ಬ್ರೇಕಿಂಗ್ ನ್ಯೂಸ್
12-07-22 12:46 pm Mangalore Correspondent ಕರಾವಳಿ
ಪುತ್ತೂರು, ಜುಲೈ 12 : ಕಾಣಿಯೂರು ಹೊಳೆಗೆ ಬಿದ್ದ ಕಾರಿನಲ್ಲಿದ್ದು ನಾಪತ್ತೆಯಾಗಿದ್ದ ಇಬ್ಬರು ಯುವಕರ ಮೃತದೇಹ ಇಂದು ಬೆಳಗ್ಗೆ ಪತ್ತೆಯಾಗಿದೆ. ಕಾರು ಬಿದ್ದ ಜಾಗದಿಂದ 500 ಮೀಟರ್ ದೂರದಲ್ಲಿ ಎರಡೂ ಶವಗಳು ಪತ್ತೆಯಾಗಿವೆ.
ಜುಲೈ 10ರ ನಸುಕಿನಲ್ಲಿ ಕಾಣಿಯೂರಿನ ಬೈತಡ್ಕ ಎಂಬಲ್ಲಿ ಕಾರು ಹೊಳೆಗೆ ಬಿದ್ದಿತ್ತು. ಕಾರಿನಲ್ಲಿದ್ದ ವಿಟ್ಲದ ಧನುಷ್ (26)ಮತ್ತು ಕನ್ಯಾನ ನಿವಾಸಿ ಧನಂಜಯ(24) ಎಂಬವರು ನಾಪತ್ತೆಯಾಗಿದ್ದರು. ಇಬ್ಬರೂ ನೀರಿನಲ್ಲಿ ಕೊಚ್ಚಿ ಹೋದ ಬಗ್ಗೆ ಶಂಕೆ ವ್ತಕ್ತವಾಗಿತ್ತು.


ಭಾನುವಾರ ಬೆಳಗ್ಗೆ ವಿಷಯ ತಿಳಿಯುತ್ತಲೇ ಸ್ಥಳೀಯರು, ಪೊಲೀಸರು, ಅಗ್ನಿಶಾಮಕ ಸಿಬಂದಿ ಹುಡುಕಾಟ ನಡೆಸಿದ್ದರು. ಎರಡು ದಿನ ಹುಡುಕಾಟ ನಡೆಸಿದರೂ ಪತ್ತೆ ಆಗಿರಲಿಲ್ಲ. ಬಹುತೇಕ ಹೊಳೆಯಲ್ಲಿ ಕೊಚ್ಚಿ ಹೋಗಿ ಮುಂದೆ ಕುಮಾರಧಾರಾ ನದಿಗೆ ಸೇರಿದ್ದಿರಬಹುದೆಂಬ ಶಂಕೆ ಇತ್ತು. ಆದರೆ ಸೋಮವಾರ ಮಳೆ ಕಡಿಮೆಯಾಗಿತ್ತು. ಇದರಿಂದಾಗಿ ಹೊಳೆಯಲ್ಲಿ ನೀರಿನ ಪ್ರಮಾಣವೂ ಕಡಿಮೆಯಾಗಿತ್ತು.


ಇಂದು ಬೆಳಗ್ಗೆ ಸ್ಥಳೀಯರು ಹೊಳೆಯಲ್ಲಿ ಗಮನಿಸಿದಾಗ, ಬೈತಡ್ಕ ಸೇತುವೆಯಿಂದ ಅನತಿ ದೂರದಲ್ಲಿ ಮರದ ದಿಮ್ಮಿಯ ಎಡೆಯಲ್ಲಿ ಸಿಕ್ಕಿಕೊಂಡ ರೀತಿ ಒಂದು ಶವ ಪತ್ತೆಯಾಗಿದೆ. ಆನಂತರ ಹತ್ತು ಗಂಟೆ ವೇಳೆಗೆ, ಅಲ್ಲಿಂದ ಸ್ವಲ್ಪ ದೂರದಲ್ಲಿ ಮತ್ತೊಂದು ಶವವೂ ಸಿಕ್ಕಿದೆ. ಎರಡೂ ಶವಗಳನ್ನು ಪೊಲೀಸರು ವಶಕ್ಕೆ ಪಡೆದು ಪೋಸ್ಟ್ ಮಾರ್ಟಂ ನಡೆಸಲು ವೈದ್ಯರ ವಶಕ್ಕೆ ನೀಡಿದ್ದಾರೆ.
ಹೊಳೆಗೆ ಬಿದ್ದ ಕಾರು ಪತ್ತೆ ; ವಿಟ್ಲದ ಯುವಕರಿಬ್ಬರು ಕೊಚ್ಚಿ ಹೋಗಿರುವ ಶಂಕೆ, ಸ್ಥಳದಲ್ಲಿ ಜನಸಾಗರ !
ಮಧ್ಯರಾತ್ರಿ ಹೊಳೆಗೆ ಬಿದ್ದ ಕಾರು ; ಕಾಣಿಯೂರು ಹೊಳೆಯಲ್ಲಿ ಅಗ್ನಿಶಾಮಕ ದಳ ಹುಡುಕಾಟ, ಕಾರಿನಲ್ಲಿ ಮೂವರಿದ್ದ ಶಂಕೆ !
Puttur Speeding car falls into river, missing bodies of the two found. The car fell on Sunday after it lost its control.
13-11-25 08:33 pm
HK News Desk
ಸಿದ್ದರಾಮಯ್ಯ ಸಿಎಂ ಆಗಿ ಮುಂದುವರಿದರೆ ತಪ್ಪೇನು? ನಾವ...
12-11-25 11:10 pm
ಧರ್ಮಸ್ಥಳ ಶವ ಹೂತ ಪ್ರಕರಣದಲ್ಲಿ ಎಸ್ಐಟಿ ತನಿಖೆಯ ತಡ...
12-11-25 11:06 pm
ಯಾರೂ ಗೂಟ ಹೊಡೆದು ಇರಕ್ಕಾಗಲ್ಲ, ಬಿಹಾರ ಚುನಾವಣೆ ಟೈಮ...
12-11-25 09:03 pm
ವಿಮಾನ ನಿಲ್ದಾಣದಲ್ಲಿ ನಮಾಜ್ ; ಅವರು ಎಲ್ಲಾದ್ರೂ ಶ್ರ...
10-11-25 07:17 pm
14-11-25 09:10 pm
HK News Desk
ಬಿಹಾರದಲ್ಲಿ ಎನ್ ಡಿಎ ಕ್ಲೀನ್ ಸ್ವೀಪ್ ಜಯಭೇರಿ ; 190...
14-11-25 11:50 am
ದೆಹಲಿ ಸ್ಫೋಟ ಪ್ರಕರಣ ; ಕಾನ್ಪುರ ವೈದ್ಯಕೀಯ ವಿದ್ಯಾರ...
13-11-25 10:56 pm
ಇಬ್ಬರು ಉಗ್ರರ ಡೈರಿ ಪತ್ತೆ ; ಮಹತ್ತರ ಮಾಹಿತಿ ಬಹಿರಂ...
13-11-25 08:41 pm
Tiruchi Aircraft: ತಿರುಚಿ- ಪುದುಕೋಟೈ ಹೆದ್ದಾರಿಯಲ...
13-11-25 05:13 pm
14-11-25 11:01 pm
Mangalore Correspondent
Kumpala, Dog, Crime, Mangalore: ಬೀದಿ ನಾಯಿಗಳ ದ...
14-11-25 10:10 pm
ಸರ್ಕಾರಿ ಶಾಲೆಯಲ್ಲಿ ಆಂಗ್ಲ ಮಾಧ್ಯಮ ಶಿಕ್ಷಣ ; ಮಕ್ಕ...
14-11-25 09:03 pm
ಡಿಸಿಸಿ ಬ್ಯಾಂಕ್ ಸಾಲಕ್ಕೆ ಜಾಮೀನು ನಿಂತು ಚೆಕ್ ನೀಡಿ...
14-11-25 03:34 pm
ಸದಸ್ಯತ್ವ ಕಳಕೊಂಡವರಿಂದಲೇ ದರ್ಗಾ ಕಮಿಟಿ ವಿರುದ್ಧ ಅಪ...
13-11-25 07:41 pm
14-11-25 05:32 pm
HK News Desk
Ullal News, Animal Attack, Crime, Kumpala: ಕಣ...
14-11-25 11:16 am
ಮಂಗಳೂರಿನಲ್ಲಿ ಡಿಜಿಟಲ್ ಅರೆಸ್ಟ್ ವಂಚನೆ ಹೆಚ್ಚಳ ; ಮ...
13-11-25 10:09 pm
Sexual Harassment in Anekal: ಸ್ಕ್ಯಾನಿಂಗ್ ವೇಳ...
13-11-25 10:00 pm
ವಿದೇಶಿ ಕಂಪನಿಯಲ್ಲಿ ಹೂಡಿಕೆ ಮಾಡಿದರೆ ದುಪ್ಪಟ್ಟು ಲಾ...
12-11-25 12:32 pm