ಬ್ರೇಕಿಂಗ್ ನ್ಯೂಸ್
03-10-20 02:05 pm Mangalore Correspondent ಕರಾವಳಿ
ಮಂಗಳೂರು, ಅಕ್ಟೋಬರ್ 3: ಮಂಗಳೂರು ಸಿಸಿಬಿ ಇನ್ಸ್ ಪೆಕ್ಟರ್ ಶಿವಪ್ರಕಾಶ್ ನಾಯ್ಕ್ ವರ್ಗಾವಣೆಗೆ ತಾತ್ಕಾಲಿಕ ತಡೆ ಹೇರಲಾಗಿದೆ. ಡ್ರಗ್ ಪ್ರಕರಣದಲ್ಲಿ ತನಿಖೆ ನಡೆಸುತ್ತಿದ್ದ ಸಿಸಿಬಿ ಇನ್ಸ್ ಪೆಕ್ಟರ್ ಅನ್ನು ಯಾರದೋ ಒತ್ತಡಕ್ಕೆ ಮಣಿದು ವರ್ಗ ಮಾಡಲಾಗಿದೆ ಎಂದು ಮಾಧ್ಯಮಗಳಲ್ಲಿ ಸುದ್ದಿ ಬಂದಿತ್ತು. ಇದೇ ಕಾರಣವೋ ಏನೋ, ರಾಜ್ಯ ಸರಕಾರ ವರ್ಗಾವಣೆಗೆ ತಾತ್ಕಾಲಿಕ ತಡೆ ವಿಧಿಸಿದೆ.
ಸಿಸಿಬಿ ಇನ್ಸ್ ಪೆಕ್ಟರ್ ಆಗಿ, ಕಾಪು ಠಾಣೆಯಲ್ಲಿ ಇನ್ಸ್ ಪೆಕ್ಟರ್ ಆಗಿದ್ದ ಮಹೇಶ್ ಪ್ರಸಾದ್ ಅವರನ್ನು ನೇಮಕ ಮಾಡಲಾಗಿತ್ತು. ಇದೀಗ ಮಹೇಶ್ ಪ್ರಸಾದ್ ನೇಮಕಕ್ಕೆ ತಾತ್ಕಾಲಿಕ ತಡೆ ಹೇರಲಾಗಿದೆ ಎನ್ನಲಾಗುತ್ತಿದೆ.
ಡ್ರಗ್ ಪ್ರಕರಣಕ್ಕೂ ವರ್ಗಾವಣೆಗೂ ಸಂಬಂಧ ಇಲ್ಲ..
ಆದರೆ, ವರ್ಗಾವಣೆ ವಿಚಾರದಲ್ಲಿ ಪ್ರತಿಕ್ರಿಯಿಸಿದ ಮಂಗಳೂರು ಪೊಲೀಸ್ ಕಮಿಷನರ್ ವಿಕಾಸ್ ಕುಮಾರ್, ವರ್ಗಾವಣೆ ಹಿಂದೆ ಬೇರೆನೇ ಕಾರಣ ಇದೆ. ಡ್ರಗ್ ವಿಚಾರದಲ್ಲಿ ವರ್ಗಾವಣೆ ಎನ್ನುವುದು ಸತ್ಯಕ್ಕೆ ದೂರವಾದ್ದು. ಬಹಳ ವಿಚಾರ ನಮಗೇನೇ ಗೊತ್ತಾಗಲ್ಲ. ಯಾವ ಆಫೀಸರ್ ಮೇಲೂ ಒತ್ತಡ ಹೇರಲಾಗಿಲ್ಲ ಎಂದು ಸ್ಪಷ್ಟ ಪಡಿಸಿದ್ದಾರೆ.

ಇನ್ನು ಡ್ರಗ್ ಕೇಸ್ ನಲ್ಲಿ ಚೈನ್ ಲಿಂಕ್ ದೊಡ್ಡದಿದೆ. ಚೈನ್ ಲಿಂಕ್ ಎಲ್ಲಿ ಕೊನೆಯಾಗುತ್ತೋ ಅಲ್ಲಿ ತನಕ ವಿಚಾರಣೆ ಮಾಡುತ್ತೇವೆ. ಪ್ರಕರಣದಲ್ಲಿ ಈಗಾಗ್ಲೇ 6 ಮಂದಿಯನ್ನು ಬಂಧಿಸಿದ್ದೇವೆ. ಪ್ರಕರಣದ ಬಗ್ಗೆ ಪ್ರತಿನಿತ್ಯ ತನಿಖೆ ಮಾಡಲಾಗುತ್ತಿದೆ, ಮಾಹಿತಿ ಬೇಕಾದಲ್ಲಿ ನೋಟಿಸ್ ಮಾಡುತ್ತೇವೆ. ನೋಟಿಸ್ ಕೊಟ್ಟು ಪ್ರಕರಣದ ವಿಚಾರಣೆಯನ್ನು ಮಾಡುತ್ತೇವೆ ಎಂದು ಕಮೀಷನರ್ ವಿಕಾಸ್ ಕುಮಾರ್ ಹೇಳಿದ್ದಾರೆ.
20-12-25 03:05 pm
Bangalore Correspondent
ನನ್ನ ಮತ್ತು ಸಿಎಂ ನಡುವೆ ಒಂದು ಒಪ್ಪಂದವಾಗಿದೆ ; ಅದರ...
19-12-25 10:03 pm
ಪ್ರೀತ್ಸೆ ಪ್ರೀತ್ಸೆ ಎಂದು ಪೊಲೀಸ್ ಅಧಿಕಾರಿ ಹಿಂದೆ ಬ...
19-12-25 01:41 pm
ಡಿಸಿಎಂ ಡಿಕೆಶಿ ಆಪ್ತ ಕಾರ್ಯದರ್ಶಿ ಕಾರು ಅಪಘಾತ ; ಬೈ...
18-12-25 11:05 pm
Byrathi Suresh, Mangalore, Karavali: 'ಕರಾವಳಿಗ...
18-12-25 08:40 pm
20-12-25 01:51 pm
HK News Desk
ಮರಳುಗಾಡಿನ ನಗರಿ ದುಬೈ, ಅಬುಧಾಬಿಯಲ್ಲಿ ಭಾರೀ ಗಾಳಿ-...
19-12-25 02:40 pm
ಜೆಡ್ಡಾದಿಂದ ಕೋಝಿಕ್ಕೋಡ್ ತೆರಳುತ್ತಿದ್ದ ಏರ್ ಇಂಡಿಯ...
18-12-25 04:34 pm
ಸಮವಸ್ತ್ರ ಕಳಪೆಯೆಂದು ಸಹಪಾಠಿಗಳ ಅಣಕ ; ನೊಂದ ನಾಲ್ಕನ...
17-12-25 10:27 pm
ಆಸ್ಟ್ರೇಲಿಯಾ ಬೋಂಡಿ ಬೀಚ್ ದಾಳಿ ; ಹೈದ್ರಾಬಾದ್ ಮೂಲದ...
17-12-25 01:38 pm
20-12-25 10:53 pm
Mangalore Correspondent
ಕಟ್ಲೆ ಕಟ್ಲೆ.. ಏರ್ಲಾ ಬಲಿಪೊಡ್ಚಿ..!ವಿಟ್ಲ ಪೊಲೀಸರ...
20-12-25 08:47 pm
ಮೃದು ಧೋರಣೆ ; ಎಸ್ಡಿಪಿಐ ಆರೋಪದ ಬಗ್ಗೆ ಕಮಿಷನರ್ ಸುಧ...
20-12-25 08:44 pm
ಮನೆ ಬಾವಿಗೆ ಬಿದ್ದು ನರಿಂಗಾನ ಶಾಲೆಯ ದೈಹಿಕ ಶಿಕ್ಷಕ...
20-12-25 01:09 pm
ಇಂಟರ್ನ್ಯಾಶನಲ್ ಬುಕ್ ಆಫ್ ರೆಕಾರ್ಡ್ಸ್ ಸೇರಿದ ಮಂಗಳೂ...
19-12-25 09:46 pm
18-12-25 04:53 pm
Mangaluru Correspondent
ಫ್ಲಾಟ್, ಜಾಗವನ್ನು ಮಾರಾಟ ಮಾಡಿ ಸೈಬರ್ ವಂಚಕರಿಗೆ 2...
17-12-25 11:14 am
ಕದ್ರಿಯಲ್ಲಿ ಬೈಕ್ ಕದ್ದು ಭಟ್ಕಳದಲ್ಲಿ ಮಹಿಳೆಯ ಸರ ಕಸ...
16-12-25 10:35 pm
Mangalore Crime, Robbery, Mukka: 'ಬಂಗಾರ್ ಒಲ್ಪ...
15-12-25 10:26 pm
Udupi Murder, Brahmavar, Update: ಕುಡಿದ ಮತ್ತಿನ...
15-12-25 05:37 pm