ಬ್ರೇಕಿಂಗ್ ನ್ಯೂಸ್
30-07-22 04:11 pm Mangalore Correspondent ಕರಾವಳಿ
Photo credits : ANI news
ಮಂಗಳೂರು, ಜುಲೈ 30: ಕೋಮು ವೈಷಮ್ಯದ ವಾತಾವರಣದ ಹಿನ್ನೆಲೆಯಲ್ಲಿ ಮಂಗಳೂರಿನ ಜಿಲ್ಲಾಧಿಕಾರಿ ಕಚೇರಿಯಲ್ಲಿ ಪೊಲೀಸ್ ಹಿರಿಯ ಅಧಿಕಾರಿಗಳು ಶಾಂತಿ ಸಭೆ ನಡೆಸಿದ್ದಾರೆ. ವಿವಿಧ ರಾಜಕೀಯ ಪಕ್ಷಗಳ ಪ್ರತಿನಿಧಿಗಳು ಮತ್ತು ಕೆಲವು ಧಾರ್ಮಿಕ ನಾಯಕರು ಸಭೆಯಲ್ಲಿ ಪಾಲ್ಗೊಂಡಿದ್ದರು. ಆದರೆ ಪ್ರಮುಖವಾಗಿ ಗುರುತಿಸ್ಕೊಂಡಿರುವ ಹಿಂದು ಸಂಘಟನೆಗಳ ನಾಯಕರಾಗಲೀ, ಮುಸ್ಲಿಂ ಸಂಘಟನೆಗಳ ನಾಯಕರಾಗಲೀ ಪಾಲ್ಗೊಂಡಿರಲಿಲ್ಲ.
ಸಭೆಯ ಬಳಿಕ ಮಾಧ್ಯಮಕ್ಕೆ ಪ್ರತಿಕ್ರಿಯೆ ನೀಡಿದ ಎಡಿಜಿಪಿ ಅಲೋಕ್ ಕುಮಾರ್, ಸಭೆಯಲ್ಲಿ ವಿವಿಧ ವಿಚಾರಗಳ ಬಗ್ಗೆ ಸಲಹೆಗಳನ್ನು ನೀಡಿದ್ದಾರೆ. ಜಾಲತಾಣದಲ್ಲಿ ಸುಳ್ಳು ಸುದ್ದಿ ಹಬ್ಬಿಸುವುದರಿಂದ ಇಂಟರ್ನೆಟ್ ಸ್ಧಗಿತ ಮಾಡುವಂತೆಯೂ ಹೇಳಿದ್ದಾರೆ. ಆದರೆ ಇಂಟರ್ನೆಟ್ ಸ್ಥಗಿತ ಮಾಡಿದರೆ ಮಂಗಳೂರಿನಂಥ ಸಿಟಿಯಲ್ಲಿ ಸಾರ್ವಜನಿಕರಿಗೆ ಕಷ್ಟವಾಗುತ್ತದೆ ಎನ್ನುವ ನೆಲೆಯಲ್ಲಿ ಅಂತಹ ನಿರ್ಧಾರ ತೆಗೆದುಕೊಳ್ಳುವುದಿಲ್ಲ. ಬದಲಿಗೆ, ಜಾಲತಾಣದಲ್ಲಿ ಸುಳ್ಳು ಸುದ್ದಿ ಹರಡುವುದು, ವದಂತಿ ಹರಡುವ ಬಗ್ಗೆ ನಿಗಾ ಇಡುತ್ತೇವೆ. ಮಾಧ್ಯಮಗಳು ಕೂಡ ತಮ್ಮ ಟಿಆರ್ ಪಿ ಹೆಚ್ಚಿಸುವುದಕ್ಕಾಗಿ ಊಹಾಪೋಹದ ಸುದ್ದಿಗಳನ್ನು ಪ್ರಸಾರ ಮಾಡಬಾರದು ಎಂದು ಹೇಳಿದರು.


ಕೇರಳದಲ್ಲಿ ಅವಿತಿದ್ದ ಇಬ್ಬರು ವಶಕ್ಕೆ
ಬಿಜೆಪಿ ಕಾರ್ಯಕರ್ತ ಪ್ರವೀಣ್ ನೆಟ್ಟಾರು ಹತ್ಯೆ ಪ್ರಕರಣದಲ್ಲಿ ಕೇರಳದಲ್ಲಿ ಅವಿತುಕೊಂಡಿದ್ದ ಮತ್ತಿಬ್ಬರು ವ್ಯಕ್ತಿಗಳನ್ನು ವಶಕ್ಕೆ ಪಡೆಯಲಾಗಿದೆ. ಅವರನ್ನು ವಿಚಾರಣೆ ನಡೆಸಲಾಗುತ್ತಿದ್ದು, ಕೃತ್ಯದಲ್ಲಿ ಅವರ ಪಾತ್ರದ ಬಗ್ಗೆ ಮಾಹಿತಿ ಸಂಗ್ರಹಿಸಲಾಗುತ್ತಿದೆ ಎಂದು ಹೇಳಿದ ಎಡಿಜಿಪಿ, ಸುರತ್ಕಲ್ ನಲ್ಲಿ ನಡೆದ ಫಾಜಿಲ್ ಕೊಲೆ ಸಂಬಂಧಿಸಿ ಈಗಾಗಲೇ 20ಕ್ಕೂ ಹೆಚ್ಚು ಮಂದಿಯನ್ನು ವಶಕ್ಕೆ ಪಡೆಯಲಾಗಿದೆ. ಅವರೆಲ್ಲ ಯಾವ ಸಂಘಟನೆಯವರು ಎನ್ನುವುದನ್ನು ತನಿಖೆಯ ಹಂತದಲ್ಲಿ ಹೇಳಕ್ಕೆ ಬರುವುದಿಲ್ಲ ಎಂದು ಹೇಳಿದರು.

ಪ್ರತೀ ಠಾಣೆ ವ್ಯಾಪ್ತಿಯಲ್ಲಿ ಬೀಟ್ ಸಭೆ, ಶಾಂತಿ ಸಭೆ, ಮೊಹಲ್ಲಾಗಳ ಸಭೆಯನ್ನು ನಡೆಸಲು ಠಾಣಾಧಿಕಾರಿಗಳಿಗೆ ನಿರ್ದೇಶನ ನೀಡುತ್ತೇನೆ. ಇದಲ್ಲದೆ, ಮುಖ್ಯಮಂತ್ರಿಯವರು ಗಡಿಭಾಗದಲ್ಲಿ ನಿಗಾ ಇಡಲು ಸೂಚಿಸಿದ್ದಾರೆ. ಅದರಂತೆ, ಕೇರಳದಿಂದ ಕರ್ನಾಟಕ ಸೇರುವ ಒಳ ರಸ್ತೆಗಳಲ್ಲಿ ನಿಗಾ ಇಟ್ಟಿದ್ದೇವೆ. ಅಲ್ಲಿ ಕೆಎಸ್ಆರ್ ಪಿ ಪಡೆಯ ಪೊಲೀಸರನ್ನು ನಿಯೋಜನೆ ಮಾಡಿದ್ದು, ತಪಾಸಣೆ ನಡೆಸಲಾಗುತ್ತಿದೆ ಎಂದು ಹೇಳಿದರು.

ಇನ್ನೆರಡು ದಿನದಲ್ಲಿ ಜನಪ್ರತಿನಿಧಿಗಳ ಸಭೆ
ಸಭೆಯಲ್ಲಿ ಪ್ರಮುಖ ನಾಯಕರು ಪಾಲ್ಗೊಳ್ಳದೇ ಇರುವುದರ ಬಗ್ಗೆ ಕೇಳಿದ ಪ್ರಶ್ನೆಗೆ ಉತ್ತರಿಸಿದ ಜಿಲ್ಲಾಧಿಕಾರಿ ರಾಜೇಂದ್ರ ಕೆವಿ, ಜನಪ್ರತಿನಿಧಿಗಳು, ಇನ್ನಿತರ ಪ್ರಮುಖರನ್ನು ಒಳಗೊಂಡ ಸಭೆಯನ್ನು ಇನ್ನೆರಡು ದಿನದಲ್ಲೇ ನಡೆಸಲಾಗುವುದು. ಇಂದು ಜನಾಭಿಪ್ರಾಯ ಕೇಳಿದ್ದು, ಎಲ್ಲ ಸಮುದಾಯದ ಪ್ರಮುಖರು ಇದ್ದರು. ತಮ್ಮ ಅಹವಾಲು ಹೇಳಿದ್ದಾರೆ. ಮುಂದಿನ ಬಾರಿ ಉಸ್ತುವಾರಿ ಸಚಿವರ ನೇತೃತ್ವದಲ್ಲಿ ಸಭೆ ನಡೆಸಲಾಗುವುದು ಎಂದು ಹೇಳಿದರು.
Surathkal Fazil Murder case, Social Media is been monitored Strictly by the cyber police. People forwarding provocative and fake messages will have to face the consequences said ADGP Alok Kumar in Mangalore. In connection to Praveen Bellare murder two from Kerala have been arrested he said.
31-03-26 10:13 am
HK News Staffer
ತಮಿಳುನಾಡಿನಲ್ಲಿ ಬಿಜೆಪಿ ಸೀಟು ಹಂಚಿಕೆಯಲ್ಲಿ ಲೋಪ ;...
29-03-26 10:19 am
RCB ಗೆಲುವಿಗೆ ರಕ್ತದಾನ ಅಭಿಯಾನ ; ಚಿನ್ನಸ್ವಾಮಿ ಉದ್...
28-03-26 08:39 pm
ಆಸ್ತಿ ಕಲಹ ; ಮೂವರು ಪುಟ್ಟ ಮಕ್ಕಳೊಂದಿಗೆ ಬಾವಿಗೆ ಹಾ...
28-03-26 02:54 pm
ಭಾರತದಲ್ಲಿ ಮತ್ತೆ ಲಾಕ್ಡೌನ್ ; ಜಾಲತಾಣದಲ್ಲಿ ಟ್ರೆಂ...
27-03-26 04:49 pm
31-03-26 11:00 pm
HK News Staffer
ಜೈಶ್-ಎ-ಮೊಹಮ್ಮದ್ ಮುಖ್ಯಸ್ಥ ಮಸೂದ್ ಅಜರ್ ಸೋದರ ತಾಹಿ...
31-03-26 03:30 pm
ಸಂಧಾನ ಮಾತುಕತೆ ಒಪ್ಪದಿದ್ದರೆ ಇರಾನ್ ಸರ್ವನಾಶ ; ಭೂದ...
31-03-26 10:43 am
ಗಲ್ಫ್ ಯುದ್ಧ ಎಫೆಕ್ಟ್ ; ಡಾಲರ್ ಮುಂದೆ ರುಪಾಯಿ ಮಹಾಪ...
30-03-26 10:31 pm
ಹರ್ಮುಜ್ ಜಲಸಂಧಿಯಲ್ಲಿ ಇರಾನ್ ಟೋಲ್ ಬೂತ್ ; ಶುಲ್ಕ ಕ...
28-03-26 04:06 pm
31-03-26 10:06 pm
HK News Desk
Moodbidri Accident: ಮೂಡುಬಿದ್ರೆ ; ರಸ್ತೆ ಬದಿ ನಿ...
31-03-26 09:02 pm
ಅವಳೇ ಮಗನನ್ನು ವಿಷ ಕೊಟ್ಟು ಕೊಂದಿದ್ದಾಳೆ, ವಿಷಯ ಮುಚ...
31-03-26 06:27 pm
ಚಲಿಸುತ್ತಿದ್ದ ಕೆಎಸ್ಆರ್ಟಿಸಿ ಬಸ್ಸಿನಿಂದ ಹೊರಬಿದ್...
31-03-26 03:01 pm
ಮಂಗಳೂರು ಬಂದರಿಗೆ ಬರಲಿದೆ ಮತ್ತೆರಡು ಎಲ್ಪಿಜಿ ಹೊತ್ತ...
30-03-26 11:13 pm
31-03-26 11:11 am
HK News Staffer
ಮದುವೆ ಆಗಿದ್ರೂ ಲವರ್ ನಂಟು ; ಹಣಕ್ಕಾಗಿ ಪೀಡಿಸಿ ಬ್ಲ...
30-03-26 07:35 pm
ತಿಂಗಳ ಹಿಂದಷ್ಟೇ ರಿಜಿಸ್ಟರ್ ಮದುವೆಯಾಗಿದ್ದ ಬೆಳ್ತಂಗ...
29-03-26 10:36 pm
ಟ್ಯಾಬ್ಲೆಟ್ ಆರಿಫ್ ಹತ್ಯೆ ; ಟೋಪಿ ನೌಫಾಲ್ ಸಾವನ್ನ ಸ...
29-03-26 10:22 pm
ಅರ್ಕುಳ ಬಳಿ ಹೆದ್ದಾರಿಯಲ್ಲಿ ಹಾಲಿನ ಟ್ಯಾಂಕರ್ ಗೆ ಹಿ...
29-03-26 07:49 pm