ಭಾರೀ ಮಳೆ ; ಸುಳ್ಯ, ಕಡಬ ತಾಲೂಕಿನಲ್ಲಿ ಶಾಲೆ, ಕಾಲೇಜಿಗೆ ರಜೆ ಮುಂದುವರಿಕೆ 

02-08-22 10:37 pm       Mangalore Correspondent   ಕರಾವಳಿ

ದಕ್ಷಿಣ ಕನ್ನಡ ಜಿಲ್ಲೆಯ ಸುಳ್ಯ, ಕಡಬ ಭಾಗದಲ್ಲಿ ಭಾರೀ ಮಳೆಯಾಗುತ್ತಿರುವ ಹಿನ್ನೆಲೆ ಕಡಬ ಮತ್ತು ಸುಳ್ಯ ತಾಲೂಕಿನ ಎಲ್ಲಾ ಶಾಲೆ ಮತ್ತು ಕಾಲೇಜುಗಳಿಗೆ ನಾಳೆ ಆಗಸ್ಟ್ 3 ರಂದು ರಜೆ ಘೋಷಿಸಿ ಜಿಲ್ಲಾಧಿಕಾರಿ ಆದೇಶಿಸಿದ್ದಾರೆ.

ಮಂಗಳೂರು, ಆಗಸ್ಟ್ 2: ದಕ್ಷಿಣ ಕನ್ನಡ ಜಿಲ್ಲೆಯ ಸುಳ್ಯ, ಕಡಬ ಭಾಗದಲ್ಲಿ ಭಾರೀ ಮಳೆಯಾಗುತ್ತಿರುವ ಹಿನ್ನೆಲೆ ಕಡಬ ಮತ್ತು ಸುಳ್ಯ ತಾಲೂಕಿನ ಎಲ್ಲಾ ಶಾಲೆ ಮತ್ತು ಕಾಲೇಜುಗಳಿಗೆ ನಾಳೆ ಆಗಸ್ಟ್ 3 ರಂದು ರಜೆ ಘೋಷಿಸಿ ಜಿಲ್ಲಾಧಿಕಾರಿ ಆದೇಶಿಸಿದ್ದಾರೆ.

ನಿರಂತರ ಮಳೆಯಾಗುತ್ತಿರುವ ಹಿನ್ನೆಲೆ ಕಡಬ ಮತ್ತು ಸುಳ್ಯ ತಾಲೂಕಿನ ಹಲವೆಡೆ ತಗ್ಗು ಪ್ರದೇಶ ಮುಳುಗಡೆಯಾಗಿದೆ. ಸೋಮವಾರ ಸಂಜೆಯಿಂದ ಭಾರೀ ಮಳೆಯಾಗಿದ್ದು ಹಲವಾರು ರಸ್ತೆ, ಸೇತುವೆಗಳಲ್ಲಿ ನೀರು ಹರಿದಿದೆ. ಹೀಗಾಗಿ ಸೋಮವಾರವೂ ಕಡಬ ಮತ್ತು ಸುಳ್ಯ ತಾಲೂಕಿನಲ್ಲಿ ಶಾಲೆ, ಕಾಲೇಜಿಗೆ ರಜೆ ನೀಡಲಾಗಿತ್ತು. ಮತ್ತೆ ಭಾರೀ ಮಳೆಯ ಮುನ್ನೆಚ್ಚರಿಕೆ ಕಾರಣ ಕಡಬ ಮತ್ತು ಸುಳ್ಯ ತಾಲೂಕಿನಲ್ಲಿ ನಾಳೆಯೂ (ಆಗಸ್ಟ್ 3) ಎಲ್ಲಾ ಅಂಗನವಾಡಿ, ಶಾಲೆ, ಕಾಲೇಜುಗಳಿಗೆ ರಜೆ ಘೋಷಿಸಲಾಗಿದೆ. ಎನ್ ಡಿಆರ್ ಎಫ್ ತಂಡ ಪುತ್ತೂರು, ಸುಳ್ಯದಲ್ಲಿ ಬೀಡು ಬಿಟ್ಟಿದ್ದು ಕಾರ್ಯಾಚರಣೆ ಆರಂಭಿಸಿದೆ. 

ಸೋಮವಾರ ಉಡುಪಿ ಜಿಲ್ಲೆಯ ಬೈಂದೂರು, ಕುಂದಾಪುರ ತಾಲೂಕಿನಲ್ಲೂ ಭಾರೀ ಮಳೆಯ ಕಾರಣ ಶಾಲೆ, ಕಾಲೇಜಿಗೆ ರಜೆ ‌ನೀಡಲಾಗಿತ್ತು. ಕುಂದಾಪುರ, ಬೈಂದೂರಿನ ಹಲವೆಡೆ ನೆರೆ ಪರಿಸ್ಥಿತಿ ಉಂಟಾಗಿದೆ.

Heavy rains in Sullia, Subramanya holidays declared to schools and colleges.