲಿ ಡಿಜಿಟಲ್ ಅರೆಸ್ಟ್ ವಂಚನೆ ಹೆಚ್ಚಳ ; ಮ...
13-11-25 10:09 pm
Sexual Harassment in Anekal: ಸ್ಕ್ಯಾನಿಂಗ್ ವೇಳ...
13-11-25 10:00 pm
ವಿದೇಶಿ ಕಂಪನಿಯಲ್ಲಿ ಹೂಡಿಕೆ ಮಾಡಿದರೆ ದುಪ್ಪಟ್ಟು ಲಾ...
12-11-25 12:32 pm