ಸಿಎಂ ಕಾರ್ಯಕ್ರಮಕ್ಕೆ ತೆರಳುವ ಧಾವಂತ ; ಸಚಿವ ಕೋಟ ಶ್ರೀನಿವಾಸ ಪೂಜಾರಿ ಬೆಂಗಾವಲು ವಾಹನ ಡಿವೈಡರ್ ಮೇಲೆ ಪಲ್ಟಿ ! 

12-07-22 06:01 pm       Udupi Correspondent   ಕರಾವಳಿ

ಸಮಾಜ ಕಲ್ಯಾಣ ಸಚಿವ ಕೋಟ ಶ್ರೀನಿವಾಸ ಪೂಜಾರಿ ಜೊತೆಗೆ ತೆರಳುತ್ತಿದ್ದ ಪೊಲೀಸ್ ಬೆಂಗಾವಲು ವಾಹನ ಚಾಲಕನ ನಿಯಂತ್ರಣ ತಪ್ಪಿ ಡಿವೈಡರ್ ಮೇಲೆ ಪಲ್ಟಿಯಾದ ಘಟನೆ ಸಂತೆಕಟ್ಟೆ ಬಳಿಯ ರಾಷ್ಟ್ರೀಯ ಹೆದ್ದಾರಿಯಲ್ಲಿ ನಡೆದಿದೆ.

ಉಡುಪಿ, ಜುಲೈ 12: ಸಮಾಜ ಕಲ್ಯಾಣ ಸಚಿವ ಕೋಟ ಶ್ರೀನಿವಾಸ ಪೂಜಾರಿ ಜೊತೆಗೆ ತೆರಳುತ್ತಿದ್ದ ಪೊಲೀಸ್ ಬೆಂಗಾವಲು ವಾಹನ ಚಾಲಕನ ನಿಯಂತ್ರಣ ತಪ್ಪಿ ಡಿವೈಡರ್ ಮೇಲೆ ಪಲ್ಟಿಯಾದ ಘಟನೆ ಸಂತೆಕಟ್ಟೆ ಬಳಿಯ ರಾಷ್ಟ್ರೀಯ ಹೆದ್ದಾರಿಯಲ್ಲಿ ನಡೆದಿದೆ.

ಸಚಿವ ಕೋಟ ಶ್ರೀನಿವಾಸ ಪೂಜಾರಿಯವರು ಸಿಎಂ ದಕ್ಷಿಣ ಕನ್ನಡ ಜಿಲ್ಲಾ ಪ್ರವಾಸದ ಹಿನ್ನೆಲೆಯಲ್ಲಿ ಅವರ ಕಾರ್ಯಕ್ರಮದಲ್ಲಿ ಭಾಗವಹಿಸಲು ಕೋಟದಿಂದ ಹೊರಟಿದ್ದರು. ಉಡುಪಿ ಜಿಲ್ಲಾ ಪೊಲೀಸರ ಬೆಂಗಾವಲು ವಾಹನ ಸಚಿವರ ಜೊತೆ ಹೊರಟಿತ್ತು. ಆದರೆ ಬೆಂಗಾವಲು ವಾಹನದ ಮುಂದೆ ಸಂಚರಿಸುತ್ತಿದ್ದ ಲಾರಿಯೊಂದು ಯಾವುದೇ ಸೂಚನೆ ನೀಡದೇ ತಿರುವು ಪಡೆದಿದ್ದರಿಂದ ಪೊಲೀಸ್ ವಾಹನ ಚಾಲಕ ಹಾಕಿದ ಬ್ರೇಕಿಗೆ ಡಿವೈಡರ್ ಮೇಲೆ ಹತ್ತಿದ್ದು ಪಲ್ಟಿಯಾಗಿ ಬಿದ್ದಿದೆ.

ವಾಹನದಲ್ಲಿದ್ದ ಬೆಂಗಾವಲು ಪೊಲೀಸ್ ಸಿಬ್ಬಂದಿ ಗಣೇಶ್ ಆಳ್ವ ಎಂಬವರಿಗೆ ಸಣ್ಣ ಪುಟ್ಟ ಗಾಯಗಳಾಗಿದ್ದು, ಸಚಿವರ ಕಾರಿನಲ್ಲಿ ಗಾಯಾಳು ಸಿಬ್ಬಂದಿಯನ್ನು ಕರೆದೊಯ್ದು ಉಡುಪಿ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿದೆ.

Minister Kota Srinivas security car accident tooples after over speeding in Udupi.