ಬ್ರೇಕಿಂಗ್ ನ್ಯೂಸ್
01-08-22 06:44 pm Mangalore Correspondent ಕರಾವಳಿ
ಸುಳ್ಯ, ಆಗಸ್ಟ್ 1 : ಪ್ರವೀಣ್ ನೆಟ್ಟಾರು ಹತ್ಯೆ ಪ್ರಕರಣಕ್ಕೆ ಸಂಬಂಧಿಸಿ ಸುಳ್ಯ ಪೊಲೀಸರು ಬೆಂಗಳೂರಿನಲ್ಲಿ ಇಬ್ಬರನ್ನು ವಶಕ್ಕೆ ಪಡೆದಿದ್ದಾರೆ. ಎರಡು ದಿನಗಳ ಹಿಂದೆ ಕೇರಳದ ತಲಶ್ಶೇರಿಯಲ್ಲಿ ಇಬ್ಬರನ್ನು ವಶಕ್ಕೆ ಪಡೆಯಲಾಗಿತ್ತು.
ಖಚಿತ ಮಾಹಿತಿ ಮೇರೆಗೆ ಬೆಂಗಳೂರಿಗೆ ತೆರಳಿದ್ದ ವಿಶೇಷ ತಂಡವೊಂದು ಬೆಂಗಳೂರಿನಲ್ಲಿ ಅಡಗಿ ಕುಳಿತಿದ್ದ ಇಬ್ಬರನ್ನು ವಶಕ್ಕೆ ಪಡೆದಿದ್ದು ಸುಳ್ಯಕ್ಕೆ ಕರೆದೊಯ್ದು ವಿಚಾರಣೆ ನಡೆಸುತ್ತಿದ್ದಾರೆ.
ಪ್ರಕರಣ ಸಂಬಂಧಿಸಿ 40ಕ್ಕೂ ಹೆಚ್ಚು ಜನರನ್ನು ವಶಕ್ಕೆ ತೆಗೆದಿರುವ ದಕ್ಷಿಣ ಕನ್ನಡ ಜಿಲ್ಲಾ ಎಸ್ಪಿ ಋಷಿಕೇಶ್ ಸೋನವಾಣೆ ನೇತೃತ್ವದ ಪೊಲೀಸರು ಹಲವು ಮಾಹಿತಿಗಳನ್ನು ಕಲೆ ಹಾಕಿದ್ದಾರೆ. ಪ್ರವೀಣ್ ಹತ್ಯೆ ನಂತರ ತನಿಖೆಗಾಗಿ ಐದು ತಂಡಗಳನ್ನು ರಚಿಸಲಾಗಿತ್ತು. ಕೇರಳ, ಗೋವಾ, ಬೆಂಗಳೂರು ಸೇರಿದಂತೆ ವಿವಿಧ ಕಡೆಗಳಿಗೆ ಪೊಲೀಸರ ತಂಡ ತೆರಳಿ ಆರೋಪಿಗಳಿಗಾಗಿ ಬಲೆ ಬೀಸಿದ್ದವು. ಪ್ರಕರಣದಲ್ಲಿ ಇಬ್ಬರನ್ನು ಮಾತ್ರ ಬಂಧಿಸಿದ್ದಾಗಿ ಎಸ್ಪಿ ಮಾಹಿತಿ ನೀಡಿದ್ದಾರೆ. ಉಳಿದವರನ್ನು ಬಂಧನ ತೋರಿಸದೆ ವಶದಲ್ಲಿಟ್ಟುಕೊಂಡಿದ್ದಾರೆ.
ಆರೋಪಿಗಳನ್ನು ಪ್ರತ್ಯೇಕವಾಗಿ ತನಿಖೆ ನಡೆಸುತ್ತಿದ್ದು ಅವರಿಂದಲೇ ಮಾಹಿತಿ ಸಂಗ್ರಹಿಸಿ ಪ್ರಕರಣದ ಜಾಡು ಹತ್ತಿದ್ದಾರೆ. ಇದೇ ವೇಳೆ, ಬೆಂಗಳೂರಿನ ಎನ್ಐಎ ಅಧಿಕಾರಿಗಳ ತಂಡ ಸುಳ್ಯಕ್ಕೆ ಆಗಮಿಸಿದ್ದು ಮಾಹಿತಿ ಸಂಗ್ರಹ ಆರಂಭಿಸಿದೆ. ಅಧಿಕೃತವಾಗಿ ಪ್ರಕರಣ ಹಸ್ತಾಂತರ ಆಗದಿದ್ದರೂ, ಎಸ್ಪಿ ದರ್ಜೆಯ ಅಧಿಕಾರಿ ನೇತೃತ್ವದಲ್ಲಿ ಎನ್ಐಎ ತನಿಖೆ ಆರಂಭಿಸಿದೆ. ಸೋಮವಾರ ಸಂಜೆ ಅಧಿಕಾರಿಗಳ ತಂಡ ಖಾಸಗಿ ಸ್ಕಾರ್ಪಿಯೋ ವಾಹನದಲ್ಲಿ ಬೆಳ್ಳಾರೆಗೆ ಆಗಮಿಸಿದ್ದು ಕೊಲೆ ಕೃತ್ಯ ನಡೆದ ಜಾಗದ ಪರಿಶೀಲನೆ ನಡೆಸಿದೆ.
Praveen Bellare Murder, other two accused arrested from Bangalore, totally four have been arrested in this case. NIA who has arrived at Sullia has now started an investigation.
09-07-25 04:12 pm
HK News Desk
ಬೆಂಗಳೂರಿನಲ್ಲಿ ಐದು ಕಡೆ ಎನ್ಐಎ ದಾಳಿ ; ಭಯೋತ್ಪಾದಕ...
09-07-25 01:53 pm
Heart attack, Dharwad, Davanagere: ಉದ್ಯಮಿ ಮಗನ...
09-07-25 11:50 am
ಸಿಎಂ ಸೀಟು ಗೊಂದಲ ಕೇವಲ ಮಾಧ್ಯಮಗಳ ಸೃಷ್ಟಿ ; ಮೊದಲು...
08-07-25 08:35 pm
Karnataka Ban Online Betting and Gambling: ಆನ...
08-07-25 05:01 pm
07-07-25 08:45 pm
HK News Desk
ಅಮೆರಿಕದ ಟೆಕ್ಸಾಸ್ನಲ್ಲಿ ಭೀಕರ ಪ್ರವಾಹ ; 28 ಮಕ್ಕಳ...
07-07-25 04:11 pm
ಟೆಕ್ಸಾಸ್ ನಲ್ಲಿ ದಿಢೀರ್ ಪ್ರವಾಹ ; 27 ಮಂದಿ ಸಾವು,...
06-07-25 03:53 pm
ಹಿಜಾಬ್ ; ಪರೀಕ್ಷಾ ಕೊಠಡಿಗೆ ನುಗ್ಗಿ ಆವಾಜ್, ಪಿಇಎಸ್...
02-07-25 11:05 pm
Adult Film Star Kylie Page Death: ನೀಲಿ ಚಿತ್ರ...
02-07-25 05:31 pm
09-07-25 07:37 pm
Mangalore Correspondent
ಮಂಗಳೂರಿನಲ್ಲಿ ಒಂದೇ ದಿನ ಅಂತರದಲ್ಲಿ ಹಾರ್ಟ್ ಅಟ್ಯಾಕ...
09-07-25 06:53 pm
Mangalore Modern Fire Safety , Ullal Fire Sta...
09-07-25 06:20 pm
Rename Dakshina Kannada, Tulu: ವಿಜಯನಗರ ಕಾಲದಲ್...
08-07-25 09:33 pm
“Mission Possible: KMC Attavar Performs Life-...
08-07-25 03:37 pm
08-07-25 10:01 pm
Bengaluru Staffer
Mangalore, Job Fraud, Crime: ಪಾರ್ಟ್ ಟೈಮ್ ಕೆಲಸ...
07-07-25 10:31 pm
Job Fraud, Mangalore, Doctor: ದುಬೈನ ಎನ್ಎಂಸಿ ಹ...
07-07-25 10:18 pm
ಹದಿನಾರರ ವಯಸ್ಸು ಹುಚ್ಚುಕೋಡಿ ಮನಸ್ಸು ; 16ರ ಹುಡುಗಿ...
07-07-25 07:13 pm
Digital Arrest, Cyber Fraud, Mangalore: ಡಿಜಿಟ...
07-07-25 03:30 pm