ಬ್ರೇಕಿಂಗ್ ನ್ಯೂಸ್
15-08-22 06:57 pm Mangalore Correspondent ಕರಾವಳಿ
ಮಂಗಳೂರು, ಆಗಸ್ಟ್ 15 : ಸ್ವಾತಂತ್ರ್ಯ ದಿನಾಚರಣೆಯ ಅಂಗವಾಗಿ ದೇಶಭಕ್ತಿಯನ್ನು ಸಾರುವ ನೃತ್ಯ ಪ್ರದರ್ಶನದಲ್ಲಿ ಸ್ವಾತಂತ್ರ್ಯ ಯೋಧರ ಚಿತ್ರ ಪ್ರದರ್ಶಿಸಲಾಗಿತ್ತು. ಗಾಂಧೀಜಿ, ಸುಭಾಶ್ಚಂದ್ರ ಬೋಸ್, ಭಗತ್ ಸಿಂಗ್ ಸೇರಿದಂತೆ ಹಲವು ಖ್ಯಾತನಾಮರ ಫೋಟೋಗಳಿದ್ದವು. ಭಾರತದ ಭೂಪಟದ ಮೇಲೆ ಇನ್ನಿತರ ಸ್ವಾತಂತ್ರ್ಯ ವೀರರ ಚಿತ್ರಗಳಿದ್ದವು. ಇದರ ನಡುವೆ, ವೀರ ಸಾವರ್ಕರ್ ಚಿತ್ರ ಇತ್ತೆಂದು ಎಸ್ಡಿಪಿಐ ಮತ್ತು ಕಾಂಗ್ರೆಸ್ ಕಾರ್ಯಕರ್ತರು ಆಕ್ಷೇಪ ವ್ಯಕ್ತಪಡಿಸಿ ಕಾರ್ಯಕ್ರಮವನ್ನೇ ಸ್ಥಗಿತಗೊಳಿಸಿದ ಘಟನೆ ಗುರುಪುರದಲ್ಲಿ ನಡೆದಿದೆ.
ಗುರುಪುರ ಪಂಚಾಯತ್ ಆವರಣಲ್ಲಿ ಸ್ವಾತಂತ್ರ್ಯದ ಅಮೃತ ಮಹೋತ್ಸವದ ಸಾಂಸ್ಕೃತಿಕ ಕಾರ್ಯಕ್ರಮದಲ್ಲಿ ಗುರುಪುರದ ಬೆಥಣಿ ಸ್ಕೂಲ್ ನ ಮಕ್ಕಳು ಸ್ವಾತಂತ್ರ್ಯ ಯೋಧರ ಕುರಿತು ನೃತ್ಯ ರೂಪಕವನ್ನು ವೇದಿಕೆಯಲ್ಲಿ ಪ್ರದರ್ಶಿಸಿದ್ದರು. ನೃತ್ಯ ಕಾರ್ಯಕ್ರಮ ಮುಗಿಯುತ್ತಿದ್ದಂತೆ ಗುರುಪುರ ಪಂಚಾಯತಿನಲ್ಲಿ ಆಡಳಿತ ನಡೆಸುತ್ತಿರುವ ಎಸ್ಡಿಪಿಐ ಮತ್ತು ಕಾಂಗ್ರೆಸ್ ಮೈತ್ರಿಕೂಟದ ಸದಸ್ಯರು ಆಕ್ಷೇಪ ವ್ಯಕ್ತಪಡಿಸಿದ್ದು ಕಾರ್ಯಕ್ರಮವನ್ನೇ ಸ್ಥಗಿತಗೊಳಿಸಿದ್ದಾರೆ. ಅಲ್ಲದೆ, SDPI-ಕಾಂಗ್ರೆಸ್ ಸದಸ್ಯರು ಕಾರ್ಯಕ್ರಮ ನಡೆಸಿದ ಮಕ್ಕಳ ಬೆಥಣಿ ಸ್ಕೂಲ್ ಮುಖ್ಯ ಗುರುಗಳಿಂದ ಕ್ಷಮೆಯಾಚನೆಗೂ ಪಟ್ಟು ಹಿಡಿದ್ದಾರೆ. ಕಾಂಗ್ರೆಸ್ ಮತ್ತು ಎಸ್ಡಿಪಿಐ ನಾಯಕರ ಆಕ್ರೋಶಕ್ಕೆ ಮಣಿದು ಶಾಲಾ ಶಿಕ್ಷಕರು ಕ್ಷಮೆಯನ್ನೂ ಕೇಳಿದ್ದಾರೆ.
ಆಬಳಿಕ ಈ ಕುರಿತು ಮಾಹಿತಿ ತಿಳಿಯುತ್ತಿದ್ದಂತೆ ಬಿಜೆಪಿ ಕಾರ್ಯಕರ್ತರು ಸ್ಥಳಕ್ಕಾಗಮಿಸಿ ಆಕ್ರೋಶ ವ್ಯಕ್ತಪಡಿಸಿದ್ದಾರೆ. ನೃತ್ಯ ರೂಪಕದಲ್ಲಿ ಕೇವಲ ಫೋಟೊ ಹಿಡಿದ ಮಾತ್ರಕ್ಕೆ ಈ ರೀತಿ ವರ್ತಿಸಿರುವುದು ಅಕ್ಷಮ್ಯ. ಗುರುಪುರ ಪಂಚಾಯತ್ ಆಡಳಿತಾರೂಢ ಎಸ್ಡಿಪಿಐ ಮತ್ತು ಕಾಂಗ್ರೆಸ್ ಸದಸ್ಯರ ವಿರುದ್ಧ ಆಕ್ರೋಶ ವ್ಯಕ್ತಪಡಿಸಿ, ಪೊಲೀಸರನ್ನು ಕರೆಸಿದ್ದಾರೆ. ಕಾರ್ಯಕ್ರಮ ನಿಲ್ಲಿಸಿದವರ ವಿರುದ್ಧ ಕ್ರಮ ಕೈಗೊಳ್ಳುವಂತೆ ಆಗ್ರಹ ಮಾಡಿದ್ದಾರೆ.
Mangalore Savarkars photo displayed while dancing during independence day at Gurupura sparks controversy during the cultural event held by School. SDPI members who were angry on this complained the Police officials and Gurupura panchayat members who came to the spot slammed the organizers for doing such.
10-05-25 12:40 pm
Bangalore Correspondent
Mandya Post, Modi; ಮಾಜಿ ಪಾಕ್ ಪ್ರಧಾನಿಗೆ ಮೋದಿ ಶ...
10-05-25 11:30 am
Janardhana Reddy disqualified, MLA: ಅಕ್ರಮ ಗಣಿ...
08-05-25 11:07 pm
U T Khader, Dinesh Gundurao, Suhas Shetty Mur...
08-05-25 07:50 pm
Karwar high alert: ಕಾರವಾರದಲ್ಲಿ ಹೈ ಎಲರ್ಟ್ ; ಸಮ...
08-05-25 12:23 pm
10-05-25 08:28 pm
HK News Desk
India-Pakistan war: ಭಾರತ - ಪಾಕಿಸ್ತಾನ ತಕ್ಷಣದಿಂ...
10-05-25 07:25 pm
Indian Military, Pakistan : ತನ್ನ ಮೂರು ವಾಯುನೆಲ...
10-05-25 01:58 pm
ಯುದ್ಧ ಸಮಸ್ಯೆಗೆ ಪರಿಹಾರ ಅಲ್ಲ, ಮಾತುಕತೆಯಿಂದ ಬಗೆಹರ...
09-05-25 06:49 pm
India Pak War: ಭಾರತ ವಾಯುಪಡೆಯಿಂದ ಭೀಕರ ಪ್ರತಿದಾಳ...
09-05-25 12:33 pm
10-05-25 07:10 pm
Mangalore Correspondent
ಹಿಂದು - ಮುಸ್ಲಿಂ ಮಧ್ಯೆ ಪ್ರಚೋದನಕಾರಿ ಪೋಸ್ಟ್ ಹಾಕು...
09-05-25 11:07 pm
Mangalore University, U T Khader, Syndicate M...
09-05-25 06:22 pm
Resham Bariga, Belthangady, Indo Pak War, Ant...
09-05-25 03:24 pm
Suhas Shetty Murder Case, Speaker UT Khader,...
09-05-25 01:32 pm
08-05-25 05:32 pm
HK News Desk
Mangalore Suhas Shetty Murder, Eight Arrested...
03-05-25 02:16 pm
Suhas Shetty Murder, Thokottu Attack, Mangalo...
02-05-25 12:00 pm
Mangalore Bajpe Murder, Suhas Shetty: ಹಳೆ ದ್ವ...
01-05-25 10:06 pm
Mangalore, Illegal Rice, crime: ಉತ್ತರ ಕರ್ನಾಟಕ...
30-04-25 04:09 pm