ಬ್ರೇಕಿಂಗ್ ನ್ಯೂಸ್
17-08-22 01:00 pm Mangalore Correspondent ಕರಾವಳಿ
ಮಂಗಳೂರು, ಆಗಸ್ಟ್ 17: ಬಿಜೆಪಿ ಕಾರ್ಯಕರ್ತ ಪ್ರವೀಣ್ ನೆಟ್ಟಾರು ಕೊಲೆ ಪ್ರಕರಣದ ಆರೋಪಿಗಳ ಆಸ್ತಿ ಮುಟ್ಟುಗೋಲು ಹಾಕಿಕೊಳ್ಳುವುದಾಗಿ ಹೇಳಿದ್ದೀರಿ. ತಮ್ಮ ಈ ರೀತಿಯ ನಡೆಯನ್ನು ಸ್ವಾಗತಿಸುತ್ತೇನೆ. ಆದರೆ ಇದೇ ವೇಳೆ ಕೊಲೆಯಾದ ಫಾಝಿಲ್ ಮತ್ತು ಮಸೂದ್ ಪ್ರಕರಣದ ಆರೋಪಿಗಳ ಆಸ್ತಿಯನ್ನು ಮುಟ್ಟುಗೋಲು ಹಾಕುವ ವಿಚಾರದಲ್ಲಿ ಮೌನ ವಹಿಸಿದ್ದೀರಿ ಏಕೆ ಎಂದು ವಿಧಾನಸಭೆ ವಿರೋಧ ಪಕ್ಷದ ಉಪ ನಾಯಕ ಯು.ಟಿ. ಖಾದರ್ ಅವರು ಕಾನೂನು ಸುವ್ಯವಸ್ಥೆ ವಿಭಾಗದ ಎಡಿಜಿಪಿ ಅಲೋಕ್ ಕುಮಾರ್ ಅವರಿಗೆ ಪತ್ರ ಬರೆದು ಪ್ರಶ್ನೆ ಮಾಡಿದ್ದಾರೆ.
ರಾಜ್ಯ ಕಾನೂನು ಮತ್ತು ಸುವ್ಯವಸ್ಥೆ ವಿಭಾಗದ ಹೆಚ್ಚುವರಿ ಪೊಲೀಸ್ ಮಹಾನಿರ್ದೇಶಕ ಅಲೋಕ್ ಕುಮಾರ್ ಇತ್ತೀಚೆಗೆ ಮಂಗಳೂರಿಗೆ ಬಂದಿದ್ದಾಗ ಪ್ರವೀಣ್ ಕೊಲೆ ಪ್ರಕರಣದ ಆರೋಪಿಗಳು ಯಾರೆಂದು ಗೊತ್ತು. ಪೊಲೀಸರ ಕೈಗೆ ಸಿಗದೇ ಇದ್ದರೆ ಕೋರ್ಟಿನಿಂದ ವಾರೆಂಟ್ ಹೊರಡಿಸಿ ಅವರ ಆಸ್ತಿ ಮುಟ್ಟುಗೋಲು ಹಾಕುತ್ತೇವೆ ಎಂದಿದ್ದರು. ಈ ಬಗ್ಗೆ ಆಕ್ಷೇಪಿಸಿ ಪತ್ರ ಬರೆದಿರುವ ಖಾದರ್, ಪ್ರವೀಣ್ ಮತ್ತು ಫಾಜಿಲ್ ಎರಡೂ ಪ್ರಕರಣವನ್ನು ಸಮಾನ ರೀತಿಯಲ್ಲಿ ನೋಡಬೇಕು. ಇದು ನಾಗರಿಕ ಸಮಾಜದ ಪ್ರತಿಯೊಬ್ಬರ ಪ್ರಶ್ನೆಯಾಗಿದೆ. ಸಾರ್ವಜನಿಕರ ಅನುಮಾನ ಬಗೆಹರಿಸಿ, ಪೊಲೀಸ್ ಇಲಾಖೆಯ ಮೇಲೆ ವಿಶ್ವಾಸ ಬರುವಂಥ ಉತ್ತರವನ್ನು ನಿಮ್ಮಿಂದ ನಿರೀಕ್ಷಿಸುತ್ತೇನೆ ಎಂದಿದ್ದಾರೆ.
ಜಿಲ್ಲೆಯಲ್ಲಿ ಇತ್ತೀಚೆಗೆ ನಡೆದ ಸರಣಿ ಕೊಲೆಗಳ ಆರೋಪಿಗಳನ್ನು ಬಂಧಿಸಲು, ಅವರನ್ನು ಕಾನೂನು ಕ್ರಮಕ್ಕೆ ಒಳಪಡಿಸಲು ಮತ್ತು ಕೊಲೆಗಳ ಸರಣಿ ಮುಂದುವರಿಯದಂತೆ ತಡೆಯಲು ಪೊಲೀಸ್ ಇಲಾಖೆ ನಡೆಸುತ್ತಿರುವ ಪ್ರಯತ್ನ ಶ್ಲಾಘನೀಯ. ಕೊಲೆ, ಸಮಾಜದಲ್ಲಿ ಭಯವನ್ನು ಹುಟ್ಟಿಸುವವರ ಮೇಲೆ ಕಠಿಣ ಕಾನೂನು ಕ್ರಮ ಕೈಗೊಳ್ಳುವುದಕ್ಕೆ ಎಲ್ಲರ ಬೆಂಬಲ ಇದೆ. ಪ್ರವೀಣ್ ಪ್ರಕರಣಕ್ಕೆ ಸಂಬಂಧಿಸಿ ಕೈಗೊಂಡ ದಿಟ್ಟ ಕ್ರಮವನ್ನು ಫಾಝಿಲ್, ಮಸೂದ್ ಪ್ರಕರಣಕ್ಕೂ ಅನ್ವಯಿಸಬೇಕು' ಎಂದು ಖಾದರ್ ಆಗ್ರಹಿಸಿದ್ದಾರೆ.
Confiscate property of accused in Praveen Bellare murder why not in Masood case questions MLA Khader by letter to ADGP Alok Kumar.
10-05-25 10:40 pm
HK News Desk
Dk Shivakumar, Congress, Birthday: ಭಯೋತ್ಪಾದನೆ...
10-05-25 12:40 pm
Mandya Post, Modi; ಮಾಜಿ ಪಾಕ್ ಪ್ರಧಾನಿಗೆ ಮೋದಿ ಶ...
10-05-25 11:30 am
Janardhana Reddy disqualified, MLA: ಅಕ್ರಮ ಗಣಿ...
08-05-25 11:07 pm
U T Khader, Dinesh Gundurao, Suhas Shetty Mur...
08-05-25 07:50 pm
10-05-25 09:24 pm
HK News Desk
India and Pakistan, Ceasefire: ಮೂರೇ ದಿನದಲ್ಲಿ...
10-05-25 08:28 pm
India-Pakistan war: ಭಾರತ - ಪಾಕಿಸ್ತಾನ ತಕ್ಷಣದಿಂ...
10-05-25 07:25 pm
Indian Military, Pakistan : ತನ್ನ ಮೂರು ವಾಯುನೆಲ...
10-05-25 01:58 pm
ಯುದ್ಧ ಸಮಸ್ಯೆಗೆ ಪರಿಹಾರ ಅಲ್ಲ, ಮಾತುಕತೆಯಿಂದ ಬಗೆಹರ...
09-05-25 06:49 pm
10-05-25 07:10 pm
Mangalore Correspondent
ಹಿಂದು - ಮುಸ್ಲಿಂ ಮಧ್ಯೆ ಪ್ರಚೋದನಕಾರಿ ಪೋಸ್ಟ್ ಹಾಕು...
09-05-25 11:07 pm
Mangalore University, U T Khader, Syndicate M...
09-05-25 06:22 pm
Resham Bariga, Belthangady, Indo Pak War, Ant...
09-05-25 03:24 pm
Suhas Shetty Murder Case, Speaker UT Khader,...
09-05-25 01:32 pm
08-05-25 05:32 pm
HK News Desk
Mangalore Suhas Shetty Murder, Eight Arrested...
03-05-25 02:16 pm
Suhas Shetty Murder, Thokottu Attack, Mangalo...
02-05-25 12:00 pm
Mangalore Bajpe Murder, Suhas Shetty: ಹಳೆ ದ್ವ...
01-05-25 10:06 pm
Mangalore, Illegal Rice, crime: ಉತ್ತರ ಕರ್ನಾಟಕ...
30-04-25 04:09 pm