ಬ್ರೇಕಿಂಗ್ ನ್ಯೂಸ್
18-07-22 10:41 pm Mangalore Correspondent ಕರಾವಳಿ
ಮಂಗಳೂರು, ಜುಲೈ 18 : ಬಹುಜನ ಚಳವಳಿ ನಾಯಕ, ಹಿರಿಯ ದಲಿತ ನಾಯಕರಾಗಿದ್ದ ಡೀಕಯ್ಯ ಮೃತಪಟ್ಟ ಹತ್ತು ದಿನಗಳ ಬಳಿಕ ಸಾವಿನ ಬಗ್ಗೆ ಅನುಮಾನ ವ್ಯಕ್ತವಾಗಿದ್ದು ದಫನ ಮಾಡಿದ್ದ ಕಳೇಬರವನ್ನು ಹೊರತೆಗೆದು ಪೋಸ್ಟ್ ಮಾರ್ಟಂ ನಡೆಸಲಾಗಿದೆ.
ಜುಲೈ 8 ರಂದು ಮೃತಪಟ್ಟಿದ್ದ ಡೀಕಯ್ಯ ಅವರನ್ನು ಹುಟ್ಟೂರು ದಕ್ಷಿಣ ಜಿಲ್ಲೆಯ ಬೆಳ್ತಂಗಡಿ ತಾಲೂಕಿನ ಪದ್ಮುಂಜ ಗ್ರಾಮದಲ್ಲಿ ದಫನ ಮಾಡಲಾಗಿತ್ತು. ಮನೆಯಲ್ಲಿ ಒಬ್ಬರೇ ಇದ್ದಾಗ ಜುಲೈ 6 ರಂದು ಆಯತಪ್ಪಿ ಬಿದ್ದು ಗಾಯಗೊಂಡಿದ್ದರು. ಆಬಳಿಕ ಅವರನ್ನು ಆಸ್ಪತ್ರೆಗೆ ದಾಖಲಿಸಿದ್ರೂ ಜು.8ರಂದು ಮೆದುಳಿನ ರಕ್ತಸ್ರಾವದಿಂದ ಡೀಕಯ್ಯ ಮೃತಪಟ್ಟಿದ್ದಾಗಿ ಹೇಳಲಾಗಿತ್ತು.
ಡೀಕಯ್ಯ ಸಾವಿನ ಬಗ್ಗೆ ಅವರ ಅಕ್ಕನ ಗಂಡ ಪದ್ಮನಾಭ ಎಂಬವರು ಬೆಳ್ತಂಗಡಿ ಠಾಣೆಗೆ ದೂರು ನೀಡಿದ್ದು, ಶಂಕೆ ವ್ಯಕ್ತಪಡಿಸಿದ್ದಾರೆ. ಹಾಗಾಗಿ ಬೆಳ್ತಂಗಡಿ ತಹಶೀಲ್ದಾರ್ ಸಮ್ಮುಖದಲ್ಲಿ ಮೃತದೇಹ ಹೊರತೆಗೆದ ಪೊಲೀಸರು ಮರಣೋತ್ತರ ಪರೀಕ್ಷೆಗೆ ಕಳುಹಿಸಿದ್ದಾರೆ. ಮನೆಯಲ್ಲಿ ಬಿದ್ದು ಗಾಯಗೊಂಡಿದ್ದ ಡೀಕಯ್ಯ ಐಸಿಯುನಲ್ಲೇ ಇದ್ದರು. ತೀವ್ರ ರಕ್ತಸ್ರಾವ ಆಗಿದ್ದರಿಂದ ಸಾವು ಆಗಿತ್ತು ಎಂದು ವೈದ್ಯರು ತಿಳಿಸಿದ್ದರು. ಹೀಗಾಗಿ ಮೃತದೇಹವನ್ನು ಮನೆಗೆ ತಂದು ಅಂತ್ಯ ಸಂಸ್ಕಾರ ನಡೆಸಲಾಗಿತ್ತು.
ಆದರೆ ಇದೀಗ ಸಿಕ್ಕ ಆಸ್ಪತ್ರೆಯ ಮೆಡಿಕಲ್ ರಿಪೋರ್ಟ್ ನಲ್ಲಿ ದೇಹದ ಮೇಲೆ ಗಾಯದ ಗುರುತುಗಳಿದ್ದು, ಮೂಳೆ ಮುರಿತದ ಬಗ್ಗೆ ಉಲ್ಲೇಖಿಸಲಾಗಿದೆ. ಹೀಗಾಗಿ ಸಾವಿನ ಬಗ್ಗೆ ಸಂಶಯ ಉಂಟಾಗಿದೆ. ಯಾರೋ ಹೊಡೆದು ಕೊಲೆ ಮಾಡಿದ್ದಾರೋ ಎನ್ನುವ ಸಂಶಯ ಇದೆ ಎಂದು ದೂರಿನಲ್ಲಿ ತಿಳಿಸಿದ್ದಾರೆ. ಮೆಡಿಕಲ್ ರಿಪೋರ್ಟ್ ನಲ್ಲಿ ಮುರಿತದ ಬಗ್ಗೆ ಉಲ್ಲೇಖವಿದ್ದು ಮೃತದೇಹದ ಮರಣೋತ್ತರ ಪರೀಕ್ಷೆಗೆ ಮನವಿ ಮಾಡಲಾಗಿದೆ ಎಂದು ಸಂಬಂಧಿಕರು ಹೇಳಿದ್ದಾರೆ.
Following suspicion expressed by members of Dalit leader P Deekaiah in Belthangady over the cause of his death, the body which was cremated at Padmunja was exhumed in the presence of the Tahsildar and sent for a post-mortem.
11-05-25 01:21 pm
HK News Desk
Minister zameer ahmed, Pak, India: ಮೋದಿ ಹೇಳಿದ...
10-05-25 10:40 pm
Dk Shivakumar, Congress, Birthday: ಭಯೋತ್ಪಾದನೆ...
10-05-25 12:40 pm
Mandya Post, Modi; ಮಾಜಿ ಪಾಕ್ ಪ್ರಧಾನಿಗೆ ಮೋದಿ ಶ...
10-05-25 11:30 am
Janardhana Reddy disqualified, MLA: ಅಕ್ರಮ ಗಣಿ...
08-05-25 11:07 pm
11-05-25 06:25 pm
HK News Desk
ಆಪರೇಷನ್ ಸಿಂಧೂರ ಇನ್ನೂ ಮುಗಿದಿಲ್ಲ.. ಕದನ ವಿರಾಮ ಘೋ...
11-05-25 06:12 pm
ಜಮ್ಮು ಗಡಿಯಲ್ಲಿ ಪಾಕ್ ಶೆಲ್ ದಾಳಿ ; ಬಿಎಸ್ಎಫ್ ಯೋಧ,...
11-05-25 01:43 pm
India Pak War: ಪೆಟ್ಟು ತಿಂದರೂ ಬಿಡದ ಪಾಕ್ ನರಿಬುದ...
10-05-25 11:05 pm
ಎಸ್-400 ಏರ್ ಡಿಫೆನ್ಸ್ ಸಿಸ್ಟಮ್ ಮತ್ತು ಬ್ರಹ್ಮೋಸ್...
10-05-25 09:24 pm
11-05-25 05:01 pm
Mangalore Correspondent
Drone Ban, Mangalore, Mysuru: ಮಂಗಳೂರು, ಮೈಸೂರಿ...
10-05-25 07:10 pm
ಹಿಂದು - ಮುಸ್ಲಿಂ ಮಧ್ಯೆ ಪ್ರಚೋದನಕಾರಿ ಪೋಸ್ಟ್ ಹಾಕು...
09-05-25 11:07 pm
Mangalore University, U T Khader, Syndicate M...
09-05-25 06:22 pm
Resham Bariga, Belthangady, Indo Pak War, Ant...
09-05-25 03:24 pm
08-05-25 05:32 pm
HK News Desk
Mangalore Suhas Shetty Murder, Eight Arrested...
03-05-25 02:16 pm
Suhas Shetty Murder, Thokottu Attack, Mangalo...
02-05-25 12:00 pm
Mangalore Bajpe Murder, Suhas Shetty: ಹಳೆ ದ್ವ...
01-05-25 10:06 pm
Mangalore, Illegal Rice, crime: ಉತ್ತರ ಕರ್ನಾಟಕ...
30-04-25 04:09 pm