ಬ್ರೇಕಿಂಗ್ ನ್ಯೂಸ್
29-07-22 08:11 pm Mangalore Correspondent ಕರಾವಳಿ
ಮಂಗಳೂರು, ಜು.29 : ದ.ಕ. ಜಿಲ್ಲೆಯಲ್ಲಿ ಸಂಭವಿಸಿದ ಅಹಿತಕರ ಘಟನೆಗಳಿಂದಾಗಿ ಪರಿಸ್ಥಿತಿ ಬೂದಿ ಮುಚ್ಚಿದ ಕೆಂಡದಂತಿದ್ದು, ಉದ್ವಿಗ್ನತೆಯಿಂದ ಕೂಡಿದೆ ಹಾಗೂ ಕಾನೂನು ಸುವ್ಯವಸ್ಥೆಗೆ ಧಕ್ಕೆಯಾಗುವ ಸಾಧ್ಯತೆ ಹೆಚ್ಚಾಗಿರುತ್ತದೆ. ಶಾಂತಿ ಸುವ್ಯವಸ್ಥೆಗೆ ತೊಂದರೆಯುಂಟಾಗುವ ಸಾಧ್ಯತೆಗಳಿರುವುದರಿಂದ ಮಂಗಳೂರು ನಗರ ಪೊಲೀಸ್ ಆಯುಕ್ತರ ವ್ಯಾಪ್ತಿ ಹಾಗೂ ದಕ್ಷಿಣ ಕನ್ನಡ ಜಿಲ್ಲಾ ಪೊಲೀಸ್ ಘಟಕ ವ್ಯಾಪ್ತಿಯಲ್ಲಿ ಯಾವುದೇ ಅಹಿತಕರ ಘಟನೆಗಳು ನಡೆಯದಂತೆ ನಿಷೇಧಾಜ್ಞೆ ಜಾರಿಗೊಳಿಸಲಾಗಿದೆ.
ಕಾನೂನು ಸುವ್ಯವಸ್ಥೆ ಕಾಪಾಡುವ ದೃಷ್ಟಿಯಿಂದ ಮುಂಜಾಗ್ರತಾ ಕ್ರಮವಾಗಿ ಜಿಲ್ಲಾಧಿಕಾರಿ ಡಾ. ರಾಜೇಂದ್ರ ಕೆ.ವಿ. ಅವರು ಐಪಿಸಿ ಸೆಕ್ಷನ್ 144 ರಡಿ ದಕ್ಷಿಣ ಕನ್ನಡ ಜಿಲ್ಲೆಯಾದ್ಯಂತ ಜು.29ರಿಂದ ಆಗಸ್ಟ್ 1ರ ವರೆಗೆ ಸಂಜೆ 6 ರಿಂದ ಬೆಳಿಗ್ಗೆ 6 ಗಂಟೆಯ ವರೆಗೆ ಕೆಲವು ನಿರ್ಬಂಧಗಳನ್ನು ಜಾರಿಗೊಳಿಸಿ ಆದೇಶಿಸಿದ್ದಾರೆ.
ಜಾರಿಗೊಂಡಿರುವ ನಿರ್ಬಂಧಗಳು ಇವು
ಆಸ್ಪತ್ರೆಗಳು, ಔಷಧಿ ಅಂಗಡಿಗಳು ಹಾಗೂ ಇತರೆ ತುರ್ತು ಸೇವೆಗಳನ್ನು ಹೊರತುಪಡಿಸಿ, ಉಳಿದ ಎಲ್ಲಾ ಅಂಗಡಿಗಳು, ವಾಣಿಜ್ಯ ಸಂಕೀರ್ಣಗಳು ಜಿಲ್ಲೆಯಾದ್ಯಂತ ಜು.29ರಿಂದ ಆ.1ರ ವರೆಗೆ ಸಂಜೆ 6ರಿಂದ ಬೆಳಿಗ್ಗೆ 6 ಗಂಟೆಯ ವರೆಗೆ ಮುಚ್ಚಬೇಕು.
ಜಿಲ್ಲೆಯಾದ್ಯಂತ ಮಾಲ್, ಚಿತ್ರಮಂದಿರಗಳು/ ಸಿನಿಮಾ ಹಾಲ್, ಪಬ್‍ಗಳನ್ನು ಜು.29ರಿಂದ ಆ.1ರ ವರೆಗೆ ಸಂಜೆ 6 ರಿಂದ ಬೆಳಗ್ಗೆ 6 ಗಂಟೆಯ ವರೆಗೆ ಮುಚ್ಚುವುದು. ಸಾರ್ವಜನಿಕರು ಮತ್ತು ಅವಶ್ಯಕ ಕಾರ್ಯಗಳನ್ನು ಹೊರತುಪಡಿಸಿ ಇನ್ನಾವುದೇ ಕಾರಣಗಳಿಗೆ ವಸತಿ ಸಮುಚ್ಚಯಗಳಿಂದ ಹೊರಬರುವುದನ್ನು ಕಡ್ಡಾಯವಾಗಿ ನಿಷೇಧಿಸಿದೆ.
ತುರ್ತು ಸಂದರ್ಭಗಳಲ್ಲಿ ಪ್ರಯಾಣಿಸುವ ಪ್ರಯಾಣಿಕರಿಗೆ ಅವಶ್ಯಕವೆಂದು ಕಂಡುಬಂದಲ್ಲಿ ಮಾತ್ರ ಬಸ್ಸು, ಆಟೋರಿಕ್ಷಾ ಮತ್ತು ಟ್ಯಾಕ್ಸಿ ವಾಹನಗಳ ಸಂಚಾರಕ್ಕೆ ಅವಕಾಶವಿರುತ್ತದೆ. ಹಾಗೂ ಅವಶ್ಯಕ ವಸ್ತುಗಳ ಸಾಗಾಣಿಕೆಗೆ ಮಾತ್ರ ವಾಹನಗಳನ್ನು ಬಳಸಲು ಅವಕಾಶ ನೀಡಲಾಗಿದೆ. ಅನಗತ್ಯ ವಾಹನಗಳ ಸಂಚಾರಕ್ಕೆ ಅವಕಾಶವಿರುವುದಿಲ್ಲ.
ಜಿಲ್ಲೆಯಲ್ಲಿ ಎಲ್ಲಾ ಸಭೆ, ಸಮಾರಂಭಗಳನ್ನು, ಸಾಂಸ್ಕೃತಿಕ ಕಾರ್ಯಕ್ರಮಗಳು, ಧಾರ್ಮಿಕ ಸಂಸ್ಥೆಗಳಿಗೆ ಸಂಬಂಧಿಸಿದ ಉತ್ಸವ, ಜಾತ್ರಗಳನ್ನು ಮುಂದೂಡಬೇಕು. ಜಿಲ್ಲೆಯಲ್ಲಿ ಈಗಾಗಲೇ ನಿಗದಿಪಡಿಸಿರುವ ಖಾಸಗಿ ಸಮಾರಂಭಗಳನ್ನು ಮುಂದೂಡುವುದು.
ಹೋಟೆಲ್, ಪಾರ್ಸೆಲ್ ವ್ಯವಸ್ಥೆ, ತುರ್ತು ವ್ಯವಸ್ಥೆಗಳಿಗೆ ಮಾತ್ರ ಅವಕಾಶವಿರುತ್ತದೆ. ಜಿಲ್ಲೆಯ ಎಲ್ಲಾ ಸಂಧ್ಯಾ ಕಾಲೇಜುಗಳಿಗೆ 2 ದಿನಗಳ ರಜೆ ಘೋಷಿಸಲಾಗಿದೆ. ಜಿಲ್ಲೆಯ ಇತರ ಎಲ್ಲಾ ಶಾಲಾ ಕಾಲೇಜುಗಳು ಎಂದಿನಂತೆ ಕಾರ್ಯ ನಿರ್ವಹಿಸಬೇಕು ಎಂದು ಜಿಲ್ಲಾದಂಡಾಧಿಕಾರಿ ಡಾ.ರಾಜೇಂದ್ರ ಕೆವಿ ಆದೇಶ ಹೊರಡಿಸಿದ್ದಾರೆ.
Fazil Murder case in Surathkal, Mangalore Shops, malls, theaters and pubs to remain close from 6pm to 6am of August 1st orders DC Dr Rajendra Kumar.
13-11-25 08:33 pm
HK News Desk
ಸಿದ್ದರಾಮಯ್ಯ ಸಿಎಂ ಆಗಿ ಮುಂದುವರಿದರೆ ತಪ್ಪೇನು? ನಾವ...
12-11-25 11:10 pm
ಧರ್ಮಸ್ಥಳ ಶವ ಹೂತ ಪ್ರಕರಣದಲ್ಲಿ ಎಸ್ಐಟಿ ತನಿಖೆಯ ತಡ...
12-11-25 11:06 pm
ಯಾರೂ ಗೂಟ ಹೊಡೆದು ಇರಕ್ಕಾಗಲ್ಲ, ಬಿಹಾರ ಚುನಾವಣೆ ಟೈಮ...
12-11-25 09:03 pm
ವಿಮಾನ ನಿಲ್ದಾಣದಲ್ಲಿ ನಮಾಜ್ ; ಅವರು ಎಲ್ಲಾದ್ರೂ ಶ್ರ...
10-11-25 07:17 pm
14-11-25 09:10 pm
HK News Desk
ಬಿಹಾರದಲ್ಲಿ ಎನ್ ಡಿಎ ಕ್ಲೀನ್ ಸ್ವೀಪ್ ಜಯಭೇರಿ ; 190...
14-11-25 11:50 am
ದೆಹಲಿ ಸ್ಫೋಟ ಪ್ರಕರಣ ; ಕಾನ್ಪುರ ವೈದ್ಯಕೀಯ ವಿದ್ಯಾರ...
13-11-25 10:56 pm
ಇಬ್ಬರು ಉಗ್ರರ ಡೈರಿ ಪತ್ತೆ ; ಮಹತ್ತರ ಮಾಹಿತಿ ಬಹಿರಂ...
13-11-25 08:41 pm
Tiruchi Aircraft: ತಿರುಚಿ- ಪುದುಕೋಟೈ ಹೆದ್ದಾರಿಯಲ...
13-11-25 05:13 pm
14-11-25 11:01 pm
Mangalore Correspondent
Kumpala, Dog, Crime, Mangalore: ಬೀದಿ ನಾಯಿಗಳ ದ...
14-11-25 10:10 pm
ಸರ್ಕಾರಿ ಶಾಲೆಯಲ್ಲಿ ಆಂಗ್ಲ ಮಾಧ್ಯಮ ಶಿಕ್ಷಣ ; ಮಕ್ಕ...
14-11-25 09:03 pm
ಡಿಸಿಸಿ ಬ್ಯಾಂಕ್ ಸಾಲಕ್ಕೆ ಜಾಮೀನು ನಿಂತು ಚೆಕ್ ನೀಡಿ...
14-11-25 03:34 pm
ಸದಸ್ಯತ್ವ ಕಳಕೊಂಡವರಿಂದಲೇ ದರ್ಗಾ ಕಮಿಟಿ ವಿರುದ್ಧ ಅಪ...
13-11-25 07:41 pm
14-11-25 05:32 pm
HK News Desk
Ullal News, Animal Attack, Crime, Kumpala: ಕಣ...
14-11-25 11:16 am
ಮಂಗಳೂರಿನಲ್ಲಿ ಡಿಜಿಟಲ್ ಅರೆಸ್ಟ್ ವಂಚನೆ ಹೆಚ್ಚಳ ; ಮ...
13-11-25 10:09 pm
Sexual Harassment in Anekal: ಸ್ಕ್ಯಾನಿಂಗ್ ವೇಳ...
13-11-25 10:00 pm
ವಿದೇಶಿ ಕಂಪನಿಯಲ್ಲಿ ಹೂಡಿಕೆ ಮಾಡಿದರೆ ದುಪ್ಪಟ್ಟು ಲಾ...
12-11-25 12:32 pm