ಬ್ರೇಕಿಂಗ್ ನ್ಯೂಸ್
13-07-22 10:35 pm Mangalore Correspondent ಕರಾವಳಿ
ಬಂಟ್ವಾಳ, ಜು.13 : ವಿದ್ಯುತ್ ಕಂಬದಿಂದ ಮುರಿದು ಬಿದ್ದ ಹೈಟೆನ್ಷನ್ ತಂತಿ ತಗುಲಿ ಹಸುವೊಂದು ದಾರುಣವಾಗಿ ಮೃತಪಟ್ಟ ಘಟನೆ ಸಜೀಪ ಮೂಡ ಗ್ರಾಮದ ಕಾರಾಜೆ ಎಂಬಲ್ಲಿ ನಡೆದಿದೆ.
ಕಾರಾಜೆಯ ಬಯಲು ಪ್ರದೇಶದಲ್ಲಿ ಸಂಜೆ ಸುರಿಯುತ್ತಿದ್ದ ಗಾಳಿ ಮಳೆಗೆ ವಿದ್ಯುತ್ ಕಂಬದ ತಂತಿಯು ಮುರಿದು ನೆಲಕ್ಕೆ ಬಿದ್ದಿದೆ. ಸ್ಥಳೀಯರಾದ ಲಿಂಗಪ್ಪ ಬಂಗೇರರ ಹಸುವೊಂದು ಅಲ್ಲೇ ಮೇಯುತ್ತಿದ್ದ ವೇಳೆ ತಂತಿ ಸ್ಪರ್ಶಗೊಂಡು ಸಾವನ್ನಪ್ಪಿದೆ. ಶಾಲಾ ವಿದ್ಯಾರ್ಥಿಗಳು, ಸ್ಥಳೀಯರು ಸಂಚರಿಸುವ ಪ್ರದೇಶ ಇದಾಗಿದ್ದು ಘಟನೆ ನಡೆದ ಸಂದರ್ಭ ಜನರ ಓಡಾಟವಿರದೇ ಇದ್ದುದರಿಂದ ಅನಾಹುತ ತಪ್ಪಿದೆ.


ಘಟನೆಗೆ ಮೆಸ್ಕಾಂ ಇಲಾಖೆಯ ನಿರ್ಲಕ್ಷವೇ ಕಾರಣ ಎಂದು ಹೇಳಲಾಗುತ್ತಿದೆ. ಎರಡು ವಿದ್ಯುತ್ ಕಂಬದ ನಡುವೆ ನಿಯಮ ಪ್ರಕಾರ 30 ಮೀಟರ್ ಅಂತರವಿರಬೇಕಂತೆ. ಆದರೆ ಘಟನೆ ನಡೆದ ಸ್ಥಳದಲ್ಲಿ ಸುಮಾರು 70 ಮೀಟರ್ ಅಂತರದಲ್ಲಿ ಎರಡು ವಿದ್ಯುತ್ ಕಂಬಗಳನ್ನು ಹಾಕಲಾಗಿದ್ದು ವಿದ್ಯುತ್ ತಂತಿಗಳು ಜೋತು ಬಿದ್ದು ನೇತಾಡುತ್ತಿದ್ದು ಇಂದು ಮುರಿದು ಬಿದ್ದಿದೆ. ಈ ಬಗ್ಗೆ ಮೆಸ್ಕಾಂ ಇಲಾಖೆಗೆ ದೂರಿದರೂ ಅಧಿಕಾರಿಗಳು ಇತ್ತ ಗಮನವನ್ನೇ ಹರಿಸಿಲ್ಲವೆಂದು ಸ್ಥಳೀಯರು ಆರೋಪಿಸಿದ್ದಾರೆ.
ಸ್ಥಳಕ್ಕೆ ಮೆಸ್ಕಾಂ ಅಧಿಕಾರಿಗಳು ಭೇಟಿ ನೀಡಿ ಪರಿಶೀಲನೆ ನಡೆಸಿದ್ದು ಸ್ಥಳೀಯರು ಅವ್ಯವಸ್ಥೆಯನ್ನ ಸರಿಪಡಿಸುವಂತೆ ಆಗ್ರಹಿಸಿದ್ದಾರೆ.
Cow electrocuted after high tension wire snaps at Bantwal in Mangalore. Due to heavy rains the wire is cut off from the pole and has created disaster.
13-11-25 08:33 pm
HK News Desk
ಸಿದ್ದರಾಮಯ್ಯ ಸಿಎಂ ಆಗಿ ಮುಂದುವರಿದರೆ ತಪ್ಪೇನು? ನಾವ...
12-11-25 11:10 pm
ಧರ್ಮಸ್ಥಳ ಶವ ಹೂತ ಪ್ರಕರಣದಲ್ಲಿ ಎಸ್ಐಟಿ ತನಿಖೆಯ ತಡ...
12-11-25 11:06 pm
ಯಾರೂ ಗೂಟ ಹೊಡೆದು ಇರಕ್ಕಾಗಲ್ಲ, ಬಿಹಾರ ಚುನಾವಣೆ ಟೈಮ...
12-11-25 09:03 pm
ವಿಮಾನ ನಿಲ್ದಾಣದಲ್ಲಿ ನಮಾಜ್ ; ಅವರು ಎಲ್ಲಾದ್ರೂ ಶ್ರ...
10-11-25 07:17 pm
14-11-25 09:10 pm
HK News Desk
ಬಿಹಾರದಲ್ಲಿ ಎನ್ ಡಿಎ ಕ್ಲೀನ್ ಸ್ವೀಪ್ ಜಯಭೇರಿ ; 190...
14-11-25 11:50 am
ದೆಹಲಿ ಸ್ಫೋಟ ಪ್ರಕರಣ ; ಕಾನ್ಪುರ ವೈದ್ಯಕೀಯ ವಿದ್ಯಾರ...
13-11-25 10:56 pm
ಇಬ್ಬರು ಉಗ್ರರ ಡೈರಿ ಪತ್ತೆ ; ಮಹತ್ತರ ಮಾಹಿತಿ ಬಹಿರಂ...
13-11-25 08:41 pm
Tiruchi Aircraft: ತಿರುಚಿ- ಪುದುಕೋಟೈ ಹೆದ್ದಾರಿಯಲ...
13-11-25 05:13 pm
14-11-25 11:01 pm
Mangalore Correspondent
Kumpala, Dog, Crime, Mangalore: ಬೀದಿ ನಾಯಿಗಳ ದ...
14-11-25 10:10 pm
ಸರ್ಕಾರಿ ಶಾಲೆಯಲ್ಲಿ ಆಂಗ್ಲ ಮಾಧ್ಯಮ ಶಿಕ್ಷಣ ; ಮಕ್ಕ...
14-11-25 09:03 pm
ಡಿಸಿಸಿ ಬ್ಯಾಂಕ್ ಸಾಲಕ್ಕೆ ಜಾಮೀನು ನಿಂತು ಚೆಕ್ ನೀಡಿ...
14-11-25 03:34 pm
ಸದಸ್ಯತ್ವ ಕಳಕೊಂಡವರಿಂದಲೇ ದರ್ಗಾ ಕಮಿಟಿ ವಿರುದ್ಧ ಅಪ...
13-11-25 07:41 pm
14-11-25 05:32 pm
HK News Desk
Ullal News, Animal Attack, Crime, Kumpala: ಕಣ...
14-11-25 11:16 am
ಮಂಗಳೂರಿನಲ್ಲಿ ಡಿಜಿಟಲ್ ಅರೆಸ್ಟ್ ವಂಚನೆ ಹೆಚ್ಚಳ ; ಮ...
13-11-25 10:09 pm
Sexual Harassment in Anekal: ಸ್ಕ್ಯಾನಿಂಗ್ ವೇಳ...
13-11-25 10:00 pm
ವಿದೇಶಿ ಕಂಪನಿಯಲ್ಲಿ ಹೂಡಿಕೆ ಮಾಡಿದರೆ ದುಪ್ಪಟ್ಟು ಲಾ...
12-11-25 12:32 pm